Breaking News

Uncategorized

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸೂಚನೆ

ನವದೆಹಲಿ (ಸೆ.01): ಬಹುನಿರೀಕ್ಷಿತ ಕರ್ನಾಟಕದ ಮೇಕೆದಾಟು ಯೋಜನೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಗೆ ತಮಿಳುನಾಡು, ಕೇರಳ ಸೇರಿ ಎಲ್ಲಾ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆ ಇದೆ. ಹಾಗೆಯೇ ತಮಿಳುನಾಡು ಕೈಗೊಂಡಿರುವ ಗುಂಡಾರ್‌ ನದಿ ನೀರು ಜೋಡಣೆಗೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಇನ್ನು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಾಧಿಕಾರದ ಅಧ್ಯಕ್ಷ …

Read More »

ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ,

ಲಂಡನ್‌(ಸೆ.01): ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ, ಇತ್ತ ತಾಲಿಬಾನ್‌ ಉಗ್ರರು ಈ ಹಿಂದೆ ಅಮೆರಿಕ ನೇತೃತ್ವದ ನ್ಯಾಟೋ ಪಡೆಗಳ ಪರ ಕೆಲಸ ಮಾಡಿದ್ದಾರೆ ಎನ್ನಲಾದ ಆರೋಪಿಗಳ ಮನೆಗಳ ಮೇಲೆ ತಾವೇ ಶರಣಾಗಬೇಕು. ಇಲ್ಲದಿದ್ದರೆ ನಿಮಗೆ ಸಾವಿನ ಶಿಕ್ಷೆ ನೀಡಬೇಕಾಗುತ್ತದೆ ಎಂಬ ಭಯಾನಕವಾದ ‘ಬೆದರಿಕೆ ಪತ್ರ’ ಅಂಟಿಸುತ್ತಿದ್ದಾರೆ. ಹಿಂದೆ ತಾಲಿಬಾನ್‌ ಉಗ್ರರನ್ನು ಶೋಧಿಸಲು ಅಮೆರಿಕದ ಪಡೆಗಳಿಗೆ ನೆರವು ನೀಡಿದ್ದಾರೆ ಎನ್ನಲಾದ ಆರೋಪಿಗಳನ್ನು ಉದ್ದೇಶಿಸಿ ಈ ಪತ್ರದಲ್ಲಿ ನೀವು ನ್ಯಾಟೋ ಪಡೆಗಳ …

Read More »

ವಿದ್ಯುತ್ ಸ್ಪರ್ಶಿಸಿ ಸಹೋದರರಿಬ್ಬರ ದಾರುಣ ಸಾವು

ಚಿಕ್ಕೋಡಿ/ಬೆಳಗಾವಿ: ನೀರು ಹಾಯಿಸಲು ಬಾವಿಯ ಮೋಟರ್ ಸ್ಟಾರ್ಟ್ ಮಾಡಲು ಹೋಗಿ ಸಹೋದರಿಬ್ಬರು ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಲಜಿ ಗ್ರಾಮದ ಬಡಿಗೇರ ತೋಟದಲ್ಲಿ ನಡೆದಿದೆ. ಬಾವಿಗೆ ಅಳವಡಿಸಲಾಗಿದ್ದ ನೀರೆತ್ತುವ ಮೋಟರ್ ನ್ನು ಬೆಳಗ್ಗೆ ಸ್ಟಾರ್ಟ್ ಮಾಡಲು ಹೋಗಿ ರಾಜು ಬಾಳಪ್ಪ ಬಡಿಗೇರ ಹಾಗೂ ಸಹೋದರ ಶಂಕರ್ ರಾಮಪ್ಪ ಬಡಿಗೇರ ಸಾವೀಗಿಡಾಗಿದ್ದಾರೆ. ಮದುವೆ ವಯಸ್ಸಿಗೆ ಬಂದ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮಳೆ, ಗಾಳಿಗೆ ವಿದ್ಯುತ್ ತಂತಿಗಳು …

Read More »

6 ರಿಂದ 8 ನೇ ತರಗತಿ ಆರಂಭಕ್ಕೆ ಸಮ್ಮತಿ|’ಸೆಪ್ಟೆಂಬರ್ 6′ ರಿಂದ ಶಾಲೆ ಶುರು

ಬೆಂಗಳೂರು: ರಾಜ್ಯದಲ್ಲಿ 6, 7 ಹಾಗೂ 8 ನೇ ತರಗತಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಇಂದು( ಆ.30) ತಜ್ಞರ ಜೊತೆ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್. ಅಶೋಕ್ ಅವರು, ಕೋವಿಡ್ ಪಾಸಿಟಿವಿಟಿ ದರ 2 % ಕಡಿಕೆ ಇರುವ ತಾಲೂಕುಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಸೆಪ್ಟೆಂಬರ್ 6 ರಿಂದ ಭೌತಿಕ ತರಗತಿಗಳ (6,7,8)ನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡುತ್ತಿದೆ ಎಂದರು. 50% …

Read More »

ನಾಪತ್ತೆಯಾಗ್ತಿದ್ದಾರೆ ಸರ್ಕಾರಿ ಇಲಾಖೆ ಸಿಬ್ಬಂದಿ! ಪೊಲೀಸರಿಂದ ತನಿಖೆಗೆ ವಿಶೇಷ ತಂಡ ರಚನೆ.

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿ ಏಕಾಏಕಿ ನಾಪತ್ತೆಯಾಗಿದ್ದು ಭಾರಿ ಕೋಲಾಹಲ ಸೃಷ್ಟಿಸಿದೆ. ಇದರ ಕಾರಣ ಹುಡುಕುವ ಮುನ್ನವೇ ಇದೀಗ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿಯ ಸಿಬ್ಬಂದಿ ಕೂಡ ನಾಪತ್ತೆಯಾಗಿದ್ದಾರೆ! ಈ ಹಿಂದೆ ನಾಪತ್ತೆಯಾಗಿದ್ದ ಪ್ರಕಾಶ್‌ಬಾಬು ಅವರ ಪ್ರಕರಣ ಪಶ್ಚಿಮ ಠಾಣೆಯಲ್ಲಿ ದಾಖಲೆಯಾಗಿದ್ದರೆ, ಈಗ ಶಿವಪ್ಪ ಅವರು ನಾಪತ್ತೆಯಾಗಿದ್ದು, ಅವರ ಪತ್ನಿ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಸರ್ಕಾರಿ ಇಲಾಖೆಯ …

Read More »

200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆ: ಸತೀಶ ಜಾರಕಿಹೊಳಿ

ಬೆಳಗಾವಿ: 200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಅದನ್ನು ಈಗ ಮತ್ತೆ ಪ್ರಸ್ತಾಪಿಸುತ್ತಿದ್ದಾರೆ. ಇಷ್ಟು ದಿನ ಅವರು ಏನು ಮಾಡುತ್ತಿದ್ದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ    ಪ್ರಶ್ನಿಸಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಡ್ ಗಳ ಮೇಲೆ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸವುದು ಹೇಳಿದಷ್ಟು ಸುಲಭವಲ್ಲ. ಮನೆಗಳ ಸಕ್ರಮವನ್ನು ಸರ್ಕಾರ …

Read More »

BSY ಅಧಿಕಾರ ತ್ಯಾಗ ಮಾಡುವಾಗ ಕಣ್ಣೀರಿಟ್ಟಿದ್ದೇಕೆ ಗೊತ್ತಾ..?

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಅಂದು ರಾಜೀನಾಮೆ ಘೋಷಣೆ ವೇಳೆ ಗದ್ಗದಿತರಾಗಿ ಕಣ್ಣೀರಿಟ್ಟರು ಇದಕ್ಕೆ ಕಾರಣವೇನು ಎಂಬುದು ನಮಗೆ ಗೊತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕೋವಿಡ್ ಸಂದರ್ಭದಲ್ಲಿ, ಆಕ್ಸಿಜನ್, ಬೆಡ್ ನಿರ್ವಹಣೆಗಳ ವಿಚಾರದಲ್ಲಿ ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ಹಗರಣ ನಡೆದಿದೆ. ಕೋವಿಡ್ ನಿಂದ ಸಂಕಷ್ಟಕ್ಕೀಡಾದ ಜನ ಆಸ್ಪತ್ರೆ, ಆಂಬುಲೆನ್ಸ್ ಗಳಿಗಾಗಿ ಬೀದಿ ಬೀದಿಗಳಲ್ಲಿ ಕ್ಯೂ ನಿಂತಿದ್ದಾರೆ. ಭಾರಿ ಪ್ರಮಾಣದ ಭ್ರಷ್ಟಾಚಾರ …

Read More »

ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಅವರ ನೇತೃತ್ವದಲ್ಲಿ ನಗರದ ಕೆಲವೆಡೆ 112 ಸಹಾಯವಾಣಿ

ಮಹಾನಗರ: ಮಂಗಳೂರು ನಗರ ಪೊಲೀಸರು ಶನಿವಾರ “ತುರ್ತು ಸಹಾಯವಾಣಿ  112′ ಮೂಲಕ ಮಹಿಳೆಯರಿಂದ ಕರೆಗಳನ್ನು ಸ್ವೀಕರಿಸಿ ತ್ವರಿತ ವಾಗಿ ಸ್ಥಳಕ್ಕೆ ತೆರಳಿ ಸ್ಪಂದಿಸಿದರು.   “ಮಹಿಳೆಯರ ಸುರಕ್ಷೆಗಾಗಿ ಒಂದು ದಿನ’ ಎಂಬ ಈ ಅಭಿಯಾನದಲ್ಲಿ ಸಬ್‌ಇನ್‌ಸ್ಪೆಕ್ಟರ್‌ ದರ್ಜೆಗಿಂತ ಮೇಲಿನ ದರ್ಜೆಯ ಪೊಲೀಸ್‌ ಅಧಿಕಾರಿಗಳು, ಮಹಿಳಾ ಪೊಲೀಸ್‌ ಅಧಿ ಕಾರಿ, ಸಿಬಂದಿಯನ್ನೊಳಗೊಂಡ 100ಕ್ಕೂ ಅಧಿಕ ಪೊಲೀಸರು ಪಾಲ್ಗೊಂಡಿ ದ್ದರು. ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಈ ವಿಶೇಷ ಅಭಿಯಾನ ನಡೆಯಿತು. …

Read More »

ಶಿವಮೊಗ್ಗ ಶಂಕರ ವಲಯ ವ್ಯಾಪ್ತಿಯಲ್ಲಿ ಗಂಧದ ಮರಗಳ ಕಳ್ಳತನ ಜೋರಾಗಿ ನಡೆಯುತ್ತಿದೆ.

ಶಿವಮೊಗ್ಗ ತಾಲೂಕಿನ ಬಿಕೋನಹಳ್ಳಿ ಬಳಿ ಅಧಿಕಾರಿಗಳು ಹೇಮಣ್ಣನ ಬೈಕ್ ಪರಿಶೀಲನೆ ಮಾಡಿದ್ದು, ಬೈಕ್ ಮತ್ತು ಏಳು ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧ ಮರದ ತುಂಡುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎತ್ತ ನೋಡಿದರೂ ಬೆಲೆಬಾಳುವ ಮರಗಳು ಕಣ್ಣಿಗೆ ಬೀಳುತ್ತವೆ. ಇಂತಹ ಅರಣ್ಯದಲ್ಲಿ ಮರಗಳ ಚೋರರ ಹಾವಳಿ ಬಲು ಜೋರಾಗಿದೆ. ಅದರಲ್ಲೂ ಬೆಲೆಬಾಳುವ ಶ್ರೀಗಂಧದ ಮರ ಹಂತ ಹಂತವಾಗಿ ಅರಣ್ಯದಿಂದ ಕಣ್ಮರೆಯಾಗುತ್ತಿವೆ. ಹೀಗಾಗಿ ಇದಕ್ಕೆ ಅಂತ್ಯ ಹಾಡಲು ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳ …

Read More »

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.

ರಾಮನಗರ: ನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು.   ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ‌ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು. ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 …

Read More »