ಆನೇಕಲ್ ; ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಯಾವುದೇ ಆಧಾರರಹಿತ ಸುದ್ದಿ ಪ್ರಸಾರ ಮಾಡದಂತೆ ಟಿವಿ 5 ಕನ್ನಡಕ್ಕೆ ಆನೇಕಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಸುದ್ದಿ ವಾಹಿನಿ ಟಿವಿ 5 ಮುಂದಿನ ಆದೇಶದವರೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಯಾವುದೇ ಚಾರಿತ್ರ್ಯವಧೆ ಅಥವಾ ಮಾನಹಾನಿಕರ ವರದಿಯನ್ನು ತಮ್ಮ ಸುದ್ದಿಸರಣಿಯಲ್ಲಿ ಅಥವಾ ʼಆರ್ ವೀ ಸ್ಟುಪಿಡ್ʼ ಕಾರ್ಯಕ್ರಮದಲ್ಲಿ ಪ್ರಸಾರ ಮಾಡದಂತೆ ಆನೇಕಲ್ ನ ನ್ಯಾಯಾಲಯವೊಂದು ಇತ್ತೀಚೆಗೆ …
Read More »ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ …
Read More »ಧುಮ್ಮಿಕ್ಕಿ ಹರಿದ ದೂಧಸಾಗರ ಜಲಪಾತ : ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತ
ಪಣಜಿ: ಗೋವಾ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗೋವಾದ ಜಗತ್ಪ್ರಸಿದ್ಧ ದೂಧಸಾಗರ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು ಈ ಭಾಗದಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತಗೊಂಡಿದೆ. ಗೋವಾದ ದೂಧಸಾಗರ ಜಲಪಾತದ ಬಳಿ ಭಾರಿ ಪ್ರಮಾಣದಲ್ಲಿ ಮಂಜುಗಟ್ಟಿದ್ದು ಶುಕ್ರವಾರ ಬೆಳಿಗ್ಗೆ ಬೆಳಗಾವಿ -ವಾಸ್ಕೊಡಗಾಮಾ ರೈಲು ಸಂಚಾರ ಜಲಪಾತದ ಬಳಿಯೇ ಸ್ಥಗಿತಗೊಂಡಿದೆ. ಕೊಂಕಣ ರೈಲು ಹಳಿಗಳ ಮೇಲೆ ಮಳೆಗೆ ಗುಡ್ಡ ಕುಸಿತವುಂಟಾಗಿರುವುದರಿಂದಲೂ ಮುಂಬಯಿ ಮತ್ತು …
Read More »ಸಂಕೇಶ್ವರದಲ್ಲಿ ಪ್ರವಾಹ ಭೀತಿ: ರಾತ್ರೋರಾತ್ರಿ ರಕ್ಷಣಾ ಕಾರ್ಯ
ಸಂಕೇಶ್ವರ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆ ಗಡಿ ಭಾಗದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಪ್ರವಾಹ ಉಂಟಾಗಿರುವದರಿಂದ ಸಂಕೇಶ್ವರ ನಗರದಲ್ಲಿನ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಜನರನ್ನು ಸ್ಥಳಾಂತರಿಸಲು ಪುರಸಭೆ ಅಧಿಕಾರಿಗಳು ಹಾಗೂ ಪೊಲೀಸರು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಅಬ್ಬರದ ಮಳೆಯಿಂದಾಗಿ ಹಿರಣ್ಯಕೇಶಿ ನದಿಯು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ 8 …
Read More »ಒಳ್ಳೆಯ ಆಡಳಿತ ನೀಡಲು ಆಗದ್ದಕ್ಕೆ ಸಿಎಂ ಬದಲಾವಣೆ ಮಾಡ್ತಿದ್ದಾರೆ: ಡಿ.ಕೆ. ಶಿವಕುಮಾರ್
ರಾಜ್ಯಕ್ಕೆ ಒಳ್ಳೆಯ ಸರ್ಕಾರ ನೀಡಲು ಆಗದವರು ಇದೀಗ ಮುಖ್ಯಮಂತ್ರಿ ಬದಲಾವಣೆ ಮಾಡುವ ಕಸರತ್ತು ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ರು. ಬಿಜೆಪಿ ರಾಜ್ಯಕ್ಕೆ ಒಳ್ಳೆಯ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ಎಡವಿದೆ. ಡಬಲ್ ಎಂಜಿನ್ ಸರ್ಕಾರ ಇದ್ದರೂ ಸಹ ಇವರ ಕೈಲಿ ಒಳ್ಳೆಯ ಆಡಳಿತ ನೀಡಲು ಸಾಧ್ಯವಾಗಲಿಲ್ಲ. ಈ ಸರ್ಕಾರ ಗೌರವ ಎಲ್ಲಿ ಉಳಿಸಿಕೊಂಡಿದೆ..? ಯಾವ …
Read More »ಆಲಮಟ್ಟಿ ಜಲಾಶಯ: 24 ಗೇಟ್‌ಗಳಿಂದ ನೀರು ಬಿಡುಗಡೆ
ಆಲಮಟ್ಟಿ(ವಿಜಯಪುರ): ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯ ಸುರಿಯುತ್ತಿರುವ ಕಾರಣ, ಆಲಮಟ್ಟಿಗೆ ಅಪಾರ ಪ್ರಮಾಣದ ನೀರು ಹರಿದು ಬರುವ ನಿರೀಕ್ಷೆಯಿದೆ. ಹೀಗಾಗಿ ಜಲಾಶಯದಿಂದ 1.30 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಮುಂದಿನ ಎರಡು ದಿನದೊಳಗೆ ಜಲಾಶಯದ ಒಳಹರಿವು 1.5 ಲಕ್ಷ ಕ್ಯುಸೆಕ್ ದಾಟುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಗುರುವಾರ ಬೆಳಿಗ್ಗೆಯಿಂದಲೇ ಹೊರಹರಿವು ಹೆಚ್ಚಿಸಲಾಗಿದೆ. 24 ಗೇಟ್ ಮೂಲಕ ನೀರು ಹೊರಕ್ಕೆ: ‘ಜಲಾಶಯದ 26 ಗೇಟ್‌ಗಳ ಪೈಕಿ 6 ಗೇಟ್‌ಗಳನ್ನು 1 …
Read More »ಬಿಜೆಪಿಯಲ್ಲಿ ಜೋರಾಯ್ತು ಹಂಗಾಮಿ ಸಿಎಂ ಚರ್ಚೆ..!
ಬೆಂಗಳೂರು,ಜು.22- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ ತೆರವಾಗಲಿರುವ ಈ ಸ್ಥಾನಕ್ಕೆ ಯಾರು ಎಂಬ ಮಿಲಿಯನ್ ಡಾಲರ್ ಪ್ರಶ್ನೆ ರಾಜ್ಯದ ಜನತೆಯನ್ನು ಕಾಡುತ್ತಿದೆ. ಇದೇ 26ರಂದು ಸಿಎಂ ಬಿಎಸ್‍ವೈ ಅವರು ಸಂಜೆ ರಾಜ್ಯಪಾಲ ತಾವರ್ ಚಂದ್ರ ಗೆಲ್ಹೋಟ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವವರೆಗೂ ಹಂಗಾಮಿ ಸಿಎಂ ಆಗಿ ನೀವೇ ಮುಂದುವರೆಯಬೇಕೆಂದು ರಾಜ್ಯಪಾಲರು ಅವರಿಗೆ ನಿರ್ದೇಶನ ನೀಡುವರು. ಬಳಿಕ ಶಾಸಕಾಂಗ ಸಭೆ …
Read More »ದಿಲ್ಲಿ ಮೇಲೆ ಎಲ್ಲರ ಭಾರ! ಬಿಎಸ್‌ವೈ ಮನೆಗೆ ಮುಂದುವರಿದ ಶ್ರೀಗಳ ಭೇಟಿ
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳ ನಡುವೆಯೇ ಎಲ್ಲರ ದೃಷ್ಟಿ “ದಿಲ್ಲಿ ನಿರ್ಧಾರ’ ದತ್ತ ನೆಟ್ಟಿದೆ. ಈ ಮಧ್ಯೆ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಯಡಿಯೂರಪ್ಪ, ಯಾರೂ ತಮ್ಮ ಪರವಾಗಿ ಹೇಳಿಕೆ ನೀಡಬಾರದು, ಪ್ರತಿಭಟನೆ ನಡೆಸಬಾರದು ಎಂದಿದ್ದಾರೆ. ಬುಧವಾರವೂ ಅವರ ನಿವಾಸಕ್ಕೆ ಸಿದ್ಧಗಂಗಾ ಮಠದ ಶ್ರೀಗಳ ಸಹಿತ 30ಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. “ಯಾರೂ ತಮ್ಮ ಪರವಾಗಿ ಹೇಳಿಕೆ ಕೊಡುವುದಾಗಲಿ, ಪ್ರತಿಭಟನೆ ನಡೆಸುವುದಾಗಲಿ ಮಾಡಬಾರದು …
Read More »ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ; ಬಿಜೆಪಿ ಅಧ್ಯಕ್ಷ ಕಟೀಲ್, ಹಲವು ಶಾಸಕರು ಪಾರು
ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಶಾಸಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಇದ್ದ ಕಾರಣ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ರನ್ ವೇ ನಲ್ಲಿ ನೀರು ತುಂಬಿಕೊಂಡಿದ್ದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಆಗದೆ, ಮತ್ತೆ ಹಾರಾಟ ನಡೆಸಿದೆ 25 ನಿಮಿಷದ ಹಾರಾಟದ ನಂತರ ವಿಮಾನ ಲ್ಯಾಂಡಿಂಗ್ ಆಗಿದ್ದು, ಈ ವೇಳೆಯಲ್ಲಿ ಪ್ರಯಾಣಿಕರು ಆತಂಕದಿಂದ ಕಣ್ಣೀರು ಹಾಕಿದ್ದಾರೆನ್ನಲಾಗಿದೆ. …
Read More »ಹತ್ತು ಲಕ್ಷ ರೂ ಊಡಾಯಿಸಿದ್ದ ಆರೋಪಿಯನ್ನು ಬಂಧಿಸಿ ,ಆತನ ನೂರಾರು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿ ಗಡ್ಡೇಕರ ನೇತ್ರತ್ವದ ಸೈಬರ್ ಕ್ರೈಂ ಪೋಲೀಸ್ ತಂಡ ಯಶಸ್ವಿಯಾಗಿದೆ.
ಬೆಳಗಾವಿ-ಕೆಲವು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಅವ್ಯಾಹತವಾಗಿ ಸರಗಳ್ಳತನ ಮಾಡುತ್ತಿದ್ದ ಜಾಮತಾರಾ chine scratching ಗ್ಯಾಂಗ್ ಮೇಲೆ ಗೋಲೀಬಾರ್ ಮಾಡಿ ಸರಗಳ್ಳರನ್ನು ಎನ್ ಕೌಂಟರ್ ಮಾಡಿ ಬೆಳಗಾವಿ ನಗರವನ್ನು ಸರಗಳ್ಳರಿಂದ ಮುಕ್ತ ಮಾಡಿದ್ದ ಸಿಪಿಐ ಗಡ್ಡೇಕರ ಈಗ ಸೈಬರ್ ಕ್ರೈಂ ಸಿಪಿಐ ಆಗಿ ಅಲ್ಪಾವಧಿಯಲ್ಲೇ ಪ್ರಕರಣವೊಂದನ್ನು ಪತ್ತೆ ಮಾಡಿ ವಿಶೇಷ ಸಾಧನೆಗೈದಿದ್ದಾರೆ. ಕಳೆದ ತಿಂಗಳು ಬೆಳಗಾವಿಯ ಬಿಎಸ್ಎನ್ಎಲ್ ನಿವೃತ್ತ ಸಿಬ್ಬಂಧಿಯೊಬ್ಬರ ಖಾತೆಯಿಂದ ಸಮಾರು ಹತ್ತು ಲಕ್ಷ ರೂ ಊಡಾಯಿಸಿದ್ದ …
Read More »
Laxmi News 24×7