Breaking News

Uncategorized

ಪಿಎಫ್‌ಐ ನಿಷೇಧ: ಡಿಕೆಶಿ, ಸಿದ್ದರಾಮಯ್ಯ ಬಾಯಿ ತೆರೆದಿಲ್ಲ ಏಕೆ -ಬಿಜೆಪಿ ಪ್ರಶ್ನೆ

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶ ಬಿಜೆಪಿ -ಕಾಂಗ್ರೆಸ್‌ ನಡುವೆ ರಾಜಕೀಯ ತಿರುವು ಪಡೆದುಕೊಂಡಿದೆ. ಪಿಎಫ್‌ಐ ನಿಷೇಧ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಪಿಎಫ್‌ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಕ್ಷ (ಕಾಂಗ್ರೆಸ್) ಬೆಂಗಾವಲಾಗಿ ನಿಂತಿತ್ತು ಎಂದು ಆರೋಪಿಸಿದೆ.   ಪಿಎಫ್‌ಐ …

Read More »

ಮಂಗಳ ಗ್ರಹದಲ್ಲಿ ಈಗಲೇ 7118 ಕೆಜಿ ತ್ಯಾಜ್ಯ!

ಪ್ಯಾರಿಸ್, ಸೆ. 27: ಸುಮಾರು 50 ವರ್ಷಗಳ ಹಿಂದೆ ಮಂಗಳ ಗ್ರಹದ ಶೋಧ ಕಾರ್ಯಾಚರಣೆ ಆರಂಭಿಸಿರುವ ಮಾನವ ಕುಲವು, ಅಲ್ಲಿಗೆ ಹಲವು ಬಾಹ್ಯಾಕಾಶ ನೌಕೆಗಳನ್ನು ಈಗಾಗಲೇ ಕಳುಹಿಸಿದೆ. 2030ರ ದಶಕದ ವೇಳೆಗೆ ಅಲ್ಲಿಗೆ ಮೊದಲ ಬಾರಿಗೆ ಮಾನವನನ್ನು ಕಳುಹಿಸುವ ಯೋಜನೆಯನ್ನು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಹೊಂದಿದೆ.   ಮಂಗಳ ಗ್ರಹದ ಮೇಲೆ ಮಾನವ ಕಾಲಿಡಲು ಇನ್ನೂ ತುಂಬಾ ಸಮಯವಿದೆಯಾದರೂ, ಅಲ್ಲಿ ಕಸವನ್ನು ಹರಡುವುದರಿಂದ ಮಾನವರೇನೂ ಹಿಂದೆ ಬಿದ್ದಿಲ್ಲ. …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*

  ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …

Read More »

“ಲಂಚ ಕೊಡಬೇಕಾಗಿಲ್ಲ’ ಬೋರ್ಡ್‌ ಬದಲು ಸಿಸಿ ಕೆಮರಾ ಅಳವಡಿಸಿ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಅವರೇ, “ಸರಕಾರಿ ಕಚೇರಿಗಳಲ್ಲಿ ಲಂಚ ಕೊಡಬೇಕಾಗಿಲ್ಲ’ ಎಂಬ ಬೋರ್ಡ್‌ ಅಳವಡಿಸುವ ಮೊದಲು ಎಲ್ಲ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕೆಮರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತತ್‌ಕ್ಷಣ ಕ್ರಮ ಕೈಗೊಳ್ಳಿ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ.   ಮುಖ್ಯಮಂತ್ರಿಯವರೇ, ಈ ಬೋರ್ಡ್‌ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40 ಪರ್ಸೆಂಟ್‌ ಕಮಿಷನ್‌ ಆರೋಪ ಸಹಿತ ಸಚಿವರ ಮೇಲಿನ …

Read More »

ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ ಬೆಳಗಾವಿ :ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ …

Read More »

ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಎಡವಟ್ಟು ಮಾಡಿಕೊಂಡ ಶಾಸಕ

ಧಾರವಾಡ: ರಾಷ್ಟ್ರಪತಿಗೆ ಸ್ವಾಗತ ಕೋರುವ ತರಾತುರಿಯಲ್ಲಿ ನಗರದ ಶಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬ್ಯಾನರ್‌ನಲ್ಲಿ ಬರೆಸಿರುವುದು ಟೀಕೆಗೆ ಕಾರಣವಾಗಿದೆ. ಸೆ.26ರಂದು ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ʼಪೌರ ಸನ್ಮಾನʼ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆದರೆ, ರಾಷ್ಟ್ರಪತಿ ಸ್ವಾಗತದ ಕೋರುವ ತರಾತುರಿಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು, …

Read More »

ಶಿವಾಜಿ ನಾಡಿನಲ್ಲಿ ಪಾಕಿಸ್ಥಾನ ಜಿಂದಾಬಾದ್ ಕೂಗುವ ಹಕ್ಕು ಯಾರಿಗೂ ಇಲ್ಲ: ಶಿಂಧೆ

ಮುಂಬಯಿ: “ಇದು ಛತ್ರಪತಿ ಶಿವಾಜಿ ಮಹಾರಾಜರ ನಾಡು ಮತ್ತು ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ಹಕ್ಕು ಯಾರಿಗೂ ಇಲ್ಲ” ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ,ಇದು ದೇಶಭಕ್ತರ ರಾಜ್ಯ. ನಮ್ಮ ಸರಕಾರ ಪುಣೆಯಲ್ಲಿ ನಡೆದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. ವಿವಾದಿತ ಇಸ್ಲಾಮಿಕ್ ಸಂಘಟನೆಯ ಪಿಎಫ್‌ಐ ಮುಖಂಡರ ಮೇಲಿಂದ ದಾಳಿ ಮತ್ತು ಬಂಧನದ ನಂತರ ಪುಣೆಯ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದು, …

Read More »

ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*

  *ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …

Read More »

ಬೆಳಗಾವಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಳಗಾವಿ: ಜಿಲ್ಲೆಯ ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಲಾರಿಯೊಂದು ಕಾರು, ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕುಡುಚಿ ಪೊಲೀಸ್ ಠಾಣೆಯ ಎಎಸ್‌ಐ ಹಲಗಿ ಅವರ ಪತ್ನಿ ರುಕ್ಮಿಣಿ, ಪುತ್ರಿ ತೆರಳುತ್ತಿದ್ದಂತ ಕಾರಿಗೆ ಸಿಮೆಂಟ್ ಲಾರಿಯೊಂದು ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಡಿಕ್ಕಿಯಾಗಿದೆ.   ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿಯೇ ಕಾರು …

Read More »

ಅಕಾಲಿಕವಾಗಿ ಅಗಲಿದ ಡಾ|ರಾಜ್ ಮನೆತನದ ಆಪ್ತ ಮುತ್ತಪ್ಪ

ಮಹಾಲಿಂಗಪುರ: ಪಟ್ಟಣದ ನಿವಾಸಿ, ಛಾಯಾಗ್ರಾಹಕ ಮುತ್ತಪ್ಪ ಬಸಪ್ಪ ಕುಂಬಾರ ಅವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಶುಕ್ರವಾರ ರಾತ್ರಿ ತನ್ನ ಪುತ್ರ 10 ವರ್ಷದ ಮಯೂರನನ್ನು ಕೂರಿಸಿಕೊಂಡು ಸಮೀರವಾಡಿಯಿಂದ ಮಹಾಲಿಂಗಪುರದ ಕಡೆಗೆ ಬರುತ್ತಿರುವಾಗ ಅಪರಿಚಿತ ವಾಹನದ ಚಾಲಕ ಅತೀ ವೇಗವಾಗಿ ನಿರ್ಲಕ್ಷ್ಯತನದಿಂದ ಬಂದು ಎದುರಿನಿಂದ ಹಾಯಿಸಿದ್ದರಿಂದ ಮುತ್ತಪ್ಪ ತಲೆಗೆ ಹಾಗೂ ಬಲಭುಜದ ಹತ್ತಿರ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.   ಅಪಘಾತದಲ್ಲಿ ಮುತ್ತಪ್ಪ ಅವರ ಮಗ ಮಯೂರ್ ಬಲಗಾಲಿಗೆ ಗಂಭೀರ ಗಾಯವಾಗಿದೆ. …

Read More »