ರಾಜ್ಯಕ್ಕೆ ಒಳ್ಳೆಯ ಸರ್ಕಾರ ನೀಡಲು ಆಗದವರು ಇದೀಗ ಮುಖ್ಯಮಂತ್ರಿ ಬದಲಾವಣೆ ಮಾಡುವ ಕಸರತ್ತು ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ರು. ಬಿಜೆಪಿ ರಾಜ್ಯಕ್ಕೆ ಒಳ್ಳೆಯ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ಎಡವಿದೆ. ಡಬಲ್ ಎಂಜಿನ್ ಸರ್ಕಾರ ಇದ್ದರೂ ಸಹ ಇವರ ಕೈಲಿ ಒಳ್ಳೆಯ ಆಡಳಿತ ನೀಡಲು ಸಾಧ್ಯವಾಗಲಿಲ್ಲ. ಈ ಸರ್ಕಾರ ಗೌರವ ಎಲ್ಲಿ ಉಳಿಸಿಕೊಂಡಿದೆ..? ಯಾವ …
Read More »ಆಲಮಟ್ಟಿ ಜಲಾಶಯ: 24 ಗೇಟ್‌ಗಳಿಂದ ನೀರು ಬಿಡುಗಡೆ
ಆಲಮಟ್ಟಿ(ವಿಜಯಪುರ): ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯ ಸುರಿಯುತ್ತಿರುವ ಕಾರಣ, ಆಲಮಟ್ಟಿಗೆ ಅಪಾರ ಪ್ರಮಾಣದ ನೀರು ಹರಿದು ಬರುವ ನಿರೀಕ್ಷೆಯಿದೆ. ಹೀಗಾಗಿ ಜಲಾಶಯದಿಂದ 1.30 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಮುಂದಿನ ಎರಡು ದಿನದೊಳಗೆ ಜಲಾಶಯದ ಒಳಹರಿವು 1.5 ಲಕ್ಷ ಕ್ಯುಸೆಕ್ ದಾಟುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಗುರುವಾರ ಬೆಳಿಗ್ಗೆಯಿಂದಲೇ ಹೊರಹರಿವು ಹೆಚ್ಚಿಸಲಾಗಿದೆ. 24 ಗೇಟ್ ಮೂಲಕ ನೀರು ಹೊರಕ್ಕೆ: ‘ಜಲಾಶಯದ 26 ಗೇಟ್‌ಗಳ ಪೈಕಿ 6 ಗೇಟ್‌ಗಳನ್ನು 1 …
Read More »ಬಿಜೆಪಿಯಲ್ಲಿ ಜೋರಾಯ್ತು ಹಂಗಾಮಿ ಸಿಎಂ ಚರ್ಚೆ..!
ಬೆಂಗಳೂರು,ಜು.22- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ ತೆರವಾಗಲಿರುವ ಈ ಸ್ಥಾನಕ್ಕೆ ಯಾರು ಎಂಬ ಮಿಲಿಯನ್ ಡಾಲರ್ ಪ್ರಶ್ನೆ ರಾಜ್ಯದ ಜನತೆಯನ್ನು ಕಾಡುತ್ತಿದೆ. ಇದೇ 26ರಂದು ಸಿಎಂ ಬಿಎಸ್‍ವೈ ಅವರು ಸಂಜೆ ರಾಜ್ಯಪಾಲ ತಾವರ್ ಚಂದ್ರ ಗೆಲ್ಹೋಟ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವವರೆಗೂ ಹಂಗಾಮಿ ಸಿಎಂ ಆಗಿ ನೀವೇ ಮುಂದುವರೆಯಬೇಕೆಂದು ರಾಜ್ಯಪಾಲರು ಅವರಿಗೆ ನಿರ್ದೇಶನ ನೀಡುವರು. ಬಳಿಕ ಶಾಸಕಾಂಗ ಸಭೆ …
Read More »ದಿಲ್ಲಿ ಮೇಲೆ ಎಲ್ಲರ ಭಾರ! ಬಿಎಸ್‌ವೈ ಮನೆಗೆ ಮುಂದುವರಿದ ಶ್ರೀಗಳ ಭೇಟಿ
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳ ನಡುವೆಯೇ ಎಲ್ಲರ ದೃಷ್ಟಿ “ದಿಲ್ಲಿ ನಿರ್ಧಾರ’ ದತ್ತ ನೆಟ್ಟಿದೆ. ಈ ಮಧ್ಯೆ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಯಡಿಯೂರಪ್ಪ, ಯಾರೂ ತಮ್ಮ ಪರವಾಗಿ ಹೇಳಿಕೆ ನೀಡಬಾರದು, ಪ್ರತಿಭಟನೆ ನಡೆಸಬಾರದು ಎಂದಿದ್ದಾರೆ. ಬುಧವಾರವೂ ಅವರ ನಿವಾಸಕ್ಕೆ ಸಿದ್ಧಗಂಗಾ ಮಠದ ಶ್ರೀಗಳ ಸಹಿತ 30ಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. “ಯಾರೂ ತಮ್ಮ ಪರವಾಗಿ ಹೇಳಿಕೆ ಕೊಡುವುದಾಗಲಿ, ಪ್ರತಿಭಟನೆ ನಡೆಸುವುದಾಗಲಿ ಮಾಡಬಾರದು …
Read More »ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ; ಬಿಜೆಪಿ ಅಧ್ಯಕ್ಷ ಕಟೀಲ್, ಹಲವು ಶಾಸಕರು ಪಾರು
ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಶಾಸಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಇದ್ದ ಕಾರಣ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ರನ್ ವೇ ನಲ್ಲಿ ನೀರು ತುಂಬಿಕೊಂಡಿದ್ದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಆಗದೆ, ಮತ್ತೆ ಹಾರಾಟ ನಡೆಸಿದೆ 25 ನಿಮಿಷದ ಹಾರಾಟದ ನಂತರ ವಿಮಾನ ಲ್ಯಾಂಡಿಂಗ್ ಆಗಿದ್ದು, ಈ ವೇಳೆಯಲ್ಲಿ ಪ್ರಯಾಣಿಕರು ಆತಂಕದಿಂದ ಕಣ್ಣೀರು ಹಾಕಿದ್ದಾರೆನ್ನಲಾಗಿದೆ. …
Read More »ಹತ್ತು ಲಕ್ಷ ರೂ ಊಡಾಯಿಸಿದ್ದ ಆರೋಪಿಯನ್ನು ಬಂಧಿಸಿ ,ಆತನ ನೂರಾರು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿ ಗಡ್ಡೇಕರ ನೇತ್ರತ್ವದ ಸೈಬರ್ ಕ್ರೈಂ ಪೋಲೀಸ್ ತಂಡ ಯಶಸ್ವಿಯಾಗಿದೆ.
ಬೆಳಗಾವಿ-ಕೆಲವು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಅವ್ಯಾಹತವಾಗಿ ಸರಗಳ್ಳತನ ಮಾಡುತ್ತಿದ್ದ ಜಾಮತಾರಾ chine scratching ಗ್ಯಾಂಗ್ ಮೇಲೆ ಗೋಲೀಬಾರ್ ಮಾಡಿ ಸರಗಳ್ಳರನ್ನು ಎನ್ ಕೌಂಟರ್ ಮಾಡಿ ಬೆಳಗಾವಿ ನಗರವನ್ನು ಸರಗಳ್ಳರಿಂದ ಮುಕ್ತ ಮಾಡಿದ್ದ ಸಿಪಿಐ ಗಡ್ಡೇಕರ ಈಗ ಸೈಬರ್ ಕ್ರೈಂ ಸಿಪಿಐ ಆಗಿ ಅಲ್ಪಾವಧಿಯಲ್ಲೇ ಪ್ರಕರಣವೊಂದನ್ನು ಪತ್ತೆ ಮಾಡಿ ವಿಶೇಷ ಸಾಧನೆಗೈದಿದ್ದಾರೆ. ಕಳೆದ ತಿಂಗಳು ಬೆಳಗಾವಿಯ ಬಿಎಸ್ಎನ್ಎಲ್ ನಿವೃತ್ತ ಸಿಬ್ಬಂಧಿಯೊಬ್ಬರ ಖಾತೆಯಿಂದ ಸಮಾರು ಹತ್ತು ಲಕ್ಷ ರೂ ಊಡಾಯಿಸಿದ್ದ …
Read More »ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …
Read More »ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …
Read More »ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ
ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »‘ರಾಜ್ಯ ಮದ್ಯಪಾನ ಸಂಯಮ ಮಂಡಳಿ’ ಅಧ್ಯಕ್ಷೆಯಾಗಿ ‘ನಟಿ ಶೃತಿ’ ನೇಮಿಸಿ ಸರ್ಕಾರ ಆದೇಶ
ಬೆಂಗಳೂರು : ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿದ್ದಂತ ನಟಿ ಶೃತಿಯನ್ನು, ನಿನ್ನೆಯಷ್ಟೇ ಆ ಸ್ಥಾನದಿಂದ ಕೆಳಗಿಳಿಸಿ, ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿಗೆ ನೀಡಲಾಗಿತ್ತು. ಇದೀಗ ಇಂದು ನಟಿ ಶೃತಿಗೆ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ ಅಧಿಸೂಚನೆ ಹೊರಡಿಸಿದ್ದು, ಮುಖಅಯಮಂತ್ರಿಯವರ ಗೃಹ ಕಚೇರಿಯ ಟಿಪ್ಪಣಿಯಂತೆ …
Read More »