Breaking News

Uncategorized

ಶವದ ಹೆಬ್ಬೆಟ್ಟು ಒತ್ತಿಸಿಕೊಂಡವರಿಗೆ ಅಟಕಾಯಿಸಿಕೊಂಡ ದುರಾದೃಷ್ಟ; ಪೊಲೀಸರಿಂದ FIR​ ದಾಖಲು

ಮೈಸೂರು: ಆಸ್ತಿ ಕಬಳಿಕೆಗಾಗಿ ಮೃತ ವೃದ್ದೆಯ ಹೆಬ್ಬೆಟ್ಟು ಗುರುತು ಪಡೆದ ಪ್ರಕರಣ ಸಂಬಂಧಿಸಿ ಹೆಬ್ಬೆಟ್ಟು ಸಹಿ ಪಡೆದದವರ ಮೇಲೆ ವಿದ್ಯಾರಣ್ಯಪುರಂನಲ್ಲಿ ಠಾಣೆಯಲ್ಲಿ FIR ದಾಖಲಾಗಿದೆ. ಶ್ರೀರಾಂಪುರ ನಿವಾಸಿ ಜಯಮ್ಮ ನವೆಂಬರ್ 16 ರಂದು ಮೃತಪಟ್ಟಿದ್ದರು. ಅಂತಿಮ ದರ್ಶನ ಪಡೆಯಲು ಸಂಬಂಧಿಕರಾದ ಕಾವ್ಯ ತೆರಳಿದ್ದಾಗ ಮೃತ ಜಯಮ್ಮರ ಅಕ್ಕನ ಮಗ ಸುರೇಶ ಎಂಬುವರು 6-7 ಬೆಲೆಯುಳ್ಳ ಭದ್ರತಾ ಪತ್ರಗಳಿಗೆ ಶವದ ಹೆಬ್ಬೆಟ್ಟಿನ ಗುರುತು ಒತ್ತಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದಾಗ ನಿನಗೆ …

Read More »

ಲೋಕಸಭೆ ಬೆನ್ನಲ್ಲೇ ರಾಜ್ಯಸಭೆಯಲ್ಲೂ ವಿವಾದಿತ 3 ಕೃಷಿ ಕಾಯ್ದೆ ವಾಪಸ್ -​ಸಂಭ್ರಮದಲ್ಲಿ ಮುಳುಗಿದ ರೈತರು 

ನವದೆಹಲಿ: ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ಕೊನೆಗೂ ಇಂದಿನ ರಾಜ್ಯಸಭೆ ಸಂಸತ್ ಕಲಾಪದಲ್ಲಿ ವಾಪಸ್ ಪಡೆಯಲಾಗಿದೆ. ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದಂತೆ ಈಗ ಕಲಾಪದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​​, ವಿವಾದಿತ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವ ಸಂಬಂಧ ಬಿಲ್ ಮಂಡಿಸಿದರು. ರೈತರ ಉತ್ಪಾದನೆ ವ್ಯಾಪಾರ …

Read More »

ಸಿದ್ದುಗೆ ಸಿಎಂ ಕುರ್ಚಿ ಬಿಟ್ಟು ಬೇರೆ ಕಡೆ ಕೂತರೆ ಮುಳ್ಳು ಚುಚ್ಚಿದಂಗೆ : ಸಚಿವ ಈಶ್ವರಪ್ಪ ವ್ಯಂಗ್ಯ

ಬಾಗಲಕೋಟೆ : ಸಿದ್ದರಾಮಯ್ಯಗೆ ಸಿಎಂ ಖುರ್ಚಿ ಕಳೆದುಕೊಂಡ ಬಳಿಕ ಯಾವುದೇ ಖುರ್ಚಿ ಮೇಲೆ ಕುಳಿತರೂ ಮುಳ್ಳು ಚುಚ್ಚಿದ ಹಾಗೇ ಆಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನನೇ ಬೇಕು ಅಂತಾರೆ. ಅದೊಂದೇ ಅವರಿಗೆ ಮೆತ್ತಗೆ ಇರೋ ಖುರ್ಚಿ ಅನಿಸುತ್ತದೆ. ಆದಷ್ಟು ಬೇಗ ಮತ್ತೆ ಮುಖ್ಯಮಂತ್ರಿ ಆಗಬೇಕು ಅನ್ನೋ ಭ್ರಮೆಯಲ್ಲಿದ್ದಾರೆ. ನಾನೇ ಸಿಎಂ ಅಂತಾ ಹೇಳಿಕೊಳ್ಳುತ್ತಾರೆ. ನೀವು ಹೇಳ ಕೂಡದು …

Read More »

ಅಂತರರಾಷ್ಟ್ರೀಯ ವಿಮಾನಯಾನ ನಿಲ್ಲಿಸುವಂತೆ ಪ್ರಧಾನಿಗೆ ಪತ್ರ ಬರೆದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್

ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಕೋವಿಡ್-19 ಪ್ರಕರಣಗಳ ಹೆಚ್ಚಳವನ್ನು ತಡೆಯಲು ಅಂತರರಾಷ್ಟ್ರೀಯ ವಿಮಾನಯಾನವನ್ನು ನಿಲ್ಲಿಸುವಂತೆ ವಿನಂತಿಸಿದ್ದಾರೆ. WHO ಇತ್ತೀಚೆಗೆ ಗುರುತಿಸಿರುವ ಕಾಳಜಿಯ ಹೊಸ ರೂಪಾಂತರವನ್ನು ಭಾರತಕ್ಕೆ ಪ್ರವೇಶಿಸದಂತೆ ತಡೆಯಲು ನಾವು ಎಲ್ಲವನ್ನೂ ಮಾಡಬೇಕು. ನಮ್ಮ ದೇಶ ಕಳೆದ ಒಂದೂವರೆ ವರ್ಷಗಳಿಂದ ಕರೋನಾ ವಿರುದ್ಧ ಕಠಿಣ ಹೋರಾಟ ನಡೆಸಿದೆ. ಬಹಳ ಕಷ್ಟದಿಂದ ಮತ್ತು ನಮ್ಮ ಲಕ್ಷಾಂತರ ಕೋವಿಡ್ ಯೋಧರ ನಿಸ್ವಾರ್ಥ …

Read More »

ಕೊಣ್ಣೂರು (ಗೋಕಾಕ): ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ; ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ

      ಗೋಕಾಕ:  ಕೊಣ್ಣೂರು ಶಾಲಾಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರಿಗೆ  ಶಾಲಾ ಪ್ರಾಚಾರ್ಯರು ಮನವಿ ಮಾಡಿಕೊಂಡ  ಹಿನ್ನೆಲೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರ ಸೂಚನೆ ಮೇರಿಗೆ  ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಇಂದು ಶಾಲೆಯ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ತಾಲ್ಲೂಕಿನ ಕೊಣ್ಣೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 245 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಬಹು ವರ್ಷಗಳಿಂದ ಶಾಲೆಯೂ ಸುಣ್ಣ-ಬಣ್ಣ ಮಾಡಿಲ್ಲ,  ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ …

Read More »

ದಿಢೀರ್ ಕುಸಿತ ಕಂಡ ಟೊಮೇಟೊ ದರ!

ಕೋಲಾರ : ಟೊಮೇಟೊ ದರ ಇದೀಗ ಕುಸಿತ ಕಂಡಿದೆ. ಮೂರ್ನಾಲ್ಕು ದಿನಗಳಿಂದ ಕೋಲಾರ ಮಾರುಕಟ್ಟೆಯಲ್ಲಿ ದರ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ. ದರ ಏರಿಕೆಯಾಗುತ್ತಿದ್ದಂತೆ ಮಾರುಕಟ್ಟೆಗೆ ಟೊಮೇಟೊ ಆವಕ ಹೆಚ್ಚಾಗಿದೆ. ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಸ್ಥಳೀಯ ರೈತರು ಹೊಲದಲ್ಲಿದ್ದ ಟೊಮೇಟೊ ಕೊಯ್ಲು ಮಾಡಿ ಮಾರುಕಟ್ಟೆಗೆ ತರಲಾರಂಭಿಸಿದ್ದಾರೆ. ಇದರ ಜೊತೆಗೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮತ್ತು ನಾಸಿಕ್ನಿಂದಲೂ ರಾಜ್ಯದ ಮಾರುಕಟ್ಟೆಗೆ ಆವಕವಾಗುತ್ತಿದೆ. ಇದರಿಂದಾಗಿ ದರ ಕುಸಿತವಾಗುತ್ತಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಟೊಮೇಟೊ ಬೆಳೆಗೆ ತೀವ್ರ ಹಾನಿಯಾಗಿತ್ತು. …

Read More »

ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು. ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ …

Read More »

ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ; ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್​ನಲ್ಲಿ ಹೈ ಅಲರ್ಟ್

ಬೆಂಗಳೂರು: ದೇಶದಲ್ಲೆಡೆ ಕೊರೊನಾ ರೂಪಾಂತರಿ ಒಮಿಕ್ರಾನ್ (omicron) ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಹೀಗಾಗಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೊಸ ರೂಪಾಂತರಿ ಕೊರೊನಾ ಹರಡದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. 10 ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ‌ ಹದ್ದಿನ ಕಣ್ಣು ಇಡಲಾಗಿದೆ. …

Read More »

ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುಣೆ: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಆಂಜಿಯೋಗ್ರಫಿ ಮಾಡಲಾಗಿದೆ ಎಂದು ಡಾ. ಗುರುವಾರ ರೂಬಿ ಹಾಲ್ ಕ್ಲಿನಿಕ್‌ನಲ್ಲಿ ವೈದ್ಯಕೀಯ ಅಧೀಕ್ಷಕ ಅವಧೂತ್ ಬೋದಮವಾಡ್ ಹೇಳಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 84 ವರ್ಷದ ಅಣ್ಣಾ ಹಜಾರೆ ಅವರನ್ನ ಆಸ್ಪತ್ರೆಗೆ …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ

ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …

Read More »