ಅನೇಕ ಬಾರಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿಸಿಕೊಳ್ಳಬೇಕು ಅಂದರೆ ಸಾರ್ವಜನಿಕರಿಗೆ ಅಲ್ಲಿನ ಸಿಬ್ಬಂದಿಯಿಂದ ಕಿರಿಕಿರಿ ಉಂಟಾಗುವುದು ಇದೆ. ಇಂತಹ ಸಂದರ್ಭಗಳಲ್ಲಿ ಅನೇಕರು ಮೇಲಾಧಿಕಾರಿಗಳಿಗೆ ದೂರನ್ನ ಸಹ ನೀಡುತ್ತಾರೆ. ಆದರೆ ಈ ದೂರುಗಳನ್ನ ಕೆಲವರು ಗಂಭೀರವಾಗಿ ಪರಿಗಣಿಸೋದೇ ಇಲ್ಲ. ಆದರೆ ಇನ್ಮೇಲೆ ನೀವು ಈ ರೀತಿಯ ಸಮಸ್ಯೆಗಳನ್ನ ಎದುರಿಸಬೇಕಾಗಿ ಬರೋದಿಲ್ಲ. ಏಕೆಂದರೆ ಸಾರ್ವಜನಿಕರು ನೇರವಾಗಿ ದೂರುಗಳನ್ನ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ತಲುಪಿಸಬಹುದಾಗಿದೆ. ನೀವು ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ದೂರನ್ನ ಸಲ್ಲಿಸಬೇಕು …
Read More »ಕನ್ನಡ ಧ್ವಜ ಮಳೆ-ಬಿಸಿಲಿನಿಂದ ಬಣ್ಣ ಕಳೆದುಕೊಂಡಿದೆ.
ಬೆಳಗಾವಿ: ಮಹಾನಗರ ಪಾಲಿಕೆ ಎದುರು ಅಳವಡಿಸಿರುವ ಕನ್ನಡ ಬಾವುಟ ಮಳೆ-ಬಿಸಿಲಿಗೆ ಮಾಸಿದ್ದರಿಂದ ಅದನ್ನು ಬದಲಾಯಿಸಿ ಹೊಸ ಬಾವುಟ ಅಳವಡಿಸಲು ಸೋಮವಾರ ಬಂದಿದ್ದ ಕನ್ನಡ ಸಂಘಟನೆ ಕಾರ್ಯಕರ್ತರನ್ನು ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು. ಕನ್ನಡ ಹೋರಾಟಗಾರರಾದ ಶ್ರೀನಿವಾಸ ತಾಳೂಕರ ಹಾಗೂ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ದ್ವಜ ಸ್ತಂಬದ ಕಡೆಗೆ ಹೋಗುವುದನ್ನು …
Read More »ಇಂದಿನಿಂದ ರಾಜ್ಯಾದ್ಯಂತ ಅನಲಾಕ್ 3.O ಹಿನ್ನೆಲೆ ಬಹುತೇಕ ದೇವಸ್ಥಾನಗಳು ಓಪನ್ ಆಗಿದ್ದು,
ಬೆಳಗಾವಿ: ಕಳೆದ ಎರಡೂ ವರೆ ತಿಂಗಳು ಬಳಿಕ ಇಂದಿನಿಂದ ರಾಜ್ಯಾದ್ಯಂತ ಅನಲಾಕ್ 3.O ಹಿನ್ನೆಲೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಬಹುತೇಕ ದೇವಸ್ಥಾನಗಳು ಓಪನ್ ಆಗಿದ್ದು, ದೇವಸ್ಥಾನಗಳಲ್ಲಿ ಭಕ್ತರು ದರ್ಶನಕ್ಕೆ ಆಗಮಿಸುತ್ತಿದೆ. ಸವದತ್ತಿ ಯಲ್ಲಮ್ಮನ ದೇವಸ್ಥಾನ ಹಾಗೂ ಜೋಗುಳಭಾವಿ ಸತ್ತೆಮ್ಮ ದೇವಿಯ ದೇವಸ್ಥಾನ ಹೊರತುಪಡಿಸಿ ಜಿಲ್ಲೆಯ ಉಳಿದ ದೇವಸ್ಥಾನಗಳು ಇಂದಿನಿಂದ ಮೊದಲಿನಂತೆ ಓಪನ್ ಆಗುತ್ತಿದ್ದು, ದಕ್ಷಿಣಕಾಶಿ ಎಂದೇ ಪ್ರಸಿದ್ಧ ಪಡೆದಿರುವ ಬೆಳಗಾವಿ ಕಪಿಲೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಜನರ ದಂಡು ಆಗಮಿಸುತ್ತಿದೆ. ಕೋವಿಡ್ …
Read More »ಸತೀಶ್ ಜಾರಕಿಹೊಳಿಯವರು ಬಿ ಜೆ ಪಿಗೆ ಕೆಂಡ ಕಾರಿದರು….
ಗೋಕಾಕ : ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ಗುಡುಗಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳನ್ನು ಬಗೆ ಹರಿಸುವ ಮೂಲಕ, …
Read More »ಯುವಕ ಮಂಡಳಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ
ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು. ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು …
Read More »50ಕ್ರೀಡಾ ಪಟುಗಳಿಗೆ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಅಮರನಾಥ ಜಾರಕಿಹೊಳಿ ವಿತರಿಸಿದರು.
ಗೋಕಾಕ: ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಇಂದು ( ಸೋಮವಾರ) ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ SCP /TSP ಯೋಜನೆ ಅಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಭಾಗವಹಿಸಿದ 50ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಟಿ , ಆರ್ ಕಾಗಲ …
Read More »ಬೆಳಗಾವಿ ಉಪಚುನಾವಣೆಗೆ 13.54 ಕೋಟಿ ರು. ಖರ್ಚು
ಬೆಳಗಾವಿ (ಜು.05): ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸರ್ಕಾರದಿಂದ 13.54 ಕೋಟಿ ರು. ಖರ್ಚು ಆಗಿರುವುದು ಮಾಹಿತಿ ಹಕ್ಕಿನಿಂದ ಬಹಿರಂಗಗೊಂಡಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಅವರು ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಅಧಿಕಾರಿಗಳು ನೀರಿನಂತೆ ಪೋಲು ಮಾಡಿದ್ದಾರೆ ಎಂದು ಆರೋಪಿಸಿದರು. ಯಾವುದೇ ಜನಪ್ರತಿನಿಧಿ ಅವಧಿಗೆ ಮುನ್ನ ಪಕ್ಷಾಂತರ ಮಾಡುವ, ರಾಜೀನಾಮೆ ನೀಡಿದ ಮೇಲೆ …
Read More »ಬೆಳಗಾವಿ : ದಾಂಪತ್ಯ ಜೀವಕ್ಕೆ ಕಾಲಿಟ್ಟ ಅಂಧ ಜೋಡಿ
ಬೆಳಗಾವಿ : ದೇವರ ಶಾಪಕ್ಕೆ ಗುರಿಯಾಗಿ ಹುಟ್ಟಿನಿಂದ ಅಂಧತ್ವದಲ್ಲೇ ಬದುಕು ಕಳೆಯುತ್ತಿದ್ದ ಅಂಧರಿಬ್ಬರು ಕೊರೊನಾ ನಿಯಮಾವಳಿಯಂತೆ ಸರಳ ಮದುವೆ ಮಾಡಿಕೊಂಡರು. ಇಲ್ಲಿನ ಹನುಮಾನ ನಗರದ ಭಕ್ತಿವಾಸ ಸಾಂಸ್ಕೃತಿಕ ಭವನದ ಕಾರ್ಯಾಲಯದಲ್ಲಿ ಉಷಾ ತಾಯಿ ಪೋತದಾರ್ ಫೌಂಡೇಶನ್ನ ಆಶ್ರಯದಲ್ಲಿ ಬೆಳಗಾವಿಯ ದೀಪಾ ಹಾಗೂ ಬೆಂಗಳೂರಿನ ರವಿ ಅಂಧ ಜೋಡಿಯ ಮಂಗಲ ಕಾರ್ಯ ನೆರವೇರಿತು. ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬೆಳಗಾವಿಯ ಉಷಾ ಪೋತದಾರ್ ಫೌಂಡೇಶನ್ ಮುಖ್ಯಸ್ಥರು ಅಂಧ ಜೋಡಿಯ ಮದುವೆ …
Read More »ಚಾಂಪಿಯನ್ ಟಗರಿಗೆ ಬಂಗಾರದ ಬೆಲೆ; ಎಂಟು ಲಕ್ಷ ಕೊಡುತ್ತೇವೆ ಎಂದರೂ ಮಾರದ ಟಗರು ಮಾಲೀಕ
ಬಾಗಲಕೋಟೆ: ಒಂದು ಟಗರಿಗೆ ಅಬ್ಬಬ್ಬಾ ಎಂದರೆ ಎಷ್ಟು ಬೆಲೆ ಇರಬಹುದು. ಇಪ್ಪತ್ತು ಸಾವಿರ ಹೆಚ್ಚೆಂದರೆ ಐವತ್ತು ಇನ್ನು ಹೆಚ್ಚೆಂದರೆ ಒಂದು ಲಕ್ಷ. ಆದರೆ ಬಾಗಲಕೋಟೆಯ ಟಗರನ್ನು ಬರೊಬ್ಬರಿ ಎಂಟು ಲಕ್ಷಕ್ಕೆ ಖರೀದಿಗೆ ಕೇಳಿದ್ದಾರೆ. ಆದರೆ ಗಮನಿಸಬೇಕಾದ ಅಂಶ ಎಂದರೆ ಎಂಟು ಲಕ್ಷ ಕೊಡುವುದಕ್ಕೆ ಬಂದರೂ ಈ ಟಗರಿನ ಯಜಮಾನ ಮಾತ್ರ ಟಗರನ್ನು ಮಾರಾಟ ಮಾಡುವುದಕ್ಕೆ ತಯಾರಿಲ್ಲ. ಅಷ್ಟಕ್ಕೂ ಈ ಟಗರಿಗೆ ಇಷ್ಟೊಂದು ಬೆಲೆ ಬರುವುದಕ್ಕೆ ಕಾರಣ ಏನು? ಈ ಟಗರಲ್ಲಿ …
Read More »50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ …
Read More »