Breaking News

Uncategorized

ಪೈಪ್​ಗೆ ಬಳಸುವ ಸಲ್ಯೂಷನ್ ಇಟ್ಟಿದ್ದ ಮನೆಯಲ್ಲಿ ಬೆಂಕಿ; ಓರ್ವನ ಸ್ಥಿತಿ ಗಂಭೀರ

ಬೆಂಗಳೂರು: ಪಿವಿಸಿ ಪೈಪ್​ಗೆ ಬಳಸುವ ಸಲ್ಯೂಷನ್ ಇಟ್ಟಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಲಗ್ಗೆರೆ ಬಳಿಯ ಮನೆಯಲ್ಲಿ ಪೈಪ್​ಗಳನ್ನು ಇಟ್ಟು ರೀಫಿಲಿಂಗ್ ಮಾಡಲಾಗುತ್ತಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ (Fire) ನಂದಿಸಿದ್ದು, ಈ ಸಂಬಂಧ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನೊಯ್ಡಾ: ಹೊತ್ತಿ ಉರಿದ ಬ್ಯಾಗ್​ ತಯಾರಿಕಾ ಕಾರ್ಖಾನೆ ನೊಯ್ಡಾದ ಸೆಕ್ಟರ್​ 63 ಪ್ರದೇಶದಲ್ಲಿ …

Read More »

ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಸೋಮವಾರ, ಆಗಸ್ಟ್ 9) ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಮೈಸೂರಿನಲ್ಲಿಂದು ಸಿಎಂ ಪ್ರವಾಸ : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, …

Read More »

ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದಶಾಸಕ ಸತೀಶ್ ಜಾರಕಿಹೊಳಿ

ಗೋಕಾಕ: ರಾಜ್ಯ ಸರ್ಕಾರದ ಬಿಜೆಪಿ ನಾಯಕರಿಂದ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಬದಲಾವಣೆ ಮಾಡಲು ಪ್ರಯತ್ನಿಸಿದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ …

Read More »

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ …

Read More »

ಬಿಜೆಪಿಗೆ ಸೇರ್ಪಡೆಯಾದ ಬಿಎಸ್ ಪಿ ಶಾಸಕ ಎನ್.ಮಹೇಶ್: ಸಚಿವ ಸ್ಥಾನದ ಸುಳಿವು ನೀಡಿದ ಬಿಎಸ್ ವೈ

ಬೆಂಗಳೂರು: ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಹೇಶ್ ಚಳುವಳಿಯ ಹಿನ್ನೆಲೆಯಿಂದ ಬಂದವರು. ಅವರ ಸಂಘಟನಾ ಶಕ್ತಿ ಬಹು ದೊಡ್ಡದು. ಅವರು ಶಾಸಕರಾಗುವ ಮುನ್ನವೇ ದಲಿತರ ಹೃದಯ ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ …

Read More »

ಬೆಲ್ಲದ್‍ಗೆ ತಪ್ಪಿದ ಸಚಿವ ಸ್ಥಾನ – ಅವಳಿ ನಗರದಲ್ಲಿ ಆಕ್ರೋಶ

ಧಾರವಾಡ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಶಾಸಕರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ ನಗರದ ಜುಬ್ಲಿ ವೃತ್ತದಲ್ಲಿ ಏಕಾಏಕಿ ರಸ್ತೆ ತಡೆಮಾಡಿದ ಕಾರ್ಯಕರ್ತರು, ಬೆಲ್ಲದ್ ಪರ ಘೋಷಣೆ ಕೂಗಿದರು. ಮತ್ತೊಂದು ಕಡೆ ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿರುವ ನವನಗರದಲ್ಲಿ ಬೆಲ್ಲದ ಬೆಂಬಲಿಗರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಬಿಎಸ್ ಯಡಿಯೂರಪ್ಪ ಭಾವಚಿತ್ರದ ಮೇಲೆ ಧಿಕ್ಕಾರ ಎಂದು ಬರೆದು …

Read More »

29 ನೂತನ ಸಚಿವರ ಪಟ್ಟಿ ರಿಲೀಸ್, ಡಿಸಿಎಂ ಹುದ್ದೆ ರದ್ದು..!

ಬೆಂಗಳೂರು,ಆ.4-ಕೊನೆ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಇಂದು 29 ಪಟ್ಟಿ ಬಿಡುಗಡೆಯಾಗುವ ಮೂಲಕ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿತು.ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿ ಬೋಧಿಸುವರು. ಪ್ರಾದೇಶಿಕತೆ, ಸಾಮಾಜಿಕ ನ್ಯಾಯ, ಹಳಬರು ಹಾಗೂ ಹಿರಿಯರನ್ನು ಒಳಗೊಂಡ ಸಮತೋಲನದ ಸಂಪುಟ ರಚನೆಯಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗಟ್ಟಿ ನಿರ್ಧಾರ ಕೈಗೊಂಡಿರುವ …

Read More »

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ ರಾಜಭವನದಲ್ಲಿ ನಡೆಯಲಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 29 ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣೆ ಆರಂಭವಾಗಿದೆ. ಪ್ರಮಾಣ ವಚನ ಸ್ವೀಕರಿಸಲಿರುವವರು – 1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ 2.ಆರ್.ಅಶೋಕ್- ಪದ್ಮನಾಭ ನಗರ 3.ಬಿಸಿ ಪಾಟೀಲ್ – ಹಿರೇಕೇರೂರು 4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ 5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು 6.ಉಮೇಶ್ ಕತ್ತಿ- ಹುಕ್ಕೇರಿ 7.ಎಸ್.ಟಿ.ಸೋಮಶೇಖರ್- …

Read More »

ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಧನಸಹಾಯ ಒದಗಿಸಿದ ಪ್ರಿಯಾಂಕಾ ಜಾರಕಿಹೊಳಿ

    ಗೋಕಾಕ: ನೇಪಾಳದಲ್ಲಿ ಅಗಸ್ಟ್ 10 ರಂದು ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪ ಹಂಜಿ ಹಾಗೂ ತಪಸಿ ಗ್ರಾಮದ ಮಲ್ಲಪ್ಪ ನಾಯಕ ಎಂಬ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ ಸಹಾಯ ಒದಗಿಸಿದರು.   ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ …

Read More »

ಸಚಿವರ ಪಟ್ಟಿ ಫೈನಲ್: ನಾಳೆ ಪ್ರಮಾಣವಚನ ಸ್ವೀಕಾರ; ಸಂಪುಟಕ್ಕೆ 20-24 ಮಂತ್ರಿಗಳ ಸೇರ್ಪಡೆ..

ರಾಜ್ಯದ ಮುಖ್ಯಮಂತ್ರಿಯಾದ ದಿನದಿಂದ ಬಸವರಾಜ ಬೊಮ್ಮಾಯಿ ಅವರಿಗೆ ಕಬ್ಬಿಣದ ಕಡಲೆಯಾಗಿ ಕಾಡುತ್ತಿದ್ದ ಸಂಪುಟ ವಿಸ್ತರಣೆಗೆ ಕಡೆಗೂ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಬುಧವಾರ 20ರಿಂದ 24 ಸಚಿವರು ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತ ಎಂದು ಪಕ್ಷದ ಉನ್ನತ ಮೂಲಗಳಿಂದ ಗೊತ್ತಾಗಿದೆ. ಸೋಮವಾರ ರಾತ್ರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ …

Read More »