ತೀವ್ರ ಕುತೂಹಲ ಮೂಡಿಸಿರುವ ರಾಜ್ಯ ವಿಧಾನಪರಿಷತ್ ನ 25 ಸ್ಥಾನಕ್ಕೆ ಮತದಾನ ಆರಂಭವಾಗಿದೆ. 6,072 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ದಕ್ಷಿಣ ಕನ್ನಡ, ಧಾರವಾಡ, ವಿಜಯಪುರ, ಮೈಸೂರಿನ ತಲಾ 2 ಕ್ಷೇತ್ರ, ಚಿಕ್ಕಮಗಳೂರು, ಕಲಬುರಗಿ, ಉತ್ತರ ಕನ್ನಡ, ಬೀದರ್, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಕೋಲಾರ, ತುಮಕೂರು ಸೇರಿದಂತೆ ಒಟ್ಟು 20 …
Read More »MLC ಎಲೆಕ್ಷನ್ ಹೊತ್ತಲ್ಲೇ ಬಹಿರಂಗವಾಯ್ತು ಅಭ್ಯರ್ಥಿ ಅಶ್ಲೀಲ ವಿಡಿಯೋ
ವಿಜಯಪುರ: ವಿಜಯಪುರ -ಬಾಗಲಕೋಟೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಜಯಪುರ -ಬಾಗಲಕೋಟೆ ವಿಧಾನಪರಿಷತ್ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಅವರ ವಿಡಿಯೋ ಮತದಾನಕ್ಕೆ ಮೊದಲು ಬಯಲಾಗಿರುವುದು ವಿರೋಧಿಗಳ ಕೃತ್ಯವಿರಬಹುದು ಎಂದು ಹೇಳಲಾಗಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅಭ್ಯರ್ಥಿ ತಮ್ಮ ಚಾರಿತ್ರ್ಯವಧೆ ಮಾಡಲು ಅಶ್ಲೀಲ ವಿಡಿಯೋ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.
Read More »ಶಾಲೆಗಳ ಬಂದ್ ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿ ಆಧಾರದ ಮೇಲೆಯೇ ಈ ನಿರ್ಧಾರ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಶಾಲಾ-ಕಾಲೇಜುಗಳಿಗೆ ರಜೆ ನೀಡಬೇಕಾದ ಗಂಭೀರ ಸ್ಥಿತಿ ಸಧ್ಯಕ್ಕಿಲ್ಲ. ಶಾಲೆಗಳಿಗಾಗಿ ಯಾವುದೇ ಹೊಸ ಮಾರ್ಗಸೂಚಿಯೂ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ನಾಗೇಶ್, ಶಾಲೆಗಳಿಗೆ ಈ ಹಿಂದೆ ಇದ್ದ ಮಾರ್ಗಸೂಚಿಯೇ ಮುಂದುವರೆಯಲಿದೆ. ಸಧ್ಯಕ್ಕೆ ಶಾಲೆಗಳು ಬಂದ್ ಮಾಡುವುದಿಲ್ಲ. ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿ ಆಧಾರದ ಮೇಲೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ರಾಜ್ಯದ ಕೆಲ ಹಾಸ್ಟೇಲ್ ಗಳಲ್ಲಿ …
Read More »ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?
ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು, ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ …
Read More »ರಾಜ್ಯ ಸರ್ಕಾರದ ಬಳಿ ಇರುವ ರೈತರು ಮತ್ತು ವಿದ್ಯಾರ್ಥಿಗಳ ಸಮಗ್ರ ಮಾಹಿತಿಯುಳ್ಳ ದತ್ತಾಂಶವನ್ನು ಸಂಪೂರ್ಣ ಸಹಮತಿಯ ಆಧಾರದಲ್ಲಿ ಖಾಸಗಿ ಕಂಪನಿಗಳಿಗೆ ಮಾರಾಟ !
ಬೆಂಗಳೂರು: ರಾಜ್ಯ ಸರ್ಕಾರದ ಬಳಿ ಇರುವ ರೈತರು ಮತ್ತು ವಿದ್ಯಾರ್ಥಿಗಳ ಸಮಗ್ರ ಮಾಹಿತಿಯುಳ್ಳ ದತ್ತಾಂಶವನ್ನು ಸಂಪೂರ್ಣ ಸಹಮತಿಯ ಆಧಾರದಲ್ಲಿ ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸುವ ‘ಇ-ಸಹಮತಿ’ ಯೋಜನೆ ಅಂತಿಮ ಅನುಮೋದನೆಗಾಗಿ ಕಾನೂನು ಇಲಾಖೆಯನ್ನು ತಲುಪಿದೆ. ತನ್ನ ಬಳಿ ಇರುವ ದತ್ತಾಂಶವನ್ನು ಮಾರಾಟ ಮಾಡುವುದಕ್ಕಾಗಿ ‘ಸಹಮತಿ ಆಧಾರದ ವ್ಯವಸ್ಥೆ’ಯೊಂದನ್ನು ರೂಪಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ 2020ರ ಡಿಸೆಂಬರ್‌ನಲ್ಲಿ ಆರಂಭಿಸಿತ್ತು. ಅದರ ಮುಂದುವರಿದ ಭಾಗವಾಗಿಯೇ ಕೃಷಿ ಉತ್ಪನ್ನ ಮಾರುಕಟ್ಟೆ …
Read More »ಹಿಂದುಳಿದ ವರ್ಗಗಳ 2ಎ ಪಟ್ಟಿಗೆ ಸೇರಿಸುವಂತೆ 24 ದಾಖಲೆ ಸಲ್ಲಿಸಿದ ಪಂಚಮಸಾಲಿ ನಿಯೋಗ
ಬೆಂಗಳೂರು: ಪಂಚಮಸಾಲಿ ಸಮು ದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಸೇರಿಸುವ ಬೇಡಿಕೆ ಕುರಿತು ಅಧ್ಯಯನ ನಡೆಸುತ್ತಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ನೇತೃತ್ವದ ಸಮಿತಿ ಎದುರು ಸೋಮವಾರ ಹಾಜರಾದ ಹರಿಹರ ಪಂಚಮಸಾಲಿ ಪೀಠದ ವಚನಾ ನಂದ ಸ್ವಾಮೀಜಿ ನೇತೃತ್ವದ ನಿಯೋಗ, ತಮ್ಮ ಬೇಡಿಕೆಗೆ ಪೂರಕವಾಗಿ 24 ದಾಖಲೆಗಳನ್ನು ಸಲ್ಲಿಸಿತು. ಪಂಚಮಸಾಲಿ ಮಠಾಧೀಶರು ಮತ್ತು ಮುಖಂಡರ ನಿಯೋಗದ ಪರವಾಗಿ ವಾದ ಮಂಡಿಸಿದ ವಕೀಲ ಬಿ.ಎಸ್.ಪಾಟೀಲ, ‘1871 …
Read More »ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
👉👉ನಿನ್ನೆ ಸಿದ್ದರಾಯ್ಯನವರು ಹೇಳಿದ್ದಕ್ಕೆ ಇವತ್ತು ಉತ್ತರ ಕೊಡಲು ಬಂದಿದ್ದೆನೆ..👍👍👍👍 ————- ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ರಾಯಬಾಗದಲ್ಲಿ ಮಹಾವೀರ ಭವನದಲ್ಲಿ ಸೋಮವಾರ ನಡೆದ …
Read More »ಚಾಮುಂಡಿ, ವರುಣಾ ಬಿಟ್ಟು ಬಾದಾಮಿಗೆ ಯಾಕೆ ಬಂದ್ರಿ?, ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಚಿಮ್ಮನಕಟ್ಟಿ ಬಹಿರಂಗ ವಿರೋಧ
ಬಾಗಲಕೋಟೆ : ಚಾಮುಂಡಿ, ವರುಣಾ ಕ್ಷೇತ್ರ ಬಿಟ್ಟು ಬಾದಾಮಿಗೆ ಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಬಿ ಬಿ ಚಿಮ್ಮನಕಟ್ಟಿ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿದ್ದಾರೆ.ವಿಧಾನ ಪರಿಷತ್ ಚುನಾವಣೆ ಪ್ರಚಾರದ ಅಂಗವಾಗಿ ಬಾದಾಮಿ ಪಟ್ಟಣದ ಅಕ್ಕ ಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರ ಎದುರೇ ಚಿಮ್ಮನಕಟ್ಟಿ ಟೀಕಾಪ್ರಹಾರ ನಡೆಸಿದ್ದಾರೆ. ಚಾಮುಂಡಿ, ವರುಣಾ ಬಿಟ್ಟು ಬಾದಾಮಿಗೆ ಯಾಕೆ ಬಂದ್ರಿ?, ನೀವು ಇಲ್ಲಿ ಬಂದ ಮೇಲೆ ‘ಹುಲಿ’ಯನಾಗಿದ್ದ ನನ್ನನ್ನು ‘ಇಲಿ’ …
Read More »ಧರ್ಮಸ್ಥಳ ಮೇಳ: ಬಯಲಾಟ ಪ್ರದರ್ಶನ ಪ್ರಾರಂಭ
ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಸೇವಾ ಬಯಲಾಟ ಪ್ರದರ್ಶನಗಳು ಭಾನುವಾರ ಮಂಗಳೂರಿನಲ್ಲಿ ಸೇವಾ ಪ್ರದರ್ಶನದೊಂದಿಗೆ ಪ್ರಸ್ತುತ ವರ್ಷದ ತಿರುಗಾಟ ಆರಂಭಗೊಂಡಿದೆ. ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾ ಹರಿಕೆ ಬಯಲಾಟ ಪ್ರದರ್ಶನಗಳು ನಡೆದಿವೆ. ಕಳೆದ ಆರು ವರ್ಷಗಳಿಂದ ಕಾಲಮಿತಿಯ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ. ಪ್ರತಿದಿನ ಸಂಜೆ ಗಂಟೆ 7 ರಿಂದ 12 ರ ವರೆಗೆ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯುತ್ತದೆ. ಪ್ರೇಕ್ಷಕರಿಂದ, ಸೇವಾಕರ್ತರಿಂದ ಹಾಗೂ ಕಲಾವಿದರಿಂದಲೂ ಇದಕ್ಕೆ ಉತ್ತಮ …
Read More »ಖಾನಾಪುರ ಅಭಿವೃದ್ಧಿಗೆ ಸ್ಪಂದಿಸದ ರಾಜ್ಯ ಸರಕಾರದ ವಿರುದ್ದ ಸುವರ್ಣಸೌಧವರೆಗೂ ಪಾದಯಾತ್ರೆಗೆ ಮುಂದಾದ ಅಂಜಲಿ ನಿಂಬಾಳ್ಕರ್
ಖಾನಾಪುರ ಅಭಿವೃದ್ಧಿಗೆ ಸ್ಪಂದಿಸದ ರಾಜ್ಯ ಸರಕಾರದ ವಿರುದ್ದ ಸುವರ್ಣ ಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಳಗಾವಿಯ ಅಧಿವೇಶನ ಹಿನ್ನೆಲೆ ಈ ಭಾಗದ ರೈತರು, ಸಾರ್ವಜನಿಕರು ಸೇರಿ ಹೆಸರಲ್ಲಿ ಡಿ. 12ರಂದು ಖಾನಾಪುರ ಸಂಘರ್ಷ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಮಾಹಿತಿ ನೀಡಿದ್ದಾರೆ. ಖಾನಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 13ರಿಂದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಮಗ್ರ …
Read More »
Laxmi News 24×7