Breaking News

Uncategorized

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಮನೆ ಮನೆಗೆ ಪಡಿತರ ವಿತರಣೆ ಕುರಿತು ನಾಳೆ ಮಹತ್ವದ ಸಭೆ

ಬೆಂಗಳೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಮನೆ ಮನೆಗೆ ಪಡಿತರ ತಲುಪಿಸುವ ವ್ಯವಸ್ಥೆ ಜಾರಿಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅ. 28 ರಂದು ನಡೆಯುವ ಸಭೆಯಲ್ಲಿ ಮನೆ ಮನೆಗೆ ಪಡಿತರ ತಲುಪಿಸುವ ವ್ಯವಸ್ಥೆ ಜಾರಿಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದ್ದು, ನಿರೀಕ್ಷೆಯಂತೆ ಸಭೆಯಲ್ಲಿ ಒಪ್ಪಿಗೆ ಸಿಕ್ಕರೆ ನವೆಂಬರ್ 1 ರಿಂದಲೇ ಬೆಂಗಳೂರಿನ 28 ವಿಧಾನಸಭಾ …

Read More »

ಸಿಂಧನೂರಿನಲ್ಲಿ ಸಂತೋಷ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ವೃದ್ಧಾ ಶ್ರಮದಲ್ಲಿ ಸರಳ ಹುಟ್ಟುಹಬ್ಬ ಆಚರಣೆ

ಸಿಂಧನೂರು :ನಗರದ ಕುಷ್ಟಗಿ ರಸ್ತೆಯಲ್ಲಿರುವ ಶ್ರೀ ಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂಧ್ಯ ಆಶ್ರಮದಲ್ಲಿ ರಾಯಚೂರು ಜಿಲ್ಲಾ ಜಾರಕಿಹೊಳಿ ಅಭಿಮಾನ ಬಳಗದ ವತಿಯಿಂದ ಕರುನಾಡಿನ ಕಾರುಣ್ಯ ಕಣ್ಮಣಿಗಳು ಕಾರುಣ್ಯ ಕುಟುಂಬದ ನಿರಂತರ ಮಾರ್ಗದರ್ಶಕರು ಕಾರುಣ್ಯ ಕರುಣಾಮಯಿಗಳು ಕಾರುಣ್ಯ ಕುಟುಂಬದ ಯಜಮಾನರಾದಂತಹ ಕರುನಾಡಿನ ಕಾರುಣ್ಯ ಕುಟುಂಬದ ಅಧಿಕಾರಿಗಳಾದ ಸನ್ಮಾನ್ಯ ಶ್ರೀ ರಮೇಶ ಜಾರಕಿಹೊಳಿ ಮಾಜಿ ಸಚಿವರು ಹಾಗೂ ಜನಪ್ರಿಯ ಶಾಸಕರು ಗೋಕಾಕ ವಿಧಾನಸಭಾ ಕ್ಷೇತ್ರ …

Read More »

ಮತ ಹಾಕುವ ಮುನ್ನ ಗ್ಯಾಸ್‌ ಸಿಲಿಂಡರ್‌, ಟ್ರಾಕ್ಟರ್‌ಗೆ ನಮಸ್ಕರಿಸಿ: ಡಿಕೆಶಿ

ವಿಜಯಪುರ: ಸಿಂದಗಿ, ಹಾನಗಲ್‌ ಮತದಾರರು ಮತ ಹಾಕುವ ಮುನ್ನ ಗ್ಯಾಸ್‌ ಸಿಲಿಂಡರ್‌, ಬೈಕ್, ಕಾರು, ಆಟೋ, ಟ್ರಾಕ್ಟರ್‌ಗೆ ನಮಸ್ಕರಿಸಿ ಮತ ಹಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಸಿಂದಗಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಗ್ಯಾಸ್‌ ಸಿಲಿಂಡರ್‌ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಈಗ ನಾನು ಅದನ್ನು ಮತದಾರರಿಗೆ ನೆನಪಿಸಲು ಬಯಸುತ್ತೇನೆ ಎಂದು ಬಿಜೆಪಿಗೆ ತಿರುಗೇಟು …

Read More »

ಪಾಕ್-ಟೀಂ ಇಂಡಿಯಾ ಮ್ಯಾಚ್ ವೀಕ್ಷಣೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಕೊಡಗು: ನಿನ್ನೆ ನಡೆದ ಐಸಿಸಿ ಮೆನ್ಸ್​ ಟಿ 20 ವರ್ಲ್ಡ್​​ಕಪ್​ನಲ್ಲಿ ಟೀಂ ಇಂಡಿಯಾ- ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ನಡೆಯಿತು. ಈ ಮ್ಯಾಚ್​ನಲ್ಲಿ ಟೀಂ ಇಂಡಿಯಾ ಪಾಕ್ ಟೀಂ ಎದುರು ಸೋಲನುಭವಿಸಿತು. ದುರಂತವೆಂದರೆ ಈ ಮ್ಯಾಚ್ ವೀಕ್ಷಣೆ ವೇಳೆ 55 ವರ್ಷದ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಇಂಡಿಯಾ-ಪಾಕಿಸ್ತಾನ್ ಟಿ-20 ಪಂದ್ಯದ ವೇಳೆ ಉದಯ್ ಎಂಬ 55 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉದಯ್ ಅವರು …

Read More »

ವಿಮಾನ ನಿಲ್ದಾಣದಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ಶಾಹಿದ್​ ಕಪೂರ್​ ಪತ್ನಿ

ಶಾಹಿದ್​ ಕಪೂರ್ ಮತ್ತು ಮೀರಾ ರಜಪೂತ್​ ಅವರು ಮಾಲ್ಡೀವ್ಸ್​ ಪ್ರವಾಸಕ್ಕೆ ಹೋಗಿದ್ದರು. ವಾಪಸ್​ ಬರುವಾಗ ಮುಂಬೈ ಏರ್​ಪೋರ್ಟ್​ನಲ್ಲಿ ಮೀರಾ ಧರಿಸಿದ್ದ ಡ್ರೆಸ್​ ಎಲ್ಲರ ಕಣ್ಣು ಕುಕ್ಕಿದೆ. ಅದು ಟ್ರೋಲ್​ಗೆ ಕಾರಣ ಆಗಿದೆ.​ ಬಾಲಿವುಡ್​ನ ಖ್ಯಾತ ನಟ ಶಾಹಿದ್​ ಕಪೂರ್​ ಅವರ ಪತ್ನಿ ಮೀರಾ ರಜಪೂತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಆಗುತ್ತಿದ್ದಾರೆ. ಅದಕ್ಕೆಲ್ಲ ಕಾರಣ ಅವರು ಧರಿಸಿರುವ ಬಟ್ಟೆ. ಯಾವ ರೀತಿಯ ಬಟ್ಟೆ ಧರಿಸಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. …

Read More »

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಪುತ್ತೂರು, ಅ.25 : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯ ಬಾಲಕಿ ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Read More »

ವಿಜಯಾನಂದ ಚಿತ್ರ ಕುರಿತು ಕುತೂಹಲಕಾರಿ ವಿಚಾರಗಳನ್ನು ಹಂಚಿಕೊಂಡ ಡಾ. ವಿಜಯ ಸಂಕೇಶ್ವರ

ಹುಬ್ಬಳ್ಳಿ: ವಿಜಯಾನಂದ ಸಿನಿಮಾ ಬಿಡುಗಡೆಯಾದ ಬಳಿಕ ಕನ್ನಡದಲ್ಲೂ ಹಾಗೂ ಬೇರೆ ಭಾಷೆಗಳಲ್ಲೂ ಸಿನಿಮಾ ಮಾಡುತ್ತೇವೆ. ಮುಂಬರುವ ಸಿನಿಮಾಗಳ ಬಜೆಟ್ ಖಂಡಿತವಾಗಿಯೂ ದೊಡ್ಡದಿರುತ್ತದೆ. ಸಿನಿಮಾ ಇಂಡಸ್ಟ್ರಿಗೆ ಪರಿಚಿತರಿಲ್ಲದವರನ್ನು ಪರಿಚಯಸಬೇಕು ಅನ್ನೋದೆ ನಮ್ಮ ಸಂಸ್ಥೆಯ ಗುರಿ ಎಂದು ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರು ಹೇಳಿದರು. ಹುಬ್ಬಳ್ಳಿ ಸಮೀಪದ ವರೂರಿನ ವಿಆರ್​ಎಲ್​ ಕ್ಯಾಂಪಸ್​ನಲ್ಲಿ ತಮ್ಮ ಜೀವನಾಧಾರಿತ ‘ವಿಜಯಾನಂದ’ ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲಿಂದು ಭಾಗವಹಿಸಿ ಮಾತನಾಡಿದರು. ಪ್ರಾಯಶಃ ಹುಬ್ಬಳ್ಳಿಯಲ್ಲಿ …

Read More »

ಮಾಹಿತಿ ಹಕ್ಕು ಅರ್ಜಿದಾರರಿಗೆ ಮಾಹಿತಿನೀಡದ ಅವರಿಗೆ ಐದು ಸಾವಿರ ರೂ.ಗಳ ದಂಡ ವಿಧಿಸಿ ಆದೇಶ

ಸಾಗರ: ಮಾಹಿತಿ ಹಕ್ಕು ಅರ್ಜಿದಾರರಿಗೆ ಮಾಹಿತಿ ನೀಡದಿರುವುದು ಮತ್ತು ವಿಚಾರಣೆಗೆ ಖುದ್ದು ಹಾಜರಾಗಲು ನೀಡಿದ ಸೂಚನೆಯನ್ನೂ ಉಲ್ಲಂಘಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಎಸ್.ಎಲ್.ಪಾಟೀಲ್ ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್. ಅವರಿಗೆ ಐದು ಸಾವಿರ ರೂ.ಗಳ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಕೆಳದಿ ರಸ್ತೆಯ ರಾಜಕುಮಾರ ಎಂಬುವವರು 2020ರ ಮಾರ್ಚ್‌ನಲ್ಲಿ ಮಾಹಿತಿ ಹಕ್ಕು ಅರ್ಜಿ ಹಾಕಿ, ಆನಂದಪುರ ಹೋಬಳಿಯ ಮಲಂದೂರು ಗ್ರಾಮದ ಸರ್ವೆ ನಂಬರ್ ಒಂದಕ್ಕೆ …

Read More »

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ವಿಜಯಪುರ: ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಹಾಗೂ ಜಗಜೀವನರಾಂ ಪ್ರಧಾನಿಯಾಗುವ ಅವಕಾಶ ತಪ್ಪಿಸಿದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತದಾರರಿಗೆ ಮನವಿ ಮಾಡಿದರು. ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಕನ್ನೋಳಿ, ಕೊಕಟನೂರ, ಹಂದಿಗನೂರು ಗ್ರಾಮಗಳಲ್ಲಿ ರೋಡ್ ಶೋನಲ್ಲಿ ಮಾತನಾಡಿದ ಅವರು, ಸುಳ್ಳು ಬಿತ್ತುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ …

Read More »

ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ಬಿಡುಗಡೆಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಸೇರಿದಂತೆ ತಮ್ಮ ದಿನ ನಿತ್ಯದ ಚಟುವಟಿಕೆಯಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಾಜ್‍ ಕುಂದ್ರಾ ಕಾಣಿಸದೇ ಇರುವುದರ ಕುರಿತಾಗಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಈ ವೀಕೆಂಡ್‌ನಲ್ಲಿ ಶಿಲ್ಪಾ ಶೆಟ್ಟಿ ತಮ್ಮ ಮಕ್ಕಳಾದ ವಿಯಾನ್, ಸಮಿಷಾ ಹಾಗೂ ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿ ಆಲಿಬಾಗ್‍ಗೆ ಹೋಗಿದ್ದಾರೆ. ಶಿಲ್ಪಾ ಶೆಟ್ಟಿ ತೆರಳುವಾಗ ನಗುಮೊಗದಿಂದಲೇ …

Read More »