ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ ಬೆಳಗಾವಿ :ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ …
Read More »ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಎಡವಟ್ಟು ಮಾಡಿಕೊಂಡ ಶಾಸಕ
ಧಾರವಾಡ: ರಾಷ್ಟ್ರಪತಿಗೆ ಸ್ವಾಗತ ಕೋರುವ ತರಾತುರಿಯಲ್ಲಿ ನಗರದ ಶಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬ್ಯಾನರ್‌ನಲ್ಲಿ ಬರೆಸಿರುವುದು ಟೀಕೆಗೆ ಕಾರಣವಾಗಿದೆ. ಸೆ.26ರಂದು ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ʼಪೌರ ಸನ್ಮಾನʼ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆದರೆ, ರಾಷ್ಟ್ರಪತಿ ಸ್ವಾಗತದ ಕೋರುವ ತರಾತುರಿಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು, …
Read More »ಶಿವಾಜಿ ನಾಡಿನಲ್ಲಿ ಪಾಕಿಸ್ಥಾನ ಜಿಂದಾಬಾದ್ ಕೂಗುವ ಹಕ್ಕು ಯಾರಿಗೂ ಇಲ್ಲ: ಶಿಂಧೆ
ಮುಂಬಯಿ: “ಇದು ಛತ್ರಪತಿ ಶಿವಾಜಿ ಮಹಾರಾಜರ ನಾಡು ಮತ್ತು ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ಹಕ್ಕು ಯಾರಿಗೂ ಇಲ್ಲ” ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ,ಇದು ದೇಶಭಕ್ತರ ರಾಜ್ಯ. ನಮ್ಮ ಸರಕಾರ ಪುಣೆಯಲ್ಲಿ ನಡೆದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. ವಿವಾದಿತ ಇಸ್ಲಾಮಿಕ್ ಸಂಘಟನೆಯ ಪಿಎಫ್‌ಐ ಮುಖಂಡರ ಮೇಲಿಂದ ದಾಳಿ ಮತ್ತು ಬಂಧನದ ನಂತರ ಪುಣೆಯ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದು, …
Read More »ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*
*ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …
Read More »ಬೆಳಗಾವಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ
ಬೆಳಗಾವಿ: ಜಿಲ್ಲೆಯ ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಲಾರಿಯೊಂದು ಕಾರು, ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕುಡುಚಿ ಪೊಲೀಸ್ ಠಾಣೆಯ ಎಎಸ್‌ಐ ಹಲಗಿ ಅವರ ಪತ್ನಿ ರುಕ್ಮಿಣಿ, ಪುತ್ರಿ ತೆರಳುತ್ತಿದ್ದಂತ ಕಾರಿಗೆ ಸಿಮೆಂಟ್ ಲಾರಿಯೊಂದು ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿಯೇ ಕಾರು …
Read More »ಅಕಾಲಿಕವಾಗಿ ಅಗಲಿದ ಡಾ|ರಾಜ್ ಮನೆತನದ ಆಪ್ತ ಮುತ್ತಪ್ಪ
ಮಹಾಲಿಂಗಪುರ: ಪಟ್ಟಣದ ನಿವಾಸಿ, ಛಾಯಾಗ್ರಾಹಕ ಮುತ್ತಪ್ಪ ಬಸಪ್ಪ ಕುಂಬಾರ ಅವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಶುಕ್ರವಾರ ರಾತ್ರಿ ತನ್ನ ಪುತ್ರ 10 ವರ್ಷದ ಮಯೂರನನ್ನು ಕೂರಿಸಿಕೊಂಡು ಸಮೀರವಾಡಿಯಿಂದ ಮಹಾಲಿಂಗಪುರದ ಕಡೆಗೆ ಬರುತ್ತಿರುವಾಗ ಅಪರಿಚಿತ ವಾಹನದ ಚಾಲಕ ಅತೀ ವೇಗವಾಗಿ ನಿರ್ಲಕ್ಷ್ಯತನದಿಂದ ಬಂದು ಎದುರಿನಿಂದ ಹಾಯಿಸಿದ್ದರಿಂದ ಮುತ್ತಪ್ಪ ತಲೆಗೆ ಹಾಗೂ ಬಲಭುಜದ ಹತ್ತಿರ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಅಪಘಾತದಲ್ಲಿ ಮುತ್ತಪ್ಪ ಅವರ ಮಗ ಮಯೂರ್ ಬಲಗಾಲಿಗೆ ಗಂಭೀರ ಗಾಯವಾಗಿದೆ. …
Read More »ಮಹಾಲಯ ಅಮಾವಾಸ್ಯೆ- ಏನಿದರ ಮಹತ್ವ?;
ಅಮಾವಾಸ್ಯೆ’ ಎಂದರೆ ‘ಅಮಾಯಾಂ ವಸತಃ’. ಸೂರ್ಯ ಚಂದ್ರರು ಒಂದೇ ಮನೆಯಲ್ಲಿರುವುದು (ಸರಳ ರೇಖೆಯಲ್ಲಿ) ಎಂದರ್ಥ. ಭಾದ್ರಪದ ಮಾಸದ ಅಮಾವಾಸ್ಯೆ ವಿಶೇಷವಾದದ್ದು. ಆದ್ದ ರಿಂದ ಇದನ್ನು ‘ಮಹಾಲಯ ಅಮಾವಾಸ್ಯೆ’ ಎಂದು ಕರೆದರು. ಈ ಅಮಾವಾಸ್ಯೆ ಪಿತೃಪಕ್ಷದ ಕೊನೆಯ ದಿನ ಬರುತ್ತದೆ. ಇದು ಗತಿಸಿದ ಹಿರಿಯರನ್ನು ನೆನೆದು ಅವರಿಗೆ ತರ್ಪಣ, ಎಡೆ ಹಾಗೂ ಶ್ರಾದ್ಧಗಳನ್ನು ಮಾಡುವ ದಿನ. ಶ್ರಾದ್ಧ ಪದವು ‘ಶ್ರದ್ಧಾ’ ಪದ ದಿಂದ ಬಂದಿದೆ. ಇದರಲ್ಲಿ ಪಾರ್ವಣ, ಆಮಾ, ಸಂಕಲ್ಪ ಹಾಗೂ …
Read More »ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
ಚಿತ್ರದುರ್ಗ: ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಈ ಹಿಂದಿನ ಆದೇಶದಂತೆ ಸೆ. 27ರವರೆಗೆ ಶ್ರೀಗಳಿಗೆ ನ್ಯಾಯಾಂಗ ಬಂಧನ ಅವಧಿ ಮುಂದುವರೆಯಲಿದೆ. ಈ ಹಿಂದೆ ಸೆ.14ರಂದು ಸ್ವಾಮೀಜಿಯ ನ್ಯಾಯಾಂಗ ಬಂಧನ ಅಂತ್ಯ ಹಿನ್ನೆಲೆಯಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಆಗ ನ್ಯಾಯಾಲಯವು ನ್ಯಾಯಾಂಗ ಬಂಧನದ ಅವಧಿಯನ್ನು …
Read More »ಹಗರಣಗಳ ಸರಮಾಲೆಯ ಖ್ಯಾತಿ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬಿಜೆಪಿ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ಪಕ್ಷ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ನಡೆಸಿತ್ತು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಕಾಲದ ಹಗರಣಗಳ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿಕೊಂಡು ಓಡಾಡಿದ ಖ್ಯಾತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ದೂರಿದೆ. ‘ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಲ್ಲ ಯೋಜನೆಗಳಲ್ಲೂ ಹಗರಣ ನಡೆದಿದೆ. ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿನ ಕಮಿಷನ್, ಸ್ಟೀಲ್ ಬ್ರಿಡ್ಜ್ …
Read More »ಬೊಮ್ಮಾಯಿಯವರ ಬಂಡಲ್‍ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆ – ಪ್ರಿಯಾಂಕ್ ಖರ್ಗೆ ಟೀಕೆ
ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ 5,000 ಕೋಟಿ ರೂ. ನೀಡುವುದಾಗಿ ಹೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದೆ ಈ ಅನುದಾನ ಬಿಡುಗಡೆ ಅಸಾಧ್ಯಾ ಎಂದು ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಕೆಆರ್‌ಡಿಬಿಗೆ ಘೋಷಿತ ಅನುದಾನ 3,000 ಕೋಟಿ ರೂಪಾಯಿಯಲ್ಲಿ ಕೇವಲ 1,500 ರೂಪಾಯಿ ಕೋಟಿ ಮಾತ್ರ ಬಿಡುಗಡೆ …
Read More »
Laxmi News 24×7