ರಾಯಚೂರು: ಅನುಚಿತ ವರ್ತನೆ ತೋರಿಸಿ ಓಡಿ ಹೋದ ಯುವಕನನ್ನು ಚೇಸ್ ಮಾಡಿ ಹಿಡಿದ ಲೇಡಿ ಪಿಎಸ್‍ಐ ಲಾಠಿ ರುಚಿ ತೋರಿಸಿದ್ದಾರೆ. ಜಿಲ್ಲೆಯ ಸಿರವಾರ ತಾಲೂಕಿನ ಕುರಕುಂದಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ನಟ ಸುದೀಪ್ ಬಂದಿದ್ದರು. ಈ ವೇಳೆ ಸಿರವಾರ ಠಾಣೆ ಪಿಎಸ್‍ಐ ಗೀತಾಂಜಲಿ ಸೇರಿದಂತೆ ಕೆಲ ಪೊಲೀಸರ ಜೊತೆ ಯುವಕ ಅನುಚಿತ ವರ್ತನೆ ತೋರಿದ್ದ. ಅಲ್ಲದೇ ಪೊಲೀಸರ ಲಾಠಿಯನ್ನು ಕಿತ್ತುಕೊಂಡು ಓಡಿಹೋಗಿದ್ದ. ಓಡಿ …
Read More »ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ
ತಿರುವನಂತಪುರಂ: ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಸಭೆ ಬೆನ್ನಲ್ಲೆ ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಕೆಲಸದ ಸ್ಥಳಗಳಲ್ಲೂ, ಪ್ರಯಾಣದ ವೇಳೆಯೂ ಮಾಸ್ಕ್ ಧರಿಸಲು ಸೂಚನೆ ನೀಡಲಾಗಿದೆ. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಬೇಕೆಂದು ಇದೇ ವೇಳೆ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ಮೂಲಕ ಕೊವೀಡ್ ನಿಯಮ ಉಲ್ಲಂಘನೆ ಶಿಕ್ಷಾರ್ಹ ಅಪರಾಧ ಎಂದು ಕೇರಳ ಸರ್ಕಾರ …
Read More »ಸದ್ಯಕ್ಕೆ ಟಫ್ ರೂಲ್ಸ್ ಜಾರಿಯಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು: ಕೊರೊನಾ 4ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಪ್ರಧಾನಿ ಮೋದಿ ಅವರೊಂದು ತುರ್ತು ಸಭೆ ಮುಕ್ತಾಯದ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಸಾಫ್ಟ್ ರೂಲ್ಸ್ ಮಾತ್ರ ಜಾರಿ ಮಾಡುತ್ತೇವೆ. ಸ್ವಲ್ಪ ದಿನ ಕಾದು ನೋಡುವ ಬಗ್ಗೆ ಚಿಂತನೆ ನಡೆಸಿದ್ದೇವೆ. ಕೇಂದ್ರದಿಂದ ಯಾವುದೇ ನಿಯಮ ಜಾರಿಗೆ ಸೂಚನೆ ಬಾರದ ಹಿನ್ನಲೆ ಸದ್ಯಕ್ಕೆ ಕಠಿಣ ನಿಯಮ ಜಾರಿ ಮಾಡದೇ ಇರಲು …
Read More »ಇಂದು ಸಚಿವ ಸಿ.ಸಿ.ಪಾಟೀಲ್ ಮನೆ ಎದುರು ದಿಂಗಾಲೇಶ್ವರ ಸ್ವಾಮೀಜಿ ಧರಣಿ!
ಗದಗ : ಮೂರು ಸಾವಿರ ಮಠದ ಪಿಠಾಧಿಪತಿಯಾಗಲು ದಿಂಗಾಲೇಶ್ವರ ಸ್ವಾಮೀಜಿ ರೌಡಿಸಂ ಮಾಡಿದ್ದರು ಎಂಬ ಸಚಿವ ಸಿ.ಸಿ.ಪಾಟೀಲ್ ಆರೋಪವನ್ನು ಸಾಬೀತು ಮಾಡಬೇಕು ಎಂದು ಆಗ್ರಹಿಸಿ ಇಂದು ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ. ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಚಿವ ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮಿಜಿ ಧರಣಿ ನಡೆಸಲಿದ್ದಾರೆ. ತಮ್ಮ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾಡಿರುವ ಆರೋಪಗಳ ಬಗ್ಗೆ ಏಪ್ರಿಲ್ 27 ರೊಳಗೆ ವಿವರಣೆ ನೀಡಬೇಕು ಎಂದು ದಿಂಗಾಲೇಶ್ವರ ಶ್ರೀಗಳು …
Read More »ಹೊಸಬರ ಅಖಾಡಕ್ಕೆ ಸಜ್ಜಾದ ಸಕ್ಕರೆ ನಾಡು
ಮಂಡ್ಯ: ಸಕ್ಕರೆ ನಾಡು ಮಂಡ್ಯ ರಾಜಕಾರಣವೇ ವಿಭಿನ್ನವಾಗಿದ್ದು, ದೇಶದ ರಾಜಧಾನಿ ದಿಲ್ಲಿಯಲ್ಲೂ ಸದ್ದು ಮಾಡುತ್ತದೆ. ಅದರಂತೆ ಮುಂದಿನ 2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಸಾಕಷ್ಟು ಮಂದಿ ಹೊಸಬರ ಸ್ಪರ್ಧೆಗೆ ಅಖಾಡ ಸಿದ್ಧಗೊಳ್ಳುತ್ತಿವೆ. ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಕೆ.ಆರ್.ಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ಯುವಕರ ಚಿತ್ತ ಚುನಾವಣೆಯತ್ತ ಹರಿದಿದೆ. ಕೆಲವು ಹೊಸ ಮುಖಗಳು ಅಖಾಡಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಮತದಾರರ ಸೆಳೆಯಲು ಇನ್ನಿಲ್ಲದ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಮುಖಂಡರನ್ನು ಸೆಳೆಯುವ …
Read More »ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್ ವಾರಂಟ್ ಜಾರಿ!
ಕಲಬುರಗಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ (PSI Recruitment Scam) ಅಕ್ರಮಗಳನ್ನು ಕಂಡು, ಇಂತಹ ಅಪರಾಧವೆಸಗಿರುವವರು ನಿಜಕ್ಕೂ ದೇಶದ್ರೋಹಿಗಳೇ ಸರಿ ಎಂದು ರೋಸಿಹೋದ ಜನ ಅದಾಗಲೇ ತೀರ್ಮಾನಿಸಿಯಾಗಿದೆ. ಈ ಮಧ್ಯೆ, ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು (CID) ಸಹ ಈ ಆರೋಪಿಗಳ ವಿರುದ್ಧ ದೇಶಭ್ರಷ್ಟ ದಾವೂದ್ ಇಬ್ರಾಹಿಂ 1993ರಲ್ಲಿ ಎಸಗಿದ್ದ ಮುಂಬೈ ಸ್ಫೋಟ ಪ್ರಕರಣವನ್ನು ಉಲ್ಲೇಖಿಸಿದ್ದಾರೆ. ಆ ಪ್ರಕರಣದಲ್ಲಿ ದೇಶದ್ರೋಹಿ ದಾವೂದ್ …
Read More »ಟ್ಯಾಂಕರ್ ಟೈರ್ ಸ್ಫೋಟ: ತಪ್ಪಿದ ಅನಾಹುತ
ಹೊಸನಗರ: ಪಟ್ಟಣದ ಮಾವಿನಕೊಪ್ಪ ಬಳಿ ಸೋಮವಾರ ಮಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಬಳ್ಳಾರಿಗೆ ಹೊರಟಿದ್ದ ಡೀಸೆಲ್ ಟ್ಯಾಂಕರ್‌ನ ಟೈರ್ ಸ್ಫೋಟಗೊಂಡು, ಡಿವೈಡರ್ ಗುದ್ದಿದ್ದು ಭಾರಿ ಅನಾಹುತ ತಪ್ಪಿದೆ. ಮುಂಜಾನೆ 4.30ರ ಸಮಯದಲ್ಲಿ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಟ್ಯಾಂಕರ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ರಸ್ತೆ ವಿಭಜಕಕ್ಕೆ ಗುದ್ದಿದೆ. ಲಾರಿಯ ಟೈರ್‌ಗಳು ಬೇರ್ಪಟ್ಟು ರಸ್ತೆಯ ಸಮೀಪ ಇದ್ದ ಅಂಗಡಿಯ ಬಾಗಿಲಿಗೆ ಬಡಿದಿದೆ. ಬೆಳಗಿನ ಜಾವ ಆದ ಕಾರಣ ಅಂಗಡಿ ಮುಚ್ಚಿದ್ದ ಕಾರಣ ಯಾವುದೇ …
Read More »ಅಂಗವಿಕಲರಿಗೆ ಖಾತ್ರಿ ‘ಆಸರೆ’: ಕೆಲಸದಲ್ಲಿ ಶೇ 50 ವಿನಾಯಿತಿ, ಪೂರ್ತಿ ಕೂಲಿ
ಬೆಳಗಾವಿ: ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಂಗವಿಕಲರಿಗೆ ಕೆಲಸ ನೀಡುವುದಕ್ಕೆ ಆದ್ಯತೆ ಕೊಡಲಾಗುತ್ತಿದೆ. 18 ವರ್ಷ ಮೇಲ್ಪಟ್ಟ ಅಶಕ್ತರಿಗೆ ಉದ್ಯೋಗ ಒದಗಿಸಿ, ಅವರಿಗೆ ಸ್ವಾವಲಂಬಿ ಬದುಕು ನಡೆಸುವುದಕ್ಕೆ ನೆರವಾಗಲು ಯೋಜನೆ ಬಳಸಿಕೊಳ್ಳಲಾಗುತ್ತಿದೆ. ಈ ಬಗ್ಗೆ ಗ್ರಾಮೀಣ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಐಇಸಿ ಸಂಯೋಜಕರ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಏ.1ರಿಂದ ಕೂಲಿಯನ್ನು ₹289ರಿಂದ ₹309 ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ನಾಲೆಗಳ ನಿರ್ಮಾಣ, ರಾಜಕಾಲುವೆಗಳ ಅಭಿವೃದ್ಧಿ, …
Read More »ನಕಲಿ ಜಾತಿ ಪ್ರಮಾಣಪತ್ರ: ವಿಚಾರಣೆಗೆ ಹಾಜರಾಗದ ಕೆಂಪಯ್ಯ
ಬೆಂಗಳೂರು, ಏಪ್ರಿಲ್ 26: ಕೆಂಪಯ್ಯನವರಿಗೆ ವಿಚಾರಣೆಗೆ ಹಾಜರಾಗುವಂತೆೆ ನೋಟೀಸ್ ನೀಡಲಾಗಿತ್ತು. ಆದರೆ ಕೆಂಪಯ್ಯನವರು ವಿಚಾರಣೆಗೆ ಹಾಜರಾಗಿಲ್ಲ ಡಿಐಜಿ ಡಾ. ರವೀಂದ್ರನಾಥ್ ಹೇಳಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯರ ಸುಳ್ಳು ಜಾತಿ ಪತ್ರ ಪ್ರಕರಣದ ಕಡತವೇ ಕಣ್ಮರೆಯಾಗಿತ್ತು. ಈ ಪ್ರಕರಣದ ಕಡತವನ್ನು ಹುಡುಕಿಸಲಾಗಿದೆ. ಕಡತ ನಾಪತ್ತೆಯಾಗಲು ಕಾರಣವಾಗಿದ್ದ ಅಧಿಕಾರಿ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಕೆಂಪಯ್ಯನವರಿಗೆ ವಿಚಾರಣೆಗೆ ಹಾಜರಾಗುವಂತೆೆ ನೋಟೀಸ್ ನೀಡಲಾಗಿತ್ತು. ಆದರೆ, ಕೆಂಪಯ್ಯನವರು ವಿಚಾರಣೆಗೆ ಹಾಜರಾಗಿಲ್ಲ. ಕೆಂಪಯ್ಯನವರ ಮನೆಗೆ ನೋಟೀಸ್ ಅಂಟಿಸಿ …
Read More »ಹುಬ್ಬಳ್ಳಿ ಗಲಭೆ – ಪುಂಡರ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಕ್ಕೆ ಪ್ಲ್ಯಾನ್
ಹುಬ್ಬಳ್ಳಿ: ನಗರದ ಗಲಭೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಪೈಕಿ 40 ಕ್ಕೂ ಹೆಚ್ಚು ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರು ಚಿಂತನೆ ನಡೆಸಿದ್ದಾರೆ. ಹುಬ್ಬಳ್ಳಿ ಪೊಲೀಸರು 40 ಜನ ಆರೋಪಿಗಳ ವಿರುದ್ಧ ರೌಡಿ ಶೀಟ್ ಓಪನ್ ಮಾಡಲು ಮುಂದಾಗಿದ್ದಾರೆ. ಗಲಭೆಯ ಸೂತ್ರಧಾರಿಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಿಸಲು ಸಿದ್ಧತೆ ನಡೆಸಿದ್ದಾರೆ. 20 ಆರೋಪಿಗಳ ವಿರುದ್ಧ ಕಮ್ಯೂನಲ್ ಗೂಂಡಾಗಳು ಎಂದು ಗುರುತಿಸಲು ಚಿಂತನೆ ನಡೆಸಿದ್ದಾರೆ.
Read More »