Breaking News

Uncategorized

ತುಂಬಿ ಹರಿಯುತ್ತಿದ್ದ ಸಾತಿಹಳ ಸೇತುವೆ ಮೇಲೆ ಬಸ್‌ ಚಾಲಕನ ದುಸ್ಸಾಹಸ;

ವಿಜಯಪುರ:ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ನಿರಂತರವಾಗಿ ವರುಣ ಅಬ್ಬರದಿಂದ ಸೇತುವೆಗಳೆಲ್ಲ ತುಂಬಿ ಹರಿಯುತ್ತಿದೆ. ದೇವರಹಿಪ್ಪರಗಿ ತಾಲೂಕಿನ ಸಾತಿಹಳ ಗ್ರಾಮದ ಸೇತುವೆ ಫುಲ್‌ ಜಲಾವೃತಗೊಂಡಿದೆ. ಈ ವೇಳೆ ಬಸ್‌ ಚಾಲಕನೊಬ್ಬ ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬಸ್‌ ಚಲಾಯಿಸುತ್ತಿದ್ದು, ದುಸ್ಸಾಹಸಕ್ಕೆ ಇಳಿದಿದ್ದಾನೆ. ಗ್ರಾಮದ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಇಲ್ಲಿನ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆಯ ಮೇಲೆ ಬಸ್ ಚಲಾಯಿಸಬೇಡ ಎಂದು ಗ್ರಾಮಸ್ಥರು ಹೇಳಿದರೂ ಬಸ್ ಚಾಲಕ ಅದನ್ನು ಲೆಕ್ಕಿಸದೇ ಬಸ್ …

Read More »

ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ

    ಗೋಕಾಕ ಅ 5 : ಮನೆಯಿಂದ ಶೌಚಾಲಯಕ್ಕೆ ತೆರಳುತ್ತಿರುವ ಮಹಿಳೆಯ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ 21 ನೇ ವಾರ್ಡ್‍ನ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಅಬೇದಾ ಮುಸ್ತಫಾ ಕಲ್ಲೋಳಿ ಎಂಬ ಮಹಿಳೆ ಮಧ್ಯಾಹ್ನ ಶೌಚಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಬೀದಿ ನಾಯಿಯು ಮಹಿಳೆಯ ಕಾಲಿಗೆ ಕಚ್ಚಿ ಗಂಭೀರವಾಗಿ ಗಾಯಗೋಳಿಸಿದ್ದು, ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂಬೇಡ್ಕರ್ …

Read More »

ರಸ್ತೆ ಸುಧಾರಣೆಗೆ ₹ 2 ಕೋಟಿ ವೆಚ್ಚ

ಕಾಗವಾಡ: ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಮಕೇರಿ- ಬೇಡರಟ್ಟಿ ರಸ್ತೆ ಸುಧಾರಣೆಗೆ ₹ 2 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ ಗುರುವಾರ ಭೂಮಿಪೂಜೆ ನೆರವೇರಿಸಿದರು. ‘ಚಮಕೇರಿ ಹಾಗೂ ಬೇಡರಟ್ಟಿಯ ನಡುವಿನ ರಸ್ತೆ ಬಹಳಷ್ಟು ಹದಗೆಟ್ಟು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದನ್ನು ಮನಗಂಡು ರಸ್ತೆ ಕಾಮಗಾರಿಗೆ ಅನುದಾನ ಮಂಜೂರು ಮಾಡಿಸಿದ್ದು, ಈ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವುದು’ ಎಂದು ಶಾಸಕ ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು, …

Read More »

ಅಮಾಯಕರನ್ನು ಬಂಧಿಸಿದರೆ 5 ಲಕ್ಷ ರೂ. ಪರಿಹಾರ; ಪೊಲೀಸ್ ಅಧಿಕಾರಿಯೇ ಕೊಡಬೇಕು; ಹೈಕೋರ್ಟ್

ಬೆಂಗಳೂರು: ತಪ್ಪು ಮಾಡದ ವ್ಯಕ್ತಿಯನ್ನು ಬಂಧಿಸಿದರೆ ಅದಕ್ಕೆ ಪೊಲೀಸರೇ ಜವಾಬ್ದಾರರಾಗಿದ್ದು, ವ್ಯಕ್ತಿಯನ್ನು ಬಂಧಿಸಿದ ಪೊಲೀಸ್ ಅಧಿಕಾರಿಯೇ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಿಂಗರಾಜು ಎನ್ ಎಂಬ ಅಮಾಯಕರೊಬ್ಬರನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಇಂತದ್ದೊಂದು ಮಹತ್ವದ ತೀರ್ಪು ಪ್ರಕಟಿಸಿದೆ.   ಓರ್ವ ವ್ಯಕ್ತಿ ಮೇಲೆ ಯಾವುದೇ ರೀತಿಯ ಆಪಾದನೆ ವಾರಂಟ್ ಹೊರಡಿಸಿದಾಗ ಜಾಮೀನು …

Read More »

ಆಗಸ್ಟ್ 5: ತೀವ್ರ ಕುಸಿತಗೊಂಡ ಕಚ್ಚಾ ತೈಲ ದರ; ಭಾರತದಲ್ಲಿ ಇಂಧನ ದರ ಸ್ಥಿರ

ಜಾಗತಿಕ ಕಚ್ಚಾತೈಲ ಬೆಲೆ ಇಂದು (ಆಗಸ್ಟ್ 5) ತೀವ್ರವಾಗಿ ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 110 ಡಾಲರ್ ಗಡಿ ದಾಟಿದ್ದ ಕಚ್ಚಾ ತೈಲ ದರ ಇತ್ತೀಚೆಗೆ ಕಡಿಮೆಯಾಗಿದೆ. ಅದಾದ ಬಳಿಕ ಪ್ರತಿ ದಿನ ಕಚ್ಚಾತೈಲ ದರವು ಏರಿಕೆ ಕಾಣುತ್ತಿದ್ದವು. ಇಂದು 95 ಡಾಲರ್ ಗಡಿಯಿಂದ ಕೆಳಗಿಳಿದಿದೆ. ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ, ಚೀನಾ ತೈವಾನ್ ಬಿಕ್ಕಟ್ಟು ಮುಂತಾದ ವಿದ್ಯಮಾನಗಳಿಂದ ಕಚ್ಚಾ ತೈಲ ದರ ಏರಿಳಿತ ಕಾಣುತ್ತಿದೆ. ಆದರೆ ಭಾರತದಲ್ಲಿ ಕಳೆದ …

Read More »

ನಿಧಿಗಾಗಿ ಶಿವಲಿಂಗವನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

ಕೊಪ್ಪಳ: ನಿಧಿ ಆಸೆಗಾಗಿ ಶಿವಲಿಂಗವನ್ನು ಕಿತ್ತು ಹಾಕಿರುವ ಘಟನೆ ‌ಕೊಪ್ಪಳದಲ್ಲಿ ನಡೆದಿದೆ. ತಾಲೂಕಿನ ಶಿವಪುರ ಗ್ರಾಮದ ಬಳಿ ಇರುವ ಸೋಮನಾಥ ದೇವಾಲಯದಲ್ಲಿ ಶಿವಲಿಂಗವನ್ನು ಧ್ವಂಸಗೊಳಿಸಿ ನಿಧಿ ಶೋಧಿಸಿದ್ದಾರೆ ಎನ್ನಲಾಗ್ತಿದೆ. ಶಿವಪುರದ ಪಕ್ಕದ ಬೆಟ್ಟದಲ್ಲಿರುವ ಸೋಮನಾಥ ದೇವಾಲಯ ವಿಜಯನಗರ ಸಾಮ್ರಾಜ್ಯದ ಕಾಲದ್ದಾಗಿದೆ. ಈ ಐತಿಹಾಸಿಕ ದೇವಸ್ಥಾನದಲ್ಲಿ ಶಿವಲಿಂಗ ಪ್ರತಿಷ್ಠಾನೆ ಮಾಡಿರುವ ಸ್ಥಳದ ಸುತ್ತ ಕಬ್ಬಿಣದ ಸಲಾಕೆಗಳಿಂದ ಅಗೆಯಲಾಗಿದೆ. ಇದರಿಂದ ಅಲ್ಲಿದ್ದ ಶಿವಲಿಂಗ ಮೂರ್ತಿ ಭಗ್ನವಾಗಿದೆ. ನಂತರ ಕಬ್ಬಿಣದ ಸಲಕರಣೆಗಳನ್ನು ಅಲ್ಲಿಯೇ ಬಿಟ್ಟು ಕಳ್ಳರು …

Read More »

ಸೋರುತಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಚಿನ್ನದ ಛಾವಣಿ! ದೇಣಿಗೆ ನೀಡಿದ್ದು ವಿಜಯ್ ಮಲ್ಯ!

ಶಬರಿಮಲೆ ಅಯ್ಯಪ್ಪ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಛಾವಣಿ ಸೋರುತ್ತಿರುವುದು ಕಂಡು ಬಂದಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ ( Travancore Devaswom Board) ಕೂಡಲೇ ದುರಸ್ತಿ ಕಾಮಗಾರಿ ನಡೆಸಲು ನಿರ್ಧರಿಸಿದೆ. ಇದಿಷ್ಟೇ ಆಗಿದ್ದರೆ ಕರ್ನಾಟಕದ ಪಾಲಿಗೆ ಅಷ್ಟೇನೂ ಸುದ್ದಿಯಾಗುತ್ತಿರಲಿಲ್ಲ. ಆದರೆ ಸದ್ಯ ಸೋರುತ್ತಿರುವ ಚಿನ್ನ ಲೇಪಿತ ಛಾವಣಿಯನ್ನು ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ದೇಣಿಗೆ ನೀಡಿದ್ದು ವಿಜಯ್ ಮಲ್ಯ! (Vijay Mallya) ಇದೇ ಕಾರಣಕ್ಕೆ ಶಬರಿಮಲೆ ಅಯ್ಯಪ್ಪ ದೇಗುಲದ (Sabarimala Ayyappa …

Read More »

ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ-04:ಜಿಲ್ಲೆಯ ಹಲವು ಕಡೆಗಳಲ್ಲಿ ಇತ್ತೀಚಿಗೆ ಯೂಟ್ಯೂಬ್ ಚಾನೆಲ್ ಮತ್ತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ವತಿಯಿಂದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಮಾತ್ರ ಜಿಲ್ಲಾಡಳಿತದ ವತಿಯಿಂದ ಗುರುತಿನಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಅನಧಿಕೃತ ಪತ್ರಕರ್ತರ ಹಾವಳಿ ಹಾಗೂ “ಪ್ರೆಸ್” ಹೆಸರು ದುರ್ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳ ಜತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ …

Read More »

ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ*

    *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು.   ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು.   ಕಹಾಮದ …

Read More »

ಮೊಹರಂ ಹಬ್ಬ ಹಿನ್ನಲೆ : ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ

ಹೊಸಪೇಟೆ : ಮೊಹರಂ ಹಬ್ಬ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್&ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆಯಾದ್ಯಂತ ಆ.07ರಂದು ಬೆಳಗ್ಗೆ 6ರಿಂದ ಆ.10ರ ರಾತ್ರಿ 10ಗಂಟೆಯವರೆಗೆ ಮದ್ಯ ಮಾರಾಟ …

Read More »