Breaking News

Uncategorized

ಡಿ.ಕೆ.ಶಿವಕುಮಾರ್‌ ವಿರುದ್ಧವೇ ಜಮೀರ್‌ ದೂರು

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆ ಹೈಕಮಾಂಡ್‌ಗೆ ತಲುಪಿದ ಬೆನ್ನಲ್ಲೇ ಈಗ ಮಾಜಿ ಸಚಿವ ಜಮೀರ್‌ ಅಹಮದ್‌ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧವೇ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲರಿಗೆ ದೂರು ನೀಡಿದ್ದಾರೆ.   ಸಿದ್ದರಾಮಯ್ಯ ಹುಟ್ಟುಹಬ್ಬ ವಿಚಾರದಲ್ಲಿ ನಾನು ರಾಜ್ಯವ್ಯಾಪಿ ಪ್ರವಾಸ ಮಾಡಿ ಮುಸ್ಲಿಮರನ್ನು ಕಾಂಗ್ರೆಸ್‌ ಪರವಾಗಿ ಒಟ್ಟು ಸೇರಿಸುತ್ತಿದ್ದೇನೆ. ವೈಯಕ್ತಿಕ ಅಭಿಪ್ರಾಯ ವಾಗಿ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಲಿ ಎಂದಿದ್ದನ್ನೇ ಮುಂದಿಟ್ಟು ನನ್ನನ್ನು ವಿಲನ್‌ನಂತೆ ಬಿಂಬಿಸಲಾಗಿದೆ. …

Read More »

ಚಿಕನ್ ಅಂಗಡಿ ತೆರೆದಿದ್ದೇ ಪ್ರಾಣಕ್ಕೆ ಮುಳುವು?

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರ್​ಗೆ ಮೊದಲೇ ಸಾವಿನ ಸುಳಿವು ಸಿಕ್ಕಿತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಇದಕ್ಕೆ ಕಾರಣ, ಪ್ರವೀಣ್​ ಸಹೋದರ ರಂಜಿತ್​ ನೀಡಿರುವ ಸ್ಫೋಟಕ ಮಾಹಿತಿ. ಕಳೆದ ಹಲವು ದಿನಗಳಿಂದ ಪ್ರವೀಣ್​ಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಕರೆಗಳು ಬರುತ್ತಿದ್ದವು. ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ತಿಳಿಸಲಾಗಿತ್ತು ಎಂದಿದ್ದಾರೆ. ಬೆಳ್ಳಾರೆಯಲ್ಲಿ ದೊಡ್ಡ ಮಟ್ಟದಲ್ಲಿ ಚಿಕನ್, ಮಟನ್ ದಂಧೆ ನಡೆಯುತ್ತಿದೆ. …

Read More »

ಬೆಂಗಳೂರು: ‘ಸುಂದರಿ ಪತ್ನಿ’ ಮೇಲೆ ಆಯಸಿಡ್ ಹಾಕಿದ್ದ ಪತಿಗೆ ಕಠಿಣ ಶಿಕ್ಷೆ!

ಬೆಂಗಳೂರು: ಪತ್ನಿಯ ಮೇಲೆ ಆಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ, ಕಠಿಣ ಶಿಕ್ಷೆ ಮತ್ತು 25 ಸಾವಿರ ರು ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೌಂದರ್ಯ ತಮ್ಮ ವೈವಾಹಿಕ ಜೀವನವನ್ನು ಹಾಳು ಮಾಡುತ್ತದೆ ಎಂದು ಹೆದರಿದ 44 ವರ್ಷದ ಆಟೋ ಡ್ರೈವರ್ ತನ್ನ ಪತ್ನಿಯ ಮೇಲೆ ಆಯಸಿಡ್ ಸುರಿದಿದ್ದ.   2017ರ ಜುಲೈ 14ರಂದು ಕೆಂಪೇಗೌಡನಗರದ ಸನ್ಯಾಸಿಪಾಳ್ಯದ ಮನೆಯಲ್ಲಿ ಮಂಜುಳಾ ಮೇಲೆ ಆರೋಪಿ ಚೆನ್ನೇಗೌಡ ಆಸಿಡ್ ಎರಚಿದ್ದ. ಆಕೆ …

Read More »

ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್

ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.   ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು !   ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More »

ಫಾಜಿಲ್ ಹತ್ಯೆಗೆ ನೇರ ಹೊಣೆ ಸಿಎಂ ಬೊಮ್ಮಾಯಿ: ಮುನೀರ್ ಕಾಟಿಪಳ್ಳ

ಮಂಗಳೂರು: ಮುಖ್ಯಮಂತ್ರಿ ಭೇಟಿಯ ಬೆನ್ನಲ್ಲೇ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಹತ್ಯೆಗೆ ನೇರ ಹೊಣೆ ಮುಖ್ಯಮಂತ್ರಿ ಬೊಮ್ಮಾಯಿ. ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ಸಂದರ್ಭ ತೋರಿದ ಸಾರ್ವಜನಿಕ‌ ಹೊಣೆಗೇಡಿತನವೇ ಕೊಲೆಗಡುಕರಿಗೆ ಧೈರ್ಯ ನೀಡಿದೆ‌ ಎಂದು ಡಿವೈಎಫ್‌ಐ ರಾಜ್ತ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.   ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾಯಕರ ಸರಣಿ ಕೊಲೆಗಳಿಗೆ ಬೊಮ್ಮಾಯಿ ಸರ್ಕಾರವೇ ಕಾರಣ. ನಿರ್ಲಜ್ಜ ಕೋಮುವಾದಿ ಆಡಳಿತದ ಕರ್ನಾಟಕ ಮಾದರಿಯೊಂದನ್ನು ಬೊಮ್ಮಾಯಿ ನಿರ್ಮಿಸಿ ಬಿಟ್ಟರು. ಅವರಿಗೆ …

Read More »

ಯಕ್ಸಂಬಾ ಪಟ್ಟಣದ ಜನರ ಅನುಕೂಲಕ್ಕಾಗಿ ಉಚಿತ ಆ್ಯಂಬುಲೆನ್ಸ್ ಸೇವೆ ಬಸವಪ್ರಸಾದ

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರ ವಿಶೇಷ ಪ್ರಯತ್ನದಿಂದ ೨೦೧೯ – ೨೦ ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಾದ ೧೬.೫೦ ಲಕ್ಷ ರೂ ಮೊತ್ತದಲ್ಲಿ ಸುಸಜ್ಜಿತವಾದ ಜನರ ಹಿತಕ್ಕಾಗಿ ಉಚಿತ ಆಂಬುಲೆನ್ಸ್ ಸೇವೆಗೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಚಾಲನೆಯನ್ನು ನೀಡಿದರು. ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಮಾತನಾಡಿ, ಚಿಕ್ಕೋಡಿ …

Read More »

ಪಿಎಸ್‍ಐ ಹಗರಣ ಕೇಸ್‌- ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ

ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಇಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್‍ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ 30 ಆರೋಪಿಗಳ ವಿರುದ್ಧ ಈ ದೋಷಾರೋಪ ಪಟ್ಟಿಯಲ್ಲಿ ಮಾಹಿತಿ ಇದೆ. ಇದು ಒಟ್ಟು 3,065 ಪುಟಗಳನ್ನು ಒಳಗೊಂಡಿದೆ. 202 ಸಾಕ್ಷ್ಯಗಳನ್ನು ಪ್ರಸ್ತಾಪಿಸಲಾಗಿದೆ. ಆದರೆ, ಈ ದೋಷಾರೋಪ ಪಟ್ಟಿಯಲ್ಲಿ ಎಡಿಜಿಪಿ ಅಮೃತ್‍ಪೌಲ್ ಹೇಳಿಕೆ ಬಗ್ಗೆ ಎಲ್ಲಿಯೂ ಉಲ್ಲೇಖವಾಗಿಲ್ಲ. ಮುಂದಿನ ಚಾರ್ಜ್‍ಶೀಟ್‍ನಲ್ಲಿ …

Read More »

ಪ್ರವೀಣ್ ನೆಟ್ಟಾರು ಹತ್ಯೆ: 15ಕ್ಕೂ ಹೆಚ್ಚು ಜನರು ವಶಕ್ಕೆ, 6 ಪೊಲೀಸ್‌ ತಂಡಗಳಿಂದ ತನಿಖೆ

ಸುಳ್ಯ: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ತನಿಖೆ ಪ್ರಗತಿಯಲ್ಲಿದೆ. ಮೇಲ್ನೋಟಕ್ಕೆ ಹತ್ಯೆಗೆ 2-3 ಕಾರಣಗಳು ಕಂಡುಬರುತ್ತಿದೆ. ಈಗಾಗಲೇ ಸುಮಾರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಬೆಳ್ಳಾರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳ ಉಸ್ತುವಾರಿಯಲ್ಲಿ ತನಿಖೆ ನಡೆಸಲಾಗುತ್ತಿದೆ. ಮಂಗಳೂರು ಕಮಿಷನರ್, ಉಡುಪಿ ಪೊಲೀಸರ ಸಹಾಯ ಪಡೆದು ಈಗಾಗಲೇ ಆರು ತಂಡಗಳನ್ನು ರಚಿಸಿದ್ದೇವೆ. …

Read More »

ಪ್ರವೀಣ್ ಅಂತಿಮ ಯಾತ್ರೆ : ಸಚಿವರು, ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಅಂತಿಮ ಯಾತ್ರೆ ವೇಳೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸಚಿವರು ಮತ್ತು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ.   ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಈ ವೇಳೆ ಆಗಮಿಸಿದ ಸಚಿವರಾದ ಸುನಿಲ್ ಕುಮಾರ್ , ಎಸ್ . ಆಂಗಾರ , ಬಿಜೆಪಿ ರಾಜ್ಯಾಧ್ಯಕ್ಷ …

Read More »

ಬೆಳಗಾವಿಯಲ್ಲಿ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬ ಆಚರಣೆ

ಬೆಳಗಾವಿಯ ಶಿವಸೇನಾ ವತಿಯಿಂದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಜನುಮ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಟಿಳಕ ಚೌಕ್‍ನಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬವನ್ನು ಸ್ಥಳೀಯ ಹಿರಿಯ ನಾಗರಿಕ ಮಹಾದೇವ ಅವರ ಕೈಯಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಬಳಿಕ ನೆರೆದಿದ್ದ ಸಾರ್ವಜನಿಕರಿಗೆ ಸಿಹಿಯನ್ನು ಹಂಚಿ, ಉದ್ಧವ್ ಠಾಕ್ರೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಬೆಳಗಾವಿಯ ಶಿವಸೇನಾ …

Read More »