Breaking News

Uncategorized

ದಿನಗೂಲಿ ಕಾರ್ಮಿಕನ ಖಾತೆಗೆ ಜಮಾ ಆಯ್ತು ಬರೋಬ್ಬರಿ ₹9.99 ಕೋಟಿ; ಹೇಗೆ ಗೊತ್ತಾ?

ಪಾಟ್ನಾ: ಇತ್ತೀಚೆಗೆ ಬಿಹಾರದಲ್ಲಿ ಇಬ್ಬರು ಮಕ್ಕಳ ಖಾತೆಗೆ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಹಣ ಜಮಾ ಆಗಿತ್ತು. ಈ ಬೆನ್ನಲ್ಲೇ ರೈತನೋರ್ವನ ಖಾತೆಗೆ 50 ಕೋಟಿ ರೂಪಾಯಿ ಜಮೆಯಾದ ಬಳಿಕ ಈಗ ದಿನಗೂಲಿ ಕಾರ್ಮಿಕ ಬ್ಯಾಂಕ್​​ ಅಕೌಂಟ್​​ಗೆ 9.99 ಕೋಟಿ ರೂ. ಠೇವಣಿಯಾದ ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಖಾತೆ ತೆರೆಯಲು ಹೋದ ದಿನಗೂಲಿ ಕಾರ್ಮಿಕನ ಅಚ್ಚರಿ ಕಾದಿತ್ತು. ತನ್ನ ಖಾತೆಯಲ್ಲಿ 9.99 …

Read More »

ರಾಷ್ಟ್ರ, ರಾಷ್ಟ್ರೀಯತೆ, ಆರ್‍ಎಸ್‍ಎಸ್ ಒಂದೇ : ಬೊಮ್ಮಾಯಿ

ಬೆಂಗಳೂರು : ರಾಷ್ಟ್ರ, ರಾಷ್ಟ್ರೀಯತೆ, ಆರ್‍ಎಸ್‍ಎಸ್ ಇವೆಲ್ಲಾ ಒಂದೇ. ಆರ್‍ಎಸ್‍ಎಸ್ ಅಂದ್ರೆ ರಾಷ್ಟ್ರೀಯತೆ. ರಾಷ್ಟ್ರೀಯ ಶಿಕ್ಷಣ ಪಾಲಿಸಿ, ಆರ್‍ಎಸ್‍ಎಸ್ ಇದ್ರೂ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಇಂದು ಅಧಿವೇಶದಲ್ಲಿ ಕಾಂಗ್ರೆಸ್ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ-ಕಾಂಗ್ರೆಸ್ ಶಾಸಕರ ಮಧ್ಯೆ ವಾಗ್ಯುದ್ಧ ನಡೆಯಿತು.. ಕಾಂಗ್ರೆಸ್ …

Read More »

‘ತಾತನಾದೆ ಎಂದು ಹೇಳಲು ಅತೀವ ಸಂತಸವಾಗ್ತಿದೆ’ -ಹೆಚ್​​ಡಿಕೆ ಹರ್ಷ

ಬೆಂಗಳೂರು: ಮಾಜಿ ಸಿಎಂ ಹೆಚ್​ಡಿ ಕುಮಾರ ಸ್ವಾಮಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ನಿಖಿಲ್​ ಕುಮಾರಸ್ವಾಮಿ ಅವರ ಪತ್ನಿ ರೇವತಿ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ತಮ್ಮ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿರುವ ಕುಮಾರಸ್ವಾಮಿ ಅವರು, ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಹೆಚ್​​ಡಿಕೆ, ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ …

Read More »

ಮಾಜಿ ಸಿಎಂ ಬಿ.ಎಸ್.​​ ಯಡಿಯೂರಪ್ಪಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ

ಬೆಂಗಳೂರು: ಲೋಕಸಭೆ ಮಾದರಿಯಲ್ಲಿ ರಾಜ್ಯ ವಿಧಾನ ಮಂಡಲದಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮೊದಲ ಬಾರಿಗೆ ಪ್ರದಾನ ಮಾಡಲಾಗಿದ್ದು, ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಕುರಿತು ಮಾತನಾಡಿದ ಸ್ಪೀಕರ್ ಕಾಗೇರಿ ಅವರು, ಹಲವು ರಾಜ್ಯಗಳಲ್ಲಿ ಉತ್ತಮ ಶಾಸಕ ಪ್ರಶಸ್ತಿ ಕೊಡುವ ಸಂಪ್ರದಾಯವಿದೆ. ಅತ್ಯುತ್ತಮ ಶಾಸಕ ಪ್ರಶಸ್ತಿ ಆಯ್ಕೆಗೆ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸ್ಪೀಕರ್ ನೇತೃತ್ವದ ಸಮಿತಿಯಲ್ಲಿ ಸಿಎಂ ಬೊಮ್ಮಾಯಿ‌, ಸಿದ್ದರಾಮಯ್ಯ, ಮಾಧುಸ್ವಾಮಿ, ದೇಶಪಾಂಡೆ …

Read More »

ಪೆಟ್ರೋಲ್, ಡೀಸೆಲ್​ಗೆ ನೀರು ಬೆರಕೆ! ಬಂಕ್ ಮಾಲೀಕರ ವಿರುದ್ಧ ಆಕ್ರೋಶ

ಬಾಗಲಕೋಟೆ: ಒಂದು ಕಡೆ ಪೆಟ್ರೋಲ್ ಡಿಸೆಲ್ ಬೆಲೆ ಗಗನಕ್ಕೆ ಏರಿದೆ. ಇಂಧನದ ಖರ್ಚು ವೆಚ್ಚದ ಭರಾಟೆಯಲ್ಲಿ ಗ್ರಾಹಕರು ಸಿಲುಕಿದ್ದಾರೆ. ಮತ್ತೊಂದೆಡೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಡೀಸೆಲ್​ನಲ್ಲಿ ನೀರು ಬೆರಕೆ ಮಾಡಲಾಗಿದೆ. ಈ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಬಂಕ್ ಎದುರು ಜಮಾಯಿಸಿದ ಬೈಕ್ ಹಾಗೂ ಇತರ ವಾಹನ ಸವಾರರು ಬಂಕ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಹಾಗೂ ಡಿಸೇಲ್ ನಲ್ಲಿ …

Read More »

ನರೇಂದ್ರ ಗಿರಿ ಅಸಹಜ ಸಾವು ಕೇಸ್; FIR ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ

ನವದೆಹಲಿ: ದೇಶದಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದ ಅಖಿಲ ಭಾರತೀಯ ಅಖಾಡ ಪರಿಷದ್ ಅಧ್ಯಕ್ಷ ನರೇಂದ್ರಗಿರಿ ಅಸಹಜ ಸಾವಿನ ತನಿಖೆಯನ್ನ ಇಂದಿನಿಂದ ಸಿಬಿಐ ಅಧಿಕೃತವಾಗಿ ವಹಿಸಿಕೊಂಡಿದೆ. ತನಿಖೆ ಹಿನ್ನೆಲೆಯಲ್ಲಿ 6 ಅಧಿಕಾರಿಗಳ ನೇತೃತ್ವದ ತಂಡ ಪ್ರಯಾಗ್​ರಾಜ್​ ನಗರಕ್ಕೆ ಆಗಮಿಸಿದ್ದು, ಪ್ರಕರಣ ಸಂಬಂಧ ಎಫ್​ಐಆರ್ ದಾಖಲಿಸಿಕೊಂಡಿದೆ. ಕಳೆದ ಸೋಮವಾರ ಬಘಮಬರಿ ಗದ್ದಿ ಮಠದಲ್ಲಿರುವ ರೂಮಿನಲ್ಲಿ ನರೇಂದ್ರ ಗಿರಿಯ ಶವ ಪತ್ತೆಯಾಗಿತ್ತು. ನರೇಂದ್ರ ಗಿರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಡೆತ್​ನೋಟ್ ಕೂಡ ಸಿಕ್ಕಿದೆ. ಇನ್ನು …

Read More »

ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ

ಬೆಂಗಳೂರು: ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು …

Read More »

ಎತ್ತಿನಗಾಡಿ ಚಲೋ ಆಯ್ತು, ಸೈಕಲ್ ಜಾಥಾ ಆಯ್ತು, ಇದೀಗ ಕಾಂಗ್ರೆಸ್​ನಿಂದ ಟಾಂಗಾ ಜಾಥಾ!

ಬೆಂಗಳೂರು: ಬೆಲೆ ಏರಿಕೆಯನ್ನೇ ಅಸ್ತ್ರವಾಗಿ ಬಳಸಿಕೊಂಡ ಕೈ ನಾಯಕರು, ಮೇಲಿಂದ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಎತ್ತಿನಗಾಡಿ ಚಲೋ, ಸೈಕಲ್ ಜಾಥಾ ಬಳಿಕ, ಇದೀಗ ಕಾಂಗ್ರೆಸ್​ನಿಂದ ಟಾಂಗಾ ಜಾಥಾ ನಡೆಯುತ್ತಿದೆ. ಮೂರನೇ ಬಾರಿ ವಿಧಾನಸೌಧಕ್ಕೆ ಟಾಂಗದಲ್ಲಿ ಬರುವ ಮೂಲಕ ವಿನೂತನ ಹೋರಾಟಕ್ಕೆ ಕೈ ನಾಯಕರು ಮುಂದಾಗಿದ್ದಾರೆ. ವಿಪಕ್ಷ ನಾಯಕ‌ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಾಥಾ ನಡೆಯುತ್ತಿದೆ. ಟಾಂಗ ಜಾಥಾ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …

Read More »

ಸರ್ ನಮ್ಮ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನಿಯೋಜನೆ ಮಾಡಿ ಎಂದು ಶಿಕ್ಷಣಾಧಿಕಾರಿ ಕಾಲು ಹಿಡಿದ ವಿದ್ಯಾರ್ಥಿಗಳು

ಗದಗ: ಸರ್ಕಾರಿ ಪ್ರೌಢಶಾಲೆಯಲ್ಲಿ 6 ವರ್ಷದಿಂದ ಇಂಗ್ಲಿಷ್ ಶಿಕ್ಷಕರಿಲ್ಲ. ‘ಸರ್ ನಮ್ಮ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನಿಯೋಜನೆ ಮಾಡಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾಲು ಹಿಡಿದು ವಿದ್ಯಾರ್ಥಿಗಳು ಗೋಳಾಡಿದ ಘಟನೆ ಗದಗದಲ್ಲಿ ನಡೆದಿದೆ. ಗದಗ ತಾಲೂಕಿನ ಕದಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 6 ವರ್ಷದಿಂದ ಇಂಗ್ಲಿಷ್ ಶಿಕ್ಷಕರ ಕೊರತೆ ಇದೆ. ಹೀಗಾಗಿ ಇಂಗ್ಲಿಷ್ ಶಿಕ್ಷಕರ ನೇಮಕ ಮಾಡಿ ಎಂದು ಗದಗ ಬಿಇಒ ಎಂ.ಎ.ರಡ್ಡೇರ್‌ಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದೇ ವೇಳೆ ಬಿಇಒಗೆ …

Read More »

ಮೋದಿ-ಕಮಲಾ ಹ್ಯಾರೀಸ್ ದ್ವಿಪಕ್ಷೀಯ ಮಾತುಕತೆ; ಇಂಡೋ-ಫೆಸಿಫಿಕ್ ಪ್ರದೇಶದ ​ಬಗ್ಗೆ ಫೋಕಸ್

ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು​ ಭೇಟಿಯಾದರು. ಬಳಿಕ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. ಇಬ್ಬರು ನಾಯಕರುಗಳು ಇಂಡೋ-ಫೆಸಿಫಿಕ್​  ಪ್ರದೇಶದ ಬಗ್ಗೆ ಹೆಚ್ಚು ಗಮನ ಹರಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ವ್ಯಾಪಾರ, ಅಭಿವೃದ್ಧಿ, ಎರಡೂ ದೇಶಗಳ ಸ್ನೇಹ ಸಂಬಂಧ, ಸಂಸ್ಕೃತಿ ಹೀಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆಯೂ ಚರ್ಚೆ …

Read More »