Breaking News

Uncategorized

ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳೇ ಮುಂದಿನ ಚುನಾವಣೆಯಲ್ಲಿ ವರದಾನ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಕುಡಚಿ: ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ, ಈ ಅಭಿವೃದ್ಧಿ ಕೆಲಸಗಳೇ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.       ಅವರು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತು ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸೈಕಲ್ ಜಾಥಾದ ಕೊನೆಯ …

Read More »

ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಜರುಗಿದ ಮೆರವಣಿಗೆ ಜಾಥಾಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಮೂಡಲಗಿ : ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು …

Read More »

ಅಪ್ರಾಪ್ತ ಬಾಲಕಿ ವಿವಾಹಕ್ಕೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ ಭೂಪ; ವರ ಮಹಾಶಯ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಲು ವರ ಮಹಾಶಯನೊಬ್ಬ ಆಧಾರ್ ಕಾರ್ಡ್ ನ್ನೇ ನಕಲು ಮಾಡಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಮದುಮಗ ಮನು ಎಂದು ಗುರುತಿಸಲಾಗಿದೆ. ಕಾನೂನು ಪ್ರಕಾರ ಯುವತಿಗೆ ವಿವಾಹವಾಗಲು 18 ವರ್ಷ ಆಗಿರಬೇಕು. ಆದರೆ ಮನು ಎಂಬ ಯುವಕ ಅಪ್ರಾಪ್ತ ಯುವತಿ ವಿವಾಹವಾಗಲೆಂದು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ವಿವಾಹಕ್ಕೆ ಸಿದ್ಧತೆ ನಡೆಸಿದ್ದಾನೆ. ಯುವತಿಯ ಆಧಾರ್ ಕಾರ್ಡ್ ನಲ್ಲಿ ಆಕೆ ಹುಟ್ಟಿದ ದಿನಾಂಕ, ವರ್ಷವನ್ನೇ …

Read More »

ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ

ಯಮಕನಮರಡಿ: ಇಲ್ಲಿನ ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕರೊಬ್ಬರನ್ನು ಶನಿವಾರ ಬರ್ಬರವಾಗಿ ಕೊಲೆಗೈಯ್ಯಲಾಗಿದೆ.   ಹೊಸಪೇಟೆ ನಿವಾಸಿ ಪರಶುರಾಮ ಸಿದ್ದಲಿಂಗಯ್ಯ ಹಲಕರ್ಣಿ(32) ಕೊಲೆಯಾದವರು. ಬಸವರಾಜ ಭರಮಪ್ಪ ಗಲಾಟಿ (30) ಮಂಜುನಾಥ ಲಕ್ಷ್ಮಣ ಪುಟ್ಜಾನೆ (24), ಕೆಂಪಣ್ಣ ಅರ್ಜುನ್ ನೇಸರ್ಗಿ ಕೊಲೆಗೈದ ಆರೋಪಿಗಳು.   ಕೊಲೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಗಳಾದ ಮಂಜುನಾಥ ಹಾಗೂ ಕೆಂಪಣ್ಣ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಇನ್ನೊಬ್ಬ ಾರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Read More »

ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು

ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.   ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು.   ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ.   ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.

Read More »

ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ: ಸಿಎಂ ಬಸವರಾಜ್ ಬೊಮ್ಮಾಯಿ.

ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ: ಸಿಎಂ ಬಸವರಾಜ್ ಬೊಮ್ಮಾಯಿ. ರಾಜ್ಯದಲ್ಲಿ ಮಳೆ ಪ್ರವಾಹ ಹಿನ್ನೆಲೆಯಲ್ಲಿ ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿ ಗಳ ಜೊತೆ ಸಭೆ ನಡೆಸಿದ್ದೇನೆ. ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಡಿಸಿಗಳು ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ. ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ನೀರಿನ ಪ್ರಮಾಣಕ್ಕೆ ತಕ್ಕಂತೆ …

Read More »

ಗೋಕಾಕ ತಾಲೂಕಿನ ಶಿಂಗಳಾಪುರ ಸೇತುವೆ ಮುಳುಗಡೆ

ಗೋಕಾಕ: ಮಳೆಯ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಮಟ್ಟ ಮೀರಿ ಹರಿಯುತ್ತಿದೆ. ಈ ಮಧ್ಯೆ ಶಿಂಗಳಾಪುರ ಸೇತುವೆ ಶನಿವಾರ ಮುಳುಗಡೆಯಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೇತುವೆ ಮೇಲಿನಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು ಜನ ಸಂಚರಿಸದಂತೆ ಎಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಗೋಕಾಕ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು ಸುರಕ್ಷತೆ ಬಗ್ಗೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.

Read More »

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ನವದೆಹಲಿ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.   ವಿಕ್ರಾಂತ್ ರೋಣ ಚಿತ್ರದ ಪ್ರಚಾರದಲ್ಲಿ ಬಿಸಿಯಾಗಿರುವ ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈ ನಡುವೆ ಇಂದು ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.   ಈ ವೇಳೆ ಕೇಂದ್ರ ಸಚಿವರ ಜತೆ ಉಪಹಾರವನ್ನು …

Read More »

ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

    ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಆಗ್ರಹಿಸಿದರು.   ನಗರದ ಕಾಂಗ್ರೆಸ್‌ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ …

Read More »

ಬೆಳಗಾವಿಯಲ್ಲಿ ಮನೆ ಗೋಡೆ ಕುಸಿದು ಬಾಲಕ ಸಾವು ಪ್ರಕರಣ : ಕೆಲವೇ ಗಂಟೆಗಳಲ್ಲಿ ಪರಿಹಾರ ನೀಡಿದ ಡಿಸಿ

ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ 5 ಲಕ್ಷ ರೂಪಾಯಿ ಪರಿಹಾರ ತಲುಪಿಸಿದ್ದಾರೆ. ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಮನೆಯ ಗೋಡೆ ಕುಸಿದ ಪರಿಣಾಮ ಸಾವನ್ನಪ್ಪಿದ್ದ. ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಆರ್.ಟಿ.ಜಿ‌.ಎಸ್ ಮೂಲಕ ಜಮಾ‌ ಮಾಡಿದ್ದಾರೆ. ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ …

Read More »