Breaking News

Uncategorized

ಕೊರೊನಾ 2ನೇ ಅಲೆ ಹೇಗೆ ಹರಡುತ್ತಿದೆ ಅನ್ನೋದೆ ಗೊತ್ತಾಗುತ್ತಿಲ್ಲ – ಜೋಶಿ

ಧಾರವಾಡ: ಕೊರೊನಾ 2ನೇ ಅಲೆ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ, ಹೇಗೆ ಹರಡುತ್ತಿದೆ ಅನ್ನೋದೆ ಗೊತ್ತಾಗುತ್ತಿಲ್ಲ. ಇದು ಇಷ್ಟು ಪರಿಣಾಮ ಬೀರುತ್ತೆ ಎನ್ನುವ ಅಂದಾಜು ಇರಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುದ್ಧೋಪಾದಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಕಾರ್ಯ ಮಾಡುತ್ತಿದೆ. ನಿನ್ನೆ 800 ಮಿಲಿಯನ ಟನ್ ಆಕ್ಸಿಜನ್ ಕರ್ನಾಟಕಕ್ಕೆ ಹಂಚಿಕೆಯಾಗಿದೆ, 1.25 ಲಕ್ಷ ರೆಮ್‍ಡಿಸಿವಿರ್ ವೈಲ್ ಬಂದಿದೆ. ರೆಮ್‍ಡಿಸಿವಿರ್ ಕೊರೊನಾಗೆ ಅಲ್ಟಿಮೆಟ್ ಡ್ರಗ್ …

Read More »

ಗಂಟೆಗೆ 700 ಜನಕ್ಕೆ ಕೊರೊನಾ ಸೋಂಕು5 ದಿನ ಬೆಂಗಳೂರು ನಗರವನ್ನ ಸಂಪೂರ್ಣವಾಗಿ ಲಾಕ್‍ಡೌನ್: ತಜ್ಞರ ಮಹತ್ವದ ಸಲಹೆ

ಬೆಂಗಳೂರು: 15 ದಿನ ಬೆಂಗಳೂರು ನಗರವನ್ನ ಸಂಪೂರ್ಣವಾಗಿ ಲಾಕ್‍ಡೌನ್ ಮಾಡುವಂತೆ ಸರ್ಕಾರಕ್ಕೆ ತಜ್ಞರು ಮಹತ್ವದ ಸಲಹೆ ನೀಡಿದ್ದಾರೆ. ವೀಕೆಂಡ್ ಲಾಕ್‍ಡೌನ್ ಸೋಮವಾರ ಬೆಳಗ್ಗೆ 6 ಗಂಟೆಗೆ ಅಂತ್ಯವಾಗಲಿದೆ. ಎರಡು ವಾರ ಲಾಕ್‍ಡೌನ್ ಮಾಡದಿದ್ರೆ ಕೊರೊನಾ ನಿಯಂತ್ರಣ ಅಸಾಧ್ಯ. ಕೊರೊನಾ ಕ್ಷಣ ಕ್ಷಣಕ್ಕೂ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೇವಲ ವೀಕೆಂಡ್ ಲಾಕ್ ಮಾಡಿ ಇನ್ನುಳಿದ ಫ್ರೀ ಬಿಟ್ಟರೆ ಅಪಾಯ ಕಟ್ಟಿಟ್ಟ ಬುತ್ತಿ. ಅವಶ್ಯಕವಿದ್ರೆ ಲಾಕ್‍ಡೌನ್ ಮಾಡಬಹುದು ಎಂದು ಪ್ರಧಾನಿಗಳು ಹೇಳಿದ್ದಾರೆ. ಸದ್ಯ …

Read More »

ಹಿಂದೆಲ್ಲ 3 ತಿಂಗಳು ಲಾಕ್‍ಡೌನ್ ಇತ್ತು, ಈಗ ಕೇವಲ 8-10 ದಿನದ ಲಾಕ್‍ಡೌನ್ ಅಷ್ಟೇ ಇದೆ: ಜಗದೀಶ್ ಶೆಟ್ಟರ್

ಧಾರವಾಡ: ಸದ್ಯ ಮೇ 4ರ ವರೆಗೆ ಕಠಿಣ ನಿಯಮ ಜಾರಿಯಲ್ಲಿರುತ್ತದೆ. ಮುಂದಿನ ವಾರವೂ ವೀಕೆಂಡ್ ಕಫ್ರ್ಯೂ ಇರುತ್ತದೆ. ಉಳಿದ ದಿನದ ಕಫ್ರ್ಯೂ, ಲಾಕ್‍ಡೌನ್ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ನಾಳೆಯ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ವಿಸ್ತøತವಾಗಿ ಚರ್ಚೆ ನಡೆಯಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11ಕ್ಕೆ ಸಚಿವ ಸಂಪುಟ ಸಭೆ ಇದೆ. ಕ್ಯಾಬಿನೆಟ್‍ನಲ್ಲಿ ಚರ್ಚಿಸಿದ ಬಳಿಕ ಸಿಎಂ ಮುಂದಿನ …

Read More »

ಕರ್ಫ್ಯೂ ಹೊತ್ತಲ್ಲಿ ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಕಾರ್ಯಕರ್ತರು

ಶಿವಮೊಗ್ಗ: ವೀಕೆಂಡ್ ಕರ್ಫ್ಯೂ ನಿಂದಾಗಿ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಅನ್ನ ಮತ್ತು ನೀರಿಗಾಗಿ ನಿರ್ಗತಿಕರು, ಭಿಕ್ಷುಕರು ಪರದಾಟ ನಡೆಸಿದ್ದು, ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಈ ಮೂಲಕ ಮಾನವೀಯತೆ ಮೆರೆದಿದ್ದಾರೆ. ವೀಕೆಂಡ್ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಿರ್ಗತಿಕರಿಗೆ ತೊಂದರೆಯಾಗುವುದನ್ನು ಮನಗಂಡ ಯುವ ಕಾಂಗ್ರೆಸ್ ಕಾರ್ಯಕರ್ತರು ಊಟದ ಪ್ಯಾಕೆಟ್ ಮತ್ತು ನೀರಿನ ಬಾಟಲಿಯನ್ನು …

Read More »

ವರನಟ ಡಾ.ರಾಜ್‍ಕುಮಾರ್ 92ನೇ ಜನ್ಮದಿನ ಸಂಭ್ರಮಾಚರಣೆಯನ್ನು ರಾಜ್ ಅವರ ಮೂವರು ಮಕ್ಕಳು ಒಂದೊಂದು ರೀತಿಯಾಗಿ ವಿಶೇಷವಾಗಿ ಆಚರಿಸುವ ಮೂಲಕವಾಗಿ ತಂದೆಗೆ ಪ್ರೀತಿಯನ್ನು ತೋರಿಸಿದ್ದಾರೆ.

ಬೆಂಗಳೂರು: ವರನಟ ಡಾ.ರಾಜ್‍ಕುಮಾರ್ 92ನೇ ಜನ್ಮದಿನ ಸಂಭ್ರಮಾಚರಣೆಯನ್ನು ರಾಜ್ ಅವರ ಮೂವರು ಮಕ್ಕಳು ಒಂದೊಂದು ರೀತಿಯಾಗಿ ವಿಶೇಷವಾಗಿ ಆಚರಿಸುವ ಮೂಲಕವಾಗಿ ತಂದೆಗೆ ಪ್ರೀತಿಯನ್ನು ತೋರಿಸಿದ್ದಾರೆ. ನಟನೆ ಸರಳತೆ, ವ್ಯಕ್ತಿತ್ವದ ಮೂಲಕವಾಗಿ ಅಪಾರ ಸಂಖ್ಯೆ ಅಭಿಮಾನಿಗಳನ್ನು ಗಳಿಸಿಕೊಂಡಿದ್ದ ರಾಜ್‍ಕುಮಾರ್ ಅವರಿಗೆ ಅವರು ಮಕ್ಕಳು ದೊಡ್ಡ ಅಭಿಮಾನಿಗಳಾಗಿದ್ದಾರೆ. ತಾವು ಮಾಡುವ ಯಾವುದೇ ಕೆಲಸಗಳಿಗೆ ರಾಜ್‍ಮಕ್ಕಳು ತಮ್ಮ ತಂದೆಯನ್ನು ನೆನೆಯುತ್ತಾರೆ. ನಾವು ನಮ್ಮ ತಂದೆಗೆ ದೊಡ್ಡ ಅಭಿಮಾನಿಗಳು ಎಂದು ಆಗಾಗ ಹೇಳುತ್ತಿರುತ್ತಾರೆ. ರಾಜ್‍ಕುಮಾರ್ ಅವರ …

Read More »

ಸೋಂಕಿತರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡುವುದು ಸಾಧ್ಯವಿಲ್ಲ:ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನ ಸ್ಥಿತಿ ಆತಂಕಕಾರಿಯಾಗಿದೆ. ದಿನದಿಂದ ದಿನಕ್ಕೆ ಆಕ್ಟಿವ್ ಕೇಸ್ ಗಳು ಹೆಚ್ಚುತ್ತಿವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾದಿದ ಅವರು, ಕೊರೊನಾ ವೈರಸ್ ತನ್ನ ಸ್ವಭಾವವನ್ನೇ ಬದಲಿಸಿದೆ. ವೈರಾಣು ನಮ್ಮ ಜೊತೆ ಚೆಸ್ ರೀತಿ ಆಟವಾದುತ್ತಿದೆ. ಮೊದಲ ಅಲೆಯಲ್ಲಿ ಇಷ್ಟೊಂದು ತೀವ್ರತೆ ಇರಲಿಲ್ಲ. ಇದು ಹೊಸ ಕಾಯಿಲೆ, ವೈರಸ್ ಆಗಿ ಪರಿವರ್ತನೆಗೊಳ್ಳುತ್ತಿದೆ …

Read More »

ಬಿಜೆಪಿ ಶಾಸಕ ಸುರೇಶ್‌ ಕರೊನಾ ಮಹಾಮಾರಿಗೆ ಬಲಿ

ಲಖನೌ: ಕರೊನಾ ಮಹಾಮಾರಿಯಿಂದ ಮೃತಪಡುತ್ತಿರುವವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಲೇ ಸಾಗಿದೆ. ಇದೀಗ ಉತ್ತರ ಪ್ರದೇಶದ ಲಖನೌ ಪಶ್ಚಿಮ ಕ್ಷೇತ್ರದ ಶಾಸಕ ಸುರೇಶ್ ಶ್ರೀವಾತ್ಸವ್ ಅವರು ಕರೊನಾಕ್ಕೆ ಬಲಿಯಾಗಿದ್ದಾರೆ. ಇವರಿಗೆ 76 ವರ್ಷ ವಯಸ್ಸಾಗಿತ್ತು.15 ದಿನಗಳ ಹಿಂದೆ ಇವರಿಗೆ ಕರೊನಾ ಸೋಂಕು ತಗುಲಿರುವುದು ತಿಳಿದಿತ್ತು. ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಕಳೆದ ವಾರ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ. ಇವರ ನಿಧನಕ್ಕೆ ಅನೇಕ ಗಣ್ಯರು …

Read More »

ಬೆಳಗಾವಿ: ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕರು ಸಾವು

ಬೆಳಗಾವಿ: ಮಳೆಯಿಂದ ರಕ್ಷಿಸಿಕೊಳ್ಳಲು ಗಿಡದ ಕೆಳಗೆ ನಿಂತಾಗ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ನಗರದ ಕಣಬರ್ಗಿ ರಸ್ತೆಯ ಸುರಭಿ ಹೊಟೇಲ್ ಹಿಂಬಾಗದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಮೂಲ ಬೈಲಹೊಂಗಲ ತಾಲೂಕಿನ ಹೋಗರ್ತಿಯ, ಸದ್ಯ ಗೋಕಾಕ ತಾಲೂಕಿನ ಅಕ್ಕತಂಗೇರಹಾಳದಲ್ಲಿ ನೆಲೆಸಿದ್ದ ಪ್ರಕಾಶ ಕರೆಪ್ಪ ವ್ಯಾಪಾರಗಿ(44) ಹಾಗೂ ಗೋಕಾಕ ತಾಲೂಕಿನ ರಾಜನಕಟ್ಟೆ ಗ್ರಾಮದ ಭರಮಪ್ಪ ಭೀಮಪ್ಪ ಬಾದರವಾಡಿ(39) ಎಂಬಾತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಈ ಇಬ್ಬರೂ ಸುರಭಿ …

Read More »

14 ಸಾವಿರ ದಾಟಿದ ಕೋವಿಡ್‌ ಮೃತರ ಸಂಖ್ಯೆ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಹೊಸದಾಗಿ 190 ಜನರು ಮೃತಪಡುವುದರೊಂದಿಗೆ ರಾಜ್ಯದಲ್ಲಿ ಮೃತರ ಸಂಖ್ಯೆ 14 ಸಾವಿರ ದಾಟಿದೆ. ಈವರೆಗೂ 1,128 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಹೊಸದಾಗಿ 26,962 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದ್ದರೆ, 14,075 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈವರೆಗೆ 10,44,554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ …

Read More »

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ- ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

ಹುಬ್ಬಳ್ಳಿ: ಮಹಾನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಇಂದು ಸಂಜೆ ಭಾರೀ ಮಳೆಯಾಗಿದೆ. ಮಿಂಚು, ಗುಡುಗು, ಬಿರುಗಾಳಿ ಸಹಿತ ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ಸಾಕಷ್ಟು ಹಾನಿ ಸಂಭವಿಸಿದೆ. ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಮರಗಳು ಧರೆಗುರುಳಿವೆ. ಬೇಸಿಗೆಯ ಧಗೆಗೆ ಸುರಿದ ಮಳೆ ತಂಪನ್ನೆರೆಯಿತು. ಆದರೆ ವೀಕೆಂಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಾರುಕಟ್ಟೆಗೆ ಆಗಮಿಸಿದ್ದ ಜನತೆ ಏಕಾಏಕಿ ಮಳೆಯಿಂದಾಗಿ ಪರದಾಡುವಂತಾಯಿತು. ಸಂಜೆ 6 ಗಂಟೆ …

Read More »