Breaking News

Uncategorized

ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ತಾಯಿ

ಬೆಳಗಾವಿ: ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ‌ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.   ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್​ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ …

Read More »

ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ.

ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಪರಿಣಾಮದಿಂದಾಗಿ ಕುಸಿತಗೊಂಡಿದ್ದ ಗಣೇಶ ಮೂರ್ತಿಗಳ ಮಾರಾಟ ಈ ವರ್ಷ ಚೇತರಿಸಿಕೊಂಡಿದೆ. ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಸಲ ವಹಿವಾಟು ದುಪ್ಪಟ್ಟುಗೊಂಡಿದೆ. ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದವರ ಕುಟುಂಬಗಳಲ್ಲೂ ಸಂತಸ ಮನೆ ಮಾಡಿದೆ. ಕಳೆದ 2 ವರ್ಷಗಳಲ್ಲಿ ಕೇವಲ 15ರಿಂದ 20 ಲಕ್ಷ ರೂ. ಆದಾಯ ಬರುತ್ತಿತ್ತು. ಆದರೆ, ಈ …

Read More »

22 ಶಾಲೆಗಳಿಗೆ ಮುಂದುವರಿದ ರಜೆ ಚಿರತೆ ಸೆರೆಗೆ ಆಪರೇಷನ್ ಗಜಪಡೆ ಮುಕ್ತಾಯ ಶೋಧಕಾರ್ಯ ಅಂತ್ಯ

ಬೆಳಗಾವಿಯಲ್ಲಿ ಚಿರತೆ ಸೆರೆಗೆ ಆಪರೇಷನ್ ಗಜಪಡೆ ಮುಕ್ತಾಯವಾಗಿದ್ದು. 250 ಎಕರೆ ಪ್ರದೇಶದ ಗಾಲ್ಫ ಮೈದಾನದಲ್ಲಿ ಎರಡು ಆನೆಗಳನ್ನು ಬಳಸಿ ನಡೆಸಿದ ಕೋಂಬಿಂಗ್ ಅಂತ್ಯವಾಗಿದೆ. ಮಧ್ಯಾಹ್ನ 12.30ರಿಂದ ನಡೆದಿದ್ದ ಶೋಧ ಕಾರ್ಯಾಚರಣೆ ಮುಕ್ತಾಯವಾಗಿದ್ದು. 250 ಎಕರೆ ಪ್ರದೇಶದಲ್ಲಿ 7 ಕಿಮೀ ವ್ಯಾಪ್ತಿಯಲ್ಲಿ ಕೋಂಬಿಂಗ್ ನಡೆಸಲಾಯಿತು. ಅಲ್ಲಲ್ಲಿ ಕೆಲವೆಡೆ ಚಿರತೆ ಓಡಾಡಿದ ಕುರುಹುಗಳು ಪತ್ತೆಯಾಗಿದ್ದು. ಹಂದಿ ಬೇಟೆಯಾಡಿ ಅರ್ಧ ಮಾಂಸವನ್ನು ಚಿರತೆ ತಿಂದಿದೆ. ಕಳೆದ 5 ಗಂಟೆಗಳಿಂದ ನಿರಂತರವಾಗಿ ನಡೆದ ಶೋಧಕಾರ್ಯ ಅಂತ್ಯವಾಯ್ತು …

Read More »

ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.   ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …

Read More »

ಚಿರತೆ ಶೋಧ ಕಾರ್ಯಕ್ಕೆ ಅತ್ಯಾಧುನಿಕ ೩ ಇನ್‌ಫ್ರಾರೆಡ್ ಡ್ರೋನ್‌ಗಳ ಬಳಕೆ, ೧೨೦ ಅರಣ್ಯ ಸಿಬ್ಬಂದಿ, ೮೦ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ

ಬೆಳಗಾವಿಯಲ್ಲಿ ತಲೆ ಮರೆಸಿಕೊಂಡಿರುವ ಚಿರತೆ ಶೋಧ ಕುರಿತಂತೆ ಕೈಗೊಂಡ ಕ್ರಮಗಳನ್ನು ಕುರಿತಂತೆ ಇಂದು ಶಾಸಕ ಅನೀಲ್ ಬೆನಕೆ ನೇತೃತ್ವದಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ಪರಿಣಿತರೊಂದಿಗೆ ಚರ್ಚೆಯನ್ನು ನಡೆಸಿದರು. ಚಿರತೆ ಸೆರೆಗೆ ಕೂಗೊಳ್ಳಬೇಕಾದ ಕ್ರಮಗಳನ್ನು ಕುರಿತಂತೆ ಚರ್ಚಿಸಿದರು. ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಮತ್ತೆ ಚಿರತೆೆ ಪ್ರತ್ಯಕ್ಷವಾಗುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಚಿರತೆ ಹಿಡಿಯಲು ಹರಸಾಹಸವನ್ನು ಮಾಡುತ್ತಿದ್ದಾರೆ. ಇನ್ನು ಸ್ಥಳಕ್ಕೆ ಆಗಮಿಸಿದ ಶಾಸಕ ಅನಿಲ್ ಬೆನಕೆ …

Read More »

ಸಿದ್ದರಾಮಯ್ಯ ಮೇಲೆ ವಿನಾಕಾರಣ ಆರೋಪ; ಬಿಜೆಪಿ ಬಗ್ಗೆ ಅಸಹ್ಯವಾಗುತ್ತಿದೆ: ಮುತಾಲಿಕ್

ಹುಬ್ಬಳ್ಳಿ: ‘ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪಿಲ್ಲ, ಅವರು ತಪ್ಪು ಮಾಡಿಲ್ಲ. ಅವರ ಮೇಲೆ ವಿನಾಕಾರಣ ಆರೋಪ ಮಾಡುತ್ತಿರುವ ಬಿಜೆಪಿ ಬಗ್ಗೆ ಅಸಹ್ಯವಾಗುತ್ತಿದೆ’ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದರು.   ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಂಸ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದೆ ಎನ್ನುವುದು ಚರ್ಚೆ ವಿಷಯವೇ ಅಲ್ಲ. ನಮ್ಮಲ್ಲಿ ಮಾಂಸ ಸೇವಿಸುವ ಮತ್ತು ಸೇವನೆ ಮಾಡದಿರುವ ಭಕ್ತರು ಸಾಕಷ್ಟು ಇದ್ದಾರೆ’ ಎಂದರು. ಮಾಂಸ …

Read More »

ಕಂದಾಯ ಸಹಾಯವಾಣಿ: ವಾರಕ್ಕೆ 3 ಸಾವಿರ ಕರೆ

ಬೆಂಗಳೂರು : ಕಂದಾಯ ಇಲಾಖೆ ಆರಂಭಿಸಿರುವ ‘ಹಲೋ ಕಂದಾಯ ಸಚಿವರೇ’ ಸಹಾಯವಾಣಿಗೆ ವಾರಕ್ಕೆ ಸರಾಸರಿ 3,000ಕ್ಕೂ ಹೆಚ್ಚು ಕರೆಗಳ ಮೂಲಕ ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಈವರೆಗೆ ಸುಮಾರು 34,020 (ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳು) ಅರ್ಜಿಗಳು ಸಲ್ಲಿಕೆಯಾಗಿವೆ.   ಅರ್ಜಿ ಸಲ್ಲಿಕೆಯಾದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿಯ ಒದಗಿಸುವ ಮಂಜೂರಾತಿ ಆದೇಶಗಳನ್ನು ನೀಡುವ ಯೋಜನೆ ಇದಾಗಿದೆ. ಮಧ್ಯವರ್ತಿಗಳ ಹಾವಳಿ, ಕಂದಾಯ ಅಧಿಕಾರಿಗಳು ಮತ್ತು ಗ್ರಾಮಲೆಕ್ಕಿಗರಿಂದ ಆಗುತ್ತಿದ್ದ ವಿಳಂಬ ಮತ್ತು ಭ್ರಷ್ಟಾಚಾರಕ್ಕೂ ಕಡಿ ವಾಣ …

Read More »

ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ.? ಕೆಲವರಿಗೆ ಕೊಕ್, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಕಂತಿನ ಸಂಪುಟ ಸರ್ಜರಿ ಶೀಘ್ರದಲ್ಲೇ ನಡೆಯಲಿದೆ. ಖಾಲಿ ಇರುವ 5 ಸ್ಥಾನಗಳನ್ನು ಭರ್ತಿ ಮಾಡಲಿದ್ದು, ಇದೇ ವೇಳೆ ಕೆಲವರಿಗೆ ಕೊಕ್ ನೀಡಿ ಮತ್ತೆ ಕೆಲವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಚಿಂತನೆ ನಡೆದಿದೆ. ಪ್ರಮುಖವಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೂ ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜನಪ್ರಿಯ ಮಂತ್ರಿ ಮಂಡಲ ರಚಿಸಲು ಪಕ್ಷದ …

Read More »

ಬಿಪಿಎಲ್ ಕಾರ್ಡ್ ರದ್ದಾದರೆ ಸರ್ಕಾರಿ ಸೌಲಭ್ಯಗಳೂ ಕಟ್; ಸುಳ್ಳು ಮಾಹಿತಿ ನೀಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು :ಅನರ್ಹರ ಬಳಿಯಿದ್ದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಗಳನ್ನು ಸರ್ಕಾರ ರದ್ದುಪಡಿಸಿದೆ. ಈ ಮೂಲಕ ಕಾರ್ಡ್​ನಿಂದ ಸಿಗುತ್ತಿದ್ದ ಸರ್ಕಾರಿ ಮನೆ ಸೌಲಭ್ಯ, ಉಚಿತ ಆರೋಗ್ಯ ಸೇವೆ, ಆರ್​ಟಿಇ ಸೀಟು ಇನ್ನಿತರ ಸರ್ಕಾರಿ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಸುಳ್ಳು ದಾಖಲೆ ಸಲ್ಲಿಸಿ ಸರ್ಕಾರಿ ಸೌಲಭ್ಯ ಪಡೆಯುತ್ತಿದ್ದವರಿಗೆ ಕ್ರಿಮಿನಲ್ ಕೇಸ್ ಭೀತಿಯೂ ಶುರುವಾಗಿದೆ. ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ 3,30,024 ರೇಷನ್ ಕಾರ್ಡ್ ಗಳು ರದ್ದಾಗಿವೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ: ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

  ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು

Read More »