ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್ಪೋರ್ಟ್ ಗೇಟ್ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …
Read More »ಕಳೆದವಾರ ಎಸಿಬಿ ದಾಳಿಗೆ ಒಳಗಾಗಿದ್ದ ಸಕಾಲ ಸೇವೆ ಆಡಳಿತಾಧಿಕಾರಿ ಎಲ್.ಸಿ ನಾಗರಾಜು ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಂಗಳೂರು: ಕಳೆದವಾರ ಎಸಿಬಿ ದಾಳಿಗೆ ಒಳಗಾಗಿದ್ದ ಸಕಾಲ ಸೇವೆ ಆಡಳಿತಾಧಿಕಾರಿ ಎಲ್.ಸಿ ನಾಗರಾಜು ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೀವ್ರ ಹೃದಯಾಘಾತಕ್ಕೀಡಾಗಿದ್ದ ನಾಗರಾಜು ಪತ್ನಿ ಅವರನ್ನು ಬೆಂಗಳೂರಿನ ಯಶವಂತಪುರದ ಕೊಲಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನವೆಂಬರ್ 24ರಂದು ನಾಗರಾಜು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಪಾರಪ್ರಮಾಣದ ಚಿನ್ನಾಭರಣ, 43,00,000 ಲಕ್ಷ ನಗದು ಪತ್ತೆಯಾಗಿತ್ತು. ನೆಲಮಂಗಲದಲ್ಲಿ ಕೈಗಾರಿಕಾ ಕಟ್ಟಡ, 2 …
Read More »ಅಕ್ರಮವಾಗಿ ಗೋವು ಸಾಗಾಟ: ಆರೋಪಿಗಳ ಬಂಧನ
ಉಡುಪಿ: ಭಜರಂಗದಳದ ಕಾರ್ಯಕರ್ತರ ಮೇಲೆ ವಾಹನ ನುಗ್ಗಿಸಿ, ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿ ಮಾರಣಾಂತಿಕ ದಾಳಿಗೊಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರರಾದ ಚರಣ್ ಹಾಗೂ ಕಿರಣ್ ಅವರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು
Read More »ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ: ಶಾಸಕರ ಗಲಾಟೆ ಕುರಿತು ಶೆಟ್ಟರ್ ಪ್ರತಿಕ್ರಿಯೆ
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಹಾಗೂ ಪಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಣೆಬೆನ್ನೂರ ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್ ಶಂಕರ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ಆಗಿಲ್ಲ. ಅವರಿಬ್ಬರು ಕ್ಷೇತ್ರದ ವಿಚಾರದಲ್ಲಿ ಚರ್ಚೆ …
Read More »ಡಿ.14ಕ್ಕೆ ಡಿಕೆಶಿಗೆ ಎಲ್ಲ ಉತ್ತರ ಕೊಡುತ್ತೇನೆ: ಅವತ್ತು ಬೇಕಾದ್ರೆ ವಾರ್ ಆಗಲಿ: ಡಿಕೆಶಿಗೆ ರಮೇಶ ಜಾರಕಿಹೊಳಿ ಓಪನ್ ಚಾಲೆಂಜ್..!
ನನ್ನ ವ್ಯಕ್ಯಿತ್ವ ಏನು, ಡಿಕೆಶಿ ವ್ಯಕ್ತಿತ್ವ ಏನು ಎಂದು ಹೇಳ್ತಿನಿ. ಬೇಕಾದರೆ ಓಪನ್ ವಾರ್ ಆಗಲಿ. ಫಲಿತಾಂಶದ ದಿನ ಎಲ್ಲದಕ್ಕೂ ತಕ್ಕ ಉತ್ತರ ಕೊಡುತ್ತೇನೆ ಎಂದು ಕನಕಪುರ ಬಂಡೆ ಡಿಕೆ ಶಿವಕುಮಾರ್‍ಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಎಂಎಲ್‍ಸಿ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರ ಮಧ್ಯ ಮಾತಿನ ಸಮರ ಮುಂದುವರಿದಿದೆ. ಮೊನ್ನೆಯಷ್ಟೇ ರಮೇಶ ಜಾರಕಿಹೊಳಿ ವಿರುದ್ಧ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದರು. ಇದೀಗ ಡಿಕೆಶಿ …
Read More »ನಮ್ಮದು ಯಾವಾಗಲೂ ಎ ಟೀಮ್, ಎ ಫಾರ್ ಎ ಒನ್-ಲಖನ್ ಜಾರಕಿಹೊಳಿ ಟಾಂಗ್ ಪರಿಷತ್ ಚುನಾವಣಾ ಅಖಾಡದಲ್ಲಿ ಸಹೋದರರ ಸವಾಲ್
ಬೆಳಗಾವಿ ತಾಲೂಕಿನ ಸುಳೇಬಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಯಾರ್ಯಾರೋ ಎ ಟೀಮ್ ಬಿ ಟೀಮ್ ಅಂತಾ ಏನೇನೋ ಹೇಳ್ತಾರೆ. ನಾವು ಯಾವಾಗಲೂ ಎ ಟೀಮ್. ಅಂದ್ರೆ ಎ ಫಾರ್ ಎ1. ನಮ್ಮದು ಎ ಟೀಮ್, ಅವರೇ ಬಿ ಟೀಮ್. ನಾವು ನೀವು ಎ ಟೀಮ್ ಅಂದ್ರೆ ಮತದಾರರು ಎಲ್ಲಾರೂ ನಮ್ಮನ್ನು ನೋಡಿ ಎ ಟೀಮ್ ಎನ್ನಬೇಕು. ಅವರದ್ದು ಒಂದು ಬಿ ಇನ್ನೊಂದು ಸಿ …
Read More »ಪ್ರಥಮ ಪ್ರಾಶಸ್ತ್ಯದ ಮತ ನೀಡಿ:ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ!!
ಬೈಲಹೊಂಗಲ: ಬೆಂಗಳೂರಿನಿಂದ ಬಂದು ಇಲ್ಲಿ ಬಂದು ಮಾತನಾಡುವವರ ಮಾತು ಬೆಳಗಾವಿಯಲ್ಲಿ ಏನೂ ನಡೆಯುವುದಿಲ್ಲ ಎಂದು ವಿಧಾನ ಪರಿಷತ್ತಿನ ಬೆಳಗಾವಿ ದ್ವಿಸದಸ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಅವರು ಪಟ್ಟಣದ ಮುರಗೊಡ ರಸ್ತೆಯ ಪೃಥ್ವಿ ಗಾರ್ಡನ್‌ನಲ್ಲಿ ಮಂಗಳವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ …
Read More »ಗ್ರಾ.ಪಂ ಮಟ್ಟದ ಸಮಸ್ಯೆಗಳಿಗೆ ನಾನು ಧ್ವನಿಯಾಗಿ ನಿಲ್ಲುವೆ-ಪಕ್ಷೇತರ ಅಭ್ಯರ್ಥಿ ಲಖನ್ !!
ಕಿತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನನ್ನು ಆಯ್ಕೆ ಮಾಡಿದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸುತ್ತೇನೆ ಎಂದು ವಿಧಾನ ಪರಿಷತ್ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಳು ಕೇವಲ ಮತ ಕೇಳಲು ಮಾತ್ರ ತಮ್ಮಲ್ಲಿ ಬರುತ್ತಾರೆ. ಚುನಾಯಿತರಾದ ನಂತರ ಅವರ ಇತ್ತ ತಲೆ ಕೂಡ ಹಾಕುವದಿಲ್ಲ. ಅವರಂತೆ ನಾನಲ್ಲ ನನ್ನನ್ನು ಆಯ್ಕೆ ಮಾಡಿ ಕಳುಹಿಸಿದಲ್ಲಿ ಕ್ಷೇತ್ರದ ಅಭಿವೃದ್ಧಿಯ ಜೊತೆೆ …
Read More »ದಾವಣಗೆರೆ : ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತಿದ್ದವರಿಗೆ ಲಸಿಕೆ ಹಾಕಿಸಿದ ತಹಶೀಲ್ದಾರ್
ದಾವಣಗೆರೆ : ಜನ ಲಸಿಕೆ ಹಾಕಿಸಿಕೊಳ್ಳಲು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದರಿಂದ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವು ಆಗಿ ಪರಿಣಮಿಸಿದೆ. ದಾವಣಗೆರೆ ಜಿಲ್ಲೆಯ ಕೈದಾಳೆ ಗ್ರಾಮದಲ್ಲಿ ಲಸಿಕೆ ನೀಡುತ್ತಾರೆ ಎಂಬ ಒಂದೇ ಕಾರಣಕ್ಕೆ ಕೆಲವರು ಕಬ್ಬಿನ ಗದ್ದೆಗಳಲ್ಲಿ ಅವಿತುಕೊಂಡಿದ್ದರು. ಅಂತಹವರನ್ನು ಹೊರಕರೆಸಿದ ದಾವಣಗೆರೆ ತಹಶೀಲ್ದರ್ ಲಸಿಕೆ ಹಾಕಿಸಿದ್ದಾರೆ. ದಾವಣಗೆರೆ ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಮನೆ ಮನೆಗೂ ಹೋಗಿ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಇಲಾಖೆ ಸಿಬ್ಬಂದಿ ಲಸಿಕೆ ನೀಡಲು ಬರುತ್ತಿದ್ದಾರೆಂದು …
Read More »ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ: ಸರ್ಕಾರಕ್ಕೆ ಹೈಕೋರ್ಟ್ ಚಾಟಿ2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು: ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ ಎಂದು ಕಟುವಾಗಿ ಟೀಕಿಸಿದೆ. 2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಬೀದರ್ನ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿರುವ …
Read More »
Laxmi News 24×7