ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …
Read More »ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಆಡಳಿತ ಪಕ್ಷದೊಳಗೆ ಭುಗಿಲೆದ್ದಿರುವ ಭಿನ್ನಮತವನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಪ್ರತಿನಿಧಿಯಾಗಿ ಬಂದಿದ್ದ ಅರುಣ್ ಸಿಂಗ್ ಎಂಬ ಬಡಪಾಯಿಯ ಕೆಲಸ ‘ಬಂದ ಪುಟ್ಟಾ..ಹೋದ ಪುಟ್ಟಾ’ ಎಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ದ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಮರಿಗಳಿರಲಿ, ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ …
Read More »SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತೊಂದು ಮಹತ್ವದ ಮಾಹಿತಿ
ಬೆಂಗಳೂರು: ಕೊರೋನಾ ಕಾರಣದಿಂದಾಗಿ ಈ ವರ್ಷ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಎರಡು ದಿನದಲ್ಲಿ ಆರು ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದು, ಕನ್ನಡ ಸೇರಿದಂತೆ ಪ್ರಥಮ ಭಾಷೆ ವಿಷಯಗಳ ಗರಿಷ್ಠ ಅಂಕಗಳನ್ನು 125 ಅಂಕಗಳಿಗೆ(25 ಆಂತರಿಕ ಅಂಕಗಳು ಸೇರಿ) ನಿಗದಿ ಮಾಡಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಪ್ರತಿ ವಿಷಯಕ್ಕೆ 40 ಅಂಕಗಳು ಮುಂದುವರೆಯಲಿದೆ. ಮೊದಲು ಎಲ್ಲ ವಿಷಯಗಳಿಗೆ 40 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದ್ದು, ಪ್ರಥಮ …
Read More »ಮಳೆಯಲ್ಲೇ ʼಆನ್ ಲೈನ್ʼ ಕ್ಲಾಸ್ ಅಟೆಂಡ್ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ
ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ ಈ ಚಿತ್ರದಲ್ಲಿ ರಸ್ತೆ ಬದಿಯಲ್ಲಿ ಮಗಳು ಕುಳಿತು ಕ್ಲಾಸ್ ಅಟೆಂಡ್ ಮಾಡುತ್ತಿದ್ದರೆ, ಅಪ್ಪ ಆಕೆಗಾಗಿ ಛತ್ರಿ ಹಿಡಿದಿದ್ದಾರೆ. ಸುಳ್ಯ ತಾಲ್ಲೂಕಿನ ಬಾಳಕ್ಕ ಗ್ರಾಮದಲ್ಲಿ ಸರಿಯಾಗಿ ಮೊಬೈಲ್ ನೆಟ್ವರ್ಕ್ ಸಿಗದೇ ಇರುವ ಕಾರಣ ವಿದ್ಯಾರ್ಥಿಗಳು ಆಗಾಗ ತಂತಮ್ಮ ಮನೆಗಳಿಂದ ಹೊರಗೆ …
Read More »ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …
Read More »ಬೆಳಗಾವಿಯ ಜಲಾಶಯ ನೀರಿನ ಮಟ್ಟ….
ಹಿಡಕಲ್ ಜಲಾಶಯ ನೀರಿನ ಮಟ್ಟ ಘಟಪ್ರಭಾ ನದಿ ಹಿಡಕಲ್ ಜಲಾಶಯ ಗರಿಷ್ಠ ಮಟ್ಟ- 2175.00 ಅಡಿ ಇಂದಿನ ಮಟ್ಟ- 2110.80 ಅಡಿ ಒಳ ಹರಿವು- 39,515 ಕ್ಯೂಸೆಕ್ ಹೊರ ಹರಿವು- 94 ಕ್ಯೂಸೆಕ್ ನೀರು ಸಂಗ್ರಹ- 13.474 ಡ್ಯಾಂ ಸಾಮರ್ಥ್ಯ- 51.00 tmc ನವಿಲುತಿರ್ಥ ಜಲಾಶಯ ನೀರಿನ ಮಟ್ಟ ಮಲಪ್ರಭಾ ನದಿ ನವೀಲು ತೀರ್ಥ ಜಲಾಶಯ ಗರಿಷ್ಠ ಮಟ್ಟ- 2079.50 ಅಡಿ ಇಂದಿನ ಮಟ್ಟ- 2054.10 ಒಳ ಹರಿವು- 17208 …
Read More »ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ , ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ.
ಬೆಳಗಾವಿ – ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಶುಕ್ರವಾರ ಮಾರ್ಕಂಡೇಯ ನದಿಯಲ್ಲಿ ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ. ಬುಧವಾರ ರಾತ್ರಿಯಿಂದಲೇ ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದರಿಂದ ಬೆಳಗಾವಿ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಎಲ್ಲೆಡೆ ಆತಂಕದ ವಾತಾವರಣ ಉಂಟಾಗಿದೆ. ಶುಕ್ರವಾರ ಮಧ್ಯಾಹ್ನ ನಂತರ ಸ್ವಲ್ಪಮಟ್ಟಿಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಶನಿವಾರ ಮತ್ತೆ …
Read More »ಬಿಎಸ್ವೈ ಇಳಿದರೆ ನಮ್ಮಲ್ಲೇ ಪರ್ಯಾಯ ನಾಯಕರಿದ್ದಾರೆ-ಪಂಚಮಸಾಲಿ ಶ್ರೀ
ಬೆಂಗಳೂರು: ಲಿಂಗಾಯತರಲ್ಲಿ ಪರ್ಯಾಯ ನಾಯಕತ್ವ ಇಲ್ಲ ಎಂಬುದು ಅವಮಾನ ಮಾಡುವ ಸಂಗತಿ. ಲಿಂಗಾಯತರಲ್ಲಿ ಅನೇಕ ಸಮರ್ಥ ನಾಯಕರಿದ್ದಾರೆ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದರೆ ಉತ್ತರ ಕರ್ನಾಟಕದ ನೆಲದಲ್ಲಿ ಪರ್ಯಾಯ ನಾಯಕರು ಇದ್ದಾರೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅರುಣ್ ಸಿಂಗ್ ಭೇಟಿ ಬಳಿಕ ಮಾತನಾಡಿದ ಅವರು, ನಮ್ಮ ಸಮುದಾಯದಲ್ಲಿ ಸಿಎಂ ಸ್ಥಾನಕ್ಕೆ ಪರ್ಯಾಯ ನಾಯಕರು ಅನೇಕರಿದ್ದಾರೆ. ನಿಜಲಿಂಗಪ್ಪ ಬಿಟ್ಟರೆ ಯಾರಾಗುತ್ತಾರೆ ಎಂದು ಪ್ರಶ್ನೆ ಬಂದಿತ್ತು. ನಂತರ ಎಸ್.ಆರ್.ಕಂಠಿ, ವೀರೇಂದ್ರ ಪಾಟೀಲ್, …
Read More »ಗಂಡ ಹೆಂಡತಿ ಸೇರಿ ಅಮಾಯಕ ಯುವತಿಯರ ಹನಿ ಟ್ರ್ಯಾಪ್
ಬೆಂಗಳೂರು: ಗಂಡನ ಅಣತಿಯಂತೆ ಫೇಸ್ಬುಕ್ನಲ್ಲಿ ಅಮಾಯಕ ಯುವತಿಯರ ಸ್ನೇಹ ಬೆಳೆಸುತ್ತಾಳೆ ಈ ಸುಂದರಿ. ಇದಾದ ಕೆಲವೇ ದಿನದಲ್ಲಿ ಮನೆಯಲ್ಲಿ ಹಬ್ಬ ಇದೆ ಊಟಕ್ಕೆ ಬನ್ನಿ ಎಂದು ನಯವಾಗಿ ಕರೆಯುತ್ತಾಳೆ. ಇವಳ ಆಹ್ವಾನಕ್ಕೆ ಓಗೊಟ್ಟು ಹೋದವರ ಲೈಫು ಬರ್ಬಾದ್ ಆಗುತ್ತೆ. ಚಂದ್ರಾಲೇಔಟ್ನಲ್ಲಿ ವಾಸವಿರುವ ಖತರ್ನಾಕ್ ದಂಪತಿ ಹೆಸರು ಕಾವ್ಯ ಮತ್ತು ಕೃಷ್ಣ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಈ ದಂಪತಿ ಮಾಡುವ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ. ಸ್ನೇಹಿತರ ಮನೆಗೆ ಹೋಗುವ ಮುನ್ನ …
Read More »ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ
ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ. ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …
Read More »