Breaking News

Uncategorized

ಇದು ಸ’ಮಜಾವಾದಿ’ ಸಿದ್ದರಾಮಯ್ಯನವರ ‘ಸಾಮಾನ್ಯ’ ಜೀವನ: ಸಿದ್ಧುಗೆ ಶಾಸಕ ಯತ್ನಾಳ್ ಟಾಂಗ್

ಬೆಂಗಳೂರು: ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ನಾಯಕರನ್ನು ಭೇಟಿಯಾಗಿ ಬರ ಪರಿಹಾರಕ್ಕೆ ಮನವಿ ಮಾಡಿದ್ದರು. ಹೀಗೆ ಅವರು ತೆರಳಿದ್ದು, ವಾಪಾಸ್ ಬಂದಿದ್ದು ಮಾತ್ರ ಐಶಾರಾಮಿ ವಿಮಾನದಲ್ಲಿ ಆಗಿದೆ. ಇದನ್ನು ಸ’ಮಜಾವಾದಿ’ ಸಿದ್ಧರಾಮಯ್ಯನವರ ಸಾಮಾನ್ಯ ಜೀವನ ನೋಡಿ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಜೊತೆಗೆ ದೆಹಲಿಯಿಂದ ಬೆಂಗಳೂರಿಗೆ ವಾಪಾಸ್ಸಾಗುತ್ತಿರೋ …

Read More »

ಅಂಗವಿಕಲʼರಿಗೆ ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿಂದಿರಿ: ರಾಜಕೀಯ ಪಕ್ಷಗಳಿಗೆ ʻECIʼಯಿಂದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಸಾರ್ವಜನಿಕ ಭಾಷಣಗಳಲ್ಲಿ ಅಂಗವಿಕಲರಿಗೆ ಬಳಸುವ ಪದಗಳ ಬಗ್ಗೆ ಭಾರತೀಯ ಚುನಾವಣಾ ಆಯೋಗವು (ECI) ರಾಜಕೀಯ ಪಕ್ಷಗಳು ಮತ್ತು ಅವರ ನಾಯಕರಿಗೆ ಮಾರ್ಗಸೂಚಿಗಳನ್ನು ನೀಡಿದೆ. ಕಟ್ಟುನಿಟ್ಟಿನ ನಿಲುವು ತಳೆದಿರುವ ಆಯೋಗವು ಎಲ್ಲಾ ಪಕ್ಷಗಳಿಗೆ ಅವಹೇಳನಕಾರಿ ಪದಗಳನ್ನು ಬಳಸದಂತೆ ಸೂಚನೆ ನೀಡಿದೆ. ವರದಿಯ ಪ್ರಕಾರ, ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ, ವಿಕಲಾಂಗ ವ್ಯಕ್ತಿಗಳ ಹಕ್ಕುಗಳ ಕಾಯ್ದೆ, 2016 ರ ಸೆಕ್ಷನ್ 92 ರ ಅಡಿಯಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು …

Read More »

ಸಂಸತ್​​ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿ ಪೊಲೀಸರ ವಶಕ್ಕೆ

ಬಾಗಲಕೋಟೆ: ಸಂಸತ್​​ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿಯನ್ನು ದೆಹಲಿ ಪೊಲೀಸರು ಬುಧವಾರ ರಾತ್ರಿ​ ವಶಕ್ಕೆ ಪಡೆದಿದ್ದಾರೆ. 30 ವರ್ಷದ ಸಾಯಿಕೃಷ್ಣ ಜಗಲಿ ವಶಕ್ಕೆ ಪಡೆಯಲಾದ ಟೆಕ್ಕಿ ಆಗಿದ್ದಾರೆ. ಸದ್ಯ ದೆಹಲಿ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ಧಾರೆ. ಪ್ರಕರಣದ ಬಗ್ಗೆ ಎಸ್​​​​ಪಿ ಹೇಳಿದ್ದಿಷ್ಟು: ಈ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ದೆಹಲಿಯಿಂದ ನಾಲ್ಕು ಜನ …

Read More »

15 ವರ್ಷಗಳ ಹಿಂದೆಯೇ ಆರಂಭಗೊಂಡಿತ್ತು ‘ಸಲಾರ್’ ಪಯಣ: ಇಂಟ್ರೆಸ್ಟಿಂಗ್​ ವಿಚಾರಗಳು

Salaar: ಮುಂದಿನ ಕೆಲವೇ ಗಂಟೆಗಳಲ್ಲಿ ಬಿಡುಗಡೆಯಾಗಲಿರುವ ‘ಸಲಾರ್’ ಸಿನಿಮಾದ ಆಸಕ್ತಿದಾಯಕ ವಿಚಾರಗಳು ಇಲ್ಲಿವೆ. ಬಹುನಿರೀಕ್ಷಿತ ‘ಸಲಾರ್​​’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಭಾಸ್ ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳು ಸಿನಿಮಾ ವೀಕ್ಷಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಭಾರಿ ನಿರೀಕ್ಷೆಗಳ ನಡುವೆ ಸಿನಿಮಾ ವಿಶ್ವದಾದ್ಯಂತ ನಾಳೆ ಮುಂಜಾನೆ ಬಿಡುಗಡೆಯಾಗುತ್ತಿದೆ. ಬಿಗ್ ಪ್ರಾಜೆಕ್ಟ್ ಕುರಿತ ಕೆಲವು ಇಂಟ್ರೆಸ್ಟಿಂಗ್​ ವಿಚಾರಗಳನ್ನು ತಿಳಿದುಕೊಳ್ಳೋಣ. 15 ವರ್ಷ ಹಿಂದಿನ ಯೋಚನೆ: ಸಲಾರ್ ಚಿತ್ರಕಥೆಯನ್ನು ಸುಮಾರು 15 ವರ್ಷಗಳ ಹಿಂದೆಯೇ ನಿರ್ಧರಿಸಲಾಗಿತ್ತು. ಆ ಸಂದರ್ಭದಲ್ಲಿ …

Read More »

ಎಷ್ಟೇ ಮದ್ಯ ಸೇವಿಸಿದರೂ ಲಿವರ್ ಡ್ಯಾಮೇಜ್ ಆಗುವುದನ್ನು ತಪ್ಪಿಸಲು ಈ ಒಂದು ಹಣ್ಣನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು.

ಆಲ್ಕೋಹಾಲ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆಧುನಿಕ ಕಾಲದಲ್ಲಿ ಜನರು ವಾರಾಂತ್ಯ ಮತ್ತು ಹಬ್ಬ ಹರಿದಿನಗಳಲ್ಲಿ ಅತಿಯಾಗಿ ಮದ್ಯಪಾನ ಮಾಡುತ್ತಾರೆ. ಕೆಲವರು ಪ್ರತಿದಿನ ಸಾಕಷ್ಟು ಮದ್ಯವನ್ನು ಸೇವಿಸುತ್ತಾರೆ.   ಹೀಗೆ ಮಾಡುವುದರಿಂದ, ಯಕೃತ್ತು ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗುತ್ತದೆ. ಅಲ್ಲದೆ, ಇರುತ್ತದೆ. ಆದರೆ, ಎಷ್ಟೇ ಮದ್ಯ ಸೇವಿಸಿದರೂ ಲಿವರ್ ಡ್ಯಾಮೇಜ್ ಆಗುವುದನ್ನು ತಪ್ಪಿಸಲು ಪ್ರತಿದಿನ ಈ ಒಂದು ಹಣ್ಣನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು. ಅಂಜೂರ ಹಣ್ಣನ್ನು …

Read More »

ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನವದೆಹಲಿ/ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು.   ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ …

Read More »

2023ರಲ್ಲಿ ಯಶಸ್ವಿಯಾದ ಕನ್ನಡ ಚಿತ್ರರಂಗದ ಬ್ಯೂಟಿಫುಲ್​ ನಟಿಯರು

ರುಕ್ಮಿಣಿ ವಸಂತ್​, ಚೈತ್ರಾ ಆಚಾರ್, ಅಮೃತಾ ಪ್ರೇಮ್​ ಸೇರಿದಂತೆ ಸ್ಯಾಂಡಲ್​ವುಡ್​ನ ಕೆಲ ನಟಿಯರಿಗೆ ಈ ವರ್ಷವು ಲಕ್ಕಿ ಇಯರ್​ ಎಂದೇ ಹೇಳಬಹುದು. ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ನೂರಾರು ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈ ವರ್ಷ ಕೂಡ ಇದಕ್ಕೆ ಹೊರತಾಗಿಲ್ಲ. 2023 ಕೊನೆಗೊಳ್ಳುವುದಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಚಂದನವನದಲ್ಲಿ 200ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆ ಆಗಿವೆ. ಇವುಗಳಲ್ಲಿ ಕೆಲ ನಟಿಮಣಿಯರು ತಮ್ಮ ಅಭಿನಯ ಹಾಗೂ ಗ್ಲ್ಯಾಮರ್​ನಿಂದ ಕನ್ನಡಿಗರ ಹೃದಯ …

Read More »

ಸಂಸದ ಪ್ರಜ್ವಲ್‌, ಭವಾನಿ ರೇವಣ್ಣ ವಿರುದ್ಧ ಕಿಡ್ನಾಪ್‌, ಚಿತ್ರಹಿಂಸೆ ಆರೋಪ

ಹಾಸನ : ಸಂಸದ ಪ್ರಜ್ವಲ್‌ ರೇವಣ್ಣ (MP Prajwal revanna) ಹಾಗೂ ಶಾಸಕ ಎಚ್‌.ಡಿ. ರೇವಣ್ಣ (MLA H D Revanna) ಪತ್ನಿ ಭವಾನಿ ರೇವಣ್ಣ (Bhavani revanna) ತನ್ನನ್ನು ಹಾಗೂ ತನ್ನ ಪತ್ನಿಯನ್ನು ಅಪಹರಿಸಿ (Kidnap) ಚಿತ್ರಹಿಂಸೆ ನೀಡಿದ್ದಾರೆ ಎಂದು ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಆರೋಪಿಸಿದ್ದಾನೆ. ಈ ಕುರಿತು ದಕ್ಷಿಣ ವಲಯದ ಐಜಿಪಿಗೆ ದೂರನ್ನೂ ಸಹ ದಾಖಲಿಸಿದ್ದಾನೆ. ತಾನು ಹತ್ತು ವರ್ಷಗಳ ಕಾಲ ಅವರ ಬಳಿ …

Read More »

ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ: ಯತ್ನಾಳ್ ಗೆ ಹೈಕಮಾಂಡ್ ಬುಲಾವ್

ಬೆಂಗಳೂರು: ರಾಜ್ಯ ಬಿಜೆಪಿ (BJP) ಅಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ಸ್ಥಾನದ ಆಯ್ಕೆ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yathnal) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಹಾಗೂ ಬಿ.ವೈ. ವಿಜಯೇಂದ್ರ (BY Vijayendra) ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ತಮ್ಮ ಅಸಮಾಧಾನ ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದು, ಬಸನಗೌಡ ಪಾಟೀಲ ದೆಹಲಿಗೆ ತೆರಳಿದ್ದಾರೆ. ಬಿ.ಎಸ್. ಯಡಿಯೂರಪ್ಪ …

Read More »

60 ವರ್ಷ ಮೇಲ್ಪಟ್ಟವರು, ಹೃದಯ ಸಮಸ್ಯೆ ಇರುವವರಿಗೆ ಮಾಸ್ಕ್​ ಕಡ್ಡಾಯ..

ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆ ನಡೆಸಿ ರಾಜ್ಯದ ಆಸ್ಪತ್ರೆಗಳಲ್ಲಿ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಸಮಸ್ಯೆ ಹೊಂದಿರುವವರಿಗೆ ಮಾಸ್ಕ್​ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಸಲಹೆ ನೀಡಿದೆ. ಈ ಸಲಹೆಗಳನ್ನು ಪರಿಶೀಲಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು …

Read More »