ಬೆಂಗಳೂರು: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ಅವರನ್ನು ನೇಮಕ ಮಾಡುವ ಮೂಲಕ ಪಕ್ಷ ಅವರಿಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ …
Read More »ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಬಿಡದ ಪಟ್ಟು
ಹುಬ್ಬಳ್ಳಿ; ನಗರದ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಬಿಡದ ಪಟ್ಟು: ಅವಕಾಶ ಕೋರಿ ಮೂರು ದಿನಗಳ ಗಡುವು ನೀಡಿದ ಹಿಂದು ಪರ ಸಂಘಟನೆಗಳು ಇಂದು ಮತ್ತೆ ಹೋರಾಟದ ಅಖಾಡಕ್ಕೆ ಇಳಿದಿದ್ದು, ಈದ್ಗಾ ಮೈದಾನದಲ್ಲಿ ಪ್ರಸ್ತುತ ವರ್ಷ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಒಪ್ಪಿಗೆ ನೀಡುವಂತೆ ವಿವಿಧ ರೀತಿಯಲ್ಲಿ ಒತ್ತಡ ಹೇರುವ ಹಾಗೂ ಪಾಲಿಕೆ ಆಯುಕ್ತರಿಗೆ ಮತ್ತೊಮ್ಮೆ ಮನವಿಯನ್ನು ವಿವಿಧ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಮುಖಂಡರು ಹುಬ್ಬಳ್ಳಿ ಧಾರವಾಡ …
Read More »ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.
ಧಾರವಾಡ, ಆಗಸ್ಟ್, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ ಶತಮಾನದ ರಾಣಿಯರ ಚಿತ್ರಣವನ್ನು ರಂಗಭೂಮಿ ಮೇಲೆ ತರುವ ಪ್ರಯತ್ನಕ್ಕೆ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ. ನಾಟಕವು ಸ್ವಾತಂತ್ರ್ಯ ಹೋರಾಟ ಮತ್ತು ಚೆನ್ನಮ್ಮನ ಆಡಳಿತದ ದೃಶ್ಯಗಳನ್ನು ಮರುಸೃಷ್ಟಿಸುತ್ತದೆ. ನಿಜವಾದ ಕುದುರೆ, ಆನೆಗಳು ಹಾಗೂ ಸೈನಿಕರನ್ನು ವೀಕ್ಷಕರ ಕಣ್ಣೆದುರು …
Read More »ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ
ನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ ತಂದಿದೆ. ಗದಗ ಜಿಲ್ಲೆಯ ನರಗುಂದ, ರೋಣ, ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಈ ಜಲಾಶಯದ ಕಾಲುವೆ ನೀರಿನ ಮೂಲಕ ಈ ಭಾಗದ ರೈತರು ಜಮೀನುಗಳನ್ನು ನೀರಾವರಿ ಮಾಡಿ ಬದುಕು ಕಟ್ಟಿಕೊಳ್ಳುತ್ತಾರೆ. ಜಲಾಶಯ ಒಟ್ಟು 37.73 ಟಿಎಂಸಿ ನೀರಿನ …
Read More »ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್ ಸುನೀಲ ಪಾಟೀಲ
ಬೆಳಗಾವಿ:ವಿದ್ಯಾರ್ಥಿಗಳ ಉಜ್ವಲ ಬದುಕು ಮತ್ತು ಭವಿಷ್ಯವನ್ನು ರೂಪಿಸುವ ಎಸ್ಸೆಸ್ಸೆಲ್ಸಿ ಎಂಬ ಪ್ರಮುಖ ಘಟ್ಟ ದಾಟಬೇಕಾದರೆ ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್ ಸುನೀಲ ಪಾಟೀಲ ಅಭಿಪ್ರಾಯಪಟ್ಟರು. ನಗರದ ವಂಟಮೂರಿ ಕಾಲೋನಿ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಉದಯವಾಣಿ ಶಿಕ್ಷಣ ಮಾರ್ಗದರ್ಶಿ ವಿತರಿಸಿ ಅವರು ಮಾತನಾಡಿದರು. ನಿಮ್ಮ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಎಂಬ ತಳಪಾಯವನ್ನು ಗಟ್ಟಿಗೊಳಿಸಿಕೊಳ್ಳಬೇಕು. ಆಗ ಮುಂದಿನ ಎಲ್ಲ ಸ್ಪರ್ಧೆ, ಸವಾಲುಗಳನ್ನು ಸಮರ್ಥವಾಗಿ ಎದುರಿಸಿ …
Read More »ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ
ಸಾಗರ: ರಾಜ್ಯ ಸರ್ಕಾರ ಪಂಚಮಸಾಲಿ-ಗೌಡ ಲಿಂಗಾಯಿತ, ಮಲೇಗೌಡ ದೀಕ್ಷಾ ಲಿಂಗಾಯಿತ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಮತ್ತು ಕೇಂದ್ರ ಸರ್ಕಾರ ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡದೆ ಹೋದಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮಿಗಳು ತಿಳಿಸಿದರು. ತಾಲೂಕಿನ ಕೆಳದಿಯಲ್ಲಿ ಮಂಗಳವಾರ ಅಖಿಲ ಭಾರತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠದ ವತಿಯಿಂದ ರಾಣಿ ಚೆನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮಲೆನಾಡು ಭಾಗದಲ್ಲಿ ಹಮ್ಮಿಕೊಂಡಿದ್ದ …
Read More »ಬೆಳಗಾವಿಯ ಇಬ್ಬರು ಸೇರಿ ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ
ನವದೆಹಲಿ: ರಾಜ್ಯದ 7 ಜನ ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ ನೀಡಿ ಕೇಂದ್ರ ಸರಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಸಚಿನ್ ಘೋರ್ಪಡೆ, ವಿಕ್ರಂ ಅಮಟೆ, ಸಂಜೀತ್ ವಿ.ಜೆ., ರಾಮ ಲಕ್ಷ್ಮಣಸಾ ಅರಸಿದ್ದಿ, ಬಾಬಾಸಾಬ ನೇಮಗೌಡ, ಗೋಪಾಲ ಎಂ. ಬ್ಯಾಕೋಡ್ ಹಾಗೂ ಮಹಾನಿಂಗ ನಂದಗಾವಿ ಅವರು ಸರಕಾರದ ಆದೇಶದನ್ವಯ ಐಪಿಎಸ್ ಕರ್ನಾಟಕ ಕೆಡರ್ ಅಧಿಕಾರಿಗಳಾಗಿ ಮೇಲ್ದರ್ಜೆಗೇರಿದವರು. ಈ ಎಲ್ಲ ಅಧಿಕಾರಿಗಳು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ನಾನಾ ಹುದ್ದೆಗಳನ್ನು ಖಾಲಿ …
Read More »ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಮುಖಂಡ
ಮುಂಬೈ: ಶಿವಸೇನಾ ಮುಖಂಡರೊಬ್ಬರು ಖಾಸಗಿ ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಮಹಾರಾಷ್ಟ್ರದ ತಮ್ಮ ಕ್ಷೇತ್ರವಾದ ಹಿಂಗೋಲಿಯಲ್ಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಮಧ್ಯಾಹ್ನದ ಊಟ ಬಡಿಸಿದ ಕಾರಣಕ್ಕೆ ಶಿವಸೇನೆಯ ಬಂಡಾಯ ಶಾಸಕ ಸಂತೋಷ್ ಬಂಗಾರ್ ಅವರು ಅಡುಗೆ ವ್ಯವಸ್ಥಾಪಕನನ್ನು ನಿಂದಿಸಿ ಅವರಿಗೆ ಎಲ್ಲರ ಸಮ್ಮುಖದಲ್ಲೇ ಕಪಾಳಮೋಕ್ಷ ಮಾಡಿದರು. ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಮನಾರ್ಹವೆಂದರೆ, ಬಂಗಾರ್ ಅವರು ಈ ಘಟನೆಗೆ ಕೆಲವೇ ನಿಮಿಷ ಮೊದಲು ವಿಧಾನಸಭೆಯಲ್ಲಿ ಮುಖ್ಯಮಂತ್ರಿ …
Read More ». ಸುವರ್ಣಸೌಧ ಕೇವಲ ಜಿಲ್ಲಾಮಟ್ಟದ ಕಚೇರಿಗೆ ಸೀಮಿತ, ಪತ್ರಕರ್ತರಿಗೂ ನಿಷೇಧ: ಅವಕಾಶ ನೀಡದ ಜಿಲ್ಲಾಡಳಿತದ ನಡೆಗೆ ವಿರೋಧ ವ್ಯಕ್ತ
ಬೆಳಗಾವಿ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲಾಡಳಿತ ಸುವರ್ಣಸೌಧಕ್ಕೆ ಕೆಸರಿ, ಬಿಳಿ, ಹಸಿರು ಬಣ್ಣಗಳಿಂದ ಕೂಡಿದ ದೀಪಾಲಂಕಾರ ಮಾಡಿದ್ದು, ಸುವರ್ಣಸೌಧ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಬೆಳಗಾವಿ ತಾಲೂಕಿನ ಹಲಗಾ – ಬಸ್ತವಾಡ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಪಕ್ಕದಲ್ಲಿ ನಿರ್ಮಾಣಗೊಂಡಿರುವ ಸುವರ್ಣ ವಿಧಾನಸೌಧ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯಂದು ಸುವರ್ಣಸೌಧವನ್ನ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಆದರೆ, ಈ ಬಾರಿ ಆಂತರಿಕ ಭದ್ರತೆ ನೆಪವೊಡ್ಡಿ …
Read More »ವಿಜಯಪುರ: ಶಿವಲಿಂಗದಲ್ಲಿ ಅರಳಿದ ರಾಷ್ಟ್ರಧ್ವಜ
ವಿಜಯಪುರ: ದೇವಸ್ಥಾನದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು. ವಿಜಯಪುರದಲ್ಲಿ ಶಿವಲಿಂಗದಲ್ಲೂ ರಾಷ್ಟ್ರಾಭಿಮಾನ ಮೆರೆಯಲಾಗಿದೆ. ವಿಜಯಪುರದ ಜಾಡರ ಗಲ್ಲಿಯಲ್ಲಿನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ಲಿಂಗಕ್ಕೆ ರಾಷ್ಟ್ರಧ್ವಜದ ಅಲಂಕಾರ ಮಾಡಿ ಸಂಭ್ರಮಿಸಲಾಯಿತು. ಮಲ್ಲಿಕಾರ್ಜುನ ದೇವಸ್ಥಾನದ ಪೂಜಾರಿ ಈರಯ್ಯ ಸ್ವಾಮಿ ಹಾಗೂ ಸ್ಥಳೀಯರಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
Read More »