Breaking News

Uncategorized

ನಾಯಕತ್ವ ಬದಲಾವಣೆ; ಮುಂದುವರಿದ ನಿಗೂಢತೆ : ಜುಲೈ 26ರ ಕೌತುಕ

ಬೆಂಗಳೂರು: ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ದಿಲ್ಲಿ ಭೇಟಿಯ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಅಥವಾ ಮುಂದುವರಿಕೆ ಬಗ್ಗೆ ನಿಗೂಢತೆ ಮುಂದುವರಿದಿದೆ. ಬಿಜೆಪಿಯ ಎರಡೂ ಬಣಗಳಲ್ಲಿ ಜು. 26ರ ಅನಂತರದ ರಾಜಕೀಯ ಲೆಕ್ಕಾಚಾರ ಬಿರುಸಾಗಿ ನಡೆಯುತ್ತಿದೆ. ಬಿಎಸ್‌ವೈ ಅವರು ಪ್ರಧಾನಿ ಮೋದಿ ಸಹಿತ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮರಳಿದ ಬಳಿಕ ‘ರಾಜೀನಾಮೆ ನೀಡುವುದಿಲ್ಲ, ಹಾಗೆಂದು ಪಕ್ಷದ ನಾಯಕರು ಸೂಚಿಸಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಬಿಜೆಪಿ ವಲಯದಲ್ಲಿ …

Read More »

ಯಾರಿಗೂ ಹೇಳ್ಬೇಡಿ ಎನ್ನುತ್ತಲೇ ‘ಈ ಮೂವರಲ್ಲಿ ಯಾರೂ ಸಿಎಂ ಆಗಬಹುದು’ ಎಂದ ನಳಿನ್ ಕಟೀಲ್!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್‌ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ನಡೆಯುತ್ತಿರುವಾಗಲೇ ಈ ಆಡಿಯೋ ಸಂಚಲನ ಸೃಷ್ಟಿಸಿದೆ. ತುಳುವಿನಲ್ಲಿರುವ ಆಡಿಯೋದಲ್ಲಿ, ” ಯಾರಿಗೂ ಹೇಳ್ಬೇಡಿ, ಜಗದೀಶ್ ಶೆಟ್ಟರ್‌ ಮತ್ತು ಈಶ್ವರಪ್ಪ ತಂಡವನ್ನು ತೆಗೆದು ಹೊಸ ತಂಡ ಕಟ್ಟಲಾಗುವುದು. …

Read More »

ವರುಣನ ಆರ್ಭಟಕ್ಕೆ ಬೆಣ್ಣೆನಗರಿ ಜನಜೀವನ ತತ್ತರ!

ಜುಲೈ 18: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಬೆಣ್ಣೆನಗರಿ ತತ್ತರಿಸಿದೆ. ನಗರದ ಕೆಇಬಿ ಕಾಲೋನಿ ಸೇರಿದಂತೆ ಹಲವೆಡೆ ನೀರು ನುಗ್ಗಿದ್ದು, ಜನರು ಪರದಾಡಿದ ಘಟನೆ ನಡೆದಿದೆ.‌ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಕೆರೆ ಕಟ್ಟೆಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ‌. ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ಹಾಗೂ ಜಗಳೂರು ಸೇರಿದಂತೆ ಜಿಲ್ಲೆಯ ಎಲ್ಲೆಡೆ ರಾತ್ರಿಪೂರ್ತಿ ಮಳೆ ಸುರಿದಿದ್ದು, ಜನರಿಗೆ ಸಮಸ್ಯೆಯಾಗಿದೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಜಲಾವೃತಗೊಂಡಿದೆ. …

Read More »

ಭಾನುವಾರ ರಾತ್ರಿಯಿಂದ ಬುಧವಾರ ರಾತ್ರಿಯವರೆಗೆ ಪಶ್ಚಿಮ-ಉತ್ತರ ಭಾರತದಲ್ಲಿ ಭಾರಿ ಮಳೆ

ಪಶ್ಚಿಮ ಭಾರತದ ರಾಜ್ಯಗಳು ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಭಾನುವಾರ ರಾತ್ರಿಯಿಂದ ಬುಧವಾರ ರಾತ್ರಿಯವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಹಿತಕರ ಘಟನೆಗಳನ್ನು ಎದುರಿಸಲು ರಾಜ್ಯ ವಿಕೋಪ ನಿರ್ವಹಣಾ ಪಡೆಗಳು ಸಜ್ಜಾಗಿವೆ. ಗುರುವಾರದ ನಂತರ ಮಧ್ಯ ಭಾರತ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಹವಾಮಾನ ಇಲಾಖೆ ಹೇಳಿದೆ -ದೆಹಲಿ ಮತ್ತು ಚಂಡೀಗಡದಲ್ಲಿ ಸೋಮವಾರ ಭಾರಿ ಮಳೆಯಾಗುವ …

Read More »

ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ

ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು. ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ …

Read More »

50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹೊಂದುತ್ತಿರುವುದು ಪ್ರಶಂಸನೀಯ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ …

Read More »

ಗಾಯಗೊಂಡ ಆಟಗಾರನನ್ನು ಔಟ್ ಮಾಡದೆ ಕ್ರೀಡಾ ಸ್ಪೂರ್ತಿ ಮೆರೆದ ಜೋ ರೂಟ್ ಪಡೆ

ಲಂಡನ್: ಇಂಗ್ಲೆಂಡ್ ಕೌಂಟಿಯ ಟಿ20 ಬ್ಲಾಸ್ಟ್ ಕೂಟದಲ್ಲಿ ಕ್ರೀಡಾ ಸ್ಪೂರ್ತಿ ಮೆರೆದ ಘಟನೆಯೊಂದು ಯಾರ್ಕ್ ಶೈರ್ ಮತ್ತು ಲ್ಯಾಂಕ್ ಶೈರ್ ನಡುವಿನ ಪಂದ್ಯದಲ್ಲಿ ನಡೆದಿದೆ. ಓಡುವಾಗ ಗಾಯಗೊಂಡ ಬಿದ್ದ ಆಟಗಾರನನ್ನು ರನ್ ಔಟ್ ಮಾಡದ ಜೋ ರೂಟ್ ಬಳಗದ ನಡೆ ಮೆಚ್ಚುಗೆಗೆ ಪಾತ್ರವಾಗಿದೆ. ಓಲ್ಡ್ ಟ್ರಾಫರ್ಡ್ ನಲ್ಲಿ ನಡೆದ ಪಂದ್ಯದಲ್ಲಿ ಈ ಘಟನೆ ನಡೆಯುತ್ತಿತ್ತು. ಲ್ಯಾಂಕ್ ಶೈರ್ ತಂಡಕ್ಕೆ ಗೆಲುವಿಗೆ 18 ಎಸೆತಗಳಲ್ಲಿ 15 ರನ್ ಅಗತ್ಯವಿತ್ತು. ಲ್ಯೂಕ್ ವೆಲ್ಸ್ …

Read More »

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಓರ್ವನ ಬಲಿ…

ಬೆಳಗಾವಿ- ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಲ್ಲಿ ತೊಘಲಕ್ ದರ್ಬಾರ್ ನಡೆಯುತ್ತಿದೆ.ಬೇಕಾಬಿಟ್ಟಿ ಕಾಮಗಾರಿಗೆ ಇವತ್ತು ಮತ್ತೋರ್ವ ಬಲಿಯಾಗಿದ್ದು,ಈವರೆಗೆ ಸ್ಮಾರ್ಟ್ ವರ್ಕ್ ಗೆ ಇಬ್ಬರು ಬಲಿಯಾದಂತಾಗಿದೆ. ಇಂದು ರಾತ್ರಿ8 ಗಂಟೆ ಸುಮಾರಿಗೆ ,ವ್ಯಕ್ತಿಯೊಬ್ಬ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಬಿದ್ದು ಡಿವೈಡರ್ ನಿರ್ಮಿಸಲು ಹಾಕಲಾಗಿದ್ದ ಕಬ್ಬಣದ ರಾಡ್ ಗಳ ಮೇಲೆ ಬಿದ್ದು ತೀವ್ರ ರಕ್ತಸ್ರಾವದ ಪರಿಣಾಮ ನ್ಯು ಗಾಂಧಿನಗರದ ಮಹ್ಮದ ದಸ್ತಗೀರ ಮುಲ್ಲಾ‌‌,69 ಎಂಬಾತ ಮೃತಪಟ್ಟಿದ್ದಾನೆ. ಬೆಳಗಾವಿ ಕೇಂದ್ರ ಬಸ್ …

Read More »

ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …

Read More »

ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ …

Read More »