ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ಸುಂಕದಕಟ್ಟೆಯ ಯುವಕ ಬರ್ತ್ ಡೇ ಪಾರ್ಟಿ ಆಗಮಿಸಿ ಜಕ್ಕಲಮಡಗು ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದ್ದು, ಅಕ್ಸೆಂಚರ್ ಕಂಪನಿಯ ಸಾಫ್ಟ್ವೇರ್ ಎಂಜಿನಿಯರ್ ರೋಹಿತ್ (24) ಮೃತಪಟ್ಟ ಯುವಕ. ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಅಕ್ಸೆಂಚರ್ ಸಾಫ್ಟ್ವೇರ್ ಎಂಜಿನಿಯರ್ ರೋಹಿತ್ 5 ಮಂದಿ ಸ್ನೇಹಿತರೊಂದಿಗೆ ಬರ್ತ್ ಡೇ ಪಾರ್ಟಿ ಆಚರಣೆಗೆ ಬಂದಿದ್ದರು. ಆತನ ಸ್ನೇಹಿತರು ಹಿನ್ನೀರಿನಲ್ಲಿರುವ …
Read More »ಕರ್ನಾಟಕದಲ್ಲಿ ಹೊಸದಾಗಿ 789 ಜನರಿಗೆ ಕೊರೊನಾ ದೃಢ; 23 ಮಂದಿ ಸಾವು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 24) ಹೊಸದಾಗಿ 789 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,71,833 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,20,792 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 23 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,706 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 13,306 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …
Read More »ರಿಯಾಲಿಟಿ ಶೋನಲ್ಲಿ ಆಲ್ಕೋಹಾಲ್ ಸೇವನೆ.. ಕಪಿಲ್ ಶರ್ಮಾ ವಿರುದ್ಧ FIR
ರಿಯಾಲಿಟಿ ಶೋ ಮೂಲಕ ಜನರನ್ನು ನಗೆಗಡಲಲ್ಲಿ ತೇಲಿಸುವ ಕಪಿಲ್ ಶರ್ಮಾಗೆ ಇದೀಗ ಸಂಕಷ್ಟ ಎದುರಾಗಿದೆ. ಕಪಿಲ್ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ತನ್ನ ರಿಯಾಲಿಟಿ ಶೋನ ಶೂಟ್ ಒಂದರಲ್ಲಿ ಕೋರ್ಟ್ ಸೀನ್ ಶೂಟ್ ಮಾಡುವಾಗ ಮದ್ಯ ಸೇವಿಸಿದ್ದಾರೆ ಎಂದು ಮಧ್ಯಪ್ರದೇಶದಲ್ಲಿ ದೂರು ನೀಡಲಾಗಿದ್ದು ಎಫ್ಐಆರ್ ದಾಖಲಾಗಿದೆ. ಮಧ್ಯಪ್ರದೇಶದ ವಕೀಲರೊಬ್ಬರು ಸಿಜೆಎಂ ಕೋರ್ಟ್ನಲ್ಲಿ ಈ ಎಫ್ಐಆರ್ ದಾಖಲಿಸಿದ್ದಾರೆ. ಅಕ್ಟೋಬರ್ 1 ರಂದು ಪ್ರಕರಣದ ವಿಚಾರಣೆ ನಡೆಯಲಿದೆ ಎನ್ನಲಾಗಿದೆ. ದೂರು ನೀಡಿರುವ ವಕೀಲರು.. …
Read More »ದಿನಗೂಲಿ ಕಾರ್ಮಿಕನ ಖಾತೆಗೆ ಜಮಾ ಆಯ್ತು ಬರೋಬ್ಬರಿ ₹9.99 ಕೋಟಿ; ಹೇಗೆ ಗೊತ್ತಾ?
ಪಾಟ್ನಾ: ಇತ್ತೀಚೆಗೆ ಬಿಹಾರದಲ್ಲಿ ಇಬ್ಬರು ಮಕ್ಕಳ ಖಾತೆಗೆ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಹಣ ಜಮಾ ಆಗಿತ್ತು. ಈ ಬೆನ್ನಲ್ಲೇ ರೈತನೋರ್ವನ ಖಾತೆಗೆ 50 ಕೋಟಿ ರೂಪಾಯಿ ಜಮೆಯಾದ ಬಳಿಕ ಈಗ ದಿನಗೂಲಿ ಕಾರ್ಮಿಕ ಬ್ಯಾಂಕ್ ಅಕೌಂಟ್ಗೆ 9.99 ಕೋಟಿ ರೂ. ಠೇವಣಿಯಾದ ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಖಾತೆ ತೆರೆಯಲು ಹೋದ ದಿನಗೂಲಿ ಕಾರ್ಮಿಕನ ಅಚ್ಚರಿ ಕಾದಿತ್ತು. ತನ್ನ ಖಾತೆಯಲ್ಲಿ 9.99 …
Read More »ರಾಷ್ಟ್ರ, ರಾಷ್ಟ್ರೀಯತೆ, ಆರ್‍ಎಸ್‍ಎಸ್ ಒಂದೇ : ಬೊಮ್ಮಾಯಿ
ಬೆಂಗಳೂರು : ರಾಷ್ಟ್ರ, ರಾಷ್ಟ್ರೀಯತೆ, ಆರ್‍ಎಸ್‍ಎಸ್ ಇವೆಲ್ಲಾ ಒಂದೇ. ಆರ್‍ಎಸ್‍ಎಸ್ ಅಂದ್ರೆ ರಾಷ್ಟ್ರೀಯತೆ. ರಾಷ್ಟ್ರೀಯ ಶಿಕ್ಷಣ ಪಾಲಿಸಿ, ಆರ್‍ಎಸ್‍ಎಸ್ ಇದ್ರೂ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಇಂದು ಅಧಿವೇಶದಲ್ಲಿ ಕಾಂಗ್ರೆಸ್ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ-ಕಾಂಗ್ರೆಸ್ ಶಾಸಕರ ಮಧ್ಯೆ ವಾಗ್ಯುದ್ಧ ನಡೆಯಿತು.. ಕಾಂಗ್ರೆಸ್ …
Read More »‘ತಾತನಾದೆ ಎಂದು ಹೇಳಲು ಅತೀವ ಸಂತಸವಾಗ್ತಿದೆ’ -ಹೆಚ್ಡಿಕೆ ಹರ್ಷ
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರ ಸ್ವಾಮಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ರೇವತಿ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ತಮ್ಮ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿರುವ ಕುಮಾರಸ್ವಾಮಿ ಅವರು, ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ …
Read More »ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ
ಬೆಂಗಳೂರು: ಲೋಕಸಭೆ ಮಾದರಿಯಲ್ಲಿ ರಾಜ್ಯ ವಿಧಾನ ಮಂಡಲದಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮೊದಲ ಬಾರಿಗೆ ಪ್ರದಾನ ಮಾಡಲಾಗಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಕುರಿತು ಮಾತನಾಡಿದ ಸ್ಪೀಕರ್ ಕಾಗೇರಿ ಅವರು, ಹಲವು ರಾಜ್ಯಗಳಲ್ಲಿ ಉತ್ತಮ ಶಾಸಕ ಪ್ರಶಸ್ತಿ ಕೊಡುವ ಸಂಪ್ರದಾಯವಿದೆ. ಅತ್ಯುತ್ತಮ ಶಾಸಕ ಪ್ರಶಸ್ತಿ ಆಯ್ಕೆಗೆ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸ್ಪೀಕರ್ ನೇತೃತ್ವದ ಸಮಿತಿಯಲ್ಲಿ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಮಾಧುಸ್ವಾಮಿ, ದೇಶಪಾಂಡೆ …
Read More »ಪೆಟ್ರೋಲ್, ಡೀಸೆಲ್ಗೆ ನೀರು ಬೆರಕೆ! ಬಂಕ್ ಮಾಲೀಕರ ವಿರುದ್ಧ ಆಕ್ರೋಶ
ಬಾಗಲಕೋಟೆ: ಒಂದು ಕಡೆ ಪೆಟ್ರೋಲ್ ಡಿಸೆಲ್ ಬೆಲೆ ಗಗನಕ್ಕೆ ಏರಿದೆ. ಇಂಧನದ ಖರ್ಚು ವೆಚ್ಚದ ಭರಾಟೆಯಲ್ಲಿ ಗ್ರಾಹಕರು ಸಿಲುಕಿದ್ದಾರೆ. ಮತ್ತೊಂದೆಡೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಡೀಸೆಲ್ನಲ್ಲಿ ನೀರು ಬೆರಕೆ ಮಾಡಲಾಗಿದೆ. ಈ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಬಂಕ್ ಎದುರು ಜಮಾಯಿಸಿದ ಬೈಕ್ ಹಾಗೂ ಇತರ ವಾಹನ ಸವಾರರು ಬಂಕ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಹಾಗೂ ಡಿಸೇಲ್ ನಲ್ಲಿ …
Read More »ನರೇಂದ್ರ ಗಿರಿ ಅಸಹಜ ಸಾವು ಕೇಸ್; FIR ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ
ನವದೆಹಲಿ: ದೇಶದಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದ ಅಖಿಲ ಭಾರತೀಯ ಅಖಾಡ ಪರಿಷದ್ ಅಧ್ಯಕ್ಷ ನರೇಂದ್ರಗಿರಿ ಅಸಹಜ ಸಾವಿನ ತನಿಖೆಯನ್ನ ಇಂದಿನಿಂದ ಸಿಬಿಐ ಅಧಿಕೃತವಾಗಿ ವಹಿಸಿಕೊಂಡಿದೆ. ತನಿಖೆ ಹಿನ್ನೆಲೆಯಲ್ಲಿ 6 ಅಧಿಕಾರಿಗಳ ನೇತೃತ್ವದ ತಂಡ ಪ್ರಯಾಗ್ರಾಜ್ ನಗರಕ್ಕೆ ಆಗಮಿಸಿದ್ದು, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿದೆ. ಕಳೆದ ಸೋಮವಾರ ಬಘಮಬರಿ ಗದ್ದಿ ಮಠದಲ್ಲಿರುವ ರೂಮಿನಲ್ಲಿ ನರೇಂದ್ರ ಗಿರಿಯ ಶವ ಪತ್ತೆಯಾಗಿತ್ತು. ನರೇಂದ್ರ ಗಿರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಡೆತ್ನೋಟ್ ಕೂಡ ಸಿಕ್ಕಿದೆ. ಇನ್ನು …
Read More »ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ
ಬೆಂಗಳೂರು: ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು …
Read More »