Breaking News

Uncategorized

ಅಂಗಡಿಗಳಲ್ಲಿ ಕಳ್ಳತನ ನಡೆಸುತ್ತಿದ್ದ ಅಂತಾರಾಜ್ಯ ಇರಾನಿ ಗ್ಯಾಂಗ್ ನ ಇಬ್ಬರ ಬಂಧನ

ಬೆಳಗಾವಿ: ನಾನಾ ರಾಜ್ಯಗಳಲ್ಲಿ ಕಿರಾಣಿ ಹಾಗೂ ಆಭರಣ ಅಂಗಡಿಗಳಲ್ಲಿ ಕಳುವು ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ನ ಇಬ್ಬರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,58,000 ರೂ. ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳು ಹುಕ್ಕೇರಿ ಪಟ್ಟಣದ ವಿದ್ಯಾ ಜ್ಯುವೆಲರಿ ಶಾಪ್‌ನಲ್ಲಿ ಮಾಲೀಕರ ಗಮನ ಬೇರೆಡೆ ಸೆಳೆದು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಅಂಗಡಿ ಮಾಲೀಕರು ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …

Read More »

ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ; ಅಂಗಾಂಗ ದಾನ ಮಾಡಿ ಮೂವರ ಬಾಳಿಗೆ ಬೆಳಕಾದ ಕಮಲವ್ವ

ಬೆಳಗಾವಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹತ್ತಿರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಎತ್ತಿನಗುಡ್ಡ ಗ್ರಾಮದ 48 ವರ್ಷದ ಕಮಲವ್ವ ಕೆಲಗೇರಿ ಅವರು ತಮ್ಮ ಅಂಗಾಂಗಳನ್ನು ದಾನ ಮಾಡಿ ಮೂವರ ಜೀವ ಉಳಿಸಿ ಸಮಾಜಕ್ಕೆ ಪ್ರೇರಣಾದಾಯಿಯಾಗಿದ್ದಾರೆ.   ಕಮಲವ್ವ ಅವರ ಒಂದು ಕಿಡ್ನಿಯನ್ನು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. …

Read More »

ಸಮೀಕ್ಷಾ ವರದಿಗೆ ಬೆಚ್ಚಿದ ಬಿಜೆಪಿ: ಎರಡು ದಿನಗಳ ಕಾಲ ರೆಸಾರ್ಟ್ ನಲ್ಲಿ ಎಲೆಕ್ಷನ್ ಮೀಟಿಂಗ್

ಬೆಂಗಳೂರು : ಬಿಜೆಪಿ ಶತಾಯ ಗತಾಯ 2023ಕ್ಕೆ ರಾಜ್ಯದ ಗದ್ದುಗೆ ಮೇಲೆ ಮತ್ತೊಮ್ಮೆ ಕೇಸರಿ ಧ್ವಜ ಹಾರಿಸುವ ಕನಸಿನಲ್ಲಿದೆ. ಇದಕ್ಕಾಗಿ ಶತಾಯ ಗತಾಯ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆಗೆ ಏರುವ ಪ್ರಯತ್ನವನ್ನು ನಡೆಸಿದೆ. ಈ ಮಧ್ಯೆ ಚುನಾವಣೆಗೆ ಇನ್ನೂ 11 ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಎಲೆಕ್ಷನ್ ಮಾಸ್ಟರ್ ಪ್ಲ್ಯಾನ್ (Bjp Resort Meeting ) ಸಿದ್ಧಪಡಿಸಲು ಮುಂದಾಗಿದ್ದು, ಇದಕ್ಕಾಗಿ ರಾಜ್ಯ ಚುನಾವಣಾ ಉಸ್ತುವಾರಿ ಅರುಣ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲು …

Read More »

ಒಂದೇ ದಿನ 2 ಬಾರಿ ತಾಯಿ ಮೇಲೆ ಅತ್ಯಾಚಾರ ಎಸಗಿದ ಪಾಪಿ ಮಗ!

ಮದ್ಯವ್ಯಸನಿ ಯುವಕನೊಬ್ಬ ಜನ್ಮಕೊಟ್ಟ ತಾಯಿ ಮೇಲೆ ಒಂದೇ ದಿನ ಎರಡು ಬಾರಿ ಅತ್ಯಾಚಾರ ಎಸಗಿದ ಹೇಯ ಘಟನೆ ಪಟ್ಟಣದಲ್ಲಿ ಸಂಭವಿಸಿದೆ. ಶನಿವಾರ (ಜು.9) ಎಂದಿನಂತೆ ರಾತ್ರಿಯೂ ಮದ್ಯ ಸೇವಿಸಿ ಮನೆಗೆ ರೋಕಿ ಜಾನ್​ ಪುಡ್ತೋಳ ಬಂದಿದ್ದ. ಅಂದು ತಡರಾತ್ರಿ ನಿದ್ರೆ ಮಂಪರಿನಲ್ಲಿದ್ದ ತಾಯಿಯನ್ನು ಎಬ್ಬಿಸಿದ ಮಗ, ಏನೋ ಮಾತಾಡಬೇಕು ಎಂದು ಸೋಫಾ ಬಳಿ ಕರೆದು ಬಲಾತ್ಕಾರ ಮಾಡಿದ್ದಾನೆ. ಈ ಘಟನೆಯಿಂದ ಆಘಾತಕ್ಕೀಡಾದ ತಾಯಿ, ಕಣ್ಣೀರು ಹಾಕುತ್ತಲೇ ಕತ್ತಲಲ್ಲಿ ಮನೆಯ ಹೊರಗೆ …

Read More »

ಬೈಲಹೊಂಗಲ ಪಟ್ಟಣದಲ್ಲಿ‌ ದುಷ್ಕರ್ಮಿಗಳಿಂದ ಚಿತ್ರನಟ ಶಿವರಂಜನ್ ಮೇಲೆ ಫೈರಿಂಗ್

ಬೆಳಗಾವಿ : ಬೈಲಹೊಂಗಲ ಪಟ್ಟಣದಲ್ಲಿ‌ ಮಂಗಳವಾರ ರಾತ್ರಿ ಬೈಕ್‌ ಮೇಲೆ ಬಂದ ದುಷ್ಕರ್ಮಿಗಳು ಚಿತ್ರ ನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ್ದು, ಅದೃಷ್ಟವಶಾತ್ ಯಾವುದೇ ಗುಂಡು ತಗುಲಿಲ್ಲ. ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಶಿವರಂಜನ್ ಅವರಿಗೆ ಯಾವುದೇ ಗುಂಡು ತಗುಲಿಲ್ಲ. ಶಿವರಂಜನ್ ಅವರ ಸಹೋದರ ಸಂಬಂಧಿ ಗುಂಡು ಹಾರಿಸಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಇನ್ನುವರೆಗೆ ಯಾವುದೇ ನಿಖರ ಮಾಹಿತಿ ತಿಳಿದು ಬಂದಿಲ್ಲ. ಗುಂಡು ಹಾರಿಸಿದವರ ಬಗ್ಗೆ …

Read More »

ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  *ಗೋಕಾಕ*: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಸಂಪಾದಿಸಲು ಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸಂಪಾದಿಸಲು ಸಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಜೀವನಾಂಶ ಕೋರಿ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅಲೋಕ್ ಅರಾಧೆ, ಜೆ.ಎಂ. ಖಾಜಿ ಅವರಿದ್ದ ಪೀಠ ಈ ಕುರಿತಾಗಿ ಆದೇಶ ನೀಡಿದೆ.   ಪತ್ನಿಯಿಂದ ಶಾಶ್ವತ ಜೀವನಾಂಶ ನೀಡಬೇಕೆಂದು ಪತಿ ಕೋರಿದ್ದರು. 1994 ರಿಂದಲೂ ಪತಿ, ಪತ್ನಿ ಬೇರೆಯಾಗಿ ವಾಸಿಸುತ್ತಿದ್ದರು. ಸೆಕ್ಯೂರಿಟಿ ಗಾರ್ಡ್ ಆಗಿದ್ದ ಪತಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಜೀವನಾಂಶ ಕೋರಿದ್ದರು. ಕೆಲಸ ಬಿಟ್ಟಿರುವುದಾಗಿ …

Read More »

ಸೋನಿಯಾ ಗಾಂಧಿಗೆ ಸಂಕಷ್ಟದ ಸುರಿಮಳೆ; ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ಸಮನ್ಸ್

ದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ED) ಸೋಮವಾರ, ಜುಲೈ 12ರಂದು ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಜುಲೈ 21 ರಂದು ಏಜೆನ್ಸಿಯ (Enforcement Directorate) ಮುಂದೆ ಹಾಜರಾಗುವಂತೆ ಕಾಂಗ್ರೆಸ್ ಪಕ್ಷದ ಉನ್ನತ ನಾಯಕಿಯಾದ ಸೋನಿಯಾ ಗಾಂಧಿಗೆ (Sonia Gandhi) ಸೂಚಿಸಲಾಗಿದೆ. ಪ್ರಕರಣದಲ್ಲಿ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಸೋನಿಯಾ ಗಾಂಧಿ ಸಲ್ಲಿಸಿದ್ದ ಮನವಿಯನ್ನು ಫೆಡರಲ್ ಏಜೆನ್ಸಿ ಈ …

Read More »

ವರುಣನ ಆರ್ಭಟ: ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರೆದಿದ್ದು. ಕ್ಷಣಕ್ಷಣಕ್ಕೂ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಹೀಗಾಗಿ ಮತ್ತೊಮ್ಮೆ ಪ್ರವಾಹ ಎದುರಾಗುತ್ತದೆ ಎನ್ನುವ ಭೀತಿ ನದಿ ತೀರದ ಜನರಲ್ಲಿ ಆವರಿಸಿದೆ.   ಮಹಾರಾಷ್ಟ್ರದ ಘಟ್ಟ ಪ್ರದೇಶದ ಹೆಚ್ಚು ಮಳೆ ಬಿಳುವ ಕೋಯ್ನಾ, ಮಹಾಬಲೇಶ್ವರ, ನವಜಾ. ಪಾಟಗಾಂವ,ಕಾಳಮ್ಮವಾಡಿ ಮತ್ತು ಕೊಲ್ಲಾಪೂರ ಸೇರಿದಂತೆ ಚಿಕ್ಕೋಡಿ ಸುತ್ತಮುತ್ತ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು. ಕೃಷ್ಣಾ ನದಿಗೆ …

Read More »

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಸಮಸ್ಯೆಗಳನ್ನು ಕೇಂದ್ರ ಸರಕಾರಕ್ಕೆ ಮುಟ್ಟಿಸುವ ನಿಟ್ಟಿನಲ್ಲಿ ಸಂಸದರು ಈ ಕುರಿತಂತೆ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಿ ಸಂಸದರಿಗೆ ಮನವಿಯನ್ನು ಸಲ್ಲಿಸಿದರು. ಹೌದು ಇಂದು ಬೆಳಗಾವಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಬೇಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು …

Read More »