ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ: ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ …
Read More »ಮಕ್ಕಳಿಬ್ಬರಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಮಾಟ-ಮಂತ್ರಕ್ಕೆ ಬಲಿಯಾದವ ಮುಗ್ಧ ಹೆಣ್ಣು ಮಕ್ಕಳು?
ಬೆಳಗಾವಿ: ಹೆಣ್ಣು ಮಕ್ಕಳಿಬ್ಬರಿಗೆ ವಿಷವುಣಿಸಿ ತಂದೆಯೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆ.ಹೆಚ್ ಗ್ರಾಮದಲ್ಲಿ ನಡೆದಿದೆ. ಆದರೆ ಈ ದುರಂತ ಘಟನೆಗೆ ಅಪರಿಚಿತರು ಮಾಡಿಸಿದ ಮಾಟ-ಮಂತ್ರವೇ ಕಾರಣ ಎಂಬ ಹೇಳಿಕೆಗಳು ಕೇಳಿ ಬಂದಿವೆ. ನಾಲ್ಕು ದಿನಗಳ ಹಿಂದೆ ಮನೆಯ ಮುಂದೆ ಮಾಟ-ಮಂತ್ರ ಮಾಡಿಸಿದ್ದ ವಸ್ತುಗಳು ಸಿಕ್ಕಿದ್ದವು. ಇದಾದ ಬಳಿಕ ಅನಿಲ್ ಖಿನ್ನತೆಗೆ ಒಳಗಾಗಿದ್ದ. ಒಂದು ದಿನ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ. ತನ್ನ ಇಬ್ಬರು …
Read More »ಮುಂದಿನ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ : ಶೈಕ್ಷಣಿಕ ಚಟುವಟಿಕೆ ಇನ್ನಷ್ಟು ಚುರುಕು
ಬೆಂಗಳೂರು : ಮುಂದಿನ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿರುವುದರಿಂದ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಸೇರಿದಂತೆ ಶೈಕ್ಷಣಿಕ ಚಟುವಟಿಕೆ ಇನ್ನಷ್ಟು ಚುರುಕುಗೊಳ್ಳಲಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲತಾಂಶ ಪ್ರಕಟಿಸುವ ಸಾಧ್ಯತೆಯಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಫಲಿತಾಂಶಗಳನ್ನು ಸಿದ್ಧಪಡಿಸುವ ಕಾರ್ಯವೂ ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕ ಪರಿಶೀಲಿಸಿ, ತಿದ್ದುಪಡಿಯಿದ್ದಲ್ಲಿ, ಇಲಾಖೆಗೆ …
Read More »ದಕ್ಷ ಅಧಿಕಾರಿ ಅಣ್ಣಾಮಲೈ ಹಾದಿಯಲ್ಲಿ ರವಿ.ಡಿ.ಚನ್ನಣ್ಣನವರ್ ?
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಿಷ್ಠೆ, ಪ್ರಮಾಣಿಕ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ ನಡೆ ತೀವ್ರ ಕೂತುಹಲ ಮೂಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಚೆನ್ನಣ್ಣನವರನ್ನು ಈಚೆಗೆ ರಾಜ್ಯ ಸರ್ಕಾರ ಸಿಐಡಿ ಎಸ್ಪಿಯಾಗಿ ವರ್ಗಾವಣೆ ಮಾಡಿದೆ. ಪ್ರಸ್ತುತ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮಠಯಾತ್ರೆ ಕೈಗೊಂಡಿರುವ ಅವರು, ಚಿತ್ರದುರ್ಗದ ಬಸವ ಮಾಚಿದೇವ ಸ್ವಾಮೀಜಿ, ಕಾಗಿನೆಲೆ ಪೀಠಕ್ಕೆ …
Read More »ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ: ಸಿ.ಟಿ.ರವಿ
ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. …
Read More »ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಯೋಧನ ಅಂತ್ಯಕ್ರಿಯೆ
ಗೋಕಾಕ : ಕಳೆದ ನಾಲ್ಕೈದು ದಿನಗಳ ಹಿಂದೆ ನ್ಯಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಪಘಾತದಲ್ಲಿ ಅಸುನೀಗಿದ್ದ ಗೋಕಾಕ ತಾಲ್ಲೂಕಿನ ವೀರಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಜರುಗಿತು. ಶಿವಾಪುರ ಗ್ರಾಮದ ಯೋಧ ಮಂಜುನಾಥ ಗೌಡಣ್ಣವರ (38) ಯೋಧ ಅಫಘಾತದಲ್ಲಿ ಸಾವನ್ನಪ್ಪಿದ್ದರು. ಮೃತ ಯೋಧನ ಪಾರ್ಥಿವ ಶರೀರ ಬೆಂಗಳೂರಿನಿಂದ ಇಂದು ಬೆಳಿಗ್ಗೆ 7 ಗಂಟೆಗೆ ಯೋಧನ ಸ್ವಗ್ರಾಮ ಗೋಕಾಕ್ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಕರೆತರಲಾಯಿತು. …
Read More »ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ
ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಟ್ರ್ಯಾಕ್ಟರ್ ಮಾಲೀಕರು ಹಾಗೂ …
Read More »ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್
ಮೈಸೂರು: 25 ಕೋಟಿ ರೂ. ವಂಚನೆ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿಲ್ಲ. ತನಿಖೆಯಿಂದ ಮಾತ್ರ ಸತ್ಯಾಂಶ ಬರಲಿದೆ. ನಾನು ಕಾನೂನು ಸಮರ ಮಾಡಲಿದ್ದು ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗುಡುಗಿದ್ದಾರೆ. ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ದೋಖಾ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ನಾನು ಸುದ್ದಿಗೋಷ್ಠಿ ನಡೆಸಬಾರದು ಎಂದು ತೀರ್ಮಾನಿಸಿದ್ದೆ. ಆದರೆ ಮಾಧ್ಯಮಗಳಲ್ಲಿ ತಪ್ಪು ಸಂದೇಶ ಪ್ರಕಟವಾಗಬಾರದು ಎಂಬ ಕಾರಣಕ್ಕೆ …
Read More »ಅಂಚೆ ಕಚೇರಿ ಮಾಸಿಕ ಆದಾಯ ಸ್ಕೀಂ: ನಿಮಗೆ ತಿಳಿದಿರಲಿ ಈ ಮುಖ್ಯ ಮಾಹಿತಿ
ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 50 ದಿನಗಳಿಗೂ ಅಧಿಕ ಕಾಲ ಲಾಕ್ ಡೌನ್ ಘೋಷಿಸಿದ್ದ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿ ಹೋಗಿದ್ದರು. ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವರುಗಳ ನೆರವಿಗಾಗಿ ಎರಡು ಸಾವಿರ ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ …
Read More »ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು
ಹುಬ್ಬಳ್ಳಿ: ಬಿಜೆಪಿ ರೈತ ಮೋರ್ಚಾದ ನಾಯಕ ಈಶ್ವರ ಗೌಡ ಅಣ್ಣನ ಮಗನ ಹತ್ಯೆಯಾಗಿದೆ. ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ. ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದ್ದು ಸಂಜೆ ನಡೆದ ಘಟನೆಗೆ ಹುಬ್ಬಳ್ಳಿ ಜನ ದಂಗಾಗಿದ್ದಾರೆ. ಆರೋಪಿಗಳು ಚಾಕು ಹಾಕಿ ಅಭಿಷೇಕ್ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »