Breaking News

Uncategorized

ಚೀಲ ಹರಿದು ರಸ್ತೆ ಪಾಲಾಗುತ್ತಿದ್ದ ಅಕ್ಕಿ ತಡೆದ ಸಂತೋಷ ಧರೇಕರ್

ಬೆಳಗಾವಿ ತಾಲೂಕಿನ ದೇಸೂರು ರೈಲು ನಿಲ್ದಾಣದಿಂದ ಗಣೇಶಪುರದ ಗೋಡೌನ್ ಕಡೆಗೆ ಅಕ್ಕಿಯನ್ನು ತುಂಬಿಕೊಂಡು ಒಂದು ಲಾರಿ ಹೋಗುತ್ತಿತ್ತು. ಈ ವೇಳೆ ಚೀಲ ಕಟ್ ಆಗಿ ದಾರಿಯುದ್ದಕ್ಕೂ ಅಕ್ಕಿ ಬೀಳುತ್ತಾ ಹೋಗುತ್ತಿತ್ತು. ಇದನ್ನು ಗಮನಿಸಿದ ಸಮಾಜಸೇವಕ ಸಂತೋಷ ಧರೇಕರ್ ವ್ಯರ್ಥವಾಗುತ್ತಿದ್ದ ಅಕ್ಕಿಯನ್ನು ತಡೆದಿದ್ದಾರೆ. ಹೌದು ಒಂದು ಅಗಳಿನ ಅನ್ನದ ಬೆಲೆ ಅದನ್ನು ಕಷ್ಟಪಟ್ಟು ಬೆಳೆದ ರೈತನಿಗೆ ಗೊತ್ತು. ಆದರೆ ಈ ರೀತಿ ಅಕ್ಕಿಯು ದಾರಿಯುದ್ದಕ್ಕೂ ಬೀಳುತ್ತಿರುವುದನ್ನು ಗಮನಿಸಿದ ಸಂತೋಷ ಧರೇಕರ್ ಈ …

Read More »

ಸಿದ್ದರಾಮಯ್ಯ ಅಮೃತ ಮಹೋತ್ಸವ: ಬೆಳಗಾವಿಯಲ್ಲಿ 3 ಕಿಮೀ ಉದ್ದದ ಫೋಟೋ ಬಯೋಗ್ರಫಿ ಸಿದ್ಧ..!

ಬೆಳಗಾವಿ : ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಜನ್ಮದಿನದ ಸಂದರ್ಭದಲ್ಲಿ ಪ್ರದರ್ಶಿಸಲು ಸಿದ್ದರಾಮಯ್ಯರ ಜೀವನದ ವಿವಿಧ 500 ಫೋಟೋಗಳನ್ನು ಬಳಸಿ 3000 ಮೀಟರ್ (3 ಕಿಮೀ) ಉದ್ದದ ಫೋಟೋ ಬಯೋಗ್ರಫಿ ಸಿದ್ಧಪಡಿಸಲಾಗಿದೆ. ಜಿಲ್ಲೆಯ ಸವದತ್ತಿ ಪಟ್ಟಣದ ಕಾಂಗ್ರೆಸ್ ಮುಖಂಡ ಸೌರಭ್ ಚೋಪ್ರಾ ಮಾರ್ಗದರ್ಶನದಲ್ಲಿ ಆನಂದ ಚೋಪ್ರಾ ಅಭಿಮಾನಿ ಬಳಗ ಸಿದ್ದರಾಮಯ್ಯ ರಾಜಕೀಯ ಜೀವನದ ಫೋಟೋಗಳನ್ನು ಬಳಸಿ ಬಯೋಗ್ರಫಿ ತಯಾರಿಸಿದೆ. ಇದಕ್ಕೆ ಸುಮಾರು 500 ಫೋಟೋಗಳನ್ನು ಬಳಸಿಕೊಳ್ಳಲಾಗಿದ್ದು, 3 ಸಾವಿರ …

Read More »

ಕಳ್ಳತನ ಪ್ರಕರಣ; ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್

ಬೆಳಗಾವಿ: ಸುಮಾರು ಒಂದು ತಿಂಗಳ ಹಿಂದೆ ಯರಗಟ್ಟಿ ಪಟ್ಟಣದಲ್ಲಿ ನಡೆದ ಕಿರಾಣಿ ಅಂಗಡಿ ಕಳ್ಳತನ ಮತ್ತು ಮನೆ ಕಳ್ಳತನ ಮಾಡಲು ಪ್ರಯತ್ನ ಮಾಡಿದ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ 51,000/- ರೂ ಮೊತ್ತದ ಕಿರಾಣಿ ಅಂಗಡಿಯ ಮಾಲನ್ನು ಮತ್ತು ಕೃತ್ಯಕ್ಕೆ ಬಳಸಿದ್ದ 2,00,000/- ರೂ ಮೌಲ್ಯದ ಅಷೆ ಟಂಟಂ ವಾಹನವನ್ನು ಹಾಗೂ ಒಂದು ರಾಡ್ ಸೇರಿದಂತೆ ಒಟ್ಟು-2,51,000/- ರೂ ಮೌಲ್ಯದ ವಸ್ತುಗಳನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ರಾಮದುರ್ಗ ಡಿ.ಎಸ್.ಪಿ …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ರಾಹುಲ್ ಜಾರಕಿಹೊಳಿ ವತಿಯಿಂದ ಹಾಲು ಹಣ್ಣು ವಿತರಣೆ

ದಿನಾಂಕ 02-08-2022 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ಸುಪುತ್ರರಾದ ಯುವ ಪ್ರೇಮಿಗಳಾದ ರಾಹುಲ್ ಅಣ್ಣಾ ಜಾರಕಿಹೊಳಿಯವರು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ವತಿಯಿಂದ ಆಯೋಜಿಸಿದ ಬಸವ ಪಂಚಮಿ ನಿಮಿತ್ಯ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿ ಮಾತನಾಡಿ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ …

Read More »

ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ: ಗೋಕಾಕ

ಗೋಕಾಕ :ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೋಕಾಕದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಚಿಕ್ಕ ಮಕ್ಕಳ ವೈದ್ಯರಾದ ಡಾ ಗೋಪಾಲ ಹೊಂಗಲ ಮತ್ತು ಡಾ ಸಂಜೀವಿನಿ ಉಮರಾಣಿ ಯವರು ತಾಯಂದಿರಿಗೆ ಎದೆಹಾಲಿನ ಮಹತ್ವ ಬಗ್ಗೆ ಹೇಳಿದರು. ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಹುಟ್ಟಿದ ಪ್ರತಿ ಮಗುವೂ ಬದುಕಬೇಕು, ತಾಯಿಯೂ ಆರೋಗ್ಯವಾಗಿ ಇರಬೇಕು ಎಂಬುದು ಎಲ್ಲರ ಆಸೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು …

Read More »

ಬಸವ ಪಂಚಮಿ: ರೋಗಿಗಳಿಗೆ ಹಾಲು ವಿತರಿಸಿದ ರಾಹುಲ್ ಜಾರಕಿಹೊಳಿ

  ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು …

Read More »

ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ

  ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು.   ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …

Read More »

ಜೀವಂತ ನಾಗರಹಾವಿಗೆ ಹಾಲೆರೆದು ನಾಗರಪಂಚಮಿ ಆಚರಣೆ

ಹಾವೇರಿ: ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ಜೀವಂತ ನಾಗರಹಾವಿಗೆ ಹಾಲೆರೆಯುವ ಮೂಲಕ ನಾಗರಪಂಚಮಿ ಆಚರಣೆ ನಡೆಯಿತು. ಆಡೂರು ಪಕ್ಕದ ಗ್ರಾಮದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಉರಗಪ್ರೇಮಿ ಕೃಷ್ಣರೆಡ್ಡಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದ ಕೃಷ್ಣರೆಡ್ಡಿ ನಾಗರಹಾವು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲು ಹೋದಾಗ ಆಡೂರು ಗ್ರಾಮದ ಮಹಿಳೆಯರು ನಾಗರಪಂಚಮಿ ಆಚರಿಸುತ್ತಿದ್ದರು. ತಮ್ಮ ಮುಂದೆ ಜೀವಂತ ಹಾವು ಹಿಡಿದು ಹೋಗುತ್ತಿದ್ದ ಅವರಿಗೆ ಸ್ವಲ್ಪ ಹೊತ್ತು ಹಾವು ಬಿಡುವಂತೆ ತಿಳಿಸಿದ್ದಾರೆ. ನಾಗರಹಾವು ನೆಲದ ಮೇಲೆ …

Read More »

ಅಕ್ರಮ-ಸಕ್ರಮ ಜಾರಿಗೆ ಪ್ರಯತ್ನ: ಆರ್‌. ಅಶೋಕ

ಬೆಂಗಳೂರು: ವಾಣಿಜ್ಯ ಕಟ್ಟಡಗಳನ್ನು ಹೊರಗಿಟ್ಟು ವಸತಿ ಕಟ್ಟಡಗಳಿಗೆ ಸೀಮಿತವಾಗಿ ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು. ‘ನಕ್ಷೆ ಉಲ್ಲಂಘಿಸಿ ಹಾಗೂ ಅನುಮೋದನೆ ಇಲ್ಲದ ಬಡಾವಣೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ದಂಡ ವಿಧಿಸಿ ಸಕ್ರಮಗೊಳಿಸಲು ರೂಪಿಸಿದ್ದ ಕಾಯ್ದೆಯನ್ನು ಪ್ರಶ್ನಿಸಿರುವ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಉಳಿದಿದೆ. ವಾಣಿಜ್ಯ ಕಟ್ಟಡಗಳನ್ನು ಸಕ್ರಮಗೊಳಿಸುವುದಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಿ ಯೋಜನೆ ಅನುಷ್ಠಾನಕ್ಕೆ ಅನುಮತಿ ಪಡೆಯಲು ಪ್ರಯತ್ನ …

Read More »

ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.

  *ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …

Read More »