ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ. ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. …
Read More »ಗಂಡನ ಕೊಲೆ: ಪತ್ನಿ ಸೇರಿ ನಾಲ್ವರ ಬಂಧನ
ಯಲ್ಲಾಪುರ: ಗಂಡನನ್ನು ಕೊಲೆ ಮಾಡಿ, ನಂತರ ಆತ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದ ಆರೋಪಿ ಮಹಿಳೆ ಹಾಗೂ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಬಳಗಾರಿನ ಅತ್ತಗಾರಿನ, ಪ್ರಸ್ತುತ ಚಿಕ್ಕಮಾವಳ್ಳಿಯಲ್ಲಿರುವ ಶ್ವೇತಾ ರಾಜೇಶ ನಾಯ್ಕ (29), ಅವರ ತಂದೆ ದೀಪಕ್ ಬುದ್ದಾ ಮರಾಠಿ (53), ತಮ್ಮ ಗಂಗಾಧರ ಮರಾಠಿ (26) ಹಾಗೂ ತಾಯಿ ಯಮುನಾ ಮರಾಠಿ (50) ಬಂಧಿತರು. ರಾಜೇಶ ನಾರಾಯಣ ನಾಯ್ಕ (29) ಕೊಲೆಯಾದವರು. ಪತ್ನಿ ಶ್ವೇತಾ, ತನ್ನ …
Read More »ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ” ಎಂದರು. ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ …
Read More »ಆಗಸ್ಟ್ 2ನೇ ವಾರ ಶಾಲೆ? ವಿಕೇಂದ್ರೀಕೃತ ವ್ಯವಸ್ಥೆಯಲ್ಲಿ ಆರಂಭಕ್ಕೆ ಸಿದ್ಧತೆ
ಬೆಂಗಳೂರು : ಮಕ್ಕಳ ನಿರಂತರ ಕಲಿಕೆ ಮುಂದುವರಿಯಲು ಗ್ರಾಮ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳಲ್ಲಿ ಭೌತಿಕ ತರಗತಿ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಆಗಸ್ಟ್ ಎರಡನೇ ವಾರದ ಅನಂತರ ತರಗತಿಗಳು ಪ್ರಾರಂಭವಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳ ದಾಖಲಾತಿ ನಡೆಯುತ್ತಿದೆ. ಸರಕಾರಿ ಶಾಲಾ ಮಕ್ಕಳಿಗೆ ದೂರದರ್ಶನದ ಸಂವೇದ ಪಾಠ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ಆನ್ಲೈನ್ ತರಗತಿ ನಡೆಯುತ್ತಿದೆ. ಈ ಮಧ್ಯೆ ಗ್ರಾಮ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ಯಾವ ರೀತಿ ಶಾಲೆ ಆರಂಭಿಸಲು …
Read More »ಕೇಂದ್ರ ಸಚಿವ ಸಂಪುಟ ಪುನರಚನೆಗೆ ಕ್ಷಣಗಣನೆ: ಘಟಾನುಘಟಿ ಸಚಿವರುಗಳೇ ಸಂಪುಟದಿಂದ ಔಟ್
ನವದೆಹಲಿ: ಕೇಂದ್ರ ಸಚಿವ ಸಂಪುಟದ ಪುನರಚನೆಗೆ ಕ್ಷಣಗಣನೆಗೆ ಆರಂಭವಾಗಿದ್ದು, ಅದಕ್ಕೂ ಮುನ್ನವೇ ಘಟಾನುಘಟಿ ಸಚಿವರುಗಳೇ ಸಂಪುಟದಿಂದ ಔಟ್ ಆಗಿದ್ದಾರೆ. ಆರೋಗ್ಯ ಸಚಿವ ಹರ್ಷವರ್ಧನ್ ಹಾಗೂ ಶಿಕ್ಷಣ ಸಚಿವ ರಮೇಶ್ ಫೋಖ್ರಿಯಾಲ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರೊನಾ ಎರಡನೇ ತರಂಗವನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿದೆ ಎಂದು ವ್ಯಾಪಕ ಟೀಕೆ ವ್ಯಕ್ತವಾಗಿರುವ ಬೆನ್ನಲ್ಲೇ ಇಬ್ಬರು ಆರೋಗ್ಯ ಮಂತ್ರಿಗಳ ರಾಜೀನಾಮೆ, ಅವರ ತಲೆದಂಡ ಎಂಬ ಮಾತುಗಳು ಕೇಳಿಬರುತ್ತಿವೆ. ಸಂಪುಟ ಪುನರಚನೆಯಲ್ಲಿ ನೂತನ …
Read More »ಸುಗಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ಣಗೊಳಿಸುವ ವಿಶ್ವಾಸವಿದೆ: ಶಶಿಕಲಾ ಜೊಲ್ಲೆ
ಚಿಕ್ಕೋಡಿ: ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಸುಗಮವಾಗಿ ಪರೀಕ್ಷೆ ಪೂರ್ಣಗೊಳಿಸುವ ವಿಶ್ವಾಸ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಶಿಕ್ಷಕರು …
Read More »ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್
ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು. ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …
Read More »ಸದಾನಂದಗೌಡಗೆ ಕೊಕ್; ಶೋಭಾ, ರಾಘವೇಂದ್ರ, ಜಿಗಜಿಗಣಿಗೆ ಸ್ಥಾನ? ಎಲ್ಲರ ಚಿತ್ತ ದೆಹಲಿಯತ್ತ!
ಬೆಳಗಾವಿ/ಚಿತ್ರದುರ್ಗ: ಇಂದು ಸಂಜೆ ಕೇಂದ್ರ ಸಂಪುಟ ಪುನಾರಚನೆಯಾಗಲಿದ್ದು ಎಲ್ಲರ ಗಮನ ದೆಹಲಿಯ ಮೇಲೆ ನೆಟ್ಟಿದೆ. ಕರ್ನಾಟಕದಿಂದ ಹಲವು ಸಂಸದರು ತಮಗೂ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಪ್ರಧಾನಿ ಕಚೇರಿಯ ಕರೆಗಾಗಿ ಕಾಯುತ್ತಿದ್ದಾರೆ. ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮತ್ತು ರಮೇಶ್ ಜಿಗಜಿಣಗಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಹಿರಿಯ ಸಂಸದರನ್ನು ಹೊರತುಪಡಿಸಿ, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಅವರು ಸಂಪುಟಕ್ಕೆ ಸೇರುವ ಸಾಧ್ಯತೆಯಿದೆ. ಆದರೆ ಅವರಿಗೆ ದೆಹಲಿಯಿಂದ ಕರೆ …
Read More »ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …
Read More »ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ
ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿ 8ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 73ವರ್ಷದ ಗೆಹ್ಲೋಟ್ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕರಾಗಿದ್ದಾರೆ.
Read More »