ಉಡುಪಿ, ಜುಲೈ 20: ಜಿಲ್ಲೆಗೆ ಬುಧವಾರ ಕರಾಳ ಬುಧವಾರವಾಗಿ ಮಾರ್ಪಾಟಾಗಿದೆ. ಬೆಳಗ್ಗಿನ ವೇಳೆಗೆ ಚಾಕಲೇಟ್ ನಿಂದ ಉಸಿರುಗಟ್ಟಿ ಮಗು ಸಾವನ್ನಪ್ಪಿದರೆ ಸಂಜೆಯ ವೇಳೆಗೆ ಆಂಬುಲೆನ್ಸ್ ಒಂದು ಭೀಕರವಾಗಿ ಅಫಘಾತವಾಗಿ ಒಂದೇ ಕುಟುಂಬದ ನಾಲ್ವರು ಮೃತರಾಗಿದ್ದಾರೆ. ಅಂಬುಲೆನ್ಸ್ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,ಎಂತವರ ಹೃದಯವೂ ನಡುಗಿಸುವಂತಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ವೇಗವಾಗಿ ಬಂದ ಅಂಬುಲೆನ್ಸ್ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಭೀಕರ …
Read More »110 ವರ್ಷದ ಸಾವಳಗಿಯ ಬಾಳವ್ವ ಅಜ್ಜಿ ವಿಧಿವಶ:
110 ವರ್ಷ ಸಾರ್ಥಕ ಜೀವನ ನಡೆಸಿ ಇಹಲೋಕ ತ್ಯಜಿಸಿದ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದ ಅಜ್ಜಿಯ ಅಂತ್ಯಕ್ರಿಯೆಯನ್ನು ಸುತ್ತ ನಾಲ್ಕೂರಿನ ಜನರು, ಬಂಧು-ಬಾಂಧವರು ಸೇರಿಕೊಂಡು ಅದ್ಧೂರಿಯಾಗಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಹೌದು 110 ವರ್ಷದ ಬಾಳವ್ವಾ ಅಜ್ಜಿ ಬುಧವಾರ ಸಾವಳಗಿ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಸಾವಳಗಿ ಸುತ್ತಲಿನ ನಾಲ್ಕೂರಿನ ಹಾಗೂ ಸುತ್ತಮುತ್ತಲಿನ ಹಳ್ಳಿಯ ಜನರು ಕೂಡ ಭಾಗವಹಿಸಿ ಅಜ್ಜಿಯ ಅಂತಿಮ ದರ್ಶನ ಪಡೆದುಕೊಂಡರು. ಸ್ವಗ್ರಾಮದಲ್ಲಿ ಅಜ್ಜಿಯ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. …
Read More »“ಭೀಮಾತೀರ” ಕಳಂಕ ಅಳಿಸಲು ಕ್ರಮ: ಎಡಿಜಿಪಿ ಅಲೋಕ್ ಕುಮಾರ್
ವಿಜಯಪುರ : ವಿಜಯಪುರ ಜಿಲ್ಲೆಗೆ ಎರಡು ಕುಟುಂಬಗಳ ವೈಯಕ್ತಿಕ ದ್ವೇಷದಿಂದ ಭೀಮಾತೀರ ಎಂಬ ಕಳಂಕ ಅಂಟಿಕೊಂಡಿದೆ. ಈ ಭಾಗದ ಜನರಿಗೆ ಶಾಂತಿಯ ಅಗತ್ಯವಿದೆ. ಹೀಗಾಗಿ ಈ ನೆಲಕ್ಕೆ ಅಂಟಿರುವ ರಕ್ತಪಾತದ ಕಳಂಕ ತೊಡೆದು ಹಾಕಲು ಅಗತ್ಯ ಇರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಕಾನೂನು ಹಾಗೂ ಸುವ್ಯವಸ್ಥೆ ಎಡಿಜಿಪಿ ಅಲೋಕಕುಮಾರ ಹೇಳಿದರು. ಬುಧವಾರ ನಗರದಲ್ಲಿ ಪೊಲೀಸ್ ಚಿಂತನ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಮುನ್ನ ಪತ್ರಕರ್ತರೊಂದಿಗೆ …
Read More »ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ
ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ. “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …
Read More »ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ
ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ
Read More »ಸಿದ್ದರಾಮೋತ್ಸವ ಕಾರ್ಯಕ್ರಮ: ಕೊಪ್ಪಳ ಜಿಲ್ಲಾಧ್ಯಕ್ಷರ ಫೋಟೊಗೆ ಕೊಕ್
ಕೊಪ್ಪಳ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮದ ಕುರಿತ ಪ್ರಚಾರದ ಪೋಸ್ಟರ್‌ನಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಅವರ ಫೋಟೊ ಕೈ ಬಿಡಲಾಗಿದೆ. ಇದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ. ಪೋಸ್ಟರ್ ಅನ್ನು ನಗರದ ಕೆಲ ಬಡಾವಣೆಗಳ ಮನೆಮನೆಗೆ ಅಂಟಿಸಲಾಗಿದೆ. ಪೋಸ್ಟರ್‌ನಲ್ಲಿ ಸಿದ್ದರಾಮಯ್ಯ, ಶಾಸಕ ರಾಘವೇಂದ್ರ್ ಹಿಟ್ನಾಳ್, ಅವರ ಸಹೋದರ ರಾಜಶೇಖರ ಹಿಟ್ನಾಳ್, ಮಾಜಿ ಸಚಿವ …
Read More »ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ಸರ್ಜನ್ ನಿಯೋಜನೆ:D.C.ನಿತೇಶ್ ಪಾಟೀಲ
ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನೀಡಿದ ಸೂಚನೆಯ ಮೇರೆಗೆ ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಿ ಆದೇಶ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರ್ಜನ್ ಇಲ್ಲದಿರುವ ಸಂಗತಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ತಮ್ಮ ಗಮನಕ್ಕೆ ಬಂದಾಗ ಕೂಡಲೇ ವೈದ್ಯರನ್ನು ನಿಯೋಜಿಸುವಂತೆ ಸಚಿವರು ತಿಳಿಸಿದ್ದರು. ಆ ಪ್ರಕಾರ ಕೆಲವೇ ಗಂಟೆಗಳಲ್ಲಿ ಬೈಲಹೊಂಗಲ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಲಾಗಿರುತ್ತದೆ. ಜನರಲ್ …
Read More »ಅಶ್ಲೀಲ ವೀಡಿಯೋದಲ್ಲಿ ಇದ್ದಾಳೆ ಎನ್ನಲಾದ ಕಾಂಗ್ರೆಸ್ ಯುವ ನಾಯಕಿ ಬೆಳಗಾವಿ ಎ ಪಿ ಎಮ್ ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲ
ಬೆಳಗಾವಿ : ಅಶ್ಲೀಲ ವೀಡಿಯೋದಲ್ಲಿ ಇದ್ದಾಳೆ ಎನ್ನಲಾದ ಕಾಂಗ್ರೆಸ್ ಯುವ ನಾಯಕಿ ಹಾಗೂ ಚನ್ನಪಟ್ಟಣ ಮೂಲದ ಯುವತಿ ವಿರುದ್ಧ ಬೆಳಗಾವಿ ಎ ಪಿ ಎಮ್ ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ಮಾನಸಿಕ ಚಿತ್ರಹಿಂಸೆ, ಸುಳ್ಳು ಕೇಸ್ ನೀಡಿ ಮಾನನಷ್ಟ ಮಾಡಿ ಜೈಲಿಗೆ ಕಳುಹಿಸುವುದಾಗಿ ಜಾಗೂ ಜೀವ ಬೆದರಿಕೆ ಹಾಕುತ್ತಿರುವುದಾಗಿ ಬೆಳಗಾವಿಯ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಎಂಬುವವರು ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡೆ ಚನ್ನಪಟ್ಟಣದ …
Read More »ಜೋಗದಲ್ಲಿ ಮತ್ತದೇ ಜನ ಸಾಗರ; ಕೈ ಚೆಲ್ಲಿದ ಪೊಲೀಸರು!
ಸಾಗರ: ಒಂದೆಡೆ ಜೋಗದ ಮೈಸೂರು ಬಂಗ್ಲೋ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಹಾಗೂ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ಪ್ರವಾಸಿಗರ ಕಾರಣ ತಾಲೂಕಿನ ಜಗತ್ಪ್ರಸಿದ್ಧ ಜೋಗದಲ್ಲಿ ನಿಯಂತ್ರಣ ವ್ಯವಸ್ಥೆ ಸಂಪೂರ್ಣವಾಗಿ ಪೊಲೀಸರ ಕೈಯಿಂದ ಜಾರಿದ ಘಟನೆಗೆ ಭಾನುವಾರ ಸಾಕ್ಷಿಯಾಯಿತು. 10 ಸಾವಿರಕ್ಕೂ ಹೆಚ್ಚು ಜನ ಭೇಟಿ ಇತ್ತ ಹಿನ್ನೆಲೆಯಲ್ಲಿ ಕಾಮಗಾರಿ ನಡೆದಿರುವ ಗೇಟ್ ಒಳಗಿನ ಪ್ರದೇಶದಲ್ಲಿ ಪಾರ್ಕಿಂಗ್ ರದ್ದುಗೊಳಿಸಲಾಗಿತ್ತು. ಹಾಗಾಗಿ ಜನ ರಸ್ತೆಯ ಪಕ್ಕದಲ್ಲಿಯೇ ವಾಹನಗಳನ್ನು ನಿಲ್ಲಿಸಿದ್ದರಿಂದ ಟ್ರಾಫಿಕ್ ಜ್ಯಾಮ್ ಸಾಮಾನ್ಯವಾಗಿತ್ತು. …
Read More »ಬಿಎಸ್ ವೈ ಜೊತೆ ಜಿಲ್ಲಾ ಪ್ರವಾಸಕ್ಕೆ ಮುಂದಾದ ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶಗಳ ಬಗ್ಗೆ ಬಿಜೆಪಿ ಚಿಂತನಾ ಸಭೆಯಲ್ಲಿ ಚರ್ಚೆ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಜತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾ ಪ್ರವಾಸ ನಡೆಸಲು ನಿರ್ಧರಿಸಿದ್ದಾರೆ. ಜುಲೈ 21ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಮಂಡ್ಯ ಜಿಲ್ಲಾ ಪ್ರವಾಸ ನಡೆಸಲಿದ್ದಾರೆ. ಮಂಡ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೆ.ಆರ್. ಪೇಟೆಯಲ್ಲಿ 1500 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ …
Read More »
Laxmi News 24×7