ಸಲಗ’ ಸಿನಿಮಾ ಸ್ಯಾಂಡಲ್ವುಡ್ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್ 15ಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಕೊವಿಡ್ನಿಂದ ಅದು ಸಾಧ್ಯವಾಗಿಲ್ಲ. ಈಗ ಸಲಗ ತಂಡ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಆಗಸ್ಟ್ 20 ದುನಿಯಾ ವಿಜಯ್ ನಟನೆಯ ‘ಸಲಗ’ ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರ …
Read More »ವಾರದ ಹಿಂದೆ ಪ್ರವಾಹ ಹಾಗೂ ಮಳೆಯಿಂದಾಗಿ ಲೋಳಸೂರ ಸೇತುವೆ ಸಂಪೂರ್ಣ ಜಲಾವೃತ: 10 ದಿನಗಳೊಳಗೆ ಸೇತುವೆ ದುರಸ್ತಿಗೊಳಿಸಿ ಬಾಲಚಂದ್ರ ಜಾರಕಿಹೊಳಿ ಸೂಚನೆ
ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು ೧೦ ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಅಧಿಕಾರಿಗಳ ತಂಡಕ್ಕೆ ಹದಗೆಟ್ಟಿರುವ ಸೇತುವೆ ಹಾಗೂ ರಸ್ತೆ ದುರಸ್ತಿ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ. ವಾರದ ಹಿಂದೆ ಪ್ರವಾಹ ಹಾಗೂ ಮಳೆಯಿಂದಾಗಿ ಲೋಳಸೂರ ಸೇತುವೆ …
Read More »ಇನ್ಮುಂದೆ ನಾನು ಸೂಪರ್ ಸಿಎಂ ಅಲ್ಲ ಎಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು: ಇನ್ಮುಂದೆ ನಾನು ಸೂಪರ್ ಸಿಎಂ ಅಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸಿಎಂ ಬದಲಾಗಿದ್ದರಿಂದ ನಾನು ಸೂಪರ್ ಸಿಎಂ ಟ್ಯಾಗ್ ನಿಂದ ಹೊರಗೆ ಬಂದಿರೋದಕ್ಕೆ ಸಂತೋಷವಾಗಿದ್ದೇನೆ. ಮುಂದೆ ಪಕ್ಷದಲ್ಲಿ ಅಥವಾ ಸರ್ಕಾರದೊಳಗೆ ಕೆಲಸ ಮಾಡಬೇಕು ಎಂಬುದನ್ನ ಹೈಕಮಾಂಡ್ ನಿರ್ಧರಿಸಲಿದೆ. 17 ಜನರು ಪಕ್ಷ ಮತ್ತು ಯಡಿಯೂರಪ್ಪನವರನ್ನು ನಂಬಿಕೊಂಡು ಬಂದವರು. ಎಲ್ಲರನ್ನು ಪಕ್ಷ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದರು. ಬಸವರಾಜ ಬೊಮ್ಮಾಯಿ ಅವರನ್ನು …
Read More »ಗಡ್ಡ ಬಿಟ್ಟಾಗ ಶಿವಾಜಿ, ಈಗ ಬಸವಣ್ಣ: ಶಾಸಕ ಯತ್ನಾಳ್
ಬೆಂಗಳೂರು: ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದು ಸ್ಮಾರ್ಟ್ ಆಗಿದ್ದೇನೆ. ಗಡ್ಡ ಬಿಟ್ಟಾಗ ಶಿವಾಜಿ ಆಗಿದ್ದೆ, ಈಗ ಬಸವಣ್ಣ ಆಗಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಾನೂ ಎಂದೂ ಮುಖ್ಯಮಂತ್ರಿ, ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ. ಈ …
Read More »ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ …
Read More »ಇಂದೇ ಹೊಸ ಸಿಎಂ ಆಯ್ಕೆ; ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ
ಬೆಂಗಳೂರು(ಜು.27): ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆ, ಇಂದು ಹೊಸ ಸಿಎಂ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ವೀಕ್ಷಕರಾಗಿ ಕೇಂದ್ರದಿಂದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಅರುಣ್ ಸಿಂಗ್ ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಇಂದು ಸಂಜೆ 7.30ಕ್ಕೆ ನಗರದ ಕ್ಯಾಪಿಟಲ್ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ತ್ರಿಮೂರ್ತಿಗಳು ಶಾಸಕಾಂಗ ಪಕ್ಷದ ಸಭೆಯ ನೇತೃತ್ವ ವಹಿಸಲಿದ್ದಾರೆ. ಬಹುತೇಕ ಇಂದೇ ಹೊಸ ಸಿಎಂ …
Read More »ಹಬ್ಬದ ಕೂಳಿಗೆ ಆಸೆ ಬಿದ್ದು ವರ್ಷದ ಕೂಳು ಕಳೆದುಕೊಂಡ್ರಾ ಬಾಂಬೆ ಟೀಮ್!
ಬೆಂಗಳೂರು, ಜು. 27: ಅಧಿಕಾರದ ಆಸೆಗೆ ಬಿದ್ದು ಮಾತೃ ಪಕ್ಷಕ್ಕೆ ಮಣ್ಣೆರಚಿ ಬಿಜೆಪಿ ಸರ್ಕಾರವನ್ನು ಸ್ಥಾಪಿಸಿದ್ದ ಬಾಂಬೆ ಗ್ಯಾಂಗ್ ವಿಚಲಿತಕ್ಕೆ ಒಳಗಾಗಿದೆ. ಪ್ರಭಾವಿ ಖಾತೆಗಳನ್ನು ಕರುಣಿಸಿದ್ದ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕೆ ಬದುಕನ್ನೇ ಮುಡಿಪಿಟ್ಟ ಬಿಎಸ್‌ವೈ ಅವರಿಂದಲೇ ರಾಜೀನಾಮೆ ಪಡೆದ ಬಿಜೆಪಿ ಪಕ್ಷ ಪಕ್ಷಾಂತರಿಗಳಿಗೆ ಮುಂದಿನ ದಿನಗಳಲ್ಲಿ ಎಷ್ಟು ಮರ್ಯಾದೆ ಕೊಡಬಹುದು ಎಂಬ ಪ್ರಶ್ನೆ ಎದುರಾಗಿದೆ. ಹಬ್ಬದ ಕೂಳಿಗೆ ಆಸೆ ಬಿದ್ದು ವರ್ಷದ ಕೂಳು …
Read More »ಬೆಂಗಳೂರಿಗೆ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಆಗಮನ; ಕೇಂದ್ರದ ವೀಕ್ಷಕರನ್ನು ಸ್ವಾಗತಿಸಿದ ಬಿಜೆಪಿ ನಾಯಕರು
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನವಾಗಲಿದೆ ಎಂದು ತಿಳೀಸಿದ್ದಾರೆ. ಇಂದು ಸಂಜೆ ಶಾಸಕಾಂಗ ಸಭೆ ನಡೆಯುತ್ತದೆ. ಧರ್ಮೇಂದ್ರ ಪ್ರಧಾನ್ ಮತ್ತು ಕಿಶಾನ್ ರೆಡ್ಡಿ ಬರ್ತಿದ್ದಾರೆ. ಸಭೆಯ ಬಳಿಕ ಸಿಎಂ ಹೆಸರು ಬಹಿರಂಗ ಮಾಡ್ತೀವಿ ಎಂದು ಉಸ್ತುವಾರಿ ನಾಯಕ ಅರುಣ್ ಸಿಂಗ್ ಹೇಳಿದ್ದಾರೆ. ಯಡಿಯೂರಪ್ಪನವರ ಮಾರ್ಗದರ್ಶನ ಮತ್ತು ಸಹಕಾರ ಪಡೆಯುತ್ತೇವೆ. ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಅಗತ್ಯವಿದೆ. ಸಂಸದೀಯ ಮಂಡಳಿ ನಿರ್ದೇಶನದಂತೆ …
Read More »ಬಿ.ಎಸ್. ಯಡಿಯೂರಪ್ಪ ಅವರ ಕಣ್ಣೀರು ಎಷ್ಟು ಅಪಾಯಕಾರಿ ಗೊತ್ತಾ?
ಬೆಂಗಳೂರು, ಜು. 26: ಬಿ.ಎಸ್. ಯಡಿಯೂರಪ್ಪ ಸಿಟ್ಟು ಕ್ಷಣಿಕ, ಪಟ್ಟು ಹಿಡಿದು ಕೂತರೆ ಮುಗಿಸುವ ತನಕ ಬಿಡದ ಛಲಗಾರ. ಬಿ.ಎಸ್. ಯಡಿಯೂರಪ್ಪ ಅವರ ಕಣ್ಣೀರು ಸುನಾಮಿಯನ್ನೇ ಸೃಷ್ಟಿ ಮಾಡುತ್ತದೆ! ರಾಜೀನಾಮೆ ಕೊಡುವ ಮುನ್ನ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಕಣ್ಣೀರಿನ ಅರೆ ಗಂಟಲಿನ ಧ್ವನಿಯಲ್ಲಿ ಹೊಗಳಿದ್ದಾರೆ. ಆನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ. ಆದರೆ, ಬಿಎಸ್ ವೈ ಅವರ ಕಣ್ಣೀರಿನ ವಿದಾಯ ಬಿಜೆಪಿಯ ಪಾಲಿಗೆ ದೊಡ್ಡ ಪೆಟ್ಟು ಕೊಡಲಿದೆ ಎಂಬ ಚರ್ಚೆ …
Read More »ಅಭಯ್ ಪಾಟೀಲ ಹಾಗೂ ಬಾಲಚಂದ್ರ ಜಾರಕಿಹೊಳಿ ಹೊಸ ಸಂಪುಟದಲ್ಲಿ ಮಂತ್ರಿ ಗಳಾಗತಾರ….?
ಬೆಂಗಳೂರು – ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಕುರಿತು ವಿಶೇಷ ಪ್ರೀತಿ ಹೊಂದಿದ್ದರು. ಹಾಗಾಗಿಯೇ ಅವರ ಸಂಪುಟದಲ್ಲಿ ನಾಲ್ವರಿಗೆ ಸಚಿವಸ್ಥಾನ ನೀಡಲಾಗಿತ್ತು. ಜೊತೆಗೆ 10ಕ್ಕೂ ಹೆಚ್ಚು ಜನರಿಗೆ ಬೇರೆ ಬೇರೆ ಹುದ್ದೆ ನೀಡಲಾಗಿತ್ತು. ಬೆಳಗಾವಿ ಜಿಲ್ಲೆಯ ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಸ್ಥಾನ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಶ್ರೀಮಂತ ಪಾಟೀಲ ಅವರಿಗೆ ಮಂತ್ರಿಸ್ಥಾನ ನೀಡಲಾಗಿತ್ತು. ಜೊತೆಗೆ, ಶಂಕರಗೌಡ ಪಾಟೀಲ ಅವರಿಗೆ ದೆಹಲಿ ಪ್ರತಿನಿಧಿ ಸ್ಥಾನ, ಆನಂದ ಮಾಮನಿಗೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನ, ಪಿ.ರಾಜೀವ, …
Read More »