Breaking News

Uncategorized

BSY ಅಧಿಕಾರ ತ್ಯಾಗ ಮಾಡುವಾಗ ಕಣ್ಣೀರಿಟ್ಟಿದ್ದೇಕೆ ಗೊತ್ತಾ..?

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಅಂದು ರಾಜೀನಾಮೆ ಘೋಷಣೆ ವೇಳೆ ಗದ್ಗದಿತರಾಗಿ ಕಣ್ಣೀರಿಟ್ಟರು ಇದಕ್ಕೆ ಕಾರಣವೇನು ಎಂಬುದು ನಮಗೆ ಗೊತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕೋವಿಡ್ ಸಂದರ್ಭದಲ್ಲಿ, ಆಕ್ಸಿಜನ್, ಬೆಡ್ ನಿರ್ವಹಣೆಗಳ ವಿಚಾರದಲ್ಲಿ ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ಹಗರಣ ನಡೆದಿದೆ. ಕೋವಿಡ್ ನಿಂದ ಸಂಕಷ್ಟಕ್ಕೀಡಾದ ಜನ ಆಸ್ಪತ್ರೆ, ಆಂಬುಲೆನ್ಸ್ ಗಳಿಗಾಗಿ ಬೀದಿ ಬೀದಿಗಳಲ್ಲಿ ಕ್ಯೂ ನಿಂತಿದ್ದಾರೆ. ಭಾರಿ ಪ್ರಮಾಣದ ಭ್ರಷ್ಟಾಚಾರ …

Read More »

ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಅವರ ನೇತೃತ್ವದಲ್ಲಿ ನಗರದ ಕೆಲವೆಡೆ 112 ಸಹಾಯವಾಣಿ

ಮಹಾನಗರ: ಮಂಗಳೂರು ನಗರ ಪೊಲೀಸರು ಶನಿವಾರ “ತುರ್ತು ಸಹಾಯವಾಣಿ  112′ ಮೂಲಕ ಮಹಿಳೆಯರಿಂದ ಕರೆಗಳನ್ನು ಸ್ವೀಕರಿಸಿ ತ್ವರಿತ ವಾಗಿ ಸ್ಥಳಕ್ಕೆ ತೆರಳಿ ಸ್ಪಂದಿಸಿದರು.   “ಮಹಿಳೆಯರ ಸುರಕ್ಷೆಗಾಗಿ ಒಂದು ದಿನ’ ಎಂಬ ಈ ಅಭಿಯಾನದಲ್ಲಿ ಸಬ್‌ಇನ್‌ಸ್ಪೆಕ್ಟರ್‌ ದರ್ಜೆಗಿಂತ ಮೇಲಿನ ದರ್ಜೆಯ ಪೊಲೀಸ್‌ ಅಧಿಕಾರಿಗಳು, ಮಹಿಳಾ ಪೊಲೀಸ್‌ ಅಧಿ ಕಾರಿ, ಸಿಬಂದಿಯನ್ನೊಳಗೊಂಡ 100ಕ್ಕೂ ಅಧಿಕ ಪೊಲೀಸರು ಪಾಲ್ಗೊಂಡಿ ದ್ದರು. ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಈ ವಿಶೇಷ ಅಭಿಯಾನ ನಡೆಯಿತು. …

Read More »

ಶಿವಮೊಗ್ಗ ಶಂಕರ ವಲಯ ವ್ಯಾಪ್ತಿಯಲ್ಲಿ ಗಂಧದ ಮರಗಳ ಕಳ್ಳತನ ಜೋರಾಗಿ ನಡೆಯುತ್ತಿದೆ.

ಶಿವಮೊಗ್ಗ ತಾಲೂಕಿನ ಬಿಕೋನಹಳ್ಳಿ ಬಳಿ ಅಧಿಕಾರಿಗಳು ಹೇಮಣ್ಣನ ಬೈಕ್ ಪರಿಶೀಲನೆ ಮಾಡಿದ್ದು, ಬೈಕ್ ಮತ್ತು ಏಳು ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧ ಮರದ ತುಂಡುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎತ್ತ ನೋಡಿದರೂ ಬೆಲೆಬಾಳುವ ಮರಗಳು ಕಣ್ಣಿಗೆ ಬೀಳುತ್ತವೆ. ಇಂತಹ ಅರಣ್ಯದಲ್ಲಿ ಮರಗಳ ಚೋರರ ಹಾವಳಿ ಬಲು ಜೋರಾಗಿದೆ. ಅದರಲ್ಲೂ ಬೆಲೆಬಾಳುವ ಶ್ರೀಗಂಧದ ಮರ ಹಂತ ಹಂತವಾಗಿ ಅರಣ್ಯದಿಂದ ಕಣ್ಮರೆಯಾಗುತ್ತಿವೆ. ಹೀಗಾಗಿ ಇದಕ್ಕೆ ಅಂತ್ಯ ಹಾಡಲು ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳ …

Read More »

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.

ರಾಮನಗರ: ನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು.   ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ‌ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು. ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 …

Read More »

ಪಶು ಸಹಾಯವಾಣಿಗೆ ಒಂದೇ ತಿಂಗಳಲ್ಲಿ 9000 ಕರೆ

ಚಿತ್ರದುರ್ಗ (ಆ.29): ಪ್ರತಿ ಜಿಲ್ಲೆಯಲ್ಲಿ 60ರಿಂದ 100 ಎಕರೆ ಜಾಗದಲ್ಲಿ ಸರ್ಕಾರಿ ಗೋ ಶಾಲೆಗಳನ್ನು ನಿರ್ಮಿಸಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದರು.   ನಗರದ ಹೊರವಲಯದಲ್ಲಿ ಇರುವ ಆದಿಚುಂಚನಗಿರಿ ಗೋಶಾಲೆಗೆ ಶನಿವಾರ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದ 30 ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಈಗಾಗಲೇ ಕ್ಯಾಬಿನೆಟ್‌ ಅನುಮೋದನೆ ದೊರೆತಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಗೋಮಾಳ ಜಾಗವನ್ನು ಗುರುತಿಸಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ …

Read More »

ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ?

ಬೆಂಗಳೂರು (ಆ.29): ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಗಣೇಶ ಹಬ್ಬದ ವೇಳೆ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುವುದರ ಜತೆ 40-50 ಮಂದಿ ಸೇರಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮನವಿ ಮಾಡಿದ್ದಾರೆ. ಮಸೀದಿ, ಚಚ್‌ರ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಅದರಂತೆ ಹಿಂದೂಗಳ ಹಬ್ಬಕ್ಕೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.   ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ? …

Read More »

8ನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್‌ ಯೋಜನೆಯನ್ನು ಸರ್ಕಾರ 2020-21ನೇ ಸಾಲಿನಲ್ಲಿ ಸ್ಥಗಿತಗೊಳಿಸಿತ್ತು.

ಬೆಂಗಳೂರು (ಆ.29: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬೈಸಿಕಲ್‌ ಭಾಗ್ಯವಿಲ್ಲ. ಹಣಕಾಸು ಕೊರತೆ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ಉಚಿತ ಸೈಕಲ್‌ ಯೋಜನೆ ಅನುಷ್ಠಾನ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯವನ್ನು 2020ರ ಮಾ ರ್ಚ್ನಿಂದ ಕಾಡುತ್ತಿರುವ ಕೋವಿಡ್‌ನಿಂದಾಗಿ ಮಕ್ಕಳ ಶಾಲಾ ಶಿಕ್ಷಣ ಮಾತ್ರವಲ್ಲದೆ, ಅವರಿಗಾಗಿ ಜಾರಿಯಲ್ಲಿದ್ದ ಕೆಲ ಯೋಜನೆಗಳಿಗೂ ಹಣಕಾಸು ಕೊರತೆಯಿಂದ ಕೊಕ್ಕೆ ಬಿದ್ದಿದೆ. 2006-07ರ ಬಿಜೆಪಿ- ಜೆಡಿಎಸ್‌ …

Read More »

ಸಾಹುಕಾರ ನೀಗೆ ಸಿಕ್ಕಿದೆ ಹೊಸ ಅಸ್ತ್ರ ಗೇಮ್ ಒಂದೇ ಬಾಕಿ…!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಮುನ್ನವೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ತರೆಳಿರುವ ಮಾಜಿ ಸಚಿವ ರಮೇಶ್​​ ಜಾರಕಿಹೊಳಿ, ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ. ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ರಮೇಶ್​​ ಜಾರಕಿಹೊಳಿ ಠಿಕಾಣಿ ಹೂಡಿದ್ದರು. ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಪಾಲಿಕೆ …

Read More »

ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯೇ ಕಾಂಗ್ರೆಸ್ ಧ್ಯೇಯ; ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ

    ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಪರ ಇಂದು (ಶನಿವಾರ) ಸಂಜೆ ಕಾಂಗ್ರೆಸ್ ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.   ಬೆಳಗಾವಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾದ ಗುಜರಾತ್ ರಾಜ್ಯಸಭಾ ಸದಸ್ಯೆ ಅಮೀ ಯಜನಿಕ್ , ಮಹಾರಾಷ್ಟ್ರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸತ್ಯಜೀತ್ ಪಾಂಬೆ ಪಾಟೀಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ …

Read More »

ಭಾರತದಲ್ಲಿ ಒಂದೇ ದಿನ 1 ಕೋಟಿ ಮಂದಿಗೆ ಕೊವಿಡ್-19 ಲಸಿಕೆ: ಟಾಪ್-5 ರಾಜ್ಯಗಳು

ನವದೆಹಲಿ, ಆಗಸ್ಟ್ 27: ಭಾರತದಲ್ಲಿ ಶುಕ್ರವಾರ ಒಂದೇ ದಿನ 1 ಕೋಟಿಗೂ ಅಧಿಕ ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸುವಲ್ಲಿ ಆರೋಗ್ಯ ಸಿಬ್ಬಂದಿ ಯಶಸ್ವಿಯಾಗಿದ್ದು ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿ ಶುಕ್ರವಾರ ಒಂದೇ ದಿನ 10,063,931 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 62,09,43,580 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ …

Read More »