ಬೆಂಗಳೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಮೆರವಣಿಗೆ ನಡೆಸುವ ವೇಳೆಯಲ್ಲಿ ಅವಘಡವೊಂದು ಸಂಭವಿಸಿದ್ದು, ಪೊಲೀಸ್ ಸಿಬ್ಬಂದಿಯ ಕಾಲಿನ ಮೇಲೆ ಜೀಪ್ ಹರಿದಿದೆ. ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು ಆಗಮಿಸಿದ ವೇಳೆ ಅವರನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿತ್ತು. ಸಾಕಷ್ಟು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿಕ್ಕಜಾಲ ಪೋಲಿಸ್ ಠಾಣೆಯ ಸಿಬ್ಬಂದಿ ಶಿವಕುಮಾರ್ …
Read More »ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದ ಸಿಎಂ
ಬೆಂಗಳೂರು: ವಿರೋಧಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ವೇದಿಕೆಯಿಂದಲೇ ಖಡಕ್ ಸಂದೇಶ ರವಾನಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನನ್ನ ಬಗ್ಗೆ ಅನುಮಾನ, ಟೀಕೆಗಳು ವ್ಯಕ್ತವಾಗುತ್ತಿದೆ. ನನ್ನ ಬಗೆಗಿನ ಟೀಕೆಗಳು ನನಗೆ ಆಶಿರ್ವಾದ, ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ. 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಹೊಸ ಚಿಂತನೆ, ಹೊಸ ಹಾದಿ, ಹೊಸ ದಿಕ್ಸೂಚಿಯೊಂದಿಗೆ ನವ ಕರ್ನಾಟಕ ನಿರ್ಮಾಣದ ಸಂಕಲ್ಪ ಮಾಡಿದರು. ನನಗೆ ಕೇವಲ 20 …
Read More »75th Independence Day 2021 Live Updates: ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆ
ನವದೆಹಲಿ, ಆಗಸ್ಟ್ 15: ಭಾರತದ 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ದೇಶಪ್ರೇಮಿಗಳು ಸಜ್ಜಾಗಿದ್ದಾರೆ. ಅಮೃತ ಮಹೋತ್ಸವದ ಘಳಿಗೆಯನ್ನು ಇನ್ನಷ್ಟು ಚಂದವಾಗಿಲಸು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳಿಂದ ದೇಶಾದ್ಯಂತ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಕೊರೊನಾ ಆತಂಕದಿಂದ ಈ ಸ್ವಾತಂತ್ರ್ಯೋತ್ಸವದ ಉತ್ಸಾಹಕ್ಕೆ ಅಲ್ಪ ಮಟ್ಟಿನ ಉತ್ಸಾಹ ಕಡಿಮೆಯಾಗಿದೆ. 74 ನೇ ಸ್ವಾತಂತ್ರ್ಯ ದಿನವನ್ನು ಕೂಡ ಕೊರೊನಾ ನಿಯಮಗಳನ್ನು ಪಾಲಿಸಿಯೇ ಆಚರಿಸಲಾಗಿತ್ತು. ಧ್ವಜಾರೋಹಣವಾದ ಬಳಿಕ ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನದ ಭಾಷಣ ಬೆಳಗ್ಗೆ 7.30ಕ್ಕೆ …
Read More »ನೂತನ ಗುಜರಿ ನೀತಿಯು ಆಟೊಮೊಬೈಲ್ ವಲಯಕ್ಕೆ ಹೊಸ ಅನನ್ಯತೆಯನ್ನು ನೀಡಲಿದೆ: ಪ್ರಧಾನಿ ಮೋದಿ
ರಾಷ್ಟ್ರೀಯ ವಾಹನ ಗುಜರಿ ನೀತಿಗೆ ಶುಕ್ರವಾರ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು,ಈ ಉಪಕ್ರಮವು ಆವರ್ತ ಆರ್ಥಿಕತೆಯನ್ನು ಉತ್ತೇಜಿಸಲಿದೆ ಮತ್ತು ಆರ್ಥಿಕ ಅಭಿವೃದ್ಧಿ ಪ್ರಕ್ರಿಯೆಯನ್ನು ಹೆಚ್ಚು ಸುಸ್ಥಿರಗೊಳಿಸಲಿದೆ ಹಾಗೂ ಪರಿಸರ ಸ್ನೇಹಿಯಾಗಿಸಲಿದೆ ಮತ್ತು ಆಟೊಮೊಬೈಲ್ ವಲಯಕ್ಕೆ ಹೊಸ ಅನನ್ಯತೆಯನ್ನು ನೀಡಲಿದೆ ಎಂದು ಹೇಳಿದರು. ಇಲ್ಲಿ ಆಯೋಜಿಸಲಾದ ಹೂಡಿಕೆದಾರರ ಸಮಾವೇಶದಲ್ಲಿ ವರ್ಚುವಲ್ ಭಾಷಣವನ್ನು ಮಾಡಿದ ಮೋದಿ,ನೂತನ ನೀತಿಯು ಹಳೆಯ ಮತ್ತು ಅನರ್ಹ ವಾಹನಗಳ ಪುನರ್ಬಳಕೆಯ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು. ಬಳಕೆಗೆ …
Read More »ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶ
ವಿಜಯಪುರ: ಸಾರ್ವಜನಿಕ ಗಣೇಶೋತ್ಸವ ನಿಷೇಧಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ಬ್ಯಾನ್ ಮಾಡಿದ್ದರೆ ಓಕೆ. ಆದರೆ ಈ ಬ್ಯಾನ್ ಕೇವಲ ಗಣೇಶ ಚತುರ್ಥಿಗಷ್ಟೇ ಸೀಮಿತವಾದ್ರೆ ಸರಿಯಲ್ಲ. ಅದನ್ನ ನಾನು ವಿರೋಧ ಮಾಡ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ 3 ನೇ ಅಲೆ ಪಕ್ಕಾ ಇದೆ ಅಂತಾ ವರದಿ ಇದೆ. ನಾವು …
Read More »ಮದುವೆಯಾದ ಬಳಿಕ ಬಲವಂತದ ಸೆಕ್ಸ್ : ಇದನ್ನು ಕಾನೂನು ಬಾಹಿರ ಎನ್ನಲಾಗುವುದಿಲ್ಲ ಎಂದ ಮುಂಬೈ ಕೋರ್ಟ್
ಮುಂಬೈ : ಮುಂಬೈ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಸಂಜಾಶ್ರೀ ಜೆ ಘರಾತ್ ಅವರು ‘ ಪತಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಭೋಗ ಮಾಡಿದ್ದಾರೆ ಎಂದು ಆರೋಪಿಸಿದ ಮಹಿಳೆಯ ದೂರು ಕಾನೂನು ಪರಿಶೀಲನೆಗೆ ನಿಲ್ಲುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಾಧೀಶರು ಆರೋಪಿಯು ‘ಪತಿಯಾಗಿರುವುದರಿಂದ ಅವನು ಯಾವುದೇ ಕಾನೂನುಬಾಹಿರ ಕೆಲಸವನ್ನು ಮಾಡಿದ್ದಾನೆ ಎಂದು ಹೇಳಲಾಗುವುದಿಲ್ಲ’ ಎಂದು ಹೇಳಿದರು. ಪ್ರಾಸಿಕ್ಯೂಷನ್ ಪ್ರಕಾರ, ಮಹಿಳೆ ಕಳೆದ ವರ್ಷ ನವೆಂಬರ್ ೨೨ ರಂದು ವಿವಾಹವಾದರು. ಮದುವೆಯ ನಂತರ, ತನ್ನ …
Read More »2ಎ ಮೀಸಲಾತಿ ನೀಡದಿದ್ದರೆ ಅ. 1ರಿಂದ ವಿವಿಧ ಹಂತದ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸೆ.15 ರೊಳಗೆ 2ಎ ಮೀಸಲಾತಿ ನೀಡದಿದ್ದರೆ, ಅ 1ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸೇರಿದಂತೆ ವಿವಿಧ ಹಂತದ ಹೋರಾಟ ಕೈಗೊಳ್ಳಲು, ಪಂಚಮಸಾಲಿ ಮೀಸಲಾತಿ ಚಳವಳಿಗಾರರ ದುಂಡು ಮೇಜಿನ ಸಭೆ ನಿರ್ಣಯಿಸಿದೆ. ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, 2ಎ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮದಿಂದ ಬೇಂಗಳೂರುವರೆಗೆ ನಡೆಸಿದ ಪಾದಯಾತ್ರೆ ಹಾಗೂ ಹೋರಾಟದ ವೇಳೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹ …
Read More »ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಚೆಕ್ ಹಸ್ತಾಂತರ
ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ಹಾಲಪ್ಪ ಆಚಾರ್ ಮತ್ತು ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದು ಕೋಟಿ ರೂಪಾಯಿಗಳ ಚೆಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಡೆದ ಮೊದಲ ಚೆಕ್ ಇದು ಎಂದು ಸಿಎಂ ಬಸವರಾಜ …
Read More »ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ …
Read More »ಪ್ರೇಮ ವೈಫಲ್ಯ- ವಾಟ್ಸಪ್ ಸ್ಟೇಟಸ್ ಹಾಕಿ, ಪ್ರೇಮಿ ಆತ್ಮಹತ್ಯೆ
ದಾವಣಗೆರೆ: ಪ್ರೀತಿಸಿದ ಯುವತಿ ತನ್ನ ಜೊತೆ ಮದುವೆಯಾಗುವುದನ್ನು ನಿರಾಕರಿಸಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ನಗರದ ಎಚ್‍ಕೆಆರ್ ವೃತ್ತದ ಲೆನಿನ್‍ನಗರದ ಹೊಸ ಬಡಾವಣೆ ನಿವಾಸಿ ಮಹಾಂತೇಶ್ (24) ಅತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಹಲವು ವರ್ಷಗಳಿಂದ ಕರೂರು ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್, ಕುಟುಂಬಕ್ಕೆ ಆಧಾರವಾಗಿದ್ದ. ಇದೇ ಗಾರ್ಮೆಂಟ್ಸ್ ನಲ್ಲಿನ ಯುವತಿಯೊಬ್ಬಳ ಪರಿಚಯವಾಗಿ, …
Read More »