ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸಲಾಗುತ್ತಿದೆ. ಇದರಿಂದ ಕಾವೇರಿ ಕೊಳ್ಳದ (ಜಲಾಶಯಗಳು ವೇಗವಾಗಿ ಬರಿದಾಗುತ್ತಿವೆ. ಮಳೆ ಸಂಪೂರ್ಣ ಕೈಕೊಟ್ಟಿರುವ ನಡುವೆಯೂ ಹೊರಹರಿವು ದಿನೇ ದಿನೆ ಏರಿಕೆಯಾಗುತ್ತಿರುವುದು ಈ ಭಾಗದ ರೈತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ಹರಿಸಬೇಕಾದ ಬಹುಪಾಲು ನೀರನ್ನು ಕೆಆರ್‌ಎಸ್ ಡ್ಯಾಂನಿಂದಲೇ ಬಿಡಲಾಗುತ್ತಿದೆ. ಪ್ರಸ್ತುತ ಕೆಆರ್‌ಎಸ್‌ನಿಂದ ನದಿಗೆ …
Read More »ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ – ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಕೃತ್ಯ ಆರೋಪ
ಬೆಂಗಳೂರು: ಕರ್ತವ್ಯನಿರತ ಜೈಲು ವಾರ್ಡರ್ ಮೇಲೆ ಜೈಲುವಾಸಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಮಂಜುನಾಥ ಹವೇಲಿ ಹಲ್ಲೆಗೊಳಗಾದ ಜೈಲು ವೀಕ್ಷಕ. ಸೆ. 2ರಂದು ಬೆಳಿಗ್ಗೆ 11:30ರ ಸುಮಾರಿಗೆ ಘಟನೆ ನಡೆದಿದ್ದು, ಮಂಗಳೂರಿನ ಭಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣದ ಕೈದಿಗಳು ಈ ಕೃತ್ಯವೆಸಗಿದ್ದಾರೆ. ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಶಫ್ಘಾನ್, ಮೊಹಮ್ಮದ್ ರಿಜ್ವಾನ್, ನಯಾಜ್, ಕಲಂದರ್ ಶಫಿಯಿಂದ ಕೊಲೆ …
Read More »ಚಿನ್ನ ಅಡವಿಟ್ಟುಕೊಂಡು ವಂಚನೆ, ನೂರಾರು ಜನಕ್ಕೆ ನಾಮ – ಮೈಸೂರಿನಲ್ಲಿ ಮತ್ತೊಬ್ಬ `ಗೋಲ್ಡ್ ವಂಚಕ’
ಮೈಸೂರು: ಚಿನ್ನದ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಮಾಡಿದ ಸರಣಿ ಅಪರಾಧ ಮೈಸೂರಿನಲ್ಲಿ ಮುಂದುವರಿದಿದೆ. ಚಿನ್ನತಂಬಿ, ಮೋಹನ್‌ಲಾಲ್ ಬಳಿಕ ಈಗ ಯೋಗೇಶ್ ಎಂಬುವವನ ಸರದಿ. ಧನಲಕ್ಷ್ಮಿ ಗೋಲ್ಡ್ ಕಂಪನಿ ಮಾಲೀಕ ಯೋಗೇಶ್ ನೂರಾರು ಗ್ರಾಹಕರಿಗೆ ಪಂಗನಾಮ ಹಾಕಿದ್ದಾನೆ. ನೂರಕ್ಕೂ ಹೆಚ್ಚು ಜನರಿಂದ ಚಿನ್ನ ಅಡವಿಟ್ಟುಕೊಂಡು ಮೋಸ ಮಾಡಿರುವ ಆರೋಪ ಯೋಗೇಶ್ ಮೇಲೆ ಬಂದಿದೆ. ಅಡವಿಟ್ಟ ಚಿನ್ನವನ್ನ ವಾಪಸ್ ಕೊಡದೇ ಸತಾಯಿಸುತ್ತಿದ್ದಾನೆ. ಕಳೆದ 1 ವರ್ಷದಿಂದಲೂ ಗ್ರಾಹಕರಿಗೆ ಯೋಗೇಶ್ ಮೋಸ ಮಾಡುತ್ತಲೇ ಬಂದಿದ್ದಾನೆ. …
Read More »ರೇಣುಕಾಸ್ವಾಮಿ ಹತ್ಯೆ ಕೇಸ್ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ ಉಡುಪಿ ಮೂಲದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಬಂಧನ ಭೀತಿ ಹಿನ್ನಲೆ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ 59 ಸಿಸಿಹೆಚ್ ಕೋರ್ಟ್, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು, ಪುನೀತ್‌ನನ್ನು ಕಾಮಾಕ್ಷಿ ಪಾಳ್ಯ …
Read More »ಪ್ರೀತಿ ಹೆಸರಲ್ಲಿ ಯುವಕನಿಂದ ಕಿರುಕುಳ – ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಚಾಮರಾಜನಗರ: ಪ್ರೀತಿ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ವರ್ಷಾ (22) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ವರ್ಷಾ ಮೈಸೂರಿನಲ್ಲಿ ಬಿ.ಇ ವ್ಯಾಸಂಗ ಮಾಡುತ್ತಿದ್ದರು. ಕೆಲ ದಿನಗಳಿಂದ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಯುವಕನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ವರ್ಷಾಳ ತಾಯಿ ನಾಗರತ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, …
Read More »ನಾನು ವಿಷಕಂಠ, ಎಲ್ಲವನ್ನೂ ನುಂಗಿ ಸಹಿಸಿಕೊಳ್ಳುತ್ತೇನೆ: ದುನಿಯಾ ವಿಜಯ್
ನಾನು ವಿಷಕಂಠ, ಎಲ್ಲವನ್ನೂ ನುಂಗಿ ಸಹಿಸಿಕೊಳ್ಳುತ್ತೇನೆ ಎಂದು ನಟ ದುನಿಯಾ ವಿಜಯ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾ ಒಂದರ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಫ್ಯಾಮಿಲಿ ವಿಚಾರದ ಬಗ್ಗೆ ನಾನು ಏನೂ ಮಾತನಾಡಲಾರೆ. ಈಗಾಗಲೇ ನಾನು ನನ್ನ ಸಾಂಸಾರಿಕ ಜೀವನದ ಬಗ್ಗೆ ಸೋಶಿಯಲ್ ಪೋಸ್ಟ್ ಹಾಕಿದ್ದೇನೆ. ಎಲ್ಲ ವಿಚಾರವನ್ನು ನಾನು ಹೇಳಿದ್ದೇನೆ. ಮಕ್ಕಳ ವಿಚಾರವನ್ನೂ ಹಾಕಿದ್ದೇನೆ ಎಂದರು. ಇದೇ ವೇಳೆ ಮಗನ ಪ್ರಕರಣದ ಬಗ್ಗೆಯೂ …
Read More »ಲ್ಯಾಂಡಿಂಗ್ ವೇಳೆ ಯಡವಟ್ಟು – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಪಾರ್ಕಿಂಗ್ ಕಂಬಕ್ಕೆ ಇಂಡಿಗೋ ವಿಮಾನ ಡಿಕ್ಕಿ
ಶ್ರೀನಗರ: ಲ್ಯಾಂಡಿಂಗ್ ಮಾಡುವ ವೇಳೆ ಇಂಡಿಗೋ ವಿಮಾನವು ಪಾರ್ಕಿಂಗ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾರುವ ಘಟನೆ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಅಪಘಾತಕ್ಕೀಡಾದ ವಿಮಾನ (ಸಂಖ್ಯೆ 6E 225 – T-NOG) ನವಿ ಮುಂಬೈನಿಂದ ಶ್ರೀನಗರಕ್ಕೆ ಬಂದಿತ್ತು. ಅಧಿಕಾರಿಗಳು ಹೇಳಿದ್ದೇನು? ನವಿ ಮುಂಬೈನಿಂದ ಬಂದಿದ್ದ ಇಂಡಿಗೋ ವಿಮಾನ ಬೆಳಗ್ಗೆ 9:02 ಗಂಟೆ ಸುಮಾರಿಗೆ ಶ್ರೀನಗರ ಏರ್‌ಪೋರ್ಟ್‌ನ ʻಬೇ.ಸಂಖ್ಯೆ 06ʼ ರಲ್ಲಿ ಲ್ಯಾಂಡಿಂಗ್ ಆಗುತ್ತಿತ್ತು, …
Read More »ನಾಲ್ಕನೇ ದಿನಕ್ಕೆ ಕಾಲಿಟ್ಟ ʻಬಳ್ಳಾರಿ ಚಲೋʼ: ಇಂದು ರಾಯಚೂರಿನಿಂದ ಕೊಪ್ಪಳ ಜಿಲ್ಲೆಗೆ ಪಾದಯಾತ್ರೆ ಪ್ರವೇಶ
ರಾಯಚೂರು: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಹಮ್ಮಿಕೊಂಡಿರುವ ಬಿಜೆಪಿಯ ʻಬಳ್ಳಾರಿ ಚಲೋʼ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಯಚೂರಿನ ಸಿಂಧನೂರು ನಗರದಿಂದ ಕೊಪ್ಪಳದ ಕಾರಟಗಿ ವರೆಗೆ 26 ಕಿ.ಮೀ ಪಾದಯಾತ್ರೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಸುನಿಲ್ ಕುಮಾರ್, ಮಹೇಶ ತೆಂಗಿನಕಾಯಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಸಿಂಧನೂರಿನ ಮಹಾತ್ಮ ಗಾಂಧಿ ವೃತ್ತದಿಂದ ಪಾದಯಾತ್ರೆ ಆರಂಭವಾಗಿದ್ದು, ಕೃಷ್ಣ ಜನ್ಮಾಷ್ಟಮಿಯ …
Read More »ವಿದ್ಯುತ್ ಹಾಯಿಸಿ ಎರಡು ಜಿಂಕೆಗಳ ಬೇಟೆ – ಮೂವರು ಆರೋಪಿಗಳು ಅರೆಸ್ಟ್
ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ವನ್ಯಜೀವಿ ವಲಯದಲ್ಲಿ ವಿದ್ಯುತ್ ತಂತಿ ಹಾಯಿಸಿ ಎರಡು ಜಿಂಕೆ ಬೇಟೆಯಾಡಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ನಾಗವಳ್ಳಿ ಗ್ರಾಮದ ನಿವಾಸಿಗಳಾದ ಬಾನು, ಶಿವು ಹಾಗೂ ಮಹೇಶ್ ಬಂಧಿತ ಆರೋಪಿಗಳು. ಈ ಮೂವರು ಪ್ರಕರಣದ ಎ-2, ಎ-5 ಹಾಗೂ ಎ-6 ಆರೋಪಿಗಳಾಗಿದ್ದಾರೆ. ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಎ-1 ಷಾಜಿ, ಎ-3 ರಾಮ ಹಾಗೂ ಎ-4 ಶ್ರೀಧರ್ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಜಿಂಕೆ …
Read More »ಬಾಗಲಕೋಟೆ ಶಾಲಾ ಕೊಠಡಿ ಮೇಲ್ಛಾವಣಿ ಕುಸಿತ: ಪ್ರಭಾರಿ ಮುಖ್ಯಶಿಕ್ಷಕ ಸೇರಿ ಇಬ್ಬರು ಇಂಜಿನಿಯರ್‌ಗಳು ಅಮಾನತು
ಬಾಗಲಕೋಟೆ: ತರಗತಿಯಲ್ಲಿ ಪಾಠ ಕೇಳುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ಕುಸಿದು ಬಿದ್ದು ವಿದ್ಯಾರ್ಥಿಗಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಹಾಗೂ ಇಬ್ಬರು ಇಂಜಿನಿಯರ್‌ಗಳನ್ನುಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.2 ರಂದು ದಿನನಿತ್ಯದಂತೆ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮೇಲ್ಛಾವಣಿಯ ಪ್ಲಾಸ್ಟರಿಂಗ್ ಹಾಗೂ ಕಾಂಕ್ರೀಟ್ ಚೂರುಗಳು ಮಕ್ಕಳ ಮೇಲೆ ಬಿದ್ದಿವೆ. ಈ …
Read More »
Laxmi News 24×7