Breaking News

Uncategorized

3 ವರ್ಷಗಳ ಹಿಂದಿನ ಖೋಟಾನೋಟು ಪ್ರಕರಣಕ್ಕೆ ಟ್ವಿಸ್ಟ್: ಪ್ರಮುಖ ಬಾಂಗ್ಲಾದ ಆರೋಪಿ ಅರೆಸ್ಟ್

ಬೆಂಗಳೂರು: ಕರ್ನಾಟಕದಲ್ಲಿ‌ ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಎಂಬಾತನನ್ನ ಎನ್​ಐಎ ಬಂಧಿಸಿದೆ. ಈತನನ್ನ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಬಾಪುರದಲ್ಲಿ ಬಂಧಿಸಲಾಗಿದೆ.. ಬಾಂಗ್ಲಾ ಮೂಲದ ವ್ಯಕ್ತಿಗಳಿಂದ ಈತ ನಕಲಿ ಭಾರತೀಯ ನೋಟು ಪಡೆಯುತ್ತಿದ್ದ ಹಾಗೂ ಕರ್ನಾಟಕದಲ್ಲಿ ಆ ಖೋಟಾನೋಟುಗಳನ್ನ ಚಲಾವಣೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದ ಎನ್ನಲಾಗಿದೆ. ಏನಿದು ಪ್ರಕರಣ..? 2018 ರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಖೋಟಾನೋಟು ಚಲಾವಣೆ ಪ್ರಕರಣ ದಾಖಲಾಗಿತ್ತು. …

Read More »

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಜುಲೈ 1 ರಿಂದ ತರಗತಿಗಳು ಆರಂಭ : ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ಆನ್ ಲೈನ್ ಮತ್ತು ದೂರದರ್ಶನದಿಂದಷ್ಟೇ ಪಾಠ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ನೇರ ತರಗತಿ ಆರಂಭವಿಲ್ಲ. ಆನ್ ಲೈನ್ ಹಾಗೂ ದೂರದರ್ಶನದ ಮೂಲಕ ಶಿಕ್ಷಣ ನೀಡಲಾಗುವುದು. ಸರ್ಕಾರದ ಮಾರ್ಗಸೂಚಿ ಪಡೆದು ಶಾಲೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರಿ …

Read More »

ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ

ಗೋಕಾಕ  ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ.   • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ. • ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …

Read More »

ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಆಡಳಿತ ಪಕ್ಷದೊಳಗೆ ಭುಗಿಲೆದ್ದಿರುವ ಭಿನ್ನಮತವನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಪ್ರತಿನಿಧಿಯಾಗಿ ಬಂದಿದ್ದ ಅರುಣ್ ಸಿಂಗ್ ಎಂಬ ಬಡಪಾಯಿಯ ಕೆಲಸ ‘ಬಂದ ಪುಟ್ಟಾ..ಹೋದ ಪುಟ್ಟಾ’ ಎಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ದ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಮರಿಗಳಿರಲಿ, ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ …

Read More »

SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತೊಂದು ಮಹತ್ವದ ಮಾಹಿತಿ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಈ ವರ್ಷ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಎರಡು ದಿನದಲ್ಲಿ ಆರು ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದು, ಕನ್ನಡ ಸೇರಿದಂತೆ ಪ್ರಥಮ ಭಾಷೆ ವಿಷಯಗಳ ಗರಿಷ್ಠ ಅಂಕಗಳನ್ನು 125 ಅಂಕಗಳಿಗೆ(25 ಆಂತರಿಕ ಅಂಕಗಳು ಸೇರಿ) ನಿಗದಿ ಮಾಡಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಪ್ರತಿ ವಿಷಯಕ್ಕೆ 40 ಅಂಕಗಳು ಮುಂದುವರೆಯಲಿದೆ. ಮೊದಲು ಎಲ್ಲ ವಿಷಯಗಳಿಗೆ 40 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದ್ದು, ಪ್ರಥಮ …

Read More »

ಮಳೆಯಲ್ಲೇ ʼಆನ್‌ ಲೈನ್ʼ ಕ್ಲಾಸ್‌ ಅಟೆಂಡ್‌ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ

ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ ಈ ಚಿತ್ರದಲ್ಲಿ ರಸ್ತೆ ಬದಿಯಲ್ಲಿ ಮಗಳು ಕುಳಿತು ಕ್ಲಾಸ್ ಅಟೆಂಡ್ ಮಾಡುತ್ತಿದ್ದರೆ, ಅಪ್ಪ ಆಕೆಗಾಗಿ ಛತ್ರಿ ಹಿಡಿದಿದ್ದಾರೆ.   ಸುಳ್ಯ ತಾಲ್ಲೂಕಿನ ಬಾಳಕ್ಕ ಗ್ರಾಮದಲ್ಲಿ ಸರಿಯಾಗಿ ಮೊಬೈಲ್ ನೆಟ್ವರ್ಕ್ ಸಿಗದೇ ಇರುವ ಕಾರಣ ವಿದ್ಯಾರ್ಥಿಗಳು ಆಗಾಗ ತಂತಮ್ಮ ಮನೆಗಳಿಂದ ಹೊರಗೆ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …

Read More »

ಬೆಳಗಾವಿಯ ಜಲಾಶಯ ನೀರಿನ ಮಟ್ಟ….

ಹಿಡಕಲ್ ಜಲಾಶಯ ನೀರಿನ ಮಟ್ಟ ಘಟಪ್ರಭಾ ನದಿ ಹಿಡಕಲ್ ಜಲಾಶಯ ಗರಿಷ್ಠ ಮಟ್ಟ- 2175.00 ಅಡಿ ಇಂದಿನ ಮಟ್ಟ- 2110.80 ಅಡಿ ಒಳ ಹರಿವು- 39,515 ಕ್ಯೂಸೆಕ್ ಹೊರ ಹರಿವು- 94 ಕ್ಯೂಸೆಕ್ ನೀರು ಸಂಗ್ರಹ- 13.474 ಡ್ಯಾಂ ಸಾಮರ್ಥ್ಯ- 51.00 tmc ನವಿಲುತಿರ್ಥ ಜಲಾಶಯ ನೀರಿನ ಮಟ್ಟ ಮಲಪ್ರಭಾ ನದಿ ನವೀಲು ತೀರ್ಥ ಜಲಾಶಯ ಗರಿಷ್ಠ ಮಟ್ಟ- 2079.50 ಅಡಿ ಇಂದಿನ ಮಟ್ಟ- 2054.10 ಒಳ ಹರಿವು- 17208 …

Read More »

ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ , ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ.

ಬೆಳಗಾವಿ – ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಶುಕ್ರವಾರ ಮಾರ್ಕಂಡೇಯ ನದಿಯಲ್ಲಿ ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ. ಬುಧವಾರ ರಾತ್ರಿಯಿಂದಲೇ ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದರಿಂದ ಬೆಳಗಾವಿ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಎಲ್ಲೆಡೆ ಆತಂಕದ ವಾತಾವರಣ ಉಂಟಾಗಿದೆ. ಶುಕ್ರವಾರ ಮಧ್ಯಾಹ್ನ ನಂತರ ಸ್ವಲ್ಪಮಟ್ಟಿಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಶನಿವಾರ ಮತ್ತೆ …

Read More »