Breaking News

Uncategorized

4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್‍ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ ರೈತರ ಮಕ್ಕಳಿಗೆ 4.50 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.     ಎನ್‍ಎಂಪಿ ಘಟಕ ಸ್ಥಾಪನೆಗೆ ಬೆಳಗಾವಿ ಮಹಾ ನಗರದಲ್ಲಿ …

Read More »

ಕೋವಿಡ್ ಕಿಟ್ಗಳ ಹಸ್ತಾಂತರ….

ಮೂಡಲಗಿ: ತಾಲೂಕು ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಯುಎಸ್ ಎಐಡಿ ಅನುದಾನದೊಂದಿಗೆ ಕೆಎಚ್ ಪಿಟಿ ಸಂಸ್ಥೆಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರವನ್ನು ತಾಲೂಕು ಪಾಚಾಯಿತಿ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ತಾಲೂಕಿನ 2 ಗ್ರಾಮ ಪಂಚಾಯಿತಿ ಪಂಚಾಯಿತಿ ಅಧ್ಯಕ್ಷ ಹಾಗೂ ಕಾರ್ಯಕರ್ತೆಯರಿಗೆ ಕೋಡ್ ನಿರ್ವಹಣೆಯ ತದಬೇತಿ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು. ತಾಲೂಕಾ ಸಹಾಯಕ ನಿರ್ದೇಶಕ ಸಂಗಮೇಶ ದೊಡ್ಡವರ ಮತ್ತು ಚಿಕ್ಕ ಮಕ್ಕಳ ತಜ್ಞರಾದ ಡಾ. ಜಗದೀಶ ಜಿಂಗಿ ಅವರು ಕೊಪಿಡ್ …

Read More »

ಹಿಂದೂ ದೇವರ ಆಕ್ಷೇಪಾರ್ಹ ಚಿತ್ರ ಕೂಡಲೇ ತೆಗೆದು ಹಾಕಿ: ಹೈಕೋರ್ಟ್ ಟ್ವಿಟರ್ ಗೆ ತಾಕೀತು

ನವದೆಹಲಿ: ಪ್ರಮುಖ ಸಾಮಾಜಿಕ ಜಾಲತಾಣವಾಗಿರು ಟ್ವಿಟರ್ ನಿಂದ ಹಿಂದೂ ದೇವತೆಗೆ ಸಂಬಂಧಿಸಿದ ಆಕ್ಷೇಪಾರ್ಹ ಚಿತ್ರಗಳನ್ನು ತೆಗೆದು ಹಾಕುವಂತೆ ದೆಹಲಿ ಹೈಕೋರ್ಟ್ ತಾಕೀತು ಮಾಡಿದೆ. ಸಾಮಾನ್ಯ ಜನರ ಭಾವನೆಗಳನ್ನು ಟ್ವಿಟರ್ ಗೌರವಿಸಬೇಕು. ಸಾಮಾನ್ಯ ಜನರ ಭಾವನೆಗಳಿಗೆ ಪ್ರಾಮುಖ್ಯತೆ ನೀಡಬೇಕು. ಈ ರೀತಿ ಆಕ್ಷೇಪಾರ್ಹ ಫೋಟೋಗಳನ್ನು ಏಕೆ ಹಾಕುತ್ತೀರಿ? ಇದನ್ನು ಕೂಡಲೇ ತೆಗೆದುಹಾಕಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್, ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ ಹೇಳಿದೆ. ಟ್ವಿಟ್ಟರ್ ಉತ್ತಮವಾಗಿ ಕೆಲಸ ಮಾಡುತ್ತಿದೆ. …

Read More »

ಪುನೀತ್ ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಸಾಧ್ಯವಾಗಲಿಲ್ಲ: ಬೊಮ್ಮಾಯಿ

ಬೆಂಗಳೂರು: ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದ ನಟ ಪುನೀತ್ ರಾಜ್​ಕುಮಾರ್ ನಿಧನ ನಾಡಿಗೆ ತುಂಬಲಾರದ ನಷ್ಟ. ಈ ಸುದ್ದಿ ನಮಗೆ ಆಘಾತ ತಂದಿದೆ. ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು. ನಟ ಪುನೀತ್ ರಾಜ್​ಕುಮಾರ್ ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದರು. ನಿನ್ನೆಯಷ್ಟೇ ಕರೆ ಮಾಡಿ ಮಾತನಾಡಿದ್ದರು. ಇಂದು ನನ್ನ ಭೇಟಿಗೆ ಸಮಯ …

Read More »

ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ರೂಲ್ಸ್; ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು

ಬೆಂಗಳೂರು: ಪ್ರತಿಭಟನೆ ವಿಚಾರವಾಗಿ ಸುಖಾಸುಮ್ಮನೆ ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಿ. ಏಕೆಂದರೆ ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ನಿಯಮವನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ಪ್ರತಿಭಟನೆ, ಜಾಥಾಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಹಿನ್ನೆಲೆ ಹೈಕೋರ್ಟ್ ಸೂಚನೆ ನೀಡಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಪೊಲೀಸರು ಕರ್ನಾಟಕ ಪೊಲೀಸ್ ಌಕ್ಟ್ ಅಡಿ ನಿಬಂಧನೆ ವಿಧಿಸಲು ಸಿದ್ಧತೆ ನಡೆಸಿದೆ. ಸರ್ಕಾರದಿಂದ ಅನುಮೋದನೆ ಪಡೆಯಲು ನಗರ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದ್ದು, ಯಾವುದೇ ಪ್ರತಿಭಟನೆಗೆ ಕೇವಲ …

Read More »

ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು

ಹಾಸನ: ಎರಡು ವರ್ಷಗಳ ಬಳಿಕ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಭಾಗ್ಯ ದೊರೆತಿದೆ. ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಇಂದು (ಅಕ್ಟೋಬರ್ 29) ಆರಂಭವಾಗಿದ್ದು, ಬೆಳಿಗ್ಗೆಯೇ ದೇವಾಲಯ ದತ್ತ ಸಹಸ್ರಾರು ಭಕ್ತರು ಲಗ್ಗೆಯಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಹಾಸನಾಂಬೆಯ ದರ್ಶನ ಪಡೆಯುತ್ತಿದ್ದಾರೆ. ನೆನ್ನೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ …

Read More »

BREAKING ಮತ್ತೆ ಏರಿದ ಪೆಟ್ರೋಲ್​ ಬೆಲೆ; ರಾಜ್ಯದಲ್ಲಿ ಎಷ್ಟಾಗಿದೆ ಇಂಧನ ದರ?

ಬೆಂಗಳೂರು: ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಇಂದು ಕೂಡ ಪೆಟ್ರೋಲ್​ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ನೆನ್ನೆ ಪೆಟ್ರೋಲ್-ಡೀಸೆಲ್​ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 35 ಪೈಸೆ ಮತ್ತು ಲೀಟರ್ ಡೀಸೆಲ್​ ದರದಲ್ಲಿ 36 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ …

Read More »

ಶಿವಣ್ಣ ಅಭಿಮಾನಿಗಳಿಗೆ ರಸದೌತಣ – ವಿಶ್ವದಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಮೇಲೆ ಭಜರಂಗಿ -2

ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ಭಜರಂಗಿ 2 ಇಂದು 375 ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ವಿಶ್ವದಾದ್ಯಂತ 1000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭಜರಂಗಿ ಹವಾ ಕ್ರಿಯೆಟ್ ಮಾಡಲಿದೆ. ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಬೆಳಗ್ಗೆ 5 ಗಂಟೆಗೆ ಅಭಿಮಾನಿಗಳಿಗಾಗಿ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಮೊದಲ ಶೋ ಗಾಗಿ ತುದಿಗಾಲಲ್ಲಿ ಅಭಿಮಾನಿಗಳು ನಿಂತಿದ್ದರು. ತೆರೆ ಮೇಲೆ ಶಿವಣ್ಣನನ್ನ ನೋಡುತಿದ್ದಂತೆ ಹುಚ್ಚೆದ್ದು ಕುಣಿದ ಅಭಿಮಾನಿಗಳು, ಸ್ಕ್ರೀನ್ ಮುಂದೆ ಹೂ ಎರಚಿ …

Read More »

ಹಾನಗಲ್, ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿಗೆ ಈಗಲೇ ಭಯ ಶುರುವಾಗಿದೆ: ಸತೀಶ ಜಾರಕಿಹೊಳಿ 

ಸಿಂಧಗಿ ಚುನಾವಣೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ. @Laxminews Gokak ಗೋಕಾಕ: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಹೀಗಾಗಿ, ಬಿಜೆಪಿಗೆ ಈಗಲೇ ಭಯ ಶುರುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಗೃಹಕಚೇರಿಯಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದ ಮುಖ್ಯಮಂತ್ರಿಗಳು ಹಾನಗಲ್ ನಲ್ಲಿ ಬೀಡುಬಿಟ್ಟು ಪ್ರಚಾರ ನಡೆಸಿದ್ದಾರೆ ಎಂದರು. ಉಪಚುನಾವಣೆ ಎಂದರೆ ಹಾಗೆ. …

Read More »

ಆರ್ಯನ್ ಖಾನ್​ ಇಂದು ಬಿಡುಗಡೆ ಆಗೋದು ಡೌಟ್​; ‘ಪಿಕ್ಚರ್ ಅಭಿ ಬಾಕಿ ಹೈ’ ಎಂದ ನವಾಬ್ ಮಲಿಕ್..!

ನವದೆಹಲಿ: ಬಾಲಿವುಡ್​ ಐಷಾರಾಮಿ ಡ್ರಗ್ಸ್​ ಕೇಸ್​ನಲ್ಲಿ ಜೈಲು ಪಾಲಾಗಿದ್ದ ಆರ್ಯನ್​ ಖಾನ್​ಗೆ ಕೊನೆಗೂ ಬಿಡುಗಡೆಯ ಭಾಗ್ಯ ಸಿಕ್ಕಿದೆ. ನಿನ್ನೆ ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠ ಜಾಮೀನು ನೀಡುವ ಮೂಲಕ, ​ಆರ್ಯನ್ ಖಾನ್​ನ 22 ದಿನಗಳ ಜೈಲು ವಾಸದಿಂದ ಮುಕ್ತಗೊಳಿಸಿದೆ. ಆದ್ರೆ ರಿಲೀಸ್​ ಭಾಗ್ಯ ಮಾತ್ರ ಇವತ್ತೂ ಸಿಗೋದು ಡೌಟ್​. ಡ್ರಗ್ಸ್​ ಕೇಸ್​​ನಲ್ಲಿ ಅಂದರ್​​ ಆಗಿದ್ದ ಆರ್ಯನ್​ಗೆ ಬೇಲ್​​ 23 ದಿನಗಳ ಬಳಿಕ ಜೈಲು ಹಕ್ಕಿಗೆ ಬಿಡುಗಡೆಯ ಭಾಗ್ಯ ಬಾಲಿವುಡ್​ …

Read More »