ಮಂಡ್ಯ: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಎರಡು ದಿನ ಮುಂಚೆ ದುಡ್ಡು ಕೊಟ್ಟಿದ್ದರಿಂದ ನಮಗೆ ಸೋಲಾಯಿತು ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ಸೋಲಿನ ಬಗ್ಗೆ ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪರಾಮರ್ಶೆ ನಡೆಸುತ್ತಿದ್ದ ಬಗ್ಗೆ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡುವಾಗ, ಬಿಜೆಪಿ ಅಭ್ಯರ್ಥಿ ಎರಡು ದಿನ ಮುಂಚೆ ದುಡ್ಡುಕೊಟ್ಟರು. ಇದರಿಂದ ನಮಗೆ ಸೋಲಾಯಿತು ಎಂದು ವಿಶ್ಲೇಷಿಸಿದರು. ತಕ್ಷಣ ಪಕ್ಕದಲ್ಲಿದ್ದ ಸಚಿವ ಕೆ.ಗೋಪಾಲಯ್ಯ …
Read More »ಸೋಮಾರಿ ಮಂತ್ರಿಗಳನ್ನ ಕೈಬಿಡಿ -ತಮ್ಮದೇ ಸರ್ಕಾರಕ್ಕೆ ವಿಶ್ವನಾಥ್ ಆಗ್ರಹ
ಬೆಂಗಳೂರು: ಸೋಮಾರಿ ಮಂತ್ರಿಗಳನ್ನ ಕೈಬಿಡಬೇಕು ಎಂದು ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಿಶ್ವನಾಥ್.. ಕೇವಲ ವಿಧಾನಸಭಾ ಕ್ಷೇತ್ರವನ್ನೇ ರಾಜ್ಯ ಅಂದುಕೊಂಡಿರುವ, ರಾಜ್ಯ ಪರ್ಯಟನೆ ಮಾಡದ ಸಚಿವರನ್ನ ಕೈಬಿಡಬೇಕು. ರಾಜ್ಯದ ಅಭಿವೃದ್ಧಿಗೆ ಬದಲಾವಣೆ ಅಗತ್ಯ ಇದೆ. ಸರಿಯಾದ ರೀತಿಯಲ್ಲಿ ಸಂಪುಟ ಪುನಾರಚಿಸಿ, ಆಡಳಿತಕ್ಕೆ ಚುರುಕು ಮುಟ್ಟಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಹಿರಿಯ ಸಚಿವರು ಪಕ್ಷದ ಕೆಲಸ ಮಾಡ್ಲಿ, ಯುವ ಶಾಸಕರಿಗೆ ಸಂಪುಟದಲ್ಲಿ ಅವಕಾಶ ನೀಡಲಿ ಎಂದು ಸಲಹೆ ನೀಡಿದ್ದಾರೆ.
Read More »ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡಿದ ಕೇಂದ್ರ: ಸತೀಶ್ ಜಾರಕಿಹೊಳಿ ಟೀಕೆ
ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ 2022-23ನೇ ಸಾಲಿನ ಬಜೆಟ್ ಶೂನ್ಯ ಬಜೆಟ್ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರಿದ್ದರೂ, ರಾಜ್ಯವನ್ನೇ ಪ್ರತಿನಿಧಿಸಿದ್ದರೂ ಹಣಕಾಸು ಸಚಿವರು, ರಾಜ್ಯದ ಜನರ ನಿರೀಕ್ಷೆ ಹುಸಿಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ದೇಶದ ಜನರು ಏಳು ವರ್ಷಗಳಿಂದ …
Read More »ಶೀಘ್ರದಲ್ಲಿಯೇ ಆರಂಭವಾಗಲಿದೆ ಕಛೇರಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿಂದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …
Read More »ದೆಹಲಿಗೆ ಹಾರಲಿದ್ದಾರಂತೆ ರಮೇಶ್ ಜಾರಕಿಹೊಳಿ
ಬೆಳಗಾವಿ : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವಾಕಾಂಕ್ಷಿಗಳ ಕಸರತ್ತು ಮುಂದುವರೆದಿದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಲ ಶಾಸಕರು ಈಗಾಗಲೇ ಗುಪ್ತ ಸಭೆ, ಮಾತುಕತೆಯಲ್ಲಿ ತೊಡಗಿದ್ದಾರೆ. ಈ ನಡುವೆ ಮತ್ತೆ ಸಚಿವರಾಗಬೇಕೆಂದು ತೆರೆಮರೆಯಲ್ಲಿ ಕಸರತ್ತು ಮುಂದುವರೆಸಿರುವ ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ದೆಹಲಿಗೆ ಹಾರಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಗೋವಾಕ್ಕೆ ತೆರಳಿರುವ ಮಾಜಿ ಸಚಿವ ಜಾರಕಿಹೊಳಿ, ಅಲ್ಲಿಂದ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಗೆ ಮುಂದಾಗಲಿದ್ದಾರೆ. ಆ ಮೂಲಕ ಮತ್ತೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು …
Read More »ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …
Read More »‘ಟೋಯಿಂಗ್ ಟಾರ್ಚರ್’ ಗೆ ವಾಹನ ಸವಾರರು ಹೈರಾಣು : ‘ಸಿಎಂ ಬೊಮ್ಮಾಯಿ’ ತಾತ್ಕಾಲಿಕ ‘ಮದ್ದು’.!
ಬೆಂಗಳೂರು : ಬೇಕಾಬಿಟ್ಟಿ ಟೋಯಿಂಗ್ʼಗೆ ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಟೋಯಿಂಗ್ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದರು. ಸಿಟಿಯಲ್ಲಿ ಪೊಲೀಸರ ಟೋಯಿಂಗ್ ಟಾರ್ಚರ್‌ಗೆ ಜನ ಹೈರಾಣಾಗಿ ಹೋಗಿದ್ದಾರೆ. ಇದರ ಸಂಬಂಧ ಕೆಲವು ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ಹಿನ್ನೆಲೆ ಟೋಯಿಂಗ್ ಗೊಂದಲದ ಬಗ್ಗೆ ರೇಸ್ ಕೋರ್ಸ್ ರಸ್ತೆಯಲ್ಲಿ ಶಕ್ತಿ ಭವನದಲ್ಲಿ ಬೊಮ್ಮಾಯಿ ಸಭೆ ನಡೆಸಿದರು. ಬೊಮ್ಮಾಯಿ ನೇತೃತ್ವದಲ್ಲಿ …
Read More »ಭಾರತದಲ್ಲಿಂದು 2,51,209 ಕೊರೊನಾ ಕೇಸ್ ಪತ್ತೆ, 627 ಮಂದಿ ಸಾವು
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 627 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 2,51,209 …
Read More »ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? :ವಿಶ್ವನಾಥ್
ಮೈಸೂರು: ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? ನಿಮ್ಮನ್ನು ಯಾವ ಪ್ರಮುಖ ನಾಯಕರು ಅಂತ ಕರೆಯುತ್ತಿದ್ದಾರೆ, ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾರ ಅಂತ ಬಿಜೆಪಿ ಹೆಚ್.ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದ್ದಾರೆ, ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸಿ ಹೊರಡುತ್ತಾರೆ ಅಂತ ಹೇಳಿದರು. ಅವರ ಬೆಂಬಗಲಿಗರು ಮಾತ್ರ ಅವರನ್ನು ನಾಯಕರು ಕರೆಯುತ್ತಿದ್ದಾರೆ ಅಂತ ಹೇಳಿದರು. ಇನ್ನೂ ಗ್ಯಾಸ್ ಲೈನ್ ಗೆ …
Read More »ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್
ಬೆಂಗಳೂರು : ವಿದ್ಯಾರ್ಥಿ ವೇತನ, ಹಾಸ್ಟೆಲ್, ಮೌಲ್ಯಮಾಪನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಬಿವಿಪಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ, ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆಯೂ ಜಗಳ ನಡೆದಿದ್ದು, ಇಲ್ಲಿಯ ವಿಶ್ವವಿದ್ಯಾಲಯದಲ್ಲಿ ಬಿಬಿಎಂಪಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿವಿ ಸಂಶೋಧನಾ …
Read More »