Breaking News

Uncategorized

ಹಿಜಾಬ್ ವಿವಾದ: ನಾಳೆ ಮಧ್ಯಾಹ್ನಕ್ಕೆ ಅರ್ಜಿಯ ವಿಚಾರಣೆ ಮುಂದೂಡಿಕೆ

ಹಿಜಾಬ್ ಕುರಿತು ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠದ ಮುಂದೆ ವಿಚಾರಣೆ ನಡೆಸಿದ್ದು, ಮತ್ತೆ ನಾಳೆ ಮಧ್ಯಾಹ್ನ 2.30ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಈಗಾಗಲೇ ಅರ್ಜಿದಾರರ ಪರ ವಾದ ಮಂಡನೆಯ ಬಳಿಕ ಇಂದು ಮತ್ತೆ ಪುನಾರಂರಭಗೊಂಡ ಅರ್ಜಿಯ ವಿಚಾರಣೆ ವೇಳೆ, ನ್ಯಾಯಪೀಠದ ಮುಂದೆ ಸರ್ಕಾರದ ಪರ ಅಡ್ವಕೇಜ್ ಜನರಲ್ ವಾದ ಮಂಡನೆ ಮಾಡಿದರು. ಸರ್ಕಾರದ ವಾದ ಆಲಿಸಿದಂತ ನ್ಯಾಯಪೀಠವು, ನಾಳೆಗೆ ವಿಚಾರಣೆ ಮುಂದೂಡಿದೆ.

Read More »

ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್

ಕಿರುತೆರೆಯ ಮೂಲಕ ಅಪಾರ ಅಭಿಮಾನಿಗಳ ಹೊಂದಿರುವ ನಟ ಕಿರಣ್ ರಾಜ್ ಇದೀಗ ‘ಬಡ್ಡೀಸ್’ ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದು, ಯು.ಎಸ್.ಎ ವಾಸಿ‌ ನಿಭಾ ಶೆಟ್ಟಿ‌ ಈ ಚಿತ್ರದ ಮೂಲಕ ಸಿನಿಮಾಟೋಗ್ರಾಫರ್ ಆಗಿ ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿದ್ದಾರೆ. ಅಲ್ಲಿನ ಸಿನಿಮಾಗಳಿಗೆ ಹಾಗೂ ಜಾಹೀರಾತು ಚಿತ್ರಗಳಿಗೆ ಈಗಾಗಲೇ ನಿಭಾ ಶೆಟ್ಟಿ ಕೆಲಸ ಮಾಡಿದ್ದು, ಇವರು ಪ್ರತಿಷ್ಠಿತ ಎಮ್ಮಿ ಅವಾರ್ಡ್ ಗೆ ನಾಮಿನೇಟರ್ ಎನ್ನುವುದು ವಿಶೇಷ.  ಈಗಾಗಲೇ ಸಿನಿಮಾದ ಶೂಟಿಂಗ್ ಶುರುವಾಗಿದ್ದು ಬೆಂಗಳೂರು, ಮಂಗಳೂರು, …

Read More »

ಪಂಜಾಬ್‌ ವಿಧಾನಸಭಾ ಚುನಾವಣೆ : ಸೋನು ಸೂದ್ ಕಾರು ಜಪ್ತಿ, ಮನೆಗೆ ವಾಪಸ್

ಮೊಗಾ: ಬಾಲಿವುಡ್ ನಟ ಸೋನು ಸೂದ್ ಅವರು ಪಂಜಾಬ್ ನ ಮೊಗಾ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಪ್ರವೇಶಕ್ಕೆ ಯತ್ನಿಸಿದ ಆರೋಪದ ಮೇಲೆ ಅವರ ಕಾರನ್ನು ಜಪ್ತಿ ಮಾಡಲಾಗಿದೆ ಮತ್ತು ಮನೆಗೆ ವಾಪಸ್ ಕಳುಹಿಸಿದ ಘಟನೆ ಭಾನುವಾರ ನಡೆಯುತ್ತಿದೆ. ರಾಜ್ಯದ 117 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಮೊಗಾದಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಹೋದರಿ ಮಾಳವಿಕಾ ಅವರ ಪರವಾಗಿ ಕೆಲಸ ಮಾಡುತ್ತಿರುವ ಸೋನು ಸೂದ್ ಅವರು ಮತಗಟ್ಟೆಗೆ ಪ್ರವೇಶಿಸಲು …

Read More »

ಕ್ರೀಡೆಯಿಂದ ಉತ್ತಮ ಆರೋಗ್ಯ: ಯುವ ನಾಯಕ ರಾಹುಲ್‌

ಬೆಳಗಾವಿ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಹೊಸ ವಂಟಮುರಿ ಗ್ರಾಮದಲ್ಲಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಡೆದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.7 ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ಕೊಟ್ಟಷ್ಟುಕ್ರೀಡೆಗೂ ಮಹತ್ವ ನೀಡಬೇಕು. ಇಂದಿನ ದಿನಮಾನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿದ್ದು, ಇಂತಹ ಕ್ರೀಡೆಗಳನ್ನು ಜೀವಂತವಾಗಿರಸಲು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ …

Read More »

ಕಾಂಗ್ರೆಸ್‍ನ ಮತ ಬ್ಯಾಂಕ್, ಬಿಜೆಪಿ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಹಾಳು

ಮೈಸೂರು: ಒಂದು ಕಡೆ ಕಾಂಗ್ರೆಸ್ ಮತ ಬ್ಯಾಂಕ್ ಲೆಕ್ಕ, ಇನ್ನೊಂದು ಕಡೆ ಬಿಜೆಪಿಯ ಕೆಲವರ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಕೆಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಒಬ್ಬ ವಿದ್ಯಾರ್ಥಿನಿ ಹೇಳುತ್ತಾಳೆ. ವಿದ್ಯಾರ್ಥಿನಿಯನ್ನು ಆ ರೀತಿ ಮಾತಾಡುವಂತೆ ಕಾಂಗ್ರೆಸ್ ಟ್ಯೂನ್ ಮಾಡುತ್ತಿದೆ. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್‍ಗಾಗಿ ಮನಸ್ಸು ಕೆಡಿಸುತ್ತಿದೆ. ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಕಾಂಗ್ರೆಸ್ ಮಕ್ಕಳಿಗೆ …

Read More »

ಸಾವಿರಾರು ಅಡಿಕೆ ಗಿಡಗಳು ನೆಲಸಮ

ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ 15 ದಿನಗಳಿಂದ ಕಾಡು ಹಂದಿ ಕಾಟ ಹೆಚ್ಚಿದ್ದು, ಗ್ರಾಮಸ್ಥರು ನಲುಗಿ ಹೋಗಿದ್ದಾರೆ. ಬೆನವಳ್ಳಿ ಗ್ರಾಮದ ಕೃಷಿಕರಾದ ನಾಗಾರ್ಜುನಪ್ಪ ಗೌಡ (125), ರವೀಂದ್ರ ಗೌಡ (113), ಬಿ.ಎಲ್‌. ಲಿಂಗಪ್ಪಗೌಡ (63), ರಾಚಪ್ಪ ಗೌಡ (103), ಸುರೇಶ್‌ ಗೌಡ (418), ಶಾಂತಕುಮಾರ್‌ ಗೌಡ (400), ಶಿವಮ್ಮ 220, ಕುಸುಮಮ್ಮ (100) ಸೇರಿ ಇನ್ನೂ ಹಲವರ ಸಾವಿರಾರು ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳು …

Read More »

ನೀವಿಬ್ಬರೂ ಒಂದಾಗಿ ನಮ್ಮ ಕ್ಷೇತ್ರಗಳಿಗೆ ಬಂದ್ರೆ ಚುನಾವಣೆ ಗೆಲ್ಲಬಹುದು: ಡಿಕೆಶಿ, ಸಿದ್ದರಾಮಯ್ಯಗೆ ಕೈ ಶಾಸಕರ ಮನವಿ

ಬೆಂಗಳೂರು: ಕಾಂಗ್ರೆಸ್ ಅಹೋರಾತ್ರಿ ಧರಣಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಚಿಂತನ ಮಂಥನ ನಡೆದಿದೆ. ರಾತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಶಾಸಕರಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಈ ವೇಳೆ ಶಾಸಕರು ಕೂಡಾ ಇಬ್ಬರೂ ನಾಯಕರಿಗೆ ನೀವಿಬ್ಬರೂ ಜೊತೆಯಾಗಿದ್ದರೆ ಚುನಾವಣೆ ಗೆಲ್ಲಬಹುದು ಅಂತಾ ಹೇಳಿರುವ ಮಾಹಿತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ. ಮತದಾರನ ಮನೆ ಬಾಗಿಲಿಗೆ ಹೋಗಿ.. ನಿನ್ನೆ ರಾತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌, ಚುನಾವಣೆಗೆ ಇನ್ನೊಂದು ವರ್ಷ ಮಾತ್ರ ಬಾಕಿಯಿದೆ. ಚುನಾವಣೆಗೆ …

Read More »

ಹೆಣ್ಣುಮಕ್ಕಳ ಶಿಕ್ಷಣದ ಕುರಿತು ಬಿಜೆಪಿ ನಿಲುವೇನು: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಹಿಂಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಹಾಗೆಯೇ, ಹೆಣ್ಣು ಮಕ್ಕಳ ಶಿಕ್ಷಣದ ವಿಚಾರದಲ್ಲಿ ಬಿಜೆಪಿಯ ನಿಲುವು ಏನು ಎಂಬುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ತಿಳಿಸಬೇಕು ಎಂದು ಕೇಳಿದ್ದಾರೆ. ಸುತ್ತೋಲೆಗೆ ಸಂಬಂಧಿಸಿದಂತೆ #HijabCircular ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, ‘ರಾಜ್ಯದ …

Read More »

ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಲೈವ್ ಬರಲಿದ್ದಾರೆ ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು: ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾದ ಕಮಲ್​ ಪಂತ್(kamal pant)​ ಲೈವ್​ ಬರಲಿದ್ದಾರೆ. ಈ ಕುರಿತು ಸ್ವತಃ ಕಮಲ್​ ಪಂತ್​ ಅವರು ಟ್ವೀಟ್​(Tweet) ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ನಾನು ಈ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಟ್ವೀಟರ್​ನಲ್ಲಿ ಲೈವ್(Live) ಬರುತ್ತೇನೆ ಎಂದು #AskCPBlr ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್​ ಮಾಡಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು, ಅಹವಾಲುಗಳನ್ನು, ಆಲೋಚನೆಗಳು ಮತ್ತು ಸಲಹೆಗಳನ್ನು …

Read More »

ಅನೂಪ್ ಭಂಡಾರಿ ಜತೆ ಮತ್ತೊಂದು ಚಿತ್ರ : ಸರ್ಪೈಸ್ ಕೊಟ್ಟ ಸುದೀಪ್

ಶುಕ್ರವಾರ ಬೆಳ್ಳಂಬೆಳಗ್ಗೆ ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ ಕಿಚ್ಚ ಸುದೀಪ್. ವಿಕ್ರಾಂತ್ ರೋಣ ಸಿನಿಮಾದ ತ್ರಿಡಿ ವರ್ಷನ್ ನೋಡಿ ಮೆಚ್ಚಿಕೊಂಡಿದ್ದಲ್ಲದೇ, ಈ ಮೂಲಕ ಇಡೀ ಚಿತ್ರತಂಡಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.ವಿಕ್ರಾಂತ್ ರೋಣ ತ್ರಿಡಿ ಅದ್ಭುತವಾಗಿ ಮೂಡಿ ಬಂದಿದೆ. ಈ ಸಿನಿಮಾದ ಬಿಡುಗಡೆಯ ದಿನಾಂಕಕ್ಕಾಗಿ ನಾನು ಕಾಯುತ್ತಿದ್ದೇನೆ. ಜತೆಗೆ ನಿರ್ದೇಶಕ ಅನೂಪ್ ಭಂಡಾರಿ ಅವರ ಜತೆಗಿನ ಮತ್ತೊಂದು ಸಿನಿಮಾ ಕುರಿತಾದ ಮಾಹಿತಿ ಹಂಚಿಕೊಳ್ಳಲು ಕಾತುರನಾಗಿದ್ದೇನೆ” ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ.  ಅನೂಪ್ ಭಂಡಾರಿ …

Read More »