ಬೆಂಗಳೂರು,ಏ.28- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎಲ್ಲಾ ಹೈಕೋರ್ಟ್‍ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಮುಖ್ಯಮಂತ್ರಿಗಳ ಸಭೆ ಶನಿವಾರ ನಡೆಯಲಿದ್ದು, ನಾಳೆ ದೆಹಲಿಗೆ ತೆರಳುವು ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಎಲ್ಲ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ತಮಗೂ ಕೂಡ ಆಹ್ವಾನ ಬಂದಿರುವುದರಿಂದ ಈ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುವುದಾಗಿ ತಿಳಿಸಿದರು. ದೆಹಲಿಗೆ ತೆರಳಿದ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ …
Read More »ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ
ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ. 1 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 1 ರವರರೆಗೂ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಬೆಳಗಾವಿ,ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ.
Read More »ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಬೆನ್ನಲ್ಲೇ ಮತ್ತೊಬ್ಬ ಕಂಟ್ರಾಕ್ಟರ್ ಲಾಡ್ಜ್ ನಲ್ಲಿ ನೇಣಿಗೆ ಶರಣು!
ಬೆಳಗಾವಿ : ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲೇ ಇದೀಗ ಜಿಲ್ಲೆಯ ಮತ್ತೊಬ್ಬ ಗುತ್ತಿಗೆದಾರ ಬಾಳೆಹೊನ್ನೂರಿನ ಖಾಸಗಿ ಲಾಡ್ಜ್ ನಲ್ಲಿ ನಿಗೂಢವಾಗಿ ಆತ್ಮಹತ್ಯೆಗೆ ಶರಣವಾಗಿರುವ ಘಟನೆ ನಡೆದಿದೆ. ಬೆಳಗಾವಿ ಮೂಲದ ಬಸವರಾಜ (47) ಆತ್ಮಹತ್ಯೆಗೆ ಶರಣಾದವರು. ಪಟ್ಟಣದ ಖಾಸಗಿ ಲಾಡ್ಜ್ ವೊಂದರಲ್ಲಿ ಮೂರು ದಿನಗಳ ಹಿಂದೆ ಕೊಠಡಿ ಪಡೆದಿದ್ದ ಬಸವರಾಜ್ ಬುಧವಾರ ಬೆಳಗ್ಗೆ ಕೊಠಡಿಯಿಂದ ಹೊರಬಂದಿದ್ದರು ಎನ್ನಲಾಗಿದ್ದು, ಆ ಬಳಿಕ ಕೊಠಡಿ ಒಳಗೆ ತೆರಳಿದವರು ಪುನಃ ವಾಪಸ್ …
Read More »ವಿಶ್ವಮಾನವ ಎಕ್ಸ್‌ಪ್ರೆಸ್ ರದ್ದು: ಪ್ರಯಾಣಿಕರಿಗೆ ತೊಂದರೆ
ಬೆಂಗಳೂರು: ಬೆಳಗಾವಿ ರೈಲು ನಿಲ್ದಾಣದಲ್ಲಿ ಸಿಗ್ನಲ್ ಕಾಮಗಾರಿ ನಿರ್ವಹಿಸಲು ಮೈಸೂರಿನಿಂದ ಬೆಂಗಳೂರು ಮಾರ್ಗದಲ್ಲಿ ಬೆಳಗಾವಿಗೆ ಹೋಗುವ ‘ವಿಶ್ವಮಾನವ ಎಕ್ಸ್‌ಪ್ರೆಸ್’ ರೈಲು ಸಂಚಾರವನ್ನು ನೈರುತ್ಯ ರೈಲ್ವೆ ಮೇ 5ರ ತನಕ ರದ್ದುಪಡಿಸಿದೆ. ಇದು ಮೈಸೂರು-ಬೆಂಗಳೂರು-ಹುಬ್ಬಳ್ಳಿ ನಡುವಿನ ರೈಲು ಪ್ರಯಾಣಿಕರಿಗೂ ತೊಂದರೆ ಉಂಟು ಮಾಡಿದೆ. ಬೆಳಿಗ್ಗೆ 5.50ಕ್ಕೆ ಮೈಸೂರಿನಿಂದ ಹೊರಡುತ್ತಿದ್ದ ರೈಲು, 8.40 ಬೆಂಗಳೂರಿಗೆ ಬಂದು ರಾತ್ರಿ 9.45ರ ಸುಮಾರಿಗೆ ಬೆಳಗಾವಿ ತಲುಪುತ್ತಿತ್ತು. ಮರುದಿನ ಬೆಳಿಗ್ಗೆ 5.30ಕ್ಕೆ ಬೆಳಗಾವಿಯಿಂದ ಹೊರಟು ಸಂಜೆ 5.40ಕ್ಕೆ …
Read More »ಜಗದೀಶ್ ಎರಡನೇ ಹಂತದ ಸಮರ
ಬೆಂಗಳೂರು, ಏ. 27: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಹಾಗೂ ವಕೀಲ ಕೆ.ಎನ್. ಜಗದೀಶ್ ನಡುವೆ ಎರಡನೇ ಹಂತದ ‘ವಾರ್’ ಶುರುವಾಗಿದೆ. ರವಿ ಡಿ. ಚನ್ನಣ್ಣನವರ್ ಅವರ ಸಹೋದರ ರಾಘವೇಂದ್ರ ಡಿ. ಚನ್ನಣ್ಣನವರ್ ಅಕ್ರಮ ಸಂಬಂಧ ಇಟ್ಟುಕೊಂಡಿರುವ ಬಗ್ಗೆ ಸಂಬಂಧ ಆತನ ಪತ್ನಿ ರೋಜಾ ಎಂಬುವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ನೊಂದ ಮಹಿಳೆ ಬೆಂಬಲಕ್ಕೆ ನಿಲ್ಲುವ ಮೂಲಕ ವಕೀಲ ಕೆ.ಎನ್. ಜಗದೀಶ್ ಎರಡನೇ ಹಂತದ ಸಮರ …
Read More »ಕೋವಿಡ್ 4ನೇ ಅಲೆ ಆತಂಕದ ಮಧ್ಯೆ ಮತ್ತೊಂದು ಶಾಕ್, ಬೆಂಗಳೂರಿನಲ್ಲಿ ಸಿಗುತ್ತಿಲ್ಲ ಬೂಸ್ಟರ್ ಡೋಸ್!
ಬೆಂಗಳೂರು: ಕೊಂಚ ತಣ್ಣಗಾಗಿದೆ ಎಂದುಕೊಂಡಿದ್ದ ಕೊರೋನಾ (Corona) ಮಹಾಮಾರಿ ಮತ್ತೆ ಅಬ್ಬರಿಸುತ್ತಿದೆ. ಕೋವಿಡ್ 4ನೇ ಅಲೆ (Covid 4th Wave) ಬಗ್ಗೆ ಎಚ್ಚರವಾಗಿರಿ ಅಂತ ಸ್ವತಃ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೇ ಹೇಳಿದ್ದಾರೆ. ಇಲ್ಲಿಗೆ ಮತ್ತೊಂದು ಅಲೆ ಬರೋದು ನಿಶ್ಚಿತ. ಈಗಾಗಲೇ ಈ ಬಗ್ಗೆ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ (Government) ಮುಂದಾಗಿದೆ ಅಂತ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ (Health Minister Dr. …
Read More »BJP ಸೇರಲು ಮುಂದಾದ ಸಂಸದೆ ಸುಮಲತಾ; ಮದ್ದೂರಿನಿಂದ ಅಭಿಷೇಕ್ ಅಂಬರೀಶ್ ಅಖಾಡಕ್ಕಿಳಿಸಲು ಪ್ಲಾನ್..?
ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯತ್ತ ಸುಮಲತಾ ಮುಖಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಅವರನ್ನು ಅಖಾಡಕ್ಕೆ ಇಳಿಸಲು ಪ್ಲಾನ್ ಮಾಡಿರುವ ಸುಮಲತಾ, ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್, ಮದ್ದೂರಿನಿಂದ ಎಸ್.ಎಂ. ಕೃಷ್ಣ ಸಹೋದರನ ಮಗನಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಗುರುಚರಣ್ ಗೆ …
Read More »ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಆಕಾಂಕ್ಷಿಗಳ ಲಾಬಿ ಜೋರು
ಬೆಂಗಳೂರು,ಏ.27- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಮೇ ತಿಂಗಳ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಲಾಬಿ ಕೂಡ ಜೋರಾಗುತ್ತಿದೆ. ಚುನಾವಣೆಗೆ ಒಂದೇ ವರ್ಷ ಬಾಕಿ ಇರುವುದರಿಂದ ಶತಾಯಗತಾಯ ಈ ಬಾರಿ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲೇಬೇಕೆಂದು ಹಠಕ್ಕೆ ಬಿದ್ದಿರುವ ಆಕಾಂಕ್ಷಿಗಳು ಗಾಡ್‍ಫಾದರ್‍ಗಳ ಮೊರೆ ಹೋಗಿದ್ದಾರೆ. ಕೆಲವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಎಡತಾಕಿದರೆ, ಇನ್ನು ಕೆಲವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ …
Read More »ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಗೌತಮ್ ಅದಾನಿ
ನವದೆಹಲಿ: ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ ಭಾರತ ಮತ್ತು ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಉಳಿದಿಲ್ಲ. ಈಗ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಈಗ ಅದಾನಿ ಆಸ್ತಿಯು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್‌ಗೆ ಆಸ್ತಿಗೆ ಸಮನಾಗಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್(ಶತಕೋಟ್ಯಧಿಪತಿ) ರಿಯಲ್ ಟೈಂ ಇಂಡೆಕ್ಸ್ ಪ್ರಕಾರ, ಅದಾನಿ ಮತ್ತು ಬಿಲ್ ಗೇಟ್ಸ್ ಇಬ್ಬರೂ 125 ಬಿಲಿಯನ್ ಡಾಲರ್( 9.58 ಲಕ್ಷ ರೂ.)ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಗೌತಮ್ ಅದಾನಿ ವಿಶ್ವದ ಐದನೇ ಶ್ರೀಮಂತ …
Read More »ಸೆಂಟ್ ಹಾಕಿಕೊಳ್ಳದೆ ಈಚೆಗೆ ಬರಲ್ಲ ಈ ಗಿರಾಕಿ – ಅಶ್ವತ್ಥ್ ನಾರಾಯಣ್ ವಿರುದ್ಧ ರೇವಣ್ಣ ಕಿಡಿ
ಹಾಸನ: ಸೆಂಟ್ ಹಾಕಿಕೊಳ್ಳದೆ ಈಚೆಗೆ ಬರಲ್ಲ ಈ ಗಿರಾಕಿ ಎಂದು ಹೇಳುವ ಮೂಲಕ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಸಚಿವ ಅಶ್ವತ್ಥ್ ನಾರಾಯಣ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರೇವಣ್ಣ ಅವರಿಗೆ ಶಿಕ್ಷಣ ಅಂದರೆ ಏನು ಅಂತ ಗೊತ್ತಿಲ್ಲ ಎಂಬ ಅಶ್ವತ್ಥ್ ನಾರಾಯಣ್ ಹೇಳಿಕೆ ವಿಚಾರವಾಗಿ ಹಾಸನದಲ್ಲಿ ಪ್ರತಿಕ್ರಿಯಿಸಿದ ಅವರು, ಶಿಕ್ಷಣ ಸಚಿವರ ಬಗ್ಗೆ ನಮಗೆ ಗೌರವವಿದೆ. ಅವರು ಬಂದ ಕೂಡಲೇ ಉನ್ನತ ಶಿಕ್ಷಣದಲ್ಲಿ ಕ್ರಾಂತಿ ಮಾಡುತ್ತಾರೆ ಅಂದುಕೊಂಡಿದ್ದೆ. ನಾವು ಯಾವುದೇ …
Read More »