Breaking News

Uncategorized

ಟಿಂಬರ್​ ಡಿಪೋದಲ್ಲಿ ಭಾರಿ ಅಗ್ನಿ ಅವಘಡ.. 11 ಜನರ ಸಜೀವ ದಹನ: ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಟಿಂಬರ್​ ಡಿಪೋದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 11 ಜನರ ಸಜೀವ ದಹನಗೊಂಡಿರುವ ಘಟನೆ ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್​ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ನೀಡುವುದಾಗಿ ತೆಲಂಗಾಣ ಸಿಎಂ ಚಂದ್ರಶೇಖರ್​ ರಾವ್​ ಘೋಷಣೆ ಮಾಡಿದ್ದಾರೆ. ಹೈದರಾಬಾದ್​: ಇಲ್ಲಿನ ಸಿಕಂದರಾಬಾದ್‌ನ ಬೋಯಗುಡದಲ್ಲಿರುವ ಟಿಂಬರ್ ಡಿಪೋದಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, 11 ಜನರು ಸಜೀವ ದಹನವಾಗಿರುವ ದರ್ಘಟನೆ ಬೆಳಕಿಗೆ ಬಂದಿದೆ. ಟಿಂಬರ್​ ಡಿಪೋದಲ್ಲಿ ಭಾರೀ ಬೆಂಕಿ …

Read More »

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ

    ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ …

Read More »

ಹುಬ್ಬಳ್ಳಿ-ಧಾರವಾಡ: ದ್ವೇಷದ ಅಮಲಿಗೆ 188 ಮಂದಿ ಹತ್ಯೆ

ಹುಬ್ಬಳ್ಳಿ: ಬಡ್ಡಿಗೆ ಪಡೆದ ಹಣ ಮರಳಿ ನೀಡದ, ಕೌಟುಂಬಿಕ ಕಲಹ, ಪ್ರೀತಿ ನಿರಾಕರಣೆ, ಮದ್ಯದ ನಶೆ, ಅನೈತಿಕ ಸಂಬಂಧ… ಹೀಗೆ ಹುಬ್ಬಳ್ಳಿ ಧಾರವಾಡ ಅವಳಿ ನಗರ‌ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಐದು ವರ್ಷಗಳಲ್ಲಿ ಬರೋಬ್ಬರಿ 188 ಮಂದಿ‌ ಹತ್ಯೆಯಾಗಿದ್ದಾರೆ. ಹು-ಧಾ ಪೊಲೀಸ್ ಕಮಿಷನರೇಟ್‌ನಲ್ಲಿ 88 ಮಂದಿ, ಧಾರವಾಡ ಜಿಲ್ಲೆಯ ವಿವಿಧೆಡೆ 100 ಮಂದಿ ಹತರಾಗಿದ್ದಾರೆ. ಬಹುತೇಕ ಕೊಲೆಗಳಿಗೆ ದ್ವೇಷ ಹಾಗೂ ಹಣಕಾಸಿನ ವ್ಯವಹಾರ ಕಾರಣವಾಗಿದ್ದರೆ, ಕೆಲವು ಕೊಲೆಗಳು ವರದಕ್ಷಿಣೆ, ಕೌಟುಂಬಿಕ …

Read More »

ಮಸಾಜ್ʼ​ ನೆಪದಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ

ರಾಜಸ್ಥಾನದ ಜೈಪುರದಲ್ಲಿ ನೆದರ್​ಲ್ಯಾಂಡ್​​ನ ಮಹಿಳೆಯನ್ನು ಅತ್ಯಾಚಾರ ಮಾಡಿದ ದಾರುಣ ಘಟನೆಯು ವರದಿಯಾಗಿದೆ. ಜೈಪುರ ನಗರದ ಹೋಟೆಲ್​ ಒಂದರಲ್ಲಿ ಈ ಘಟನೆ ಸಂಭವಿಸಿದೆ. ಆರ್ಯುವೇದಿಕ್​ ಮಸಾಜ್​ ಕೊಡಿಸುತ್ತೇನೆಂದು ನಂಬಿಸಿ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯು ನೆದರ್​ಲ್ಯಾಂಡ್​ನ ನಿವಾಸಿಯಾಗಿದ್ದು . ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಸಿಂಧಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇವಲ ನಾಲ್ಕು ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದರು. ಆರೋಪಿ ಕೇರಳ …

Read More »

IPL 2022 :ಹೇಗಿದೆ ನೋಡಿ 10 ತಂಡಗಳ ಹೊಸ ಜೆರ್ಸಿ

ಐಪಿಎಲ್ ಸೀಸನ್ 15 ಗಾಗಿ ಎಲ್ಲಾ ತಂಡಗಳ ಜೆರ್ಸಿ ಅನಾವರಣಗೊಂಡಿದೆ. ಈ ಬಾರಿ ಕೆಲ ತಂಡಗಳು ಕಳೆದ ಸೀಸನ್​ನಲ್ಲಿ ಕಣಕ್ಕಿಳಿದ ಮಾದರಿಯ ಜೆರ್ಸಿಯಲ್ಲೇ ಕಾಣಿಸಿಕೊಳ್ಳಲಿದ್ದು, ಇನ್ನು ಕೆಲ ತಂಡಗಳ ಜೆರ್ಸಿಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾಗಿವೆ. ಹಾಗೆಯೇ ಹೊಸ ಎರಡು ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಹೊಸ ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಹಾಗಿದ್ರೆ 10 ತಂಡಗಳ ಜೆರ್ಸಿ ಹೇಗಿದೆ ನೋಡೋಣ…

Read More »

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ

  ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 …

Read More »

ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಹೋಳಿ ಹಬ್ಬದ ತಯಾರಿ.. ರತಿ ಕಾಮಣ್ಣನ ಪ್ರತಿಷ್ಠಾಪನೆ

ಹಾವೇರಿ: ಏಲಕ್ಕಿ ಕಂಪಿನ ನಗರ ಹಾವೇರಿ ರಂಗಪಂಚಮಿಗೆ ಸನ್ನದ್ಧಗೊಳ್ಳುತ್ತಿದೆ. ಎಲ್ಲೆಲ್ಲೂ ಬಣ್ಣಗಳಿಂದ ನಳನಳಿಸುತ್ತಿದೆ. ಮಾರ್ಚ್​ 19ರ ರಂಗಪಂಚಮಿಯ ಹೋಳಿ ಆಚರಣೆಗೆ ನಗರದ 21ಕಡೆ ಕಾಮರತಿಯ ಕಟ್ಟೆಗೆ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಅಕ್ಕಿಪೇಟೆ ಮಾರುಕಟ್ಟೆ, ಗದ್ದಿಗೇರ್ ಓಣಿ, ಯಾಲಕ್ಕಿ ಓಣಿ, ಪುರದ ಓಣಿ ಮತ್ತು ಮೇಲಿನ ಪೇಟೆ ಸೇರಿದಂತೆ ವಿವಿಧೆಡೆ ಈಗಾಗಲೇ ರತಿಮನ್ಮಥರ ಕಟ್ಟಿಗೆ ಮೂರ್ತಿಗಳನ್ನು ಸ್ಥಾಪಿಸಿ ಪೆಂಡಾಲಗಳನ್ನು ಹಾಕಲಾಗಿದೆ. ದಿನಕ್ಕೆ ಎರಡು ಬಾರಿ ಕಾಮರತಿಗೆ ಪೂಜೆ ಸಲ್ಲಿಸಲಾಗುತ್ತಿದ್ದು. ರತಿಮನ್ಮಥರ ಮೂರ್ತಿಗಳು ಒಂದಕ್ಕಿಂತ ಒಂದು ವಿಭಿನ್ನವಾಗಿ ಪ್ರತಿಷ್ಠಾಪಿಸಲ್ಪಟ್ಟಿವೆ. …

Read More »

ಜೇಮ್ಸ್​’ ಬಿಡುಗಡೆಗೆ ಕೌಂಟ್​ಡೌನ್​ ವಿದೇಶದಲ್ಲೂ ಕಾರ್​ ರ‍್ಯಾಲಿ ಮಾಡಿ, ಪಟಾಕಿ ಹೊಡೆಯಲಿರುವ ಫ್ಯಾನ್ಸ್​

ಮಾ.17ರಂದು ಭಾರತ ಮಾತ್ರವಲ್ಲದೇ ಇತರೆ ಅನೇಕ ದೇಶಗಳಲ್ಲೂ ‘ಜೇಮ್ಸ್​’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ವಿತರಕ ಕಿರಣ್​ ನೀಡಿದ ಮಾಹಿತಿ ಇಲ್ಲಿದೆ..‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಟನೆಯ ‘ಜೇಮ್ಸ್​’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈ ಚಿತ್ರವನ್ನು ಅಭಿಮಾನಿಗಳು (Puneeth Rajkumar Fans) ಕಣ್ತುಂಬಿಕೊಳ್ಳಲು ಎರಡೇ ದಿನ ಬಾಕಿ ಇದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ‘ಜೇಮ್ಸ್​’ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಕೆನಡಾದಲ್ಲಿ ನೆಲೆಸಿರುವ ಕನ್ನಡಿಗ ಕಿರಣ್​ ಅವರು ವಿದೇಶದಲ್ಲಿ ವಿತರಣೆಯ …

Read More »

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ: ನಾರಾಯಣಗೌಡ

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ನಿಖಿಲ್ ಸೋಲುವುದಕ್ಕೆ ಅವರ ದೊಡ್ಡಪ್ಪ ರೇವಣ್ಣನೇ ಕಾರಣ ಎಂದು ಸಚಿವ ಕೆ.ಸಿ. ನಾರಾಯಣ ಹೇಳಿದ್ದಾರೆ. ನಗರದ ಕೆ.ಆರ್.ಪೇಟೆಯ ಸಿಂಧಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ. ನಿಖಿಲ್ ಕುಮಾರಸ್ವಾಮಿ ಬಗ್ಗೆ ನನಗೆ ಗೌರವ ಇದೆ. ಅವರು ಸುಮ್ಮನೆ ಮಾತನಾಡುವುದು ತಪ್ಪು. ಕುಮಾರಸ್ವಾಮಿ ಸುಪುತ್ರ ನಿಖಿಲ್ ಇನ್ನೂ ಚಿಕ್ಕ ರಾಜಕಾರಣಿ. ಪ್ರತಿಯೊಂದರ ಬಗ್ಗೆ ಮಾಹಿತಿ ತಿಳಿದಕೊಂಡು ನಿಖಿಲ್ ಮಾತನಾಡಬೇಕು. ಒಂದೂವರೆ ವರ್ಷ ಸರ್ಕಾರ …

Read More »

ಬೆಂಗಳೂರು; ನಿಂತಿದ್ದ ವಾಹನಗಳಿಂದ ಡೀಸೆಲ್​ ಕದಿಯುತ್ತಿದ್ದ ಕಳ್ಳರ ಕಾಲಿಗೆ ಗುಂಡಿಟ್ಟ ಪೊಲೀಸ್

ಬೆಂಗಳೂರು: ರಾತ್ರಿ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಪೊಲೀಸರು, ಆರೋಪಿಗಳನ್ನು ಬಂಧನ ಮಾಡಿರೋ ಘಟನೆ ಬೆಂಗಳೂರು ಹೊರವಲಯದ ಆನೇಕಲ್​ ಬಳಿ ನಡೆದಿದೆ. ಶ್ರೀನಿವಾಸ್ ಅಲಿಯಾಸ್ ರಾಜು ಗುಂಡೇಟು ತಿಂದ ಆರೋಪಿಯಾಗಿದ್ದು, ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಟಾಟಾ ಸುಮೋನಲ್ಲಿ ಬಂದು ಲಾರಿಗಳಲ್ಲಿ ಡೀಸೆಲ್ ಕದಿಯುತ್ತಿದ್ದ ಖತರ್ನಾಕ್ ಗ್ಯಾಂಗ್, ಆನೇಕಲ್​​ನ ಜಿಗಣಿಯ ಕೆಇಬಿ ಸರ್ಕಲ್ ಬಳಿ …

Read More »