ಬೆಳಗಾವಿ: ರಾಜ್ಯಾದ್ಯಂತ ನಕಲಿ ಔಷಧಗಳ ಪತ್ತೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ, ಬೆಳಗಾವಿಯಲ್ಲೂ ನಕಲಿ ಔಷಧ ಮಾರಾಟದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ವಿವಾ ಫಾರ್ಮಾ ಕಚೇರಿ ಮುಂದೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ನಕಲಿ ಔಷಧಗಳ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿರುವ …
Read More »ಸೆ.28ರಂದು ಗುರ್ಲಾಪುರದಲ್ಲಿ ಲಕ್ಷಾಂತರ ರೈತರ ಬೃಹತ್ ಸಮಾವೇಶ
ಬೆಳಗಾವಿ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಮುಖಂಡ ಗಣೇಶ ಇಳಿಗೇರ್ ನೇತೃತ್ವದಲ್ಲಿ ರೈತರು ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ, ಕಾರ್ಖಾನೆಗಳ ತ್ವರಿತ ಆರಂಭ ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು. ಸೆಪ್ಟೆಂಬರ್ 28ರಂದು ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ಲಕ್ಷಾಂತರ ರೈತರನ್ನು ಸೇರಿಸಿ ಬೃಹತ್ …
Read More »ಜಮೀನು ವಿವಾದದಲ್ಲಿ ಮಾಜಿ ಸೈನಿಕನ ಕೊಲೆ: ಒಬ್ಬನಿಗೆ ಜೀವಾವಧಿ, ನಾಲ್ವರಿಗೆ 10 ವರ್ಷ ಜೈಲುಶಿಕ್ಷೆ
ಬೆಳಗಾವಿ: ಜಮೀನು ಪಾಲು-ವಾಟೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಜಿ ಸೈನಿಕನನ್ನು ಕೊಲೆ ಮಾಡಿ, ಆತನ ಸಹೋದರನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಬೈಲಹೊಂಗಲದ 10ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2023ರ ಜೂನ್ 4ರಂದು ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಜಮೀನಿನ ಪಾಲು-ವಾಟೆ ಆಗುವವರೆಗೆ ಗಳೆ ಹೊಡೆಯಬೇಡಿ ಎಂದು ಕಸ್ತೂರೆವ್ವ ಖನಗಾಂವಿ, ಅವರ ಪತಿ ಸದಾಶಿವ ಖನಗಾಂವಿ ಹಾಗೂ ಮೈದುನ ಸುರೇಶ …
Read More »ಮಗುವಿನೊಂದಿಗೆ ಬ್ಯೂಟಿ ಪಾರ್ಲರ್‌ಗೆ ಹೋದ ತಾಯಿ ನಾಪತ್ತೆ
ಬೆಳಗಾವಿ: ಬೆಳಗಾವಿ ನಗರದ ಅನಗೋಳ ಲೋಹಾರಗಲ್ಲಿಯ ನಿವಾಸಿ ಮಂಜುಳಾ ರಾಮಲಿಂಗ ಸುಣಗಾರ (27) ಅವರು ತಮ್ಮ 14 ತಿಂಗಳ ಮಗ ಆರ್ಯನ ರಾಮಲಿಂಗ ಸುಣಗಾರನೊಂದಿಗೆ ಸೆ.18ರಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ಮಂಜುಳಾ ಅವರು ಮಗನನ್ನು ಕರೆದುಕೊಂಡು ಲಕ್ಷ್ಮೀಗಲ್ಲಿಯಲ್ಲಿರುವ ಬ್ಯೂಟಿ ಪಾರ್ಲರ್‌ಗೆ ಹೋಗಿ ಬರುತ್ತೇನೆ ಎಂದು ಕುಟುಂಬದವರಿಗೆ ತಿಳಿಸಿ ಮನೆಯಿಂದ ತೆರಳಿದ್ದರು. ಆದರೆ ಬಳಿಕ ಮನೆಗೆ ಮರಳದೇ ಇರುವ ಹಿನ್ನೆಲೆಯಲ್ಲಿ ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಂಜುಳಾ ಅವರು …
Read More »ಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿ
ಯರಗಟ್ಟಿ: ಪ್ರಜಾಸೇವಾ ಆಂದೋಲನ ಸಭೆಯನ್ನು ಮೊದಲ ಬಾರಿಗೆ ಯರಗಟ್ಟಿಯಲ್ಲಿ ಆಯೋಜಿಸಲಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ರಾಜ್ಯದ ಎಲ್ಲ ತಾಲೂಕುಗಳಲ್ಲೂ ಇಂತಹ ಸಭೆಗಳನ್ನು ನಡೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯಾದ್ಯಂತ ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬೆಳಗಾವಿಯ ಯರಗಟ್ಟಿಯಲ್ಲಿ ಮೊದಲ ಜನಸ್ಪಂದನ ಯಶಸ್ವಿಯಾಗಿ ನಡೆದಿದ್ದು, ಮುಂದಿನ ಮೂರು ತಿಂಗಳೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಈ ಕಾರ್ಯಕ್ರಮವನ್ನು ವಿಸ್ತರಿಸಿ ಸಾರ್ವಜನಿಕರಿಗೆ ಶೀಘ್ರವಾಗಿ …
Read More »ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 12.57 ಕೋಟಿ ಮೌಲ್ಯದ 36 ಕೆಜಿ ಮಾದಕ ವಸ್ತು ಸೀಜ್
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಂಕ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ 12.57 ಕೋಟಿ ರೂ. ಮೌಲ್ಯದ 36 ಕೆ.ಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಸದ್ಯ ಪತ್ತೆಯಾದ ಹೈಡ್ರೋ ಗಾಂಜಾವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸದ್ಯ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು NDPS ಕಾಯ್ದೆಯಡಿ ಬಂಧಿಸಿ, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ 15.3 ಕೆಜಿ …
Read More »ಬಿಜೆಪಿ ನಾಯಕರನ್ನ ರಣಹದ್ದು ಎಂದ ಸಚಿವ ಯತೀಂದ್ರ ವಿರುದ್ಧ ದೂರು
ರಾಮನಗರ: ಬಿಜೆಪಿಯವರನ್ನು ರಣಹದ್ದುಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ಸಲ್ಲಿಕೆಯಾಗಿದೆ. ಟಿ.ನರಸೀಪುರದಲ್ಲಿ ನಡೆದಿದ್ದ ಗಲಭೆ ವಿಚಾರವಾಗಿ ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡುವ ಭರದಲ್ಲಿ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ರಣಹದ್ದುಗಳು ಎಂದಿದ್ದರು. ಈ ಹೇಳಿಕೆ ಈಗ ಹೊಸ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಕುಮಾರಸ್ವಾಮಿ ಎಂಬವರು ಈ ಬಗ್ಗೆ ದೂರು ಸಲ್ಲಿಸಿದ್ದು, ಸಚಿವರು ರಾಜಕೀಯ …
Read More »ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಸೆ.23ರಂದು ಉತ್ತರ ಒಳನಾಡಿನಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಸೆ.23 ಮತ್ತು 24ರಂದು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. …
Read More »ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ
ಮಂಡ್ಯ: ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಗರ್ಭಗುಡಿಗೆ ಬಿಡುವ ವಿಚಾರದಲ್ಲಿ ಕಿರಿಕ್ ಮಾಡಿದ್ದರು. ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಸವಿತಾ ಬಳಿ ಐಶ್ವರ್ಯ ವಾಗ್ವಾದ ನಡೆಸಿದ್ದರು. ಈ ವೇಳೆ ಐಶ್ವರ್ಯ ಪಿಎಸ್‌ಐಗೆ …
Read More »ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ – ರಜೆ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಸಾವು
ರಾಮನಗರ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ, ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಮೃತಪಟ್ಟ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ತಡರಾತ್ರಿ ನಡೆದಿದೆ. ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ ಚನ್ನವೀರೇಗೌಡ (45) ಮೃತಪಟ್ಟ ಯೋಧ. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಪಡೆಯ ಯೋಧರಾಗಿದ್ದ ಚನ್ನವೀರೇಗೌಡ, ಮೊನ್ನೆಯಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ತಡರಾತ್ರಿ ಯೋಧ ತಮ್ಮ ಮಗನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಗಡಸಳ್ಳಿ ಬಳಿ ರಸ್ತೆ ಬದಿ ನಿಂತಿದ್ದ …
Read More »
Laxmi News 24×7