ಬಳ್ಳಾರಿ: ಖ್ಯಾತ ವ್ಯಕ್ತಿ, ರಾಜಕಾರಣಿ, ಸಿನಿಮಾ ನಟರು ಮೃತಪಟ್ಟಾಗ ಅವರ ಅಂತಿಮ ದರ್ಶನ ಪಡೆಯಲು ಸಾವಿರಾರು ಜನರು ಬರುವುದು ಸಹಜ. ಬುದ್ಧಿಮಾಂದ್ಯ, ಹುಚ್ಚನೊಬ್ಬ ಸಾವನ್ನಪ್ಪಿದಾಗ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದ್ದನ್ನು ನೀವು ಕೇಳಿದ್ದೀರಾ? ನೋಡಿದ್ದೀರಾ?. ಬಳ್ಳಾರಿ ಜಿಲ್ಲೆಯ ಹಡಗಲಿ ಪಟ್ಟಣದಲ್ಲಿ ಇಂಥದ್ದೊಂದು ಕುತೂಹಲಕಾರಿ ಘಟನೆ ನಡೆದಿದೆ. ಪಟ್ಟಣದ ಮಾನಸಿಕ ಅಸ್ವಸ್ಥನೊಬ್ಬ ಮೃತಪಟ್ಟಿದ್ದು, ಅವನ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಲ್ಲದೇ ಊರ ತುಂಬಾ ಅವನ ಫೋಟೋವುಳ್ಳ ಫ್ಲೆಕ್ಸ್, ಬ್ಯಾನರ್ ಹಾಕಿಸಿ ಅದ್ಧೂರಿಯಾಗಿ …
Read More »ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಅಗಲಿದ ’ರಾಜಕುಮಾರ’ನಿಗೆ
ಬೆಂಗಳೂರು: ಹೃದಯಾಘಾತದಿಂದ ಸಾವನ್ನಪ್ಪಿರುವ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆ ಇಡೀ ಕನ್ನಡ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಅಸಾಧ್ಯವಾದ ನೋವು. ಇಂದು ಕನ್ನಡ ಚಿತ್ರರಂಗದ ವತಿಯಿಂದ ಪುನೀತ ನಮನ ಕಾರ್ಯಕ್ರಮದ ಮೂಲಕ ಅಗಲಿದ ’ರಾಜಕುಮಾರ’ನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ ಪುನೀತ ನಮನ ಕಾರ್ಯಕ್ರಮದಲ್ಲಿ ಕನ್ನಡ, ತೆಲಗು, ತಮಿಳು ಚಿರರಂಗದ ಗಣ್ಯರು, ಸಿಎ ಬಸವರಾಜ್ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ …
Read More »ವಾಚ್ ಮ್ಯಾನ್ ಕೊಲೆ; ಕೇಂದ್ರ ಬ್ಯಾಂಕ್ನಲ್ಲಿ ಹಣ-ಒಡವೆ ದೋಚಿ ಪರಾರಿಯಾದ ಖದೀಮರು
ತುಮಕೂರು: ಭಾನುವಾರ ರಾತ್ರಿ ತುಮಕೂರು ಗ್ರಾಮಾಂತರದ ನಾಗವಲ್ಲಿಯಲ್ಲಿರುವ ಕೇಂದ್ರ ಬ್ಯಾಂಕ್ನಲ್ಲಿ ವಾಚ್ ಮ್ಯಾನ್ ಕೊಲೆ ಮಾಡಿ ದರೋಡೆ ಮಾಡಲಾಗಿದೆ. ಸಿದ್ದಪ್ಪ ಕೊಲೆಯಾದ ದುರ್ದೈವಿ. ಕಳೆದ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸೊಸೈಟಿಯಲ್ಲಿದ್ದ ಹಣ ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ತುಮಕೂರು ಜಿಲ್ಲಾ ಎಎಸ್ಪಿ ಉದೇಶ್, ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಇನ್ನು ಇವರ ಜೊತೆಗೆ ಶ್ವಾನದಳ, ಬೆರಳಚ್ಚು ತಂಡ ಕೂಡ ಆಗಮಿಸಿ …
Read More »ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ
ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು …
Read More »ಜನಾರ್ಧನ ರೆಡ್ದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲ.
ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜನಾರ್ಧನ ರೆಡ್ಡಿ ತೀವ್ರ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡ ರಾತ್ರಿಯೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
Read More »ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …
Read More »ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ ಸಿಎಂ
ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕ್ರೇಜಿವಾಲ್ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸೋಮವಾರದಿಂದ ಒಂದು ವಾರದವರೆಗೆ, ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ ಅಂತ ಅವರು ಹೇಳಿದರು. ಇದೇ ವೇಳೆ ಅವರು (coronavirus)ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ (WFH) ಕಾರ್ಯನಿರ್ವಹಿಸುತ್ತವೆ. ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು WFH ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು …
Read More »ಬಸ್ ಮೇಲಿನ ಪುನೀತ್ ಫೋಟೋಕ್ಕೆ ಮುತ್ತಿಟ್ಟು ಕಣ್ಣೀರು ಸುರಿಸಿದ ವೃದ್ದೆ : ವಿಡಿಯೋ ಇಲ್ಲಿದೆ ನೋಡಿ
ನಟ ಪುನೀತ್ರಾಜ್ಕುಮಾರ್ ಅವರು ನಮ್ಮನ್ನು ಆಗಲಿ ಎರಡು ವಾರ ಕಳೆಯುತ್ತಿದ್ದ ಬಂದರು ಕೂಡ ಮರೆಯದ ನೋವನ್ನು ನಮ್ಮೆಲ್ಲರಿಗೂ ಕಾಡುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯ ಕುಕನೂರು ಬಸ್ ನಿಲ್ದಾಣದಲ್ಲಿ ಬಸ್ವೊಂದರ ಮೇಲಿದ್ದ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ವೃದ್ದೆಯೊಬ್ಬರು, ಮುತ್ತಿಟ್ಟು ಕಣ್ಣೀರು ಹಾಕಿರುವ ವಿಡಿಯೋವೊಂದು ವೈರಲ್ ಆಗಿದೆ.
Read More »ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ
M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …
Read More »ಬೆಳಗಾವಿ: ಓಡಿ ಹೋಗಿ ಬಸ್ ಹತ್ತಲು ಹೋಗಿ ಕೆಳಗೆ ಬಿದ್ದ ಬಾಲಕ ಅಸ್ವಸ್ಥ
ಓಡಿ ಹೋಗಿ ಬಸ್ ಹತ್ತಲು ಹೋಗಿದ್ದ ವೇಳೆ ಬಾಲಕನೊರ್ವ ಬಸ್ನಿಂದ ಬಿದ್ದು ಗಾಯಗೊಂಡಿರುವ ಘಟನೆ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಹೌದು ಪಂತ್ ಬಾಳೇಕುಂದ್ರಿಗೆ ಹೋಗುವ ಕೆಎಸ್ಆರ್ಟಿಸಿ ಬಸ್ ಹತ್ತುವ ವೇಳೆ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಓಡಿ ಹೋಗಿ ಬಸ್ ಹತ್ತಲು ಹೋದ ಬಾಲಕ ಕೆಳಗೆ ಬಿದ್ದು ಅಸ್ವಸ್ಥನಾಗಿದ್ದಾನೆ. ನಂತರ ಆತನನ್ನು ಅಲ್ಲಿದ್ದ ಸ್ಥಳೀಯರು ಎತ್ತಿಕೊಂಡು ಪ್ಲಾಟ್ಫಾರ್ಮನ ಕಟ್ಟೆಯ ಮೇಲೆ ಮಲಗಿಸಿ ನೀರು ಕುಡಿಸಿ, ಪ್ರಾಥಮಿಕ …
Read More »