ಬಾಗಲಕೋಟೆ : ಪುಟ್ಟ ಹಳ್ಳಿಯಲ್ಲಿ ಅಪ್ಪ ಹೊಲದಲ್ಲಿ ಹಸು ನೋಡಿಕೊಳ್ಳುತ್ತ ಕೃಷಿಯಲ್ಲಿ ತೊಡಗಿದ್ದರೆ, ಇತ್ತ ಮಗ ವಿಶ್ವ ವಿದ್ಯಾಲಯದಲ್ಲಿ ಚಿನ್ನದ ಪದಕಗಳಿಗೆ ಕೊರಳೊಡುತ್ತಿದ್ದ. ಈ ಅದ್ಭುತ ಘಳಿಗೆಯನ್ನು ಕಣ್ತುಂಬಿಕೊಳ್ಳುತ್ತಿದ್ದ ತಾಯಿ-ಅಜ್ಜ ಆನಂದಬಾಷ್ಪ ಸುರಿಸಿದರು. ಹೌದು, ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ 10ನೇ ಘಟಿಕೋತ್ಸವದ ಪದವಿ ಪ್ರದಾನ ಸಮಾರಂಭ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕುನೂರ ಎಂಬ ಪುಟ್ಟ ಹಳ್ಳಿಯ ರೈತ ವೆಂಕಟೇಶ ಮತ್ತು …
Read More »ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ
ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು. ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …
Read More »ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು
ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …
Read More »ಮುಷ್ಕರಕ್ಕೆ ಬಗ್ಗದಿದ್ದಲ್ಲಿ ಕುಟುಂಬ ಸಮೇತ ಜೈಲ್ ಭರೋ; ಹುಬ್ಬಳ್ಳಿಯಲ್ಲಿ ಸಾರಿಗೆ ನೌಕರರ ಎಚ್ಚರಿಕೆ
ಹುಬ್ಬಳ್ಳಿ(ಏ.06): ನಾಳೆಯಿಂದ ಮುಷ್ಕರ ಮಾಡಿಯೇ ತೀರುತ್ತೇವೆ. ಅದಕ್ಕೂ ಬಗ್ಗದಿದ್ದಲ್ಲಿ ಕುಟುಂಬ ಸಮೇತ ಜೈಲ್ ಭರೋ ಚಳುವಳಿ ನಡೆಸೋದಾಗಿ ಕರ್ನಾಟಕ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಪಿ.ಎಚ್.ನೀರಲಕೇರಿ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಷ್ಕರದ ನಿರ್ಧಾರ ಅಚಲ. 6 ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡಲೇ ಬೇಕು. ವೇತನ ಆಯೋಗದ ಶಿಫಾರಸ್ಸು ಜಾರಿ ವಿಚಾರದಲ್ಲಿ ಸರ್ಕಾರದಿಂದ ಮೊಂಡುತನ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಹಿಂದೆ ಮುಷ್ಕರ ನಡೆಸಿದಾಗ ಒಂಬತ್ತು …
Read More »ಮಾತು ಬಾರದ ಮಹಿಳೆಯ ಮೇಲೆ ಅತ್ಯಾಚಾರ
ಮಂಡ್ಯ: ಮಾತು ಬಾರದ ಮಹಿಳೆಯ ಮೇಲೆ ಮೂವರು ಯುವಕರು ಅತ್ಯಾಚಾರ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ಜುರುಗಿದೆ. ಹೊನಗನಹಳ್ಳಿ ಗ್ರಾಮದ ಮಾತು ಬಾರದ 48 ವರ್ಷದ ಮಹಿಳೆಯ ಮೇಲೆ ಅದೇ ಗ್ರಾಮದ ಮೂವರು ಯುವಕರು ಅತ್ಯಾಚಾರವೆಸಗಿದ್ದಾರೆ. ಏಪ್ರಿಲ್ 1 ರಂದು ಈ ಮಹಿಳೆ ತನ್ನ ಹೊಲದಲ್ಲಿ ಹಸು ಮೇಯಿಸಲು ಹೋಗಿದ್ದಾರೆ. ಸಂಜೆ ನಾಲ್ಕು ಗಂಟೆಯ ವೇಳೆಯಲ್ಲಿ ಮಹಿಳೆ ಇದ್ದ ಹೊಲಕ್ಕೆ ಹೊನಗನಹಳ್ಳಿ ಗ್ರಾಮದ …
Read More »ರಾಮದುರ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ಅಬ್ಬರದ ಪ್ರಚಾರ
ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಗೊಡಚಿ, ಕಡಕೋಳ, ಉಜ್ಜಿನಕೊಪ್ಪ, ಚುಂಚನೂರ, ತೋರನಗಟ್ಟಿ, ಹಲಗತ್ತಿ, ಇಡಗಲ್, ಮುದಕವಿ, ಮುದೇನೂರ ಗ್ರಾಮಗಳಲ್ಲಿ ಮಂಗಳವಾರ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಮಾಜಿ ಸಚಿವರಾದ ಎಂ.ಬಿ. ಪಾಟೀಲ, ಪ್ರಕಾಶ ಹುಕ್ಕೇರಿ, ಮಾಜಿ ಶಾಸಕ ಅಶೋಕ ಪಟ್ಟಣ, ವೀಣಾ ಕಾಶಪ್ಪನವರ ಸೇರಿ ಇನ್ನಿತರರು ಇದ್ದರು. “ಕಾಂಗ್ರೆಸ್ ಸದಾ ಬಡವರ ಪರವಾಗಿರುವ ಪಕ್ಷವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ …
Read More »ಪ್ರತಿಭಟನೆಗೆ ಹೋದ್ರೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ – ಬಸ್‍ಗೆ ಹಾನಿ ಮಾಡಿದ್ರೂ ಕಠಿಣ ಕ್ರಮ:ರವಿ ಕುಮಾರ್ ಸ್ಪಷ್ಟನೆ
ಬೆಂಗಳೂರು: ಸಾರಿಗೆ ನೌಕರರು ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹೋಗಬಾರದು ಎಂದು ಮನವಿ ಮಾಡುತ್ತೇವೆ. 9 ಬೇಡಿಕೆಗಳಲ್ಲಿ ಒಂದು ಬೇಡಿಕೆ ಬಿಟ್ಟು ಎಲ್ಲಾ ಈಡೇರಿಸಿದ್ದೇವೆ ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ. ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತುರ್ತು ಸಭೆ ಕರೆದ ಸಿಎಂ ಬಿಎಸ್ ಯಡಿಯೂರಪ್ಪ, ನಾಲ್ಕು ನಿಗಮಗಳ ಎಂಡಿಗಳ ಜೊತೆ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡಲಾಗಿದೆ. …
Read More »ಮನೆಗೆ ಬೆಂಕಿ ಇಟ್ಟು ಏಳು ಜನರ ಕೊಂದು ಪರಾರಿಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ!
ಕೊಡಗು : ಪೊನ್ನಂಪೇಟೆ ತಾಲೂಕಿನ ನಾಕೂರು ಸಮೀಪದ ಮುಗುಚಿಕೇರಿ ಗ್ರಾಮದಲ್ಲಿ ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 7 ಜನರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಶವ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದೆ. ಏಪ್ರಿಲ್ 3 ಕ್ಕೆ ಮುಗುಚಿಕೇರಿ ಗ್ರಾಮದಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆರು ಜನರನ್ನು ಕೊಲೆ ಮಾಡಿದ್ದ ಆರೋಪಿ ಎರವರ ಜೋಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಕೂರು ನರೇಶ್ ಎಂಬುವರ ಕಾಫಿ ತೋಟದಲ್ಲಿ …
Read More »ಉರಿ ಬಿಸಿಲಿನ ನಡುವೆಯೇ ಮಸ್ಕಿಯಲ್ಲಿ ಕಾವೇರಿದೆ ಉಪಚುನಾವಣಾ ಪ್ರಚಾರ!
ಕಲಬುರಗಿ: ಮಸ್ಕಿ ವಿಧಾನಸಭೆ ಕ್ಷೇತ್ರಗದ ಉಪ ಚುನಾವಣೆಗೆ ಇನ್ನೂ ಕೇವಲ 15 ದಿನಗಳು ಮಾತ್ರ ಬಾಕಿ ಉಳಿದಿದೆ. ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ಮಸ್ಕಿಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಮಸ್ಕಿಯಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಸಾಂಪ್ರಾದಾಯಿಕ ವೈರಿಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಎಲ್ಲಾ ರೀತಿಯ ತಂತ್ರ ನಡೆಸುತ್ತಿವೆ. ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್ ಮತ್ತು ಕಾಂಗ್ರೆಸ್ ನಿಂದ …
Read More »ಮಹಾರಾಷ್ಟ್ರದ ನೂತನ ಗೃಹ ಸಚಿವರಾಗಿ ಆಯ್ಕೆಯಾದ ದಿಲೀಪ್ ವಾಲ್ಸೆ ಪಾಟೀಲ್
ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ರಾಜೀನಾಮೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರವಾನಿಸಿದರು ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಈಗ ರಾಜ್ಯ ಗೃಹ ಇಲಾಖೆಯ ಉಸ್ತುವಾರಿ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ದಿಲೀಪ್ ವಾಲ್ಸೆ ಪಾಟೀಲ್ ಪ್ರಸ್ತುತ ಮಹಾರಾಷ್ಟ್ರ ಕಾರ್ಮಿಕ ಮತ್ತು ಅಬಕಾರಿ ಸಚಿವರಾಗಿದ್ದಾರೆ. ಈಗಾಗಲೇ …
Read More »