Breaking News

Uncategorized

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1 ಕೋಟಿ ರೂ.ವರೆಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ

 ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4 ರಷ್ಟು ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು. ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಪ್, ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಟ 1 ಕೋಟಿ ರೂ. ವರೆಗೆ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ …

Read More »

ಮಾತು ಕೊಟ್ಟ 15 ದಿನದಲ್ಲಿ ಬೇಡಿಕೆ ಈಡೇರಿಸಿದ್ದಾರೆ:

ಬೆಳಗಾವಿ, : ಉತ್ತರ ಕರ್ನಾಟಕದ ಜನರ ಬಹು ದಿನಗಳ ಬೇಡಿಕೆಯನ್ನ ರಾಜ್ಯ ಸರ್ಕಾರ ಇಂದು ಈಡೇರಿಸಿದೆ. ಬೆಳಗಾವಿ ‌ವಿಭಾಗವನ್ನು ಮುಂಬಯಿ ಕರ್ನಾಟಕ (Mumbai Karnataka) ಎಂದು ಕರೆಯಲಾಗುತ್ತಿತ್ತು. ಇದು ದಾಸ್ಯದ ಸಂಕೇತವಾಗಿದ್ದು ಬದಲಾವಣೆ ಮಾಡಿ ಕಿತ್ತೂರು ಕರ್ನಾಟಕ (Kittur Karnataka) ಎಂದು ಘೋಷಣೆ ಮಾಡಬೇಕು ಎಂಬ ಬೇಡಿಕೆ ಇತ್ತು. ಕಳೆದ ಅನೇಕ ವರ್ಷಗಳಿಂದ ಈ ಬಗ್ಗೆ ಸರ್ಕಾರ ಗಮನವನ್ನು ಕನ್ನಡಪರ ಹೋರಾಟಗಾರರು ಸೆಳೆದಿದ್ದರು. ಆದರೆ ಈ ವರೆಗೆ ಸರ್ಕಾರಗಳು ಗಮನ ಹರಿಸಿರಲಿಲ್ಲ. …

Read More »

ಮುನ್ಯಾಳ -ರಂಗಾಪೂರ ಸಮುದಾಯ ಭವನ ನಿರ್ಮಾಣಕ್ಕೆ ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದಾನ ಮತ್ತು ಧರ್ಮಗಳಿಂದ ನಡೆಯುವ ’ಸಾಹುಕಾರ್’ ಎಂದು ಈ ನಾಡಿನಲ್ಲಿ ಗುರುತಿಸಿಕೊಂಡಿರುವ ಅಪರೂಪದ ರಾಜಕಾರಣಿಯಾಗಿದ್ದಾರೆ ಎಂದು ಶ್ರೀಶೈಲ್ ಮಹಾಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಶ್ಲಾಘನೆ ವ್ಯಕ್ತಪಡಿಸಿದರು. ಭಾನುವಾರ ಸಂಜೆ ಮೂಡಲಗಿ ತಾಲ್ಲೂಕಿನ ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ ಮಠದ ಹಣಮಂತ ದೇವರ ಮಂದಿರ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಅಶ್ವಾರೂಢ ಗುರುಬಸವರಾಜ ಅಜ್ಜನವರ ಸರ್ಕಲ್‌ದ ಉದ್ಘಾಟನಾ ಸಮಾರಂಭ ಹಾಗೂ ಧರ್ಮಸಭೆಯ …

Read More »

ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು ಭಾನುವಾರ …

Read More »

ಪುನೀತ್ ಸಮಾಧಿ ಮುಂದೆ ವಿವಾಹಕ್ಕೆ ಒಪ್ಪಿಗೆ ಸೂಚಿಸಿಲ್ಲ : ಅಪ್ಪುಗೆ ಕೆಟ್ಟ ಹೆಸರು ಬರವಾರದು – ನಟ ರಾಘವೇಂದ್ರ ರಾಜ್ ಕುಮಾರ್

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ (Actor Puneet Rajkumar ) ಸಮಾಧಿ ಮುಂದೆ ನಾವು ವಿವಾಹವಾಗುವುದಾಗಿ ಒಂದು ಜೋಡಿ ಬಂದಿತ್ತು. ಆದ್ರೇ ನಾವು ನಿಮ್ಮ ತಂದೆ-ತಾಯಿಗಳೊಂದಿಗೆ ಬಂದ್ರೆ ಮಾತ್ರ ವಿವಾಹಕ್ಕೆ ಒಪ್ಪಿಗೆ ಸೂಚಿಸೋದಾಗಿ ತಿಳಿಸಿದ್ದೇನೆ. ಅಪ್ಪುವಿಗೆ ಕೆಟ್ಟ ಹೆಸರು ಬರಬಾರದು ಎಂದು ನಟ ರಾಘವೇಂದ್ರ ರಾಜ್ ಕುಮಾರ್ ( Actor Raghavendra Rajkumar ) ತಿಳಿಸಿದ್ದಾರೆ. ಈ ಕುರಿತಂತೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ಪುನೀತ್ …

Read More »

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳೀನ್‍ಕುಮಾರ್ ಕಟೀಲ್ ಎತ್ತಂಗಡಿ..!?

ಬೆಂಗಳೂರು,ನ.6- ನಿರೀಕ್ಷಿತ ಮಟ್ಟದಲ್ಲಿ ಪಕ್ಷ ಸಂಘಟಿಸುವಲ್ಲಿ ವಿಫಲ, ಉಪಚುನಾವಣೆ ಹಿನ್ನಡೆ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸೋತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಸ್ಥಾನ ಬದಲಾಗಿದೆ ಎಂಬ ವದಂತಿ ಹಬ್ಬಿದೆ. ಇದೇ 9ರಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕೋರ್ ಕಮಿಟಿ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ನಡೆದ ಎರಡು ವಿಧಾನಸಭಾ …

Read More »

ಪುನೀತ್ ರಾಜ್ ಕುಮಾರ್ ಗೆ `ಪದ್ಮ ಪ್ರಶಸ್ತಿ’ : ಅಗತ್ಯ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಪುನೀತ್ ಗೆ ಪದ್ಮ ಪ್ರಶಸ್ತಿ ನೀಡುವ ಕುರಿತಂತೆ ಅಗತ್ಯ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ …

Read More »

ಮೋದಿಯವರ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ‘ಅಭಿವೃದ್ಧಿಯ ಮಾತುಗಳಿಂದ ದೂರವಿದ್ದು, ಲಕ್ಷಾಂತರ ಕುಟುಂಬಗಳು ಮರದ ಒಲೆ ಹೊತ್ತಿಸಲು ಒತ್ತಾಯಿಸಲ್ಪಟ್ಟಿವೆ. ಮೋದಿ ಅವರ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ ಮತ್ತು ಬ್ರೇಕ್ ಸಹ ವಿಫಲವಾಗಿದೆ’ ಎಂದು ರಾಹುಲ್ ಗಾಂಧಿ ಇಂದು ಟ್ವೀಟ್ ಮಾಡಿದ್ದಾರೆ.   ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ LPG ಸಿಲಿಂಡರ್‌ಗಳ ಬೆಲೆ ಏರಿಕೆಯ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬೆಲೆ ಏರಿಕೆಯಿಂದಾಗಿ ಗ್ರಾಮೀಣ ಪ್ರದೇಶದ 42 ಪ್ರತಿಶತ ಜನರು ಅಡುಗೆ ಆಹಾರಕ್ಕಾಗಿ …

Read More »

ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್, ಚಿನ್ನದ ಚೈನ್ ಕಿತ್ತುಕೊಂಡು ಪರಾರಿ

ಶಿವಮೊಗ್ಗ, ನವೆಂಬರ್ 6: ಶನಿವಾರ ಬೆಳಗಿನ ಜಾವ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿ ಮೂರು ಕಡೆ ದರೋಡೆ ಮಾಡಿದ್ದಾರೆ. ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್, ಚಿನ್ನದ ಚೈನ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ.   ಘಟನೆ 1: ಬಸ್ ಇಳಿದವರ ಮೇಲೆ ದಾಳಿ ಬೆಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆಗಮಿಸಿದ ಪರಶುರಾಮ ಎಂಬುವವರು ಬೆಳಗ್ಗೆ 4 …

Read More »

ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಕೆಲವು ದಲಿತ ನಾಯಕರು ಹೊಟ್ಟೆಪಾಡಿಗೆ ಬಿಜೆಪಿ ಸೇರಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮೂದಲಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಘಟಕದವರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಸಿದ್ದರಾಮಯ್ಯ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.ಮುಖಂಡರಾದ ದೀಪಕ್ ದೊಡ್ಡಯ್ಯ, ಈಶ್ವರಹಳ್ಳಿ ಮಹೇಶ್, ಪುಷ್ಪರಾಜ್, ಸುಧೀರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Read More »