ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು …
Read More »ನಾಯಕತ್ವ ಬದಲಾವಣೆ ಹೇಳಿಕೆ ನೀಡಿದ ಸಚಿವರಿಗೆ ಬಿಜೆಪಿ ಬಿಗ್ ಶಾಕ್: ಸಂಕ್ರಾಂತಿಗೆ ಅನೇಕ ಮಂತ್ರಿಗಳಿಗೆ ಗೇಟ್ ಪಾಸ್
ಬೆಂಗಳೂರು: ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸದೇ ವಿನಾಕಾರಣ ನಾಯಕತ್ವದ ಬಗ್ಗೆ ಹರಡುವ ಮೂಲಕ ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಸಚಿವರಿಗೆ ಗೇಟ್ ಪಾಸ್ ನೀಡಲು ಬಿಜೆಪಿ ಮುಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಕೆಲವು ಸಚಿವರು ತಮಗೆ ನೀಡಿದ ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದೇ, ಅನಗತ್ಯವಾಗಿ ವದಂತಿ ಹರಡುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಘನತೆಗೆ ಧಕ್ಕೆ …
Read More »ಊಟಕ್ಕೆಂದು ಹೋದವರು ವಾಪಸ್ ಬಂದದ್ದು ಹೆಣವಾಗಿ. ಅಯ್ಯೋ ವಿಧಿಯೇ ನೀನೇಷ್ಟು ಕ್ರೂರಿ?
ಬನ್ನೇರುಘಟ್ಟದ ಕೆಂಪನಾಯಕನ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ಬುಧವಾರ ರಾತ್ರಿ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ. ಎಎಂಸಿ ಕಾಲೇಜಿನ ವಿದ್ಯಾರ್ಥಿಗಳಾದ ಕೌಶಿಕ್ ಮತ್ತು ಸುಷ್ಮಾ ಮೃತ ದುರ್ದೈವಿಗಳು. ಬೆಂಗಳೂರಿನ ಸಾರಕ್ಕಿ ನಿವಾಸಿಗಳಾದ ಇವರಿಬ್ಬರೂ ಊಟ ಮಾಡಲೆಂದು ಬುಧವಾರ ರಾತ್ರಿ ಬನ್ನೇರುಘಟಕ್ಕೆ ಬೈಕ್ನಲ್ಲಿ ಹೋಗಿದ್ದರು. ಊಟ ಮುಗಿಸಿ ವಾಪಸ್ ಬರುವ ವೇಳೆ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ …
Read More »ಇಂದು ರಾಜ್ಯಾಧ್ಯಂತ ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ.
ಇಂದು ರಾಜ್ಯಾಧ್ಯಂತ ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಇಂದು ಒಬ್ಬರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಡುವ ಮೂಲಕ, ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ರೂಪಾಂತರಿ ಸೋಂಕಿನ ಪ್ರಕರಣ ವರದಿಯಾಗಿದೆ. ಈ ಮೂಲಕ ಮಲೆನಾಡಿಗೂ ಓಮಿಕ್ರಾನ್ ವೈರಸ್ ಕಾಲಿಟ್ಟಂತೆ ಆಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜ್ಯದಲ್ಲಿ ಇಂದು ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ತಗುಲಿರೋದು ದೃಢಪಟ್ಟಿದೆ. ಅವರಲ್ಲಿ …
Read More »ವಿರೋಧ-ಗದ್ದಲದ ಮಧ್ಯೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಪಾಸ್
ಬೆಳಗಾವಿ: ವಿಧಾನಮಂಡಲ ಅಧಿವೇಶ (Belagavi Session) ಶುರುವಾದಗಿನಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿಧಾನಸಭೆಯಲ್ಲಿ (Karnataka Assembly) ಪಾಸ್ ಮಾಡಿಕೊಳ್ಳುವಲ್ಲಿ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ (BJP Government) ಸಫಲವಾಗಿದೆ. ವಿರೋಧ ಪಕ್ಷಗಳ ತೀವ್ರ ವಿರೋಧ, ಗದ್ದಲದ ಮಧ್ಯೆಯೂ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು. ವಿಧೇಯಕದ ಮೇಲಿನ ಚರ್ಚೆ ವೇಳೆ ಕಾಂಗ್ರೆಸ್ ನಾಯಕರು ಹಾಗೂ ಸರ್ಕಾರದ ಮಧ್ಯೆ ತೀವ್ರ ವಾಕ್ಸಮರ ನಡೆಯಿತು. ಕಾಂಗ್ರೆಸ್ …
Read More »ರಾಜಕೀಯ ಹಿತಾಸಕ್ತಿಯಿಂದ ಮತಾಂತರ ನಿಷೇಧ ವಿಧೇಯಕವನ್ನು ತರಲಾಗುತ್ತಿದೆ: U. T.ಖಾದರ್
ಬೆಳಗಾವಿ,ಡಿ.23-ರಾಜಕೀಯ ಹಿತಾಸಕ್ತಿಯಿಂದ ಮತಾಂತರ ನಿಷೇಧ ವಿಧೇಯಕವನ್ನು ತರಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಜನರ ಹಿತಾಸಕ್ತಿ ಬೇಕಾಗಿಲ್ಲ. ಈ ಹಿಂದೆ ಗೋಹತ್ಯೆ ನಿಷೇಧ ಕಾಯ್ದೆ ತಂದರು. ಒಂದೂ ಗೋಶಾಲೆಯನ್ನೂ ಪ್ರಾರಂಭಿಸಿಲ್ಲ. ಈಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ಟೀಕಿಸಿದರು. ಕಾನೂನು ಆಯೋಗ ಮಸೂದೆಯ ಕರಡನ್ನು ಕಳುಹಿಸಿದ್ದು ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ. ಸಂಪುಟ ಸಭೆಗೆ ತನ್ನಿ ಎಂದು ಸಹಿ ಹಾಕಿದ್ದೇ ಆಗಿನ …
Read More »ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮಹಿಳಾ ಮೋರ್ಚಾ ಪ್ರತಿಭಟನೆ
ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಮಹಿಳಾ ಮೋರ್ಚಾ ಕಾರ್ಯಕರ್ತರು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಿಂದ ಸುವರ್ಣ ಸೌಧದ ವರಿಗೆ ಟ್ರ್ಯಾಕ್ಟರ್ ಮೂಲಕ ಸಾಗಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಇವತ್ತು ಕೇಂದ್ರ ಸರ್ಕಾರ ಸಿಲಿಂಡರ್, ಅಡುಗೆ ಏಣ್ಣೆ ಸೇರಿದಂತೆ ವಿವಿಧ …
Read More »ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ
ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸ್‍ನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು …
Read More »ಜನವರಿ 15ರ ನಂತರ ಕೋವಿಡ್ ಮೂರನೇ ಅಲೆಗೆ ಎಲ್ಲರೂ ಸಿದ್ಧರಾಗಿ: ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ
ಜನವರಿ 15ರ ನಂತರ ಕೋವಿಡ್ ಮೂರನೇ ಅಲೆಗೆ ಎಲ್ಲರೂ ಸಿದ್ಧರಾಗಿ ಎಂದು ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ ನೀಡಿದ್ದಾರೆ. ಬೆಳಗಾವಿಯ ಕೆಎಲ್‍ಇ ಕ್ಯಾಂಪಸ್‍ನಲ್ಲಿರುವ ಜೆ.ಎನ್. ವೈದ್ಯಕೀಯ ಕಾಲೇಜಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಆರೋಗ್ಯ ಇಲಾಖೆಯ ಸಮಸ್ಯೆ ಕುರಿತು ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಂಡರು. ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಸಂಬಳ, ಆಂಬ್ಯುಲೆನ್ಸ್ …
Read More »ಗೋಕಾಕ ಕಾಂಗ್ರೆಸ್ ಪಕ್ಷದ ತವರು ಮನೆ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ.
ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿಗಳು ಬರ್ತಾರೆ ವ್ಯಕ್ತಿಗಳು ಹೋಗ್ತಾರೆ. ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿಗಳು ಅಲ್ಲ ಪಕ್ಷ ದೊಡ್ಡದು. ಗೋಕಾಕ ಕಾಂಗ್ರೆಸ್ ಪಕ್ಷದ ತವರು ಮನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು ಅಶೋಕ ಪೂಜಾರಿ ಕುಟುಂಬ ಒಟ್ಟು ಆರು …
Read More »