ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳು ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಯಾವುದೇ ಸಂಘ …
Read More »ತನ್ನ ವಿರುದ್ಧವೇ ತನಿಖೆ ನಡೆಸಲು ಲೋಕಾಯುಕ್ತರಿಗೆ ಪತ್ರ ಬರೆದ ಕೋಟಾ ಶ್ರೀನಿವಾಸ ಪೂಜಾರಿ
ಉಡುಪಿ, : ಸರಳ ಸಜ್ಜನಿಕೆಯಿಂದ ರಾಜ್ಯದ ಜನರ ಗಮನ ಸೆಳೆದಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಮೇಲೆ ಆದಾಯಕ್ಕಿಂತ ಹೆಚ್ಚು ಗಳಿಕೆಯ ಟೀಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗುತ್ತಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು 6 ಕೋಟಿ ಮೌಲ್ಯದ ಮನೆಯನ್ನು ಕಟ್ಟಿಸುತ್ತಿದ್ದು, ಇದು ಸಾಮಾನ್ಯ ರಾಜಕಾರಣಿಯ ಲಕ್ಷಣ ಎಂದು ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಟಾ ಶ್ರೀನಿವಾಸ ಪೂಜಾರಿಯವರ ಅರು ಕೋಟಿಯ ಮನೆ ಅಂತಾ ಸುದ್ದಿ …
Read More »`ತೆನೆ’ ಇಳಿಸಿ `ಕೈ’ ಹಿಡಿದ ಮಧು ಬಂಗಾರಪ್ಪ..
ಹುಬ್ಬಳ್ಳಿ : ಮಾಜಿ ಸಿಎಂ ಎಸ್ ಬಂಗಾರಪ್ಪ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಬಾವುಟ ಹಿಡಿದರು. ಅಲ್ಲದೆ ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜೊತೆ …
Read More »ಸಂಪುಟ ರಚನೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ, ಸಲಹೆಯನ್ನು ನೀಡಲ್ಲ -ಬಿಎಸ್ವೈ
ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿ ರವಿ ಮನೆಗೆ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕಿನ ಬೊಮ್ಮಲಾಪುರಕ್ಕೆ ಭೇಟಿ ನೀಡಿದ ಬಿಎಸ್ವೈ ಅವರು ಮೃತ ಅಭಿಮಾನಿಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಗಣೇಶ ಚತುರ್ಥಿಯ ನಂತರ ರಾಜ್ಯದ ತುಂಬ ಪ್ರವಾಸ ಮಾಡಲಿದ್ದೇನೆ ಎಂದಿದ್ದಾರೆ. ಪಕ್ಷವನ್ನು ಬಲ …
Read More »ಕುದರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ನೆಟ್‌ವರ್ಕ್ ಸೌಲಭ್ಯ ಕಲ್ಪಿಸುವಂತೆ ಆಗ್ರಹ
ಸಾಗರ: ತಾಲ್ಲೂಕಿನ ಕುದರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಮೊಬೈಲ್ ನೆಟ್‌ವರ್ಕ್ ಸೌಲಭ್ಯ ಕಲ್ಪಿಸಲು ಅಗತ್ಯವಿರುವ ವ್ಯವಸ್ಥೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು ಒತ್ತಾಯಿಸಿದ್ದಾರೆ. ತಾಲ್ಲೂಕಿನ ಕುದರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇರುವ ಕಾರಣ ಬುಧವಾರ ಜಿಯೋ ಕಂಪೆನಿ ಪ್ರತಿನಿಧಿಗಳೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾತನಾಡಿದರು. ನಾಡಿಗೆ ಬೆಳಕು ನೀಡಲು ಜಲ ವಿದ್ಯುತ್ …
Read More »ಬಿಜೆಪಿ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ; ಕಾಂಗ್ರೆಸ್ನಿಂದ BSY ಆಡಳಿತ ವೈಫಲ್ಯಗಳ ಬಗ್ಗೆ ಪುಸ್ತಕ ರಿಲೀಸ್
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ನಡೆಸಿದ 2 ವರ್ಷಗಳ ಆಡಳಿತ ವೈಫಲ್ಯ ಕುರಿತ ಪುಸ್ತಕವನ್ನ ಮಾಜಿ ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಸಿದ್ದರಾಮಯ್ಯ.. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 2 ವರ್ಷ ಪೂರೈಸಿ, ಸಂಭ್ರಮದ ದಿನ ಆಚರಿಸಿ ರಾಜೀನಾಮೆ ನೀಡಿದ್ರು. ಸಂಕಷ್ಟದ ಸಮಯದಲ್ಲಿ ರಾಜ್ಯವನ್ನು ಅಭಿವೃದ್ಧಿ ಪತದತ್ತ ತೆಗೆದುಕೊಂಡು ಹೋಗಿದ್ದೀವಿ ಅಂದ್ರು. ಯಡಿಯೂರಪ್ಪ ನಿರ್ಗಮಿಸಿದ್ದಾರೆ, ಬಸವರಾಜು ಬೊಮ್ಮಾಯಿಗೆ ಅಭಿನಂದಿಸಿ, ಶುಭವಾಗಲಿ ಎಂದು ಹಾರೈಸುವೆ. ಶಶಿಕಲಾ ಜೊಲ್ಲೆಯವರ ರಾಜೀನಾಮೆ ಪಡೆಯಲಿಲ್ಲ ಈ …
Read More »ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ.
ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ 54 ಜನ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದರು. ಎನ್ಡಿಆರ್ಎಫ್ ತಂಡ ಹಾಗೂ ಸ್ಥಳೀಯ ಪೊಲೀಸರು ಜನರನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಕೃಷ್ಣಾ ನದಿಯಿಂದ ಸವದಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ನೀರು ಬಂದಿದ್ದರಿಂದ ಗ್ರಾಮಸ್ಥರು ಸಿಲುಕಿಕೊಂಡಿದ್ದರು. ಉತ್ತರ ಕನ್ನಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ …
Read More »ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವೃದ್ಧ.
ಬೆಳಗಾವಿ : ಬೆಳಗಾವಿಯ ಹಳೆ ಗಾಂಧಿನಗರದ ಬಳಿಯಿರುವ ರೈಲು ಹಳಿಯ ಮೇಲೆ ವೃದ್ಧನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಬೆಳಗಾವಿಯ ಹಳೆ ಗಾಂಧಿನಗರ ಹೈವೆ ಸೇತುವೆ ಹತ್ತಿರ ಇರುವ ರೈಲು ಹಳಿಯ ಮೇಲೆ ಆ ವೃದ್ಧ ಬೆಳಿಗ್ಗೆಯಿಂದ ಕುಳಿತಿದ್ದನಂತೆ, ಮಧ್ಯಾಹ್ನ 3:15 ರ ವೇಳೆಗೆ ಬೆಳಗಾವಿ – ಶೇಡಬಾಳ ರೈಲು ಸಾಂಬ್ರಾ ಕಡೆಯಿಂದ ಬರುತ್ತಿದ್ದಂತೆಯೇ ತಕ್ಷಣ ಹಳಿಯ …
Read More »ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. ಹಾನಿಯ …
Read More »ಕಡೋಲಿ, ಕಾಕತಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಜಾಪರವಾಡಿ, ಕಡೋಲಿ, ದೇವಗಿರಿ ಹಾಗೂ ಕಾಕತಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಕತಿ, ಹೊನಗಾ, ಜಮನಾಳ, ಕೆಂಚನಟ್ಟಿ, ಬೈಲೂರ, ಮಳವಳ್ಳಿ, ಹೊಸವಂಟಮುರಿ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ಭೇಟಿ ನೀಡಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದರು. ಈ ಗ್ರಾಮಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ಮನೆ, ಬೆಳೆ, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದು, ಇವುಗಳನ್ನು …
Read More »