ಭಾರತ ನಮ್ಮ ‘ದೊಡ್ಡಣ್ಣ’ -ಪ್ರಧಾನಿ ಮೋದಿ ಸಹಾಯ ನೆನೆದ ಜಯಸೂರ್ಯ ಶ್ರೀಲಂಕಾಗೆ ಭಾರತ ‘ಬಿಗ್ ಬ್ರದರ್’ ಎಂದು ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಬಣ್ಣಿಸಿದ್ದಾರೆ. ಸ್ವಾತಂತ್ರ್ಯ ಬಳಿಕ ಭೀಕರವಾಗಿ ಆರ್ಥಿಕ ದಿವಾಳಿತನವನ್ನ ಎದುರಿಸುತ್ತಿರುವ ಲಂಕಾಗೆ, ಭಾರತ ಮಾಡಿರುವ ಸಹಾಯವನ್ನ ನೆನೆದು ಜಯಸೂರ್ಯ ಭಾರತ ನಮ್ಮ ದೊಡ್ಡಣ್ಣ ಎಂದಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಮಾಡಿರುವ ಸಹಾಯವನ್ನ ಈ ಸಂದರ್ಭದಲ್ಲಿ ಸ್ಮರಿಸಿರುವ ಅವರು, ಭಾರತ ನಮ್ಮ ನೆರೆಯ ರಾಷ್ಟ್ರ.. ನಮ್ಮ ದೊಡ್ಡಣ್ಣ.. …
Read More »ಹಣಕ್ಕಾಗಿ ವೀರ್ಯಾಣು ದಾನ ಮಾಡುತ್ತಿದ್ದ ಪತಿ, ವಿಷಯ ತಿಳಿದ ಪತ್ನಿಯ ರಿಯಾಕ್ಷನ್ ಹೇಗಿತ್ತು ಗೊತ್ತಾ…?
ಹೆಂಡತಿಗೆ ಹೇಳದೆ ರಹಸ್ಯವಾಗಿ ವೀರ್ಯಾಣು ದಾನ ಮಾಡುವ ವಿಕ್ಕಿ ಡೋನರ್ ಸಿನೆಮಾ ನೆನಪಿದೆಯಾ ? ಇಂಥದ್ದೇ ನೈಜ ಘಟನೆಯೊಂದು ನಡೆದಿದೆ. ಪತ್ನಿಗೆ ತಿಳಿಸದೇ ವೀರ್ಯಾಣು ದಾನ ಮಾಡಿದ ವ್ಯಕ್ತಿ ಈಗ ತೊಂದರೆಗೆ ಸಿಲುಕಿಕೊಂಡಿದ್ದಾನೆ. ಈ ಬಗ್ಗೆ ಖುದ್ದು ಆ ವ್ಯಕ್ತಿಯೇ ರೆಡಿಟ್ ನಲ್ಲಿ ಬರೆದುಕೊಂಡಿದ್ದಾನೆ. ಹೆಚ್ಚುವರಿ ಹಣ ಗಳಿಸಲು ಆತ ಈ ಮಾರ್ಗವನ್ನು ಆಯ್ದುಕೊಂಡಿದ್ದ. ಪತಿ ವೀರ್ಯ ದಾನ ಮಾಡ್ತಿರೋ ವಿಷಯ ತಿಳಿದ ಪತ್ನಿ ಆಘಾತಗೊಂಡಿದ್ದಳು. ಆತ ತನಗೆ ಮೋಸ …
Read More »ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲ
ದಾವಣಗೆರೆ: ನಕಲಿ ಜಾತಿ ಪ್ರಮಾಣಪತ್ರ ಪಡೆದ ಆರೋಪದಲ್ಲಿ ಶಾಸಕ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ಧ ದೂರು ದಾಖಲಾಗಿದೆ. ವಕೀಲರಾದ ಎ.ಹರಿರಾಂ, ಜಗನ್ನಾಥ್‌ರಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಚೇತನಾ ವಿರುದ್ಧ ದೂರು ಸಲ್ಲಿಸಲಾಗಿದೆ. ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕಾಲಂ 4 ಎಸ್ಸಿ ಎಸ್ಟಿ ಒಬಿಸಿ ಕಾಯ್ದೆ 1990 ಅಡಿ ದೂರು ನೀಡಲಾಗಿದೆ. …
Read More »ಭದ್ರಾ ಮೇಲ್ದಂಡೆ ಯೋಜನೆಯನ್ನು” ರಾಷ್ಟ್ರೀಯ ಯೋಜನೆ”ಯಾಗಿ ಘೋಷಿಸುವುದಾಗಿ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ
ನವದೆಹಲಿ: ವಿತ್ತ ಸಚಿವಾಲಯದ ಅನುಮೋದನೆಯ ನಂತರ ಭದ್ರಾ ಮೇಲ್ದಂಡೆ ಯೋಜನೆಯನ್ನು” ರಾಷ್ಟ್ರೀಯ ಯೋಜನೆ”ಯಾಗಿ ಘೋಷಿಸುವುದಾಗಿ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಂಗಳವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದ್ದೇನೆ. ರಾಜ್ಯದ ನಿಲುವು ಮತ್ತು ಈ ಯೋಜನೆಗಳ ಕುರಿತು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯಗಳ ಕುರಿತು ವಿವರ …
Read More »22 ಯೂಟ್ಯೂಬ್ ಚಾನೆಲ್ ಬ್ಯಾನ್ ಮಾಡಿದ ಭಾರತ
ನವದೆಹಲಿ: ಭಾರತ ಸರ್ಕಾರ ಐಟಿ ನಿಯಮ 2021ರ ಅಡಿಯಲ್ಲಿ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದ 22 ಯೂಟ್ಯೂಬ್ ಚ್ಯಾನೆಲ್‌ಗಳನ್ನು ಬ್ಯಾನ್ ಮಾಡಿದೆ. ಇದೇ ಮೊದಲ ಬಾರಿಗೆ ಐಟಿ ನಿಯಮ, 2021 ರ ಅಡಿಯಲ್ಲಿ 18 ಭಾರತೀಯ ಯೂಟ್ಯೂಬ್ ನ್ಯೂಸ್ ಚ್ಯಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ. ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಇತ್ತೀಚಿನ ಕ್ರಮದಲ್ಲಿ ಪಾಕಿಸ್ತಾನ ಮೂಲದ 4 ಯೂಟ್ಯೂಬ್ ನ್ಯೂಸ್ ಚಾನೆಲ್‌ಗಳನ್ನು ಕೂಡಾ ನಿರ್ಬಂಧಿಸಲಾಗಿದೆ. ಭಾರತೀಯ ಸಶಸ್ತ್ರ ಪಡೆ, ಜಮ್ಮು ಮತ್ತು ಕಾಶ್ಮೀರದಂತಹ ವಿವಿಧ …
Read More »ತಲೆ ಮೇಲೆ ಖಾಲಿ ಸಿಲಿಂಡರ್ ಹೊತ್ತು ಕೇಂದ್ರ ಸರ್ಕಾರದ ವಿರುದ್ಧ ಶಾಸಕಿ ಹೆಬ್ಬಾಳ್ಕರ್ ಪ್ರತಿಭಟನೆ
ಬೆಳಗಾವಿ : ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ಕಾಂಗ್ರೆಸ್ ನಾಯಕರು ವಿಭಿನ್ನ ಪ್ರತಿಭಟನೆ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ತೈಲ, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ತಲೆ ಮೇಲೆ ಖಾಲಿ ಸಿಲಿಂಡರ್ ಹೊತ್ತು ಪ್ರತಿಭಟನೆಯಲ್ಲಿ …
Read More »ಈ ದೇವರಿಗೆ ಹೂವು, ಹಣ್ಣು, ಕಾಣಿಕೆ ಬೇಡ, ಸಿಗರೇಟು, ಬ್ರಾಂಡೆಡ್ ಮದ್ಯವೇ ಬೇಕು!
ಕಾರವಾರ: ಆ ದೇವರಿಗೆ ಸಿಗರೇಟು ಎಂದರೆ ಎಲ್ಲಿಲ್ಲದ ಪ್ರೀತಿ. ಹೆಂಡ ನೀಡಿದರೆ ಇಷ್ಟಾರ್ಥವನ್ನು ಏನಿದ್ದರೂ ನೆರವೇರಿಸುತ್ತಾನೆ ಎನ್ನುವ ನಂಬಿಕೆ ಭಕ್ತರದ್ದು. ಹೌದು. ಕಾರವಾರ ನಗರದ ಕಾಳಿ ನದಿ ಸಂಗಮದಲ್ಲಿರುವ ಕಾಪ್ರಿ ದೇವರ ಜಾತ್ರಾ ಮಹೋತ್ಸವಕ್ಕೆ ತಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಂಡು ಹರಕೆ ತೀರಿಸಲು ಜನರು ಹೀಗೆ ನಿಂತಿದ್ದಾರೆ. ಪ್ರತಿ ವರ್ಷ ನಡೆಯುವ ಕಾಪ್ರಿ ದೇವರ ವಿಶಿಷ್ಟ ಜಾತ್ರೆಗೆ ಕಾರವಾರ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾದಿಂದಲೂ ಜನರು ಆಗಮಿಸ್ತಾರೆ. ತಮ್ಮ, ತಮ್ಮವರ ಒಳಿತಿಗಾಗಿ ಹತ್ತು ಹಲವು …
Read More »ಹೆಚ್ಡಿ ಕುಮಾರಸ್ವಾಮಿ ರಕ್ತದಲ್ಲಿ ಹಿಂದೂ ವಿರೋಧಿ ರಕ್ತ ಹರಿಯುತ್ತಿದೆ -ಶ್ರೀರಾಮಸೇನೆ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ
ಕಲಬುರಗಿ: ಹಿಂದೂ ಸಂಘಟನೆಗಳ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ. ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಹಿಂದೆ ದೇವಗೌಡರು ಹಿಂದೂ ಕುಟುಂಬದಲ್ಲಿ ಹುಟ್ಟಿದ್ದೆ ತಪ್ಪು ಅಂದಿದ್ದರು. ಮುಂದಿನ ಜನ್ಮದಲ್ಲಿ ಮುಸ್ಲಿಂ ಕುಟುಂಬದಲ್ಲಿ ಹುಟ್ಟೋದಾಗಿ ಹೇಳಿದ್ದರು. ಇಡೀ ಕುಟುಂಬದಲ್ಲಿ ಹಿಂದೂ ವಿರೋಧಿ ರಕ್ತ ಹರಿಯುತ್ತಿದೆ. ಹೀಗೆ …
Read More »ಬಜೆಟ್‍ನಲ್ಲಿ ಮಂಡಿಸಿದ ಎಲ್ಲ ಕಾರ್ಯಕ್ರಮಗಳಿಗೆ ಹಣ ಒದಗಿಸಲು ಬದ್ಧ: ಸದನದಲ್ಲಿ ಸಿಎಂ ಬೊಮ್ಮಾಯಿ ಭರವಸೆ
2021-22ರಲ್ಲಿ 5 ಸಾವಿರ ಕೋಟಿ ಕಡಿಮೆ ಇತ್ತು. 2022-23ರ ಬಜೆಟ್‍ನ ಒಟ್ಟು ಗಾತ್ರ 2 ಲಕ್ಷ 65 ಸಾವಿರದ 720 ಕೋಟಿ. ಇದು ಹಿಂದಿನ ಬಜೆಟ್‍ಗಿಂತ ಶೇ.7.9ರಷ್ಟು ಹೆಚ್ಚಾಗಿದೆ ಎಂದು ವಿಧಾನಸಭೆ ಸದನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈ ಬಾರಿ ಬಜೆಟ್ ಗಾತ್ರ ಕಡಿಮೆ ಮಾಡಬೇಕಾಗುತ್ತದೆ ಎಂದು ನಮ್ಮ ಅಧಿಕಾರಿಗಳು ಹೇಳಿದ್ದರು. ಆದರೆ ಬಜೆಟ್ ಗಾತ್ರ ಕಡಿಮೆ ಮಾಡಿದ್ರೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ನಾವು …
Read More »ಮಗುವಿನಂಥ ಮನಸ್ಸು.. ತೊಟ್ಟಿಲಲ್ಲಿ ಮಲಗಿ ಮಗುವಾದ ‘ದೊಡ್ಮನೆ’ ಶಿವಣ್ಣ..!
ಸರಳ, ಸಜ್ಜನಿಕೆ, ಸ್ನೇಹ ಜೀವಿ, ಮಗು ಥರಾ ಮನಸ್ಸಿನ ಶಿವಣ್ಣ ಮಕ್ಕಳ ಜೊತೆ ಅಕ್ಷರಶಃ ಮಗುವಾಗಿ ಬಿಡ್ತಾರೆ.. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಶಿವಣ್ಣರಿಗೆ ಸಂಬಂಧಿಸಿದ ವಿಡಿಯೋ ಒಂದು ಭಾರೀ ವೈರಲ್ ಆಗ್ತಿದೆ. ಸಂಬಂಧಿಕರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ತೆಗೆದ ಫೋಟೋ ಹಾಗೂ ವಿಡಿಯೋಗಳು ಇವು ಎನ್ನಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಶಿವಣ್ಣ, ತೊಟ್ಟಿಲಲ್ಲಿ ಮಲಗಿಕೊಂಡಿದ್ದಾರೆ. ಕಾಲು ಮೇಲೆ ಕಾಲು ಹಾಕಿ ಮಲಗಿ, ಒಂದು ಕೈಯನ್ನ ತಲೆ ದಿಂಬಾಗಿ ಇಟ್ಟುಕೊಂಡು …
Read More »
Laxmi News 24×7