ಬೆಂಗಳೂರು: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ರೈಲಿನಡಿ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ನಿಲ್ದಾಣದಲ್ಲಿ ನಡೆದಿದೆ. ಮೆಜೆಸ್ಟಿಕ್‌ನಿಂದ ಮೈಸೂರು ಕಡೆ ತೆರಳುತ್ತಿದ್ದ ಬೆಂಗಳೂರು – ಮೈಸೂರು ಪ್ಯಾಸೆಂಜರ್ ರೈಲಿನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿ ರಾಮನಗರದ ಕೂಟಗಲ್ ಗ್ರಾಮದ ನಿವಾಸಿ ಹರೀಶ್ ಎಂದು ತಿಳಿದುಬಂದಿದೆ. ನಿಧಾನಕ್ಕೆ ಚಲಿಸುತ್ತಿದ್ದ ವೇಳೆ ರೈಲು ಹತ್ತಲು ವ್ಯಕ್ತಿ ಯತ್ನಿಸಿದ್ದಾನೆ. ಈ ವೇಳೆ ಕಾಲು ಜಾರಿ ರೈಲಿನ ಚಕ್ರದಡಿ ಬಿದ್ದಿದ್ದಾನೆ. …
Read More »ಮುಂಗಾರು ಅಧಿವೇಶನದಲ್ಲಿ ಮತ್ತೆ ಡಿಲಿಮಿಟೇಷನ್ ಬಿಲ್ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ
ನವದೆಹಲಿ: ಲೋಕಸಭೆಯಲ್ಲಿ ಈ ಹಿಂದೆ ತಿರಸ್ಕೃತಗೊಂಡಿದ್ದ ಡಿಲಿಮಿಟೇಷನ್ ಬಿಲ್ ಅನ್ನು ಮುಂಗಾರು ಅಧಿವೇಶನದಲ್ಲಿ ಮತ್ತೆ ಪ್ರಸ್ತುತಪಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಪ್ರಮುಖ ಪ್ರಾದೇಶಿಕ ಪಕ್ಷಗಳಾದ ಡಿಎಂಕೆ, ಟಿಎಂಸಿ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿದೆ. ಟಿಎಂಸಿ ಸಂಸದರು ಸರ್ಕಾರದ ಪ್ರಸ್ತಾಪಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದು, ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಚರ್ಚೆಗೆ ತಯಾರಿದ್ದಾರೆ ಎಂದು ಮೂಲಗಳು ಹೇಳಿವೆ. ಇದೇ ವೇಳೆ, ಬಿಲ್‌ಗೆ ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದ ಡಿಎಂಕೆ …
Read More »ಮತ್ತೆ ಭುಗಿಲೆದ್ದ ಮುರಿನಕಟ್ಟೆ ವಿವಾದ – ಶುಕ್ರವಾರ ಭಟ್ಕಳ ಸ್ವಯಂ ಪ್ರೇರಿತ ಬಂದ್‌ಗೆ ಕರೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೇ 24ರಂದು ಮುಸ್ಲಿಂ ಯುವಕರು ಮುರಿನಕಟ್ಟೆ ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಹಿಂದೂಪರ ಸಂಘಟನೆಗಳು ಭಟ್ಕಳ ಬಂದ್‌ಗೆ ಕರೆ ಕೊಟ್ಟಿದ್ದು ಮತ್ತೆ ವಿವಾದ ಭುಗಿಲೆದ್ದಿದೆ. ಮೇ 24ರಂದು ಭಟ್ಕಳದ ಶಿರಾಲಿಯ ವೆಂಕಟಾಪುರ ನದಿ ತೀರದ ಬಳಿ ಕಪ್ಪೆಚಿಪ್ಪು ಹೆಕ್ಕಲು ಹೋದ ಮಹಿಳೆಯರೂ ಸೇರಿ 11 ಜನ ಮೃತಪಟ್ಟಿದ್ದರು. ಇಡೀ ಭಟ್ಕಳಕ್ಕೆ ದೊಡ್ಡ ಶಾಕ್ ತಂದಿದ್ದ ಈ ಘಟನೆ ಜನರು ದುಃಖದಲ್ಲಿ ಇರುವಂತೆ …
Read More »ಪತಿ ಸಾವಿನಿಂದ ಖಿನ್ನತೆ – ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ
ಕೋಲಾರ: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿಕೊಂದ ಘಟನೆ ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ನಡೆದಿದೆ. ಆಂದ್ರಪ್ರದೇಶ ಮೂಲದ ಬುಜ್ಜಮ್ಮ (22) ತನ್ನಿಬ್ಬರು ಮಕ್ಕಳಾದ ಸರಸ್ವತಿ (3) ಹಾಗೂ 1 ವರ್ಷದ ಮಗು ಹೇಮಾಶ್ರೀಯನ್ನು ಹತ್ಯೆ ಮಾಡಿದ್ದಾಳೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಮೂಲತಃ ಆಂಧ್ರದ ವಿನಾಯಕಪುರಂನ ಬಾಬು ಹಾಗೂ ಬುಜ್ಜಮ್ಮ ದಂಪತಿ ಒಂದು ವರ್ಷದಿಂದ …
Read More »ನೆಹರು ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಲು ಮುಂದಾದ ಮೋದಿ
ನವದೆಹಲಿ: ಜೂನ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಭಾರತದ ಪ್ರಧಾನಿ ಎಂಬ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 4,398 ದಿನಗಳ ದಾಖಲೆಯನ್ನ ಮುರಿದು 4,399 ದಿನಗಳ ನಿರಂತರ ಸೇವೆಯ ಮೈಲುಗಲ್ಲು ತಲುಪಲಿದ್ದಾರೆ. ಮೇ 26, 2014 ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರು, ಜೂನ್ 10, 2026 ರಂದು …
Read More »ದ್ವೇಷ ಭಾಷಣ ಆರೋಪ – ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ಎಫ್‌ಐಆರ್
ಕಲಬುರಗಿ: ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಚೋದನಕಾರಿ, ದ್ವೇಷಪೂರಿತ ಮತ್ತು ಕೋಮು ಸೌಹಾರ್ದತೆ ಕೆಡಿಸುವ ನಿಟ್ಟಿನಲ್ಲಿ ಭಾಷಣ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಜಗರ್, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ರೆವೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಆಳಂದ ಲಾಡ್ಲೆ ಮಶಾಕ್ ಗಲಾಟೆ ಕೇಸ್ ವಾಪಸ್ ಪಡೆದ ಸರ್ಕಾರದ ವಿರುದ್ಧ …
Read More »ಭಾರೀ ಮಳೆಗೆ ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ಶಾಕ್ – 8 ವರ್ಷದ ಬಾಲಕ ಸಾವು
ಬೀದರ್: ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ನಡೆದಿದೆ. 8 ವರ್ಷದ ಅಲಿ ಮೊಮಿನ್ ಮೃತ ದುರ್ವೈವಿ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ವಿದ್ಯುತ್ ಕಂಬದಿಂದ ಮನೆಗೆ ನೀಡಲಾಗಿದ್ದ ಸಂಪರ್ಕ ಕಟ್ ಆಗಿ ವೈಯರ್ ನೆಲಕ್ಕೆ ಬಿದ್ದಿದೆ. ಆಟವಾಡುತ್ತಿದ್ದ ಬಾಲಕ ಕೈಯಿಂದ ವೈಯರ್ ಹಿಡಿದುಕೊಂಡಿದ್ದು, ಕರೆಂಟ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೂಡಲೇ …
Read More »ಮಾಜಿ ಎಂಎಲ್‌ಸಿ ಕಿಡ್ನ್ಯಾಪ್ ಕೇಸ್ – 3 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್
ಆನೇಕಲ್: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಎಂಬ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸೂರ್ಯನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಕಿಡ್ನಾಪ್ ಮಾಡಿ ಕರೆದೊಯ್ಯುತ್ತಿರುವ …
Read More »ಪ್ರವಾಸಿಗರ ವಿರುದ್ಧವೇ ಎಫ್‌ಐಆರ್ – ಎಡವಟ್ಟು ಮಾಡಿಕೊಂಡ ಪೊಲೀಸರು
ಮಡಿಕೇರಿ: ಪ್ರವಾಸಿಗರ ತಂಡದೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡ ಹೋಟೆಲ್ ಮಾಲೀಕನೊಬ್ಬ, ಬಳಿಕ ತಮ್ಮ ಮೇಲೆಯೇ ಹಲ್ಲೆ ನಡೆದಿದೆ ಎಂದು ದೂರು ನೀಡಿ ಪೊಲೀಸರನ್ನೇ ದಿಕ್ಕು ತಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಯಾಸಿನ್ ಕುಟುಂಬ ಜೂನ್ ೨ರಂದು ಅಬ್ಬಿ ಜಲಪಾತ ವೀಕ್ಷಣೆಗೆ ಮಡಿಕೇರಿಗೆ ಬಂದಿತ್ತು. ವಾಪಸ್ ತೆರಳುವ ವೇಳೆ ಮಾರ್ಗ ಮಧ್ಯೆ ಇರುವ ಖಾಸಗಿ ಹೋಟೆಲ್‌ಗೆ ಊಟಕ್ಕಾಗಿ ತೆರಳಿದ್ದಾರೆ. ಈ ವೇಳೆ ಹೋಟೆಲ್‌ನಲ್ಲಿದ್ದ ಪ್ರವಾಸಿಗರು ಚಿಪ್ಸ್ ತೆಗೆದುಕೊಂಡು ತಿಂದ …
Read More »ಯೋಗಿ ಜೀ ನಮ್ಮನ್ನು ಕ್ಷಮಿಸಿ – ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ 150 ರೌಡಿಗಳು
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಸರ್ಕಾರದ ‘ಜಿರೋ ಟಾಲರೆನ್ಸ್’ ನೀತಿ ಹಾಗೂ ಕಠಿಣ ಪೊಲೀಸ್ ಕ್ರಮಗಳ ಭಯ ಅಪರಾಧ ಲೋಕವನ್ನು ಯಾವ ಮಟ್ಟಿಗೆ ನಡುಗಿಸಿದೆ ಎಂಬುದಕ್ಕೆ ಗಾಜಿಯಾಬಾದ್‌ನಲ್ಲಿ ನಡೆದ ಈ ನಾಟಕೀಯ ಘಟನೆಯೇ ಸಾಕ್ಷಿ. ಇತ್ತೀಚೆಗೆ ಜಿಲ್ಲೆಯ ಸುಮಾರು 150ಕ್ಕೂ ಹೆಚ್ಚು ರೌಡಿಶೀಟರ್‌ಗಳು “ಯೋಗಿ ಜೀ ನಮ್ಮನ್ನು ಕ್ಷಮಿಸಿ” ಎಂಬ ಪೋಸ್ಟರ್‌ಗಳನ್ನು ಹಿಡಿದು ಬಹಿರಂಗವಾಗಿಯೇ ಪೊಲೀಸರ ಮುಂದೆ ಶರಣಾಗಿದ್ದಾರೆ. ಗಾಜಿಯಾಬಾದ್‌ನಲ್ಲಿ ಇತ್ತೀಚೆಗೆ ಹದಿಹರೆಯದ ಯುವಕನೊಬ್ಬನ ಭೀಕರ ಕೊಲೆ ನಡೆದಿತ್ತು. …
Read More »
Laxmi News 24×7