ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಕಮಿಟಿಯ ಅಲ್ಪಸಂಖ್ಯಾತರ ಘಟಕ ವತಿಯಿಂದ ಶಹಿದ ಭಗತ ಸಿಂಗ ಅವರ ಪುಣ್ಯ ತಿಥಿಯ ದಿವಸ ಶ್ರದ್ಧಾಜಂಲಿಯನ್ನು ಸಮರ್ಪಿಸಲಾಯಿತು. ಹೌದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಗತ್ ಸಿಂಗ್‍ರವರ ಪುಣ್ಯತಿಥಿಯ ಪ್ರಯುಕ್ತ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಭಗತ್ ಸಿಂಗ್‍ರ ಭಾವಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ಗೌರವ ನಮನ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿನಯ ನಾವಲಗಟ್ಟಿ, ಜಿಲ್ಲೆಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ …
Read More »ಇಮ್ರಾನ್ ಖಾನ್ಗೆ ಇಂದು ಅಗ್ನಿ ಪರೀಕ್ಷೆ -ಟಾಪ್ 10 ಸುದ್ದಿಗಳ ಕ್ವಿಕ್ರೌಂಡಪ್
2ನೇ ಅವಧಿಗೆ ಸಿಎಂ ಆಗಿ ಯೋಗಿ ಇಂದು ಪ್ರಮಾಣ ವಚನ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲುವಿನತ್ತ ಮುನ್ನಡೆಸಿದ ಯೋಗಿ ಎರಡನೇ ಅವಧಿಗೆ ಸಿಎಂ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲಖನೌನದಲ್ಲಿ ನಡೆಯಲಿರುವ ಅದ್ದೂರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ಆಡಳಿತದ ಮುಖ್ಯಮಂತ್ರಿಗಳು, ಮುಖೇಶ್ ಅಂಬಾನಿ ಸೇರಿದಂತೆ ಹಲವು ಉದ್ಯಮಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಿಎಂ ಬೊಮ್ಮಾಯಿ …
Read More »ಬಹುನಿರೀಕ್ಷಿತ ಆರ್ಆರ್ಆರ್ ಚಿತ್ರ ರಿಲೀಸ್; ಪಟಾಕಿ ಹೊಡೆದು, ಕೇಕೆ ಹಾಕಿ ಅಭಿಮಾನಿಗಳ ಹರ್ಷೋದ್ಘಾರ
ಬೆಂಗಳೂರು: ಬಹುನಿರೀಕ್ಷಿತ ಆರ್ಆರ್ಆರ್ ಸಿನಿಮಾ (RRR Movie) ರಾಜ್ಯಾದ್ಯಂತ 450 ಥಿಯೇಟರ್ಗಳಲ್ಲಿ ರಿಲೀಸ್ ಆಗಿದೆ. 170ಕ್ಕೂ ಹಚ್ಚು ಸಿಂಗಲ್ ಸ್ಕ್ರೀನ್ ಮತ್ತು 450 ಮಲ್ಟಿಪ್ಲೆಕ್ಸ್ ಸ್ಕ್ರೀನ್‌ಗಳಲ್ಲಿ ಆರ್ಆರ್ಆರ್ ಆರ್ಭಟ ಶುರುವಾಗಿದೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ ಶೋ ಆರಂಭವಾಗಿದ್ದು, ಟಿಕೆಟ್ ಕೂಡ ಸೋಲ್ಡ್ಔಟಾಗಿ, ನಾಳಿನ ಟಿಕೆಟ್ಗೂ ಬೇಡಿಕೆ ಹೆಚ್ಚಾಗಿದೆ. ರಾಮ್‌ಚರಣ್, ಜೂ.ಎನ್‌ಟಿಆರ್ ಮತ್ತು ಆಲಿಯಾ ಭಟ್ ಅಭಿನಯದ, ರಾಜಮೌಳಿ ನಿರ್ದೇಶನದ ಆರ್ಆರ್ಆರ್ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಇದೇ ವೇಳೆ ಜೂ.ಎನ್‌ಟಿಆರ್, ಚರಣ್ ಅಭಿಮಾನಿಗಳ …
Read More »ದೇವನಹಳ್ಳಿ: ಸಿಮೆಂಟ್ ಲಾರಿಗಳ ಡಿಕ್ಕಿ, ಚಾಲಕ ಸಜೀವ ದಹನ
ಬೆಂಗಳೂರು: ಎರಡು ಸಿಮೆಂಟ್ ಲಾರಿಗಳು ಡಿಕ್ಕಿಯಾಗಿ, ಹೊತ್ತಿಕೊಂಡ ಬೆಂಕಿಯಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ಘಟನೆ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ. ಭುಕ್ತಿ ಡಾಬಾ ಬಳಿ ಸಂಭವಿಸಿದ ಅಪಘಾತದಲ್ಲಿ ಎರಡೂ ಸಿಮೆಂಟ್ ಸಾಗಣೆ ಲಾರಿಗಳು ಹೊತ್ತಿ ಉರಿದವು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಓರ್ವ ಚಾಲಕನನ್ನು ಸ್ಥಳೀಯರು ರಕ್ಷಿಸಿದರು. ಆದರೆ ಮತ್ತೋರ್ವ ಚಾಲಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟ. ಅಪಘಾತ ಮತ್ತು ಬೆಂಕಿಯಿಂದಾಗಿ ರಾಷ್ಟ್ರೀಯ …
Read More »ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ
ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ ಬೆಳಗಾವಿ: ಹಿಂದೂ ದೇವಸ್ಥಾನಗಳಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿರುವುದು ಬಿಜೆಪಿ ಹಿಡನ್ ಅಜೆಂಡಾ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ದೇಶ. ವಿವಿಧ ಜಾತಿ, ಧರ್ಮ ಕೂಡಿದ ದೇಶ. ಎಲ್ಲರೊಂದಿಗೂ ಸಂಬಂಧ ಇರುತ್ತದೆ. ಮುಸ್ಲಿಮ್‌ರಿಗೆ ವ್ಯಾಪಾರ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯಗಳು …
Read More »ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ
ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ ಈ ಬಾರಿ ಕೋವಿಡ್ ಲಕ್ಷಣಗಳು ಕಡೆಮೇ ಆದರೂ ಸಹ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ತಾಲ್ಲೂಕು ಆಡಳಿತ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ಕೊಠಡಿಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಿದ್ದಾರೆ, ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣ ಅಧಿಕಾರಿ ಬಿ ಇ ಒ ಅವರು ನೇತೃತ್ವದಲ್ಲಿ ಪರೀಕ್ಷೆ ಬರೆಯುವ ಮಕ್ಕಳಿಗೆ ಯಾವುದೇ ರೀತಿಯ …
Read More »‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕಾಗಿ ‘ಜೇಮ್ಸ್’ ಎತ್ತಂಗಡಿ ಆರೋಪ; ಸಿಎಂ ಭೇಟಿಯಾದ ಶಿವಣ್ಣ
ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿಯಾದರು. ಈ ವೇಳೆ ಜೇಮ್ಸ್ ಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ, ನಿರ್ಮಾಪಕ ಶ್ರೀಕಾಂತ್ ಕೂಡ ಹಾಜರಿದ್ದರು.
Read More »ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ‘Robo Teacher’!
ಬೆಂಗಳೂರು: ಪಾಠ-ಪ್ರವಚನಗಳಲ್ಲಿ ಬೋಧಕರಿಗೂ (Teachers) ವಿದ್ಯಾರ್ಥಿಗಳಿಗೂ (Students) ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ (Eagle Robo) ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬೆಂಗಳೂರಿನ (Bengaluru) ಮಲ್ಲೇಶ್ವರಂನ (Malleshwaram)13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ (Higher Education Minister) ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ …
Read More »ಟಿಂಬರ್ ಡಿಪೋದಲ್ಲಿ ಭಾರಿ ಅಗ್ನಿ ಅವಘಡ.. 11 ಜನರ ಸಜೀವ ದಹನ: ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ
ಟಿಂಬರ್ ಡಿಪೋದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 11 ಜನರ ಸಜೀವ ದಹನಗೊಂಡಿರುವ ಘಟನೆ ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ನೀಡುವುದಾಗಿ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಘೋಷಣೆ ಮಾಡಿದ್ದಾರೆ. ಹೈದರಾಬಾದ್: ಇಲ್ಲಿನ ಸಿಕಂದರಾಬಾದ್‌ನ ಬೋಯಗುಡದಲ್ಲಿರುವ ಟಿಂಬರ್ ಡಿಪೋದಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, 11 ಜನರು ಸಜೀವ ದಹನವಾಗಿರುವ ದರ್ಘಟನೆ ಬೆಳಕಿಗೆ ಬಂದಿದೆ. ಟಿಂಬರ್ ಡಿಪೋದಲ್ಲಿ ಭಾರೀ ಬೆಂಕಿ …
Read More »ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ
ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ …
Read More »
Laxmi News 24×7