Breaking News

Uncategorized

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.   ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …

Read More »

ಸಿಎಂ ಬೊಮ್ಮಾಯಿಗೆ ಹೈಕಮಾಂಡ್​​ ಖಡಕ್​ ಸೂಚನೆ

ಬೆಂಗಳೂರು: ಮಳೆ ಅನಾಹುತಕ್ಕೆ ಸಾರ್ವಜನಿಕರ ಆಕ್ರೋಶ ಮತ್ತು ಮತ್ತೊಂದೆಡೆ ಸರ್ಕಾರಕ್ಕೆ ಮೋಹನ್ ದಾಸ್ ಪತ್ರ ಬರೆದ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಖಡಕ್​ ಸೂಚನೆ ನೀಡಿದೆ. ಸಿಲಿಕಾನ್​ ಸಿಟಿಯಲ್ಲಿ ಮಳೆ ಅನಾಹುತ ಸರಿಪಡಿಸಲು ವಿಶೇಷ ಗಮನ ಹರಿಸಿ, ಬೆಂಗಳೂರು ಮಳೆ ಸಮಸ್ಯೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗ್ರೀನ್ ಸಿಟಿಯ ಬಗ್ಗೆ ಎಲ್ಲಾ ಕಡೆ ಮಾತುಗಳು ಕೇಳಿ ಬರುತ್ತಿವೆ. ಸರ್ಕಾರ ಹಾಗೂ ಪಕ್ಷದ ಮೇಲೆ ಇದು ದೊಡ್ಡ ಪರಿಣಾಮ ಬೀರಲಿದೆ. …

Read More »

ಬಿಪಿಎಲ್‌ ಪಡಿತರ ಪಡೆಯಲು ಇನ್ನು ಡಬಲ್‌ ಒಟಿಪಿ ಬೇಕು..

ಬೆಂಗಳೂರು: ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದ್ಯಮ ಕಾರ್ಡ್‌ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು. ಆದರೆ, ಇನ್ನು ಮುಂದೆ ಸೆಪ್ಟೆಂಬರ್‌ ತಿಂಗಳಿಂದ ಎರೆಡೆರೆಡು ಬಾರಿ ಬೆರಳಚ್ಚು ನೀಡಿ, ಎರಡು ಒಟಿಪಿ ನೀಡಬೇಕು. ಸೆ. ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಶುರುವಾಗಲಿದೆ. ಎಲ್ಲರೂ ಎರೆಡೆರಡು ಬಾರಿ ಬೆರಳಚ್ಚು ಒಟಿಪಿ ನೀಡಬೇಕಾಗಿದೆ. ಹಾಗಾಗಿ ಇದರಿಂದ …

Read More »

ಭಾರತ ಒಗ್ಗೂಡಿಸಿ ಯಾತ್ರೆಗೆ 5ಸಾವಿರ ಜನ: ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ: ದೇಶದಲ್ಲಿ ಜಾತಿ, ಧರ್ಮಗಳ ವಿಷಬೀಜವನ್ನು ಕಿತ್ತೊಗೆದು ಸಮನ್ವಯತೆ ಹುಟ್ಟುಹಾಕುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ‘ಭಾರತ ಒಗ್ಗೂಡಿಸಿ’ ಪಾದಯಾತ್ರೆ ಹಮ್ಮಿಕೊಂಡಿದ್ದು ಎಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.   ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ದೇಶದಲ್ಲಿ ಇದು ಆರಂಭವಾಗಿದೆ. ನಮ್ಮದು ಶಾಂತಿಪ್ರಿಯ ದೇಶ. ಇಲ್ಲಿ ವಿವಿಧ ಭಾಷೆಗಳು, ಜನಾಂಗಗಳು, ಧರ್ಮಗಳ ಜನರಿದ್ದರೂ ನಾವು ಒಂದೇ ಎಂದು ಸಾರುವ ದೇಶವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಜಾತಿ, ಧರ್ಮಗಳ ಸಂಘರ್ಷ, …

Read More »

ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ

ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು.   ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್‌ ವಿತರಿಸಿ, ಮಾತನಾಡಿದ ಅವರು,   ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …

Read More »

ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …

Read More »

ನರೇಗಾ ಹಣಕ್ಕೆ ಪಂಚ ನಿಯಮ ಕಡ್ಡಾಯವಾಗಿ ಪಾಲಿಸಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ

ಹೊಸದಿಲ್ಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಅಡಿ ಹಣ ಬಿಡುಗಡೆ ಮಾಡ ಬೇಕೇ? ಹಾಗಿದ್ದರೆ ಐದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಹೀಗೆಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಎಲ್ಲ ರಾಜ್ಯ ಸರಕಾರಗಳಿಗೆ ಪತ್ರ ರವಾನೆಯಾಗಿದೆ.   ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಮನರೇಗಾ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಇತ್ತೀಚೆಗೆ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ. ಮನರೇಗಾ ಅಡಿಯಲ್ಲಿ ರಾಜ್ಯಗಳಿಗೆ …

Read More »

ಮಣ್ಣಲ್ಲಿ ಮಣ್ಣಾದ ಉಮೇಶ್ ಕತ್ತಿ

ಬೆಲ್ಲದ ಬಾಗೇವಾಡಿ (ಬೆಳಗಾವಿ): ಆಹಾರ ಮತ್ತು ಅರಣ್ಯ ಸಚಿವ ಉಮೇಶ ವಿಶ್ವನಾಥ ಕತ್ತಿ (61) ಅವರ ಪಾರ್ಥಿವ ಶರೀರವನ್ನು ಬೆಳಗಾವಿಯಿಂದ ಹುಟ್ಟೂರು ಬೆಲ್ಲದ ಬಾಗೇವಾಡಿವರೆಗೆ ಅಂತಿಮ ಯಾತ್ರೆ ನಡೆಸಿ ವೀರಶೈವ ಲಿಂಗಾ ಯತ ಸಮುದಾಯದ ವಿಧಿ ವಿಧಾನದಂತೆ ಬುಧವಾರ ರಾತ್ರಿ ಅವರ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.   ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ತೋಟದಲ್ಲಿರುವ ತಂದೆ ವಿಶ್ವನಾಥ ಕತ್ತಿ ಅವರ ಸಮಾಧಿ  ಪಕ್ಕದಲ್ಲೇ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಠಾ ಧೀಶರು …

Read More »

ವಿಶ್ವರಾಜ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಉಮೇಶ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರ ಸ್ಥಳ ತಲುಪಲಿದೆ. ಈಗಾಗಲೇ ಅಪಾರ ಸಂಖ್ಯೆಯಲ್ಲಿ ಜನರು, ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಹೆದ್ದಾರಿ ಆಸುಪಾಸಿನಲ್ಲಿ ಅಪಾರ ಸಂಖ್ಯೆಯ ವಾಹನಗಳು ಕಿಲೋಮೀಟರ್ ವರೆಗೆ ಸಾಲಾಗಿ ನಿಂತಿವೆ. ಹೃದಯಾಘಾತದಿಂದ ನಿಧನ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ವಿ. …

Read More »

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

  ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …

Read More »