Breaking News

Uncategorized

ರವಿ ಚನ್ನಣ್ಣನವರ್’ಗೆ ಮತ್ತೊಂದು ಸಂಕಷ್ಟ: ಸೋದರನ ವಿರುದ್ಧ ಪತ್ನಿಯಿಂದಲೇ ದೂರು

ಬೆಂಗಳೂರು: ಐಪಿಎಸ್ ಹಿರಿಯ ಅಧಿಕಾರಿ ರವಿ ಡಿ ಚನ್ನಣ್ಣನವರ್​ ಸಹೋದರ ರಾಘವೇಂದ್ರ ಡಿ ಚನ್ನಣ್ಣನವರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಘವೇಂದ್ರ ಡಿ ಚನ್ನಣ್ಣನವರ್ ಪತ್ನಿ ರೋಜಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತಿ ಮದುವೆಯಾಗಿ ಮತ್ತೊಂದು ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿದ್ದಾರೆ. 2015 ರಲ್ಲಿ ರಾಘವೇಂದ್ರ ಡಿ ಚನ್ನಣ್ಣನವರ್ ರೋಜಾ ಎಂಬುವವರನ್ನ ಮದುವೆಯಾಗಿದ್ದರು. …

Read More »

ಪೊಲೀಸ್ ಇನ್ಸ್ಪೆಕ್ಟರ್ ಸಹಿತ ನಾಲ್ವರ ಅಮಾನತು: ಅಸಮಾಧಾನ ವ್ಯಕ್ತಪಡಿಸಿದ ಯು.ಟಿ.ಖಾದರ್

ಮಂಗಳೂರು: ಯಾವುದೇ ತನಿಖೆ ಮಾಡದೆ ಬಜ್ಪೆ ಪೋಲಿಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಜ್ಪೆ ಪೋಲಿಸ್ ಠಾಣೆಯ ಓರ್ವ ಇನ್ ಸ್ಪೆಕ್ಟರ್ ಹಾಗೂ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಬಗ್ಗೆ ಮಾಜಿ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.   ಪ್ರಾಮಾಣಿಕ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಇಂಥಹ ಘಟನೆಗಳು ಕೆಲವು ಸಮಾಜದ್ರೋಹಿ ಶಕ್ತಿಗಳು ಬೇಕಾಬಿಟ್ಟಿ ಮಾತನಾಡಲು ಹಾಗೂ ಕಾನೂನು ಕೈಗೆತ್ತಿಕೊಳ್ಳಲು ಪ್ರೇರಣೆಯಾಗುತ್ತದೆ. ಈ ಸರಕಾರ ಅಧಿಕಾರಿಗಳನ್ನು ಪ್ರಾಮಾಣಿಕವಾಗಿ …

Read More »

ಗೋಕಾಕ:ದಿನಾಂಕ 29 ರಂದು ನಗರದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ

ಗೋಕಾಕ:ದಿನಾಂಕ 29 ರಂದು ನಗರದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ   ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕೋಡಿ,ತಾಲೂಕು ಆಡಳಿತ ಗೋಕಾಕ , ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಯುಷ್ …

Read More »

ಕಾಲುವೆಗೆ ಈಜಲು ಹೋದ ಬಾಲಕಿಯರು ನೀರುಪಾಲು

ರಾಯಚೂರು: ತಾಲೂಕಿನ ಮಿರ್ಜಾಪುರ ಗ್ರಾಮದ ಬಳಿ ರಾಜಲಬಂಡಾ ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ. ಇಂದೂ(14) ಮತ್ತು ಸುಜಾತ(13) ಮೃತ ದುರ್ದೈವಿಗಳು. ಕಾಲುವೆಯಲ್ಲಿ ನೀರು ಕಡಿಮೆ ಇದೇ ಎಂದು ತಿಳಿದು ನಾಲ್ಕು ಬಾಲಕಿಯರು ನೀರಿಗೆ ಇಳಿದಿದ್ದರು. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಈಜು ಬಾರದ ಹಿನ್ನೆಲೆ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಬಾಲಕಿಯರು ಈಜಿ ದಡ ಸೇರಿದ್ದಾರೆ. ಬೇಸಿಗೆ ಹಿನ್ನೆಲೆ ಬಾಲಕಿಯರು ಈಜಾಡಲು ಹೋಗಿ ಮೃತಪಟ್ಟಿದ್ದಾರೆ. ಇದೀಗ ಮೃತ ದೇಹಗಳನ್ನು …

Read More »

ತನ್ನ ಬ್ಯಾಂಕ್‌ನಿಂದಲೇ 1.50 ಕೋಟಿ ವಂಚಿಸಿದ ಮ್ಯಾನೇಜರ್

ಕಾರವಾರ: ಭಟ್ಕಳ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಜಾರ್ ಬ್ರಾಂಚ್‌ನ ವ್ಯವಸ್ಥಾಪಕ ಬ್ಯಾಂಕಿನ ಹಣವನ್ನು ದುರುಪಯೋಗ ಪಡಿಸಿಕೊಂಡು ಸುಮಾರು 1.50 ಕೋಟಿ ರೂ. ವಂಚಿಸಿರುವ ಘಟನೆ ನಡೆದಿದೆ. ಭಟ್ಕಳ ಪಟ್ಟಣದ ಬಜಾರ್ ಶಾಖೆಯಲ್ಲಿ 2019 ರಿಂದ ಶಾಖಾ ವ್ಯವಸ್ಥಾಪಕನಾಗಿ ಕರ್ತವ್ಯ ನಿರ್ವಹಿಸಿದ್ದ ಅನೂಪ್ ದಿನಕರ್ ಪೈ ಬ್ಯಾಂಕಿನ ಹಣ ದುರುಪಯೋಗ ಮಾಡಿಕೊಂಡಿದ್ದಾನೆ. ಅನೂಪ್ ಬ್ಯಾಂಕಿನ ಗ್ರಾಹಕರೊಂದಿಗೆ ಸೇರಿಕೊಂಡು, ಸಿಸ್ಟಮ್ ಸಸ್ಪೆನ್ಸ್ ಖಾತೆಗೆ ಖರ್ಚು ಹಾಕಿ ಬ್ಯಾಂಕಿನ ಗ್ರಾಹಕರ ಖಾತೆಗೆ ಹಣ …

Read More »

ಹುಬ್ಬಳ್ಳಿ : 144 ಸೆಕ್ಷನ್ ಹಿಂಪಡೆದ ಪೊಲೀಸರು

ಹುಬ್ಬಳ್ಳಿ: ಏಪ್ರಿಲ್ 16 ರಂದು ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಾಭೆ ಸಂಬಂಧ, ಜಾರಿಗೊಳಸಲಾಗಿದ್ದ ನಿಷೇಧಾಜ್ಞೆಯನ್ನು ಹಿಂಪಡಿಯಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್​ ಅವರು ತಿಳಿಸಿದ್ದಾರೆ. ಗಲಭೆ ಹಿನ್ನೆಲೆಯಲ್ಲಿ ನಗರದ ದಕ್ಷಿಣ ಉಪ ವಿಭಾಗ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿದ್ದರು. ಸದ್ಯ ಪರಿಸ್ಥಿತಿ ಶಾಂತವಾದ ಹಿನ್ನೆಲೆ ಕಲಂ 144 ಸೆಕ್ಷನ್​​ನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ. ಗಲಭೆ ನಡೆದ ರಾತ್ರಿಯಿಂದಲೇ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಬಳಿಕ ಏ.20 ರಿಂದ 23ರ ಬೆಳಗ್ಗೆ …

Read More »

ಇನ್ನು ಮುಂದೆ ಎಸ್ ಎಸ್ ಎಲ್ ಸಿ ಅಂಕಪಟ್ಟಿಯಲ್ಲಿ ಇರಬೇಕು ಶಾಲೆಯ ಹೆಸರು

ಬೆಂಗಳೂರು : ಎಸ್ ಎಸ್ ಎಲ್ ಸಿ (SSLC) ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (High Court) ನಿರ್ದೇಶಿಸಿದೆ. ವಿವೇಕನಗರದ ಶಾಂತಿನಿಕೇತನ ಪ್ರೌಢಶಾಲೆ ಸೇರಿದಂತೆ ಎಂಟು ಶಾಲೆಗಳು ಸಲ್ಲಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಸ್ ಎಸ್ ಎಲ್ ಸಿ (SSLC) ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ಆದೇಶಿಸಿದೆ.   ಅರ್ಜಿದಾರರ ಶಾಲೆಗಳಲ್ಲಿ …

Read More »

ಕೊರೋನಾ : ರಾಜ್ಯದಲ್ಲಿ ಕಠಿಣ ನಿಯಮ ಜಾರಿ ಸಾಧ್ಯತೆ

ಹುಬ್ಬಳ್ಳಿ : ಏಪ್ರಿಲ್ 27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10 ದಿನಗಳಿಂದ ಅಲ್ಪಮಟ್ಟದ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಂಡುಬಂದಿದೆ. …

Read More »

ಗೋವಾ : ಅಕ್ರಮ ಚಿನ್ನ ಸಾಗಾಟ ಐವರ ಬಂಧನ

ಪಣಜಿ: ಆದಾಯ ಗುಪ್ತಚರ ನಿರ್ದೇಶನಾಲಯದ ಗೋವಾ ವಿಭಾಗದ ಅಧಿಕಾರಿಗಳು ಗೋವಾ ದಾಬೋಲಿಂ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕರಿಂದ 2.13 ಕೋಟಿ ರೂ ಮೌಲ್ಯದ ಕಾಂಬೊಡ್ರೋನ್, ಚಿನ್ನ, ಅಮೆರಿಕನ್ ತಂಬಾಕು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಈ ಪ್ರಕರಣದಲ್ಲಿ ಐವರನ್ನು ಬಂಧಿಸಿದ್ದಾರೆ. ಏರ್ ಅರೇಬಿಯಾ ಜಿ-9492 ವಿಮಾನದಲ್ಲಿ ಗೋವಾಕ್ಕೆ ಬಂದಿಳಿದಿದ್ದರು. ಈ ವೇಳೆ ಡಿಆರ್ ಐ ತಂಡವು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದಾಗ ವಿವಿಧ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಬೆಳಕಿಗೆ …

Read More »

ಹೊಟ್ಟೆನೋವಿನ ಚಿಕಿತ್ಸೆಗೆ ಹೋದ ದಲಿತ, ಲಂಬಾಣಿ ಹಾಗೂ ಬಡ ಮಹಿಳೆಯರಿಗೆ ಅನಧಿಕೃತವಾಗಿ ಗರ್ಭಕೋಶ ತೆಗೆದು ಹಾಕಿದ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು

(ಹಾವೇರಿ ಜಿಲ್ಲೆ): ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರ ಬಳಿ ಹೊಟ್ಟೆನೋವಿನ ಚಿಕಿತ್ಸೆಗೆ ಹೋದ ದಲಿತ, ಲಂಬಾಣಿ ಹಾಗೂ ಬಡ ಮಹಿಳೆಯರಿಗೆ ಅನಧಿಕೃತವಾಗಿ ಗರ್ಭಕೋಶ ತೆಗೆದು ಹಾಕಿದ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ 250ಕ್ಕೂ ಹೆಚ್ಚು ಮಹಿಳೆಯರು ರಾಣೆಬೆನ್ನೂರಿನಿಂದ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸಲು ಸೋಮವಾರ ಪಾದಯಾತ್ರೆ ಆರಂಭಿಸಿದರು.   ‘2010ರಿಂದ 2017ರವರೆಗೆ ಈ ಪ್ರಕರಣಗಳು ನಡೆದಿದ್ದವು. ಆಗಿನ ಸರ್ಜನ್‌ ಡಾ.ಪಿ.ಶಾಂತ ಅವರು ವಿವಿಧ ಕಾರಣಗಳಿಂದ ಆಸ್ಪತ್ರೆಗೆ ಭೇಟಿ …

Read More »