Breaking News

Uncategorized

ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಕಳ್ಳ

ಹುಬ್ಬಳ್ಳಿ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿ ತನ್ನ ಮನೆತನದ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿ ಪಟ್ಟಣದ ಮಂಗೇಶ ಕೆರೆ ದಂಡೆಯ ಬಳಿ ನಡೆದಿದೆ. ಹನುಮಂತ ಈಶ್ವರಪ್ಪ ಧಾರವಾಡ ಮೃತನಾಗಿದ್ದಾನೆ. ಈತ ಕಲಘಟಗಿ ಪಟ್ಟಣದ ನಿವಾಸಿಯಾಗಿದ್ದಾನೆ. ಹನುಮಂತ ಹಾಗೂ ಆತನ ಗೆಳೆಯ ಮಲ್ಲಯ್ಯ ಹೆಬ್ಬಳ್ಳಿಮಠ ಜೊತೆಗೆ ಸೇರಿ ಅಂದಾಜು 2500 ಖಾಲಿ ಗೋಣಿ ಚೀಲಗಳನ್ನು ಆಗಸ್ಟ್ 28 ರಂದು ಕಳ್ಳತನ ಮಾಡಿ ಹುಬ್ಬಳ್ಳಿ ಎಪಿಎಂಸಿಯಲ್ಲಿ ಮಾರಿದ್ದರು. ಈ ಕುರಿತು …

Read More »

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

  ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ …

Read More »

5 ದಿನಗಳ ಕಾಲ ಸರಳವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿರುವ ರಾಜ್ಯ ಸರ್ಕಾರ ಸರಳವಾಗಿ ಗಣೇಶ ಹಬ್ಬ ಆಚರಿಸುವಂತೆ ಸೂಚನೆ ನೀಡಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ಈಬಾರಿ 5 ದಿನಗಳ ಕಾಲ ಸರಳವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ಷತ್ತುಗಳನ್ನು ವಿಧಿಸಲಾಗಿದೆ ಎಂದರು.   ಹೊಸ ಗೈಡ್ ಲೈನ್: * ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾಡಳಿತದ ಅನುಮತಿ ಕಡ್ಡಾಯ …

Read More »

ಶಾಸಕ ಮಹಾಂತೇಶ ದೊಡ್ದಗೌಡರ ದಂಪತಿಗೆ ಹೂ ಮಳೆ: ಪೊಲೀಸರಿಗೆ ಶೋಕಾಸ್ ನೋಟಿಸ್ ಜಾರಿ

ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಪತ್ನಿಗೆ ಹೂಮಳೆಗೈದ ಪೋಲಿಸ್ ಅಧಿಕಾರಿಗಳಿಗೆ ಶೋಕಾಸ್​ ನೋಟಿಸ್ ಜಾರಿ ಮಾಡಲಾಗಿದೆ. ನಿನ್ನೆ ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ್ದರು. ಈ ಕುರಿತು ನ್ಯೂಸ್​ಫಸ್ಟ್​ ವರದಿ ಬಿತ್ತರಿಸಿತ್ತು. ಘಟನೆ ಕುರಿತು ಶಾಸಕ ಮಹಾಂತೇಶ ದೊಡ್ಡಗೌಡರ​​ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುವದರ ಜೊತೆಗೆ ಪೋಲಿಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ …

Read More »

ಇಂದು ಸಿಎಂ ನೇತೃತ್ವದ ಮಹತ್ವ ಸಭೆ: ಸಾರ್ವಜನಿಕ ಗಣೇಶೋತ್ಸವಕ್ಕೆ ಸಿಗುತ್ತಾ ಅನುಮತಿ?

ರಾಜ್ಯದ ಎಲ್ಲ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಗಣೇಶ ಹಬ್ಬ ಆಚರಿಸಲು ಉತ್ಸುಕವಾಗಿವೆ. ಆದ್ರೆ ಇನ್ನೂ ಕೂಡ ಸರ್ಕಾರದಿಂದ ಅನುಮತಿ ದೊರೆತಿಲ್ಲ. ಹಬ್ಬಕ್ಕೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂಬ ಒತ್ತಾಯವೂ ವ್ಯಾಪಕವಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದ್ದು, ಬಳಿಕ ಸಿಎಂ ಬೊಮ್ಮಾಯಿ ಘೋಷಣೆ ಮಾಡುವ …

Read More »

ಪೊಲೀಸ್ ನೌಕರಿಯನ್ನು ನೇರ ನೇಮಕಾತಿ ಮೂಲಕ ಕೊಡಿಸುವುದಾಗಿ ನಂಬಿಸಿದ ಆರೋಪಿ

ಕಾರವಾರ: ಉತ್ತರ ಕನ್ನಡವೂ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯುವಕರಿಗೆ ಪೊಲೀಸ್ ನೌಕರಿಯನ್ನು ನೇರ ನೇಮಕಾತಿ ಮೂಲಕ ಕೊಡಿಸುವುದಾಗಿ ನಂಬಿಸಿ ಆರೋಪಿಯೋರ್ವ ವಂಚಿಸುತ್ತಿದ್ದು ಈತನ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಎಸ್‌ಪಿ ಶಿವಪ್ರಕಾಶ ದೇವರಾಜು ಮಾಹಿತಿ ನೀಡಿದ್ದಾರೆ. ಕಾರವಾರದ ಎಸ್ಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹಾವೇರಿ ಜಿಲ್ಲೆಯ ಬ್ಯಾಡಗಿಯ ಸಂತೋಷ ತಿಪ್ಪಣ್ಣ ಗುದಗಿ ಎಂಬಾತ ಆರೋಪಿಯಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಮುಂಡಗೋಡ ಪಟ್ಟಣದ ಗುರುರಾಯ ರಾಯ್ಕರ ಎನ್ನುವವರು …

Read More »

ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ

ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ ಮತ್ತೆ ಇವತ್ತು ಶನಿವಾರ ಬಂತು ನಮ್ಮ ತಂಡ ಅನ್ನ ಸಂತರ್ಪಣೆ ಮಾಡಲು ಇವತ್ತು ಸಜ್ಜಾಗಿದ್ದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಮ್ಮ ತಂಡ ಇಂದಿನ ಕಾರ್ಯಕ್ರಮ ರೂಪಿಸಿದೆ   ಹೌದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ಸಿದ್ದಾರೂಢ ಮಠದಲ್ಲಿ ಇಂದಿನ ಅನ್ನ ಸಂತರ್ಪಣೆ ಮಾಡಲು ಶ್ರೀ ಸಂತೋಷ್ ಜಾರಕಿಹೊಳಿ ಅವರ ಆದೇಶದ ಮೇರೆಗೆ ಅಲ್ಲಿ ಎಲ್ಲ ತಂಡ …

Read More »

ರಾಜ್ಯದಲ್ಲಿ ಮಳೆಗೆ 3 ವರ್ಷಕ್ಕೆ 302 ಬಲಿ; 1.78 ಲಕ್ಷ ಮನೆ ಹಾನಿ, 2,934 ಲಕ್ಷ ಹೆಕ್ಟೇರ್ ಬೆಳೆ ನಾಶ; ದೇಶಾದ್ಯಂತ 7,467 ಸಾವು

ಬೆಂಗಳೂರು: ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ಮಳೆಗೆ 302 ಜನ ಬಲಿಯಾಗಿದ್ದು, ದೇಶದಲ್ಲಿ 2018-19ರಿಂದ 2021-22ರ ಆ.3ರವರೆಗೆ 7,467 ಮಂದಿ ಮೃತಪಟ್ಟಿದ್ದಾರೆ. 35,20,467 ಮನೆಗಳು, ಲಕ್ಷಾಂತರ ಹೆಕ್ಟರ್ ಪ್ರದೇಶಗಳಲ್ಲಿ ಬೆಳೆದಿದ್ದ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ವಿವಿಧ ರಾಜ್ಯಗಳ ಮಳೆ ಅನಾಹುತದ ವರದಿಯಲ್ಲಿ ಉಲ್ಲೇಖಿಸಲಾಗಿದೆ. 3 ವರ್ಷಗಳಲ್ಲಿ ಕರ್ನಾಟಕದಲ್ಲಿ 1,78,722 ಮನೆಗಳಿಗೆ ಹಾನಿಯಾಗಿದ್ದು, 2,934 ಲಕ್ಷ ಹೆಕ್ಟರ್ ಪ್ರದೇಶಗಳಲ್ಲಿ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ …

Read More »

ರಸ್ತೆ ಅಪಘಾತ ಸ್ಥಳದಲ್ಲೇ “ವಿದ್ಯಾಗಿರಿ ಠಾಣೆಯ ಕಾನ್ಸ್ಟೇಬಲ್” ಸಾವು.

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಊಟ ಕೊಡಲು ಹೊರಟಿದ್ದ ಪೊಲೀಸ್ ಪೇದೆಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಂಗಪ್ಪ ಬುಸಣ್ಣವರ ಎಂಬ ಪೊಲೀಸ್ ಪೇದೆಯೇ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಊಟ ಕೊಡಲು ಹೋದಾಗ ನವಲೂರು ಬಳಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೈಕ್ ಹಾಗೂ ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಲಾರಿ …

Read More »

ದೇವಸ್ಥಾನಗಳಲ್ಲಿ‌ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆ: ಕಮಲ್‌ಪಂತ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಸಾರ್ವಜನಿಕ ರಸ್ತೆಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ ಎಂದು‌ ಪೊಲೀಸ್ ‌ಕಮಿಷನರ್ ಕಮಲ್ ಪಂತ್ ಹೇಳಿದರು. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯ‌ ಸರ್ಕಾರದ ನಿಯಮಗಳನ್ವಯ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಉಳಿದಂತೆ‌, ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿವೆ. ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ದೇವಸ್ಥಾನದಲ್ಲಿ‌ ಮೂರ್ತಿ ಪ್ರತಿಷ್ಠಾಪನೆಗೂ‌ ಮುನ್ನ ಪೊಲೀಸರು ಹಾಗೂ‌ ಬಿಬಿಎಂಪಿ ಅವರಿಂದ ಅನುಮತಿ‌ …

Read More »